Site icon Vistara News

KEA Recruitment 2022 | ವಿಧಾನ ಸಭೆ ಸಚಿವಾಲಯದಲ್ಲಿ ನೇಮಕ; ಕೀ ಉತ್ತರ ಪ್ರಕಟ

KCET Result 2023

kea

ಬೆಂಗಳೂರು: ಕರ್ನಾಟಕ ವಿಧಾನ ಸಭೆ ಸಚಿವಾಲಯದಲ್ಲಿನ ವಿವಿಧ ವೃಂದದ ಹುದ್ದೆಗಳ ನೇಮಕಕ್ಕೆ (KEA Recruitment 2022) ನಡೆಸಲಾಗಿದ್ದ ಲಿಖಿತ ಪರೀಕ್ಷೆಯ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ.

ದಲಾಯತ್‌, ಕಂಪ್ಯೂಟರ್‌ ಆಪರೇಟರ್‌ ಮತ್ತು ಕಿರಿಯ ಸಹಾಯಕ ಮತ್ತು ರಿಸಪ್ಷನಿಸ್ಟ್‌ ಹುದ್ದೆಗಳಿಗೆ ಡಿಸೆಂಬರ್‌ ಮೊದಲ ವಾರದಲ್ಲಿ ಪರೀಕ್ಷೆ ನಡೆಸಲಾಗಿತ್ತು. ಇದೀಗ ತಾತ್ಕಾಲಿಕ ಕೀ ಉತ್ತರಗಳನ್ನು ಕೆಇಎಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಈ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಕೂಡ ಅವಕಾಶ ನೀಡಲಾಗಿದ್ದು, ಆಕ್ಷೇಪಣೆಗಳಿದ್ದರೆ ಜನವರಿ 3ರ ಸಂಜೆ ಐದು ಗಂಟೆಯ ಒಳಗೆ ನಿಗದಿತ ನಮೂನೆಯಲ್ಲಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.

ನಿಗದಿತ ನಮೂನೆಯನ್ನು ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ. ಆಕ್ಷೇಪಣೆಗಳನ್ನು ಸಲ್ಲಿಸಲು ಇ-ಮೇಲ್‌ ವಿಳಾಸ ಇಂತಿದೆ; keadjc2022@gmail.com.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ: https://cetonline.karnataka.gov.in/kea/

ಇದನ್ನು ಓದಿ | Job News | ಸರ್ಕಾರದ ಯಾವ ಇಲಾಖೆಗಳಲ್ಲಿ ಎಷ್ಟು ಹುದ್ದೆ ಖಾಲಿ ಇವೆ?; ಇಲ್ಲಿದೆ ಸಂಪೂರ್ಣ ಮಾಹಿತಿ

Exit mobile version