Site icon Vistara News

KAS Recruitment 2024: ಕೆಎಎಸ್‌ ಆಕಾಂಕ್ಷಿಗಳಿಗೆ ಗುಡ್‌ ನ್ಯೂಸ್‌; 384 ಹುದ್ದೆಗಳಿಗೆ ಅರ್ಜಿ ಆಹ್ವಾನ!

KAS

Those Who Have Applied For KAS Exam 2017-18th Year Are Allowed To Apply Once Again

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) (kpsc recruitment 2024) ಗೆಜೆಟೆಡ್‌ ಪ್ರೊಬೆಷನರಿಯ (ಕೆಎಎಸ್) (KAS Recruitment 2024) ಗ್ರೂಪ್‌ “ಎ” ಮತ್ತು ಗ್ರೂಪ್‌ “ಬಿ” ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹೈದರಾಬಾದ್‌ ಕರ್ನಾಟಕ ಹಾಗೂ ಉಳಿಕೆ ವೃಂದಗಳಲ್ಲಿ ಅರ್ಜಿ ಆಹ್ವಾನ ಮಾಡಲಾಗಿದ್ದು, ಒಟ್ಟು 384 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸುಮಾರು ಆರು ವರ್ಷಗಳ ನಂತರ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.

2024ರ ಮಾರ್ಚ್‌ 4ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಏಪ್ರಿಲ್‌ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸದ್ಯ ಪೂರ್ವಭಾವಿ ಪರೀಕ್ಷಾ ದಿನಾಂಕವನ್ನು (ತಾತ್ಕಾಲಿಕ) ಪ್ರಕಟ ಮಾಡಲಾಗಿದ್ದು, 2024ರ ಮೇ 5ರಂದು ಪರೀಕ್ಷೆ ನಡೆಯಲಿದೆ. ಈ ಬಾರಿ ಮಾತ್ರ ವಯೋಮಿತಿಯಲ್ಲಿ ಮೂರು ವರ್ಷ ಹೆಚ್ಚಳ ಮಾಡಲಾಗಿದೆ. ಕನಿಷ್ಠ 21 ವರ್ಷವಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 38 (ಮೂರು ವರ್ಷ ಹೆಚ್ಚಳ), ಪ್ರವರ್ಗ 2ಎ, 2ಬಿ, 3ಎ, 3 ಬಿ ಅಭ್ಯರ್ಥಿಗಳಿಗೆ 41 ವರ್ಷ, ಎಸ್‌ಸಿ, ಎಸ್‌ಟಿ ಪ್ರವರ್ಗ 1ಕ್ಕೆ 43 ವರ್ಷ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.

ಗ್ರೂಪ್‌ ಎ ಹುದ್ದೆ ವಿವರ

ಸಂದರ್ಶನ ನಡೆಯಲಿದೆ

ಪೂರ್ವಭಾವಿ ಪರೀಕ್ಷೆ ಬಳಿಕ ಮುಖ್ಯ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದಿರುವವರು ಸಂದರ್ಶನಕ್ಕೆ ಹಾಜರಾಗಬೇಕಿರುತ್ತದೆ.

ಗ್ರೂಪ್‌ ಬಿ ಹುದ್ದೆಗಳ ವಿವರ

ಸಮಸ್ಯೆಯಾದರೆ ಈ ಸಹಾಯವಾಣಿಗೆ ಕರೆ ಮಾಡಿ

ಅರ್ಜಿ ಸಲ್ಲಿಸಲು ಸಮಸ್ಯೆಗಳು ಎದುರಾದಲ್ಲಿ ಹೆಲ್ಪ್‌ಲೈನ್‌ ನಂಬರ್‌ ನೀಡಲಾಗಿದ್ದು, 080-30574957 / 30574901 ಗೆ ಕರೆ ಮಾಡಲು ಸೂಚಿಸಲಾಗಿದೆ.

ತಪ್ಪು ಸರಿಪಡಿಸಲು ಕೊನೇ ಅವಕಾಶ

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ವಿಳಾಸ, ಪ್ರವರ್ಗ, ತಂದೆ-ತಾಯಿ ಹೆಸರು, ವಿದ್ಯಾರ್ಹತೆ ಮುಂತಾದ ವಿಷಯಗಳನ್ನು ತಪ್ಪಾಗಿ ನಮೂದಿಸಿರುವುದಾಗಿ 302 ಸದರಿ ಮಾಹಿತಿಗಳನ್ನು ಬದಲಾವಣೆ ಮಾಡುವಂತೆ ಮನವಿ ಸಲ್ಲಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆಯೋಗಕ್ಕೆ ಒಂದು ಬಾರಿ ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ಸದರಿ ಅರ್ಜಿಯಲ್ಲಿನ ಮಾಹಿತಿಗಳನ್ನು ಆಯೋಗದ ಅಧಿಕಾರಿ/ಸಿಬ್ಬಂದಿಗೆ ತಂತ್ರಾಂಶದಲ್ಲಿ ಬದಲಾವಣೆ ಮಾಡಲು ಸಾಧ್ಯವಿರದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳೇ ನೇರವಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಮಾಹಿತಿಗಳನ್ನು ಸರಿಪಡಿಸಿ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಈ ಸಂಬಂಧ ತದನಂತರ ಸಲ್ಲಿಸಲಾಗುವ ಯಾವುದೇ ಕೋರಿಕೆ/ಮನವಿಗಳನ್ನು ಆಯೋಗದಿಂದ ಪುರಸ್ಕರಿಸಲಾಗುವುದಿಲ್ಲ.

ಆನ್‌ಲೈನ್‌ ಮೂಲಕ ಮಾತ್ರ ಅರ್ಜಿ ಸಲ್ಲಿಸಿ

ಅರ್ಜಿಗಳನ್ನು ಆನ್‌ಲೈನ್‌ (Online) ಮೂಲಕವೇ ಭರ್ತಿ ಮಾಡಿ ಭಾವಚಿತ್ರ/ಸಹಿ /ವಯೋಮಿತಿ/ ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ಅಪ್ಲೋಡ್ ಮಾಡಬೇಕು. ನಂತರ ಶುಲ್ಕವನ್ನು ನೆಟ್ ಬ್ಯಾಂಕಿಂಗ್ / ಡೆಬಿಟ್‌ ಕಾರ್ಡ್/ ಕ್ರೆಡಿಟ್‌ ಕಾರ್ಡ್‌/ ಯುಪಿಐ ಮೂಲಕ ಸಂದಾಯ ಮಾಡಬಹುದಾಗಿರುತ್ತದೆ. ಶುಲ್ಕವನ್ನು ಪಾವತಿಸದ ಹಾಗೂ ದಾಖಲೆಗಳನ್ನು/ ಭಾವಚಿತ್ರ/ ಸಹಿಯನ್ನು ಅಪ್ಲೋಡ್ ಮಾಡದೇ ಇರುವ/ಅಸ್ಪಷ್ಟ ದಾಖಲೆಗಳನ್ನು ಅಪ್ಲೋಡ್ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಕೆಪಿಎಸ್‌ಸಿ ತಿಳಿಸಿದೆ.

ಕೆಪಿಎಸ್‌ಸಿ ಹೊರಡಿಸಿರುವ ಅಧಿಸೂಚನೆಯ ಪಿಡಿಎಫ್‌ ಪ್ರತಿಯನ್ನು ಈ ಕೆಳಗೆ ಲಗತ್ತಿಸಲಾಗಿದೆ. ಆಸಕ್ತರು ಡೌನ್ಲೋಡ್‌ ಆಯ್ಕೆ ಮೇಲೆ ಕ್ಲಿಕ್‌ ಮಾಡಿ ಓದಬಹುದು.

ಇದನ್ನೂ ಓದಿ: Job Alert: ಗುಡ್‌ನ್ಯೂಸ್; 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಮಾರ್ಚ್‌ 4ರಿಂದ ಅರ್ಜಿ ಸಲ್ಲಿಸಿ

ಜಾಗ್ರತೆಯಿಂದ ಅರ್ಜಿ ಸಲ್ಲಿಸಿ

ಸದರಿ ಹುದ್ದೆಗಳಿಗೆ ಆನ್‌ಲೈನ್ ಅರ್ಜಿಯೊಂದಿಗೆ ಸಲ್ಲಿಸುವ ಲಗತ್ತುಗಳನ್ನು ಅವಶ್ಯಕ ಸಂದರ್ಭಗಳಲ್ಲಿ ಆಯೋಗವು ಪರಿಶೀಲನೆಗೆ ಒಳಪಡಿಸಬಹುದಾಗಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ಜಾಗರೂಕತೆಯಿಂದ ತಮಗೆ ಅನ್ವಯಿಸುವ ಎಲ್ಲ ದಾಖಲೆಗಳನ್ನು ಸ್ಪಷ್ಟವಾಗಿ ಗೋಚರಿಸುವ ರೀತಿಯಲ್ಲಿ ಅಪ್‌ಲೋಡ್ ಮಾಡತಕ್ಕದ್ದು. ಮೂಲ ದಾಖಲೆಗಳ ಪರಿಶೀಲನೆಯ ಸಂದರ್ಭದಲ್ಲಿ ಈಗಾಗಲೇ ಆನ್‌ಲೈನ್ ಅರ್ಜಿಯೊಂದಿಗೆ ಅಪ್‌ಲೋಡ್ ಮಾಡಿರುವ ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ತಪ್ಪದೇ ಹಾಜರುಪಡಿಸತಕ್ಕದ್ದು ಎಂದು ಕೆಪಿಎಸ್‌ಸಿ ಹೇಳಿದೆ.

Exit mobile version