Site icon Vistara News

KEA Exam: ಮುಸ್ಲಿಂ ಮುಖಂಡರ ಒತ್ತಡಕ್ಕೆ ಮಣಿದ ಸಿದ್ದರಾಮಯ್ಯ ಸರ್ಕಾರ, ಹಿಜಾಬ್‌ ಧರಿಸಿ ಪರೀಕ್ಷೆ ಬರೆಯಬಹುದು!

KEA Exam Candidates

ಬೆಂಗಳೂರು: ಕೆಲವು ಮುಸ್ಲಿಂ ಸಂಘಟನೆಗಳು ಮತ್ತು ಮುಸ್ಲಿಂ ಕೇಂದ್ರಿತ ಪಕ್ಷಗಳ ವಿರೋಧಕ್ಕೆ ಮಣಿದಿರುವ ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ, ಹಿಜಾಬ್‌ ಧರಿಸಿ ಕೆಇಎ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ! ಕೆಇಎ ಪರೀಕ್ಷೆಗೆ ಹಿಜಾಬ್‌ ನಿಷೇಧವಿಲ್ಲ, ಕಾಲುಂಗುರ ಹಾಗೂ ಮಾಂಗಲ್ಯ ಧರಿಸಿ ಮಹಿಳಾ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) (KEA Exam) ತಿಳಿಸಿದೆ. ಕೆಇಎ ವಸ್ತ್ರ ಸಂಹಿತೆ ಪ್ರಕಾರ ಪರೀಕ್ಷಾ ಕೇಂದ್ರಕ್ಕೆ ಹಿಜಾಬ್‌ ಧರಿಸಿ ಆಗಮಿಸುವಂತಿಲ್ಲ ಎಂಬ ಸುದ್ದಿಗಳು ಹರಿದಾಡಿದ್ದವು. ಹೀಗಾಗಿ ಕೆಇಎ ಸ್ಪಷ್ಟನೆ ನೀಡಿದೆ. ಜಮ್ಮು ಕಾಶ್ಮೀರದ ನ್ಯಾಷನಲ್‌ ಕಾನ್ಫರೆನ್ಸ್‌ ಪಕ್ಷದ ಉಮರ್‌ ಅಬ್ದುಲ್ಲಾ, ಎಐಎಂಐಎಂ ಪಕ್ಷದ ಅಸಾದುದ್ದೀನ್‌ ಓವೈಸಿ ಮುಂತಾದ ಮುಸ್ಲಿಂ ಮುಖಂಡರು ಹಿಜಾಬ್‌ ಹಾಕಿಕೊಂಡು ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಒತ್ತಡ ಹೇರಿದ್ದರು.

ನವೆಂಬರ್ 18 ಮತ್ತು‌ 19ರಂದು ನಡೆಯುವ ಕೆಇಎ ಪರೀಕ್ಷೆಗಳಿಗೆ ಈ ಹಿಂದಿನಂತೆ ಹಿಜಾಬ್‌ಗೆ ಅನುಮತಿ ಇರಲಿದೆ. ಪರೀಕ್ಷೆ ಆರಂಭದ ಸಮಯಕ್ಕಿಂತ 2 ಗಂಟೆ ಮೊದಲೇ ಅಭ್ಯರ್ಥಿಗಳು ಹಾಜರಿರಬೇಕು. ಅದೇ ರೀತಿ ಹಿಂದು ಅಭ್ಯರ್ಥಿಗಳಿಗೆ ತಾಳಿ, ಕಾಲುಂಗುರಗಳಿಗೆ ವಿನಾಯಿತಿ ನೀಡಲಾಗಿದೆ. ಇದನ್ನು ಹೊರತುಪಡಿಸಿ ಬೇರೆ ಯಾವುದೇ ಆಭರಣಗಳನ್ನು ಧರಿಸುವಂತಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಅವರು ತಿಳಿಸಿದ್ದಾರೆ.

ಸಚಿವ ಎಂ.ಸಿ ಸುಧಾಕರ್ ಸ್ಪಷ್ಟನೆ

ಹಿಜಾಬ್ ಧಾರಣೆ ಬಗ್ಗೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್‌ ಪ್ರತಿಕ್ರಿಯಿಸಿ, ಬ್ಲೂಟೂತ್ ಬಳಸಿ ಅಕ್ರಮ ಎಸಗುವುದು ಹಾಗೂ ಹಿಜಾಬ್‌ಗೂ ಯಾವುದೇ ರೀತಿಯ ಸಂಬಂಧವಿಲ್ಲ. ಹಿಜಾಬ್ ಹಾಕಿಕೊಂಡು ಬಂದವರು ಯಾರೂ ಬ್ಲೂಟೂತ್ ಹಾಕಿಕೊಂಡು ಪರೀಕ್ಷೆ ಬರೆದಿಲ್ಲ. ಹೀಗಾಗಿ ಹಿಜಾಬ್‌ಗೆ ನಿಷೇಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ | Job Alert: ಕೊಡಗು ಜಿಲ್ಲಾ ನ್ಯಾಯಾಲಯದ 64 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಎಲ್ಲ ಅಭ್ಯರ್ಥಿಗಳು ಪರೀಕ್ಷೆ ಆರಂಭವಾಗುವ ಮುನ್ನ 2 ಗಂಟೆ ಮುಂಚಿತವಾಗಿ ಹಾಜರಾಗಬೇಕು. ಬಿಗಿ ತಪಾಸಣೆಗೆ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡುತ್ತೇವೆ. ಎರಡು ಗಂಟೆ ಮುಂಚಿತವಾಗಿ ಬಂದ ಮೇಲೆ ಎಲ್ಲರನ್ನು ಚೆಕ್ ಮಾಡುತ್ತಾರೆ. ಮಹಿಳಾ ಪೊಲೀಸ್ ಸಿಬ್ಬಂದಿ ಸಹ ಸ್ಥಳದಲ್ಲಿ ಇರುತ್ತಾರೆ ಎಂದು ತಿಳಿಸಿದ್ದಾರೆ.

ಹಿಜಾಬ್ ಎಂಬುವುದು ಮುಸ್ಲಿಂ ಧಾರ್ಮಿಕ ಭಾವನೆ ಆಗಿರುತ್ತ. ಕ್ಯಾಪ್‌ ಅಥವಾ ಹಿಜಾಬ್ ಬೇರೆಯವರು ದಿನವೂ ಹಾಕಿಕೊಂಡು ಬರುತ್ತಾರಾ? ಉದ್ದೇಶಪೂರ್ವಕವಾಗಿ ಇಂತವುಗಳನ್ನು ದುರ್ಬಳಕೆ ಮಾಡುವವರಿಗೆ ನಿಷೇಧ ಇರಲಿದೆ ಎಂದು ದೂರವಾಣಿ ಮೂಲಕ ವಿಸ್ತಾರ ನ್ಯೂಸ್‌ಗೆ ಸಚಿವ ಎಂ.ಸಿ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ.

ವಸ್ತ್ರ ಸಂಹಿತೆ ಮತ್ತು ಇತರ ನಿಯಮಗಳು ಏನಿರುತ್ತವೆ?

ಕಳೆದ ಪರೀಕ್ಷೆ ಸಂದರ್ಭದಲ್ಲಿ ಬ್ಲೂಟೂತ್‌ ಬಳಸಿಸ ಅಕ್ರಮ ನಡೆಸಿರುವುದರ ಹಿನ್ನೆಲೆಯಲ್ಲಿ ಈಗ ತಲೆ, ಕಿವಿ, ಬಾಯಿ ಮುಚ್ಚುವ ವಸ್ತುಗಳನ್ನು ನಿಷೇಧಿಸುವುದು ಸರ್ಕಾರಕ್ಕೆ ಅನಿವಾರ್ಯವಾಗಿದೆ. ನವೆಂಬರ್ 18 ಮತ್ತು 19ರಂದು ನಡೆಯುವ ವಿವಿಧ ನಿಗಮ ಮಂಡಳಿಗಳ ನೇಮಕಾತಿ ಪರೀಕ್ಷೆ ಕುರಿತಂತೆ ವಸ್ತ್ರ ಸಂಹಿತೆ ಹೀಗಿರಲಿದೆ ಎಂದು ಕೆಇಎ ಸ್ಪಷ್ಟಪಡಿಸಿದೆ.

ಪುರುಷ ಅಭ್ಯರ್ಥಿಗಳ ವಸ್ತ್ರ ಸಂಹಿತೆ

  1. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಶರ್ಟ್‌ಗಳನ್ನು ಅನುಮತಿಸಲಾಗುವುದಿಲ್ಲವಾದ್ದರಿಂದ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‌ಗಳನ್ನು ಧರಿಸುವುದನ್ನು ಖಚಿತಪಡಿಸಿಕೊಳ್ಳಬೇಕು.
  2. ಪ್ಯಾಂಟ್ ಮತ್ತು ಸರಳ ಪ್ಯಾಂಟ್ (ಜೇಬುಗಳು ಇಲ್ಲದಿರುವ/ ಕಮ್ಮಿ ಜೇಬುಗಳಿರುವ) ಪುರುಷ ಅಭ್ಯರ್ಥಿಗಳಿಗೆ ಆದ್ಯತೆಯ ಡ್ರೆಸ್ ಕೋಡ್ ಆಗಿದೆ. ಕುರ್ತಾ ಪೈಜಾಮನ್ನು, ಜೀನ್ಸ್ ಪ್ಯಾಂಟ್ ಅನುಮತಿಸುವುದಿಲ್ಲ.
  3. ಪುರುಷ ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು ಅಂದರೆ ಜಿಪ್ ಪಾಕೆಟ್‌ಗಳು,
  4. ಪಾಕೆಟ್‌ಗಳು, ದೊಡ್ಡ ಬಟನ್‌ಗಳು ಮತ್ತು ವಿಸ್ತಾರವಾದ ಕಸೂತಿ ಇರುವ ಬಟ್ಟಗಳು ಇರಬಾರದು.
  5. ಪರೀಕ್ಷಾ ಹಾಲ್ ಒಳಗೆ ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ಸ್ಯಾಂಡಲ್ ಅಥವಾ ತೆಳುವಾದ ಅಡಿಭಾಗ ಇರುವ ಚಪ್ಪಲಿಗಳನ್ನು ಧರಿಸುವುದು ಸೂಕ್ತ.
  6. ಅಭ್ಯರ್ಥಿಗಳು ಕುತ್ತಿಗೆಯ ಸುತ್ತ ಯಾವುದೇ ಲೋಹದ ಆಭರಣಗಳನ್ನು ಧರಿಸುವುದು ಅಥವಾ ಕಿವಿಯೋಲೆ, ಉಂಗುರ, ಕಡಗಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ.

ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ

  1. ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬೂಚ್‌ಗಳು ಅಥವಾ ಬಟನ್‌ಗಳಹೊಂದಿರುವ ಬಟ್ಟೆಗಳನ್ನು ಧರಿಸುವುದು ನಿಷೇಧಿಸಲಾಗಿದೆ.
  2. ಪರೀಕ್ಷೆಯ ದಿನದಂದು ಪೂರ್ಣ ತೋಳಿನ ಬಟ್ಟೆಗಳನ್ನು / ಜೀನ್ಸ್ ಪ್ಯಾಂಟ್ ಧರಿಸಬಾರದು, ಅದರ ಬದಲಾಗಿ ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಮತ್ತು ನಾವು ಉಲ್ಲೇಖಿಸಿರುವ ನಿಯಮದಂತೆ ಧರಿಸುವಂತೆ ನಿರ್ದೇಶಿಸಲಾಗಿದೆ.
  3. ಎತ್ತರವಾದ ಹಿಮ್ಮಡಿಯ ಶೂಗಳನ್ನು ಚಪ್ಪಲಿಗಳನ್ನು ಮತ್ತು ದಪ್ಪವಾದ ಅಡಿ ಭಾಗ ಹೊಂದಿರುವ ಶೂಗಳನ್ನಾಗಲಿ/ ಚಪ್ಪಲಿಗಳನ್ನಾಗಲಿ ಧರಿಸಬಾರದು, ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿಗಳು ಧರಿಸುವುದು ಕಡ್ಡಾಯವಾಗಿದೆ.
  4. ಮಹಿಳಾ ಅಭ್ಯರ್ಥಿಗಳು ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಿದೆ. (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ),

ನಿಷೇಧಿತ ವಸ್ತುಗಳ ಪಟ್ಟಿ ಇಂತಿದೆ

  1. ಡ್ರೆಸ್ ಕೋಡ್ ಅನ್ನು ಅನುಸರಿಸುವುದರ ಜೊತೆಗೆ, ಕೆಳಗೆ ಪಟ್ಟಿ ಮಾಡಲಾದ ಪರೀಕ್ಷಾ ಕೇಂದ್ರಕ್ಕೆ ಯಾವುದೇ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗದಂತೆ, ಅಭ್ಯರ್ಥಿಗಳು ಖಚಿತಪಡಿಸಿಕೊಳ್ಳಬೇಕು.
  2. ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‌ಗಳು, ಪೆನ್ ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂ ಟೂಥ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ಅನುಮತಿಸಲಾಗುವುದಿಲ್ಲ.
  3. ತಿನ್ನಬಹುದಾದ ಪದಾರ್ಥಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ಹಾಗು ತಿನ್ನುವುದನ್ನು ನಿಷೇಧಿಸಲಾಗಿದೆ.
  4. ಪೆನ್ಸಿಲ್, ಪೇಪರ್, ಎಲೇಸರ್, ಜಾಮಿಟ್ರಿ ಬಾಕ್ಸ್ ಗಳು ಮತ್ತು ಲಾಗ್ ಟೇಬಲ್ ಗಳನ್ನು ಪರೀಕ್ಷಾ ಕೇಂದ್ರದೊಳಗೆ ತರುವಂತಿಲ್ಲ.
  5. ಬ್ಲೂಟೂತ್ ಸಾಧನಗಳನ್ನು ಪರೀಕ್ಷಾ ಕೊಠಡಿಯಲ್ಲಿ ಬಳಸುವುದನ್ನು ತಡೆಯುವ ನಿಟ್ಟಿನಲ್ಲಿ ತಲೆಯ ಮೇಲೆ ಟೋಪಿ ಅಥವಾ ಯಾವುದೇ ವಸ್ತ್ರವನ್ನು ಧರಿಸಿವುದನ್ನು ಬಾಯಿ ಕಿವಿ ಹಾಗು ತಲೆ ಮುಚ್ಚುವ ವಸ್ತ್ರವನ್ನು / ಸಾಧನವನ್ನು ಧರಿಸುವುದನ್ನು ನಿಷೇಧಿಸಿದೆ.
  6. ಯಾವುದೇ ರೀತಿಯ ಮಾಸ್ಕ್‌ ಅನ್ನು ಧರಿಸುವಂತಿಲ್ಲ.

ಪರೀಕ್ಷೆಯ ದಿನದಂದು ಈ ಕೆಳಗಿನ ವಸ್ತುಗಳನ್ನು ಮಾತ್ರ ತರಲು ಅನುಮತಿಸಲಾಗಿದೆ.

ಇದನ್ನು ಓದಿ | Job Alert: ಆರೋಗ್ಯ ಸೇವೆಗಳ ಮಹಾ ನಿರ್ದೇಶನಾಲಯದಲ್ಲಿ 487 ಹುದ್ದೆಗಳಿವೆ!

ಮೇಲೆ ಹೇಳಲಾಗಿರುವ ಕೆ.ಇ.ಎ ನಿಯಮಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸತಕ್ಕದ್ದು, ಇಲ್ಲವಾದಲ್ಲಿ ನಿಯಮಾನುಸಾರ ಅಭ್ಯರ್ಥಿಗಳ ಮೇಲೆ ಕ್ರಮವನ್ನು ಜರುಗಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.

Exit mobile version