ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ವಿವಿಧ ನೇಮಕಗಳಿಗೆ (KEA Recruitment 2023) ಸಂಬಂಧಿಸಿದಂತೆ ಜನವರಿ 29 ರಿಂದ ಫೆಬ್ರವರಿ 12 ರ ವರೆಗೆ ನಡೆಸಿದ್ದ ವಿವಿಧ ಪರೀಕ್ಷೆಗಳ ಕೀ ಉತ್ತರವನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೀ ಉತ್ತರವನ್ನು ಪರಿಶೀಲಿಸಬಹುದಾಗಿದೆ. ಈ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಇದರ ಲಿಂಕ್ ಅನ್ನು ವೆಬ್‌ನಲ್ಲಿ ಒದಗಿಸಲಾಗಿದ್ದು, ಈ ಲಿಂಕ್ ಮೂಲಕವೇ ಆಕ್ಷೇಪಣೆಗಳನ್ನು ಸಂಬಂಧಿಸಿದ ದಾಖಲೆಗಳೊಂದಿಗೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಮಾ.27ರ ಸಂಜೆ 5 ಗಂಟೆಯ ಒಳಗೆ ಆಕ್ಷೇಪಣೆಯನ್ನು ಸಲ್ಲಿಸಬೇಕಿರುತ್ತದೆ. ನಂತರ ಬಂದ ಹಾಗೂ ಬೇರೆ ಯಾವುದೇ ಕ್ರಮದಲ್ಲಿ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ರಾಜ್ಯ ಬೀಜ ನಿಗಮ ನಿಯಮಿತ (KSSCL)ದಲ್ಲಿನ ಸಹಾಯಕ ವ್ಯವಸ್ಥಾಪಕರ ಹಾಗೂ ಹಿರಿಯ/ ಕಿರಿಯ/ ಬೀಜ ಸಹಾಯಕರು ಹುದ್ದೆಗಳಿಗಾಗಿ ನಡೆದ ಪರೀಕ್ಷೆಯ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿನ ಪಶು ವೈದ್ಯಕೀಯ ಪರಿವೀಕ್ಷಕರ ಹುದ್ದೆಗಳಿಗೆ ನಡೆದ ಪರೀಕ್ಷೆಯ ಹಾಗೂ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಎಸ್‌ಡಿಎ ಮತ್ತು ಎಫ್‌ಡಿಎ ಹುದ್ದೆಗಳಿಗೆ ನಡೆದ ಪರೀಕ್ಷೆಯ ಮತ್ತು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿನ ದ್ವಿತೀಯ ದರ್ಜೆ ಸಹಾಯಕರ (SDA) ಹುದ್ದೆಗಳ ನೇಮಕಕ್ಕೆ ನಡೆದ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಕೆಇಎ ವೆಬ್‌ಸೈಟ್ ವಿಳಾಸ: https://cetonline.karnataka.gov.in/kea/
ಇದನ್ನೂ ಓದಿ : BMRCL Recruitment 2023 : ನಮ್ಮ ಮೆಟ್ರೋದಲ್ಲಿ 236 ಹುದ್ದೆಗಳಿಗೆ ನೇಮಕ; ಬಿಇ, ಡಿಪ್ಲೊಮಾ, ಐಟಿಐ ಮಾಡಿದವರಿಗೆ ಅವಕಾಶ