ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಧಿಸೂಚನೆಗೆ ಸಂಬಂಧಪಟ್ಟಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಂತಿಮ ಆಯ್ಕೆಪಟ್ಟಿ ಪ್ರಕಟಿಸಿದೆ.
ಕೆಇಎ ವಿಷಯವಾರು ಸಹಾಯಕ ಪ್ರಾಧ್ಯಾಪಕರ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ (https://cetonline.karnataka.gov.in/kea/) ಆಯ್ಕೆಪಟ್ಟಿಯನ್ನು ವೀಕ್ಷಿಸಬಹುದು. ಕೆಇಎ ವತಿಯಿಂದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕರು ಹುದ್ದೆಗಳಿಗೆ 2021ರ ಸೆಪ್ಟೆಂಬರ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿ, ನೇಮಕಾತಿ ಪರೀಕ್ಷೆ ನಡೆಸಲಾಗಿತ್ತು.
ಇದನ್ನೂ ಓದಿ | KCET 2023 : ಸಿಇಟಿಗೆ ಅರ್ಜಿ ಸಲ್ಲಿಸಲು ಇಂದಿನಿಂದ ಅವಕಾಶ; ಮಾ.5 ಕೊನೆಯ ದಿನ
ನೇಮಕಾತಿಯ ಮುಂದಿನ ಪ್ರಕ್ರಿಯೆಗಳಿಗೆ ಅನುಕೂಲವಾಗುವಂತೆ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ಪಟ್ಟಿಯನ್ನು ಮಾರ್ಚ್ 6ರಂದು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.