ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ವಿವಿಧ ನೇಮಕಗಳಿಗೆ (KEA Recruitment 2023) ಸಂಬಂಧಿಸಿದಂತೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುತ್ತಿದ್ದು, ಇದರ ಪರಿಷ್ಕೃತ ವೇಳಾಪಟ್ಟಿ ಹಾಗೂ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ.
ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ಲಿಂಕ್‌ನಲ್ಲಿ ಅರ್ಜಿ ಸಂಖ್ಯೆ ಮತ್ತು ಅಭ್ಯರ್ಥಿಯ ಹೆಸರು (ಮೊದಲ ನಾಲ್ಕು ಅಕ್ಷರಗಳು) ನೊಂದಿಗೆ ಲಾಗಿನ್ ಆಗಿ, ಪ್ರವೇಶ ಪತ್ರವನ್ನು ಡೌನ್‌ಲೋಡ್ ಮತ್ತು ಪ್ರಿಂಟ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕು. ಜತೆಗೆ ಸರ್ಕಾರ ನೀಡಿದ ಯಾವುದಾದರೂ ಗುರುತಿನ ಚೀಟಿಯನ್ನು ತಂದಿರಬೇಕು. ಪ್ರವೇಶ ಪತ್ರ ಮತ್ತು ಗುರುತಿನ ಚೀಟಿ ಇಲ್ಲದೇ ಬರುವ ಯಾವುದೇ ಅಭ್ಯರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ (Click Here) ಮಾಡಿ.
ಯಾವೆಲ್ಲಾ ಪರೀಕ್ಷೆ ನಡೆಯುತ್ತಿದೆ?
ರಾಜ್ಯ ಬೀಜ ನಿಗಮ ನಿಯಮಿತ (KSSCL)ದಲ್ಲಿನ ಸಹಾಯಕ ವ್ಯವಸ್ಥಾಪಕರ ಹಾಗೂ ಹಿರಿಯ/ ಕಿರಿಯ/ ಬೀಜ ಸಹಾಯಕರು ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಜನವರಿ 30, 31 ಫೆಬ್ರವರಿ 1, 2, 3, 4, 5 ಮತ್ತು 12 ರಂದು ಪರೀಕ್ಷೆ ನಡೆಸಲಿದೆ. ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ;
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿನ ಪಶು ವೈದ್ಯಕೀಯ ಪರಿವೀಕ್ಷಕರ ಹುದ್ದೆಗಳಿಗೆ ಜನವರಿ 29 ಮತ್ತು ಫೆಬ್ರವರಿ 12 ರಂದು ನಡೆಸಲಾಗುತ್ತದೆ. ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ;
ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ ಖಾಲಿ ಇರುವ ಅಸಿಸ್ಟೆಂಟ್ ಎಂಜಿನಿಯರ್, ಜೂನಿಯರ್ ಎಂಜಿನಿಯರ್ ಎಸ್‌ಡಿಎ ಮತ್ತು ಎಫ್‌ಡಿಎ ಹುದ್ದೆಗಳಿಗೆ ಜನವರಿ 29 ಫೆಬ್ರವರಿ 5, 6, 7 ಹಾಗೂ 12 ರಂದು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ;
ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿನ ದ್ವಿತೀಯ ದರ್ಜೆ ಸಹಾಯಕರ (SDA) ಹುದ್ದೆಗಳ ನೇಮಕಕ್ಕೆ ಜನವರಿ 30 ಹಾಗೂ ಫೆಬ್ರವರಿ 1 ಮತ್ತು 12 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಫೆಬ್ರವರಿ 12 ರಂದು ಬಹುತೇಕವಾಗಿ ಎಲ್ಲ ಹುದ್ದೆಗಳಿಗೂ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ;
ಹೆಚ್ಚಿನ ಮಾಹಿತಿಗೆ ಕೆಇಎ ವೆಬ್‌ಸೈಟ್ ವಿಳಾಸ: https://cetonline.karnataka.gov.in/kea/
ಇದನ್ನೂ ಓದಿ | Principal Recruitment | ಪ್ರಥಮ ದರ್ಜೆ ಕಾಲೇಜುಗಳಲ್ಲಿನ 310 ಪ್ರಾಂಶುಪಾಲರ ಹುದ್ದೆ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ