KEA Recruitment 2023 : ಕೆಇಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮಾಸ್ಕ್‌ ಧರಿಸುವಂತಿಲ್ಲ! - Vistara News

ಉದ್ಯೋಗ

KEA Recruitment 2023 : ಕೆಇಎ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮಾಸ್ಕ್‌ ಧರಿಸುವಂತಿಲ್ಲ!

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಕ್ರಮ ನಡೆಯುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA Recruitment 2023), ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಮಾಸ್ಕ್‌ ಧರಿಸಲು ಕೂಡ ಅವಕಾಶ ನೀಡಿಲ್ಲ.

VISTARANEWS.COM


on

KEA Recruitment 2023 ಮಾಸ್ಕ್‌ ಕಡ್ಡಾಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ದೇಶದಲ್ಲಿ ಕೊರೊನಾ ಭೀತಿ ಇನ್ನೂ ದೂರವಾಗಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಸಾರ್ವಜನಿಕ ಸಾರಿಗೆ, ಒಳಾಂಗಣದಲ್ಲಿ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಶಾಲೆ-ಕಾಲೇಜುಗಳಲ್ಲಿಯೂ ಮಾಸ್ಕ್‌ ಧರಿಸಬೇಕೆಂದು ಸೂಚಿಸಿದೆ. ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ವಿವಿಧ ನೇಮಕಗಳಿಗೆ (KEA Recruitment 2023) ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮಾಸ್ಕ್‌ ಧರಿಸುವಂತಿಲ್ಲ ಎಂದು ಸೂಚಿಸಿದೆ!

ಹೌದು, ಕೆಇಎ ಹೀಗೆ ಮಾಸ್ಕ್‌ ಧರಿಸಬೇಡಿ ಎಂದು ಸೂಚಿಸಲು ಇತ್ತೀಚೆಗೆ ಹೈಟೆಕ್‌ ಆಗಿ ಪರೀಕ್ಷಾ ಅಕ್ರಮಗಳು ನಡೆಯುತ್ತಿರುವುದೇ ಕಾರಣ. ಕೆಇಎ ಜನವರಿ 29ರಿಂದ ವಿವಿಧ ನೇಮಕಾತಿ ಪರೀಕ್ಷೆ ನಡೆಸುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಡೆಸ್‌ಕೋಡ್‌ ಬಿಡುಗಡೆ ಮಾಡಲಾಗಿದ್ದು, ಇದರಲ್ಲಿ ಮೊದಲಿಗೇ “ಅಭ್ಯರ್ಥಿಗಳು ಯಾವುದೇ ಮಾಸ್ಕ್‌ ಅನ್ನು ಧರಿಸುವಂತಿಲ್ಲʼʼ ಎಂದು ಸ್ಪಷ್ಟವಾಗಿ ಸೂಚಿಸಿದೆ.

ಪಿಎಸ್‌ಐ, ಕೆಪಿಟಿಸಿಎಲ್‌ ಸೇರಿದಂತೆ ಇತ್ತೀಚೆಗೆ ನಡೆದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೆಲ ಅಭ್ಯರ್ಥಿಗಳು ಬ್ಲೂಟೂತ್‌ ಇತ್ಯಾದಿ ಆಧುನಿಕ ಉಪಕರಣಗಳ್ನು ಬಳಸಿ ಅಕ್ರಮ ನಡೆಸಿರುವುದು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಕೆಇಎ ಸಾಕಷ್ಟು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದೆ. ಇದರ ಭಾಗವಾಗಿ ಮಾಸ್ಕ್‌ ಧರಿಸಲೂ ಅವಕಾಶ ನೀಡಿಲ್ಲ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಬೀಜ ನಿಗಮ ನಿಯಮಿತ (KSSCL)ದಲ್ಲಿನ ಸಹಾಯಕ ವ್ಯವಸ್ಥಾಪಕರ ಹಾಗೂ ಹಿರಿಯ/ ಕಿರಿಯ/ ಬೀಜ ಸಹಾಯಕರು ಹುದ್ದೆಗಳ ನೇಮಕಕ್ಕೆ, ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿನ ಪಶು ವೈದ್ಯಕೀಯ ಪರಿವೀಕ್ಷಕರ ಹುದ್ದೆಗಳಿಗೆ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿನ ದ್ವಿತೀಯ ದರ್ಜೆ ಸಹಾಯಕರ (SDA) ಹುದ್ದೆಗಳ ನೇಮಕಕ್ಕೆ ಮತ್ತು ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿ ಖಾಲಿ ಇರುವ ಅಸಿಸ್ಟೆಂಟ್‌ ಎಂಜಿನಿಯರ್‌, ಜೂನಿಯರ್‌ ಎಂಜಿನಿಯರ್‌ ಎಸ್‌ಡಿಎ ಮತ್ತು ಎಫ್‌ಡಿಎ ಹುದ್ದೆಗಳಿಗೆ ಪರೀಕ್ಷೆ ನಡೆಸುತ್ತಿದೆ.

ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್‌ಗಳು ಅಥವಾ ಬಟನ್‌ಗಳನ್ನು ಹೊಂದಿರುವ ಡ್ರೆಸ್‌ಗಳನ್ನು ಧರಿಸಬಾರದು ಎಂದು ಸೂಚಿಸಲಾಗಿದೆ. ಪೂರ್ಣತೋಳಿನ ಬಟ್ಟೆಗಳನ್ನು ಧರಿಸುವುದನ್ನೂ ನಿಷೇಧಿಸಲಾಗಿದೆ.

ಎತ್ತರದ ಹಿಮ್ಮಡಿಯ ಬೂಟುಗಳು ಮತ್ತು ಅಡಿಭಾಗ ಹೊಂದಿರುವ ಬೂಟುಗಳನ್ನು ಹಾಕಬಾರದು. ಸ್ಯಾಂಡಲ್, ಚಪ್ಪಲಿಗಳನ್ನೇ ಹಾಕಿಕೊಂಡು ಪರೀಕ್ಷೆಗೆ ಹಾಜರಾಗಬಹುದು ಎಂದು ತಿಳಿಸಲಾಗಿದೆ. ಕಿವಿಯೋಲೆಗಳು, ಉಂಗುರಗಳು, ಪೆಂಡೆಂಟ್‌ಗಳು, ನೆಕ್ಲೇಸ್‌ಗಳು, ಬಳೆಗಳು ಇಂತಹ ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದನ್ನು ಕೂಡ ನಿಷೇಧಿಸಲಾಗಿದ್ದು, ಹಿಜಾಬ್‌, ಬುರ್ಖಾ ಧರಿಸಿ ಬರುವ ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗುವುದಿಲ್ಲ ಎಂದು ಕೆಇಎ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಪುರುಷ ಅಭ್ಯರ್ಥಿಗಳು ಕೂಡ ಅರ್ಧ ತೋಳಿನ ಶರ್ಟ್‌ಗಳನ್ನೇ ಧರಿಸಿ ಪರೀಕ್ಷೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ. ಅಭ್ಯರ್ಥಿಗಳು ಧರಿಸುವ ಬಟ್ಟೆಗಳು ಹಗುರವಾಗಿರಬೇಕು. ಅಂದರೆ ಜಿಪ್ ಇರುವ ಪಾಕೆಟ್‌ಗಳು, ದೊಡ್ಡ ಬಟನ್‌ಗಳು, ವಿಸ್ತಾರವಾದ ಕಸೂತಿ ಇರುವ ಬಟ್ಟೆಗಳನ್ನು ಧರಿಸುವಂತಿಲ್ಲ. ಕುರ್ತಾ ಪೈಜಾಮವನ್ನು ಹಾಕಿಕೊಂಡು ಬರುವಂತಿಲ್ಲ. ಯಾವುದೇ ಲೋಹದ ಆಭರಣಗಳನ್ನು ಧರಿಸಿಕೊಂಡು ಬರುವಂತಿಲ್ಲ. ಶೂಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಕೆಇಎ ತಿಳಿಸಿದೆ.

ಡ್ರೆಸ್‌ಕೋಡ್‌ ಅನ್ನು ಅನುಸರಿಸುವುದರ ಜೊತೆಗೆ, ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್‌ಗಳು, ಪೆನ್‌ಡ್ರೈವ್‌ಗಳು, ಇಯರ್ ಫೋನ್‌ಗಳು, ಮೈಕ್ರೋಫೋನ್‌ಗಳು, ಬ್ಲೂಟೂತ್ ಸಾಧನಗಳು ಮತ್ತು ಕೈಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವಂತಿಲ್ಲ ಎಂದು ಸೂಚಿಸಲಾಗಿದೆ.

ಯಾವುದೇ ರೂಪದಲ್ಲಿ ಆಹಾರ ಪದಾರ್ಥಗಳು-ಪ್ಯಾಕ್ ಮಾಡಲಾದ ಅಥವಾ ಅನ್‌ಪ್ಯಾಕ್‌ ಆಹಾರ ಪದಾರ್ಥಗಳನ್ನು ಸಹ ಪರೀಕ್ಷಾ ಕೇಂದ್ರದೊಳಗೆ ತೆಗೆದುಕೊಂಡು ಹೋಗುವಂತಿಲ್ಲ. ಪರೀಕ್ಷಾ ಕೇಂದ್ರದ ಒಳಗೆ ನೀರಿನ ಬಾಟಲಿ ತೆಗೆದುಕೊಂಡು ಹೋಗಬಹುದಾದರೂ ಬಾಟಲಿ ಪಾರದರ್ಶಕವಾಗಿರಬೇಕು. ಅದಕ್ಕೆ ಯಾವುದೇ ಲೇಬಲ್‌ ಇರಬಾರದು ಎಂದು ಸೂಚಿಸಲಾಗಿದೆ.

ಪೆನ್ಸಿಲ್, ಪೇಪರ್, ಎರೇಸರ್, ಮಾಪಕಗಳು, ಜ್ಯಾಮಿಟ್ರಿ ಬಾಕ್ಸ್ ಮತ್ತು ಲಾಗ್ ಟೇಬಲ್‌ಗಳನ್ನು ಪರೀಕ್ಷಾ ಕೇಂದ್ರಗೊಳಗೆ ಒಯ್ಯುವುದನ್ನು ನಿಷೇಧಿಸಲಾಗಿದೆ. ವ್ಯಾಲೆಟ್‌ಗಳು, ಗಾಗಲ್ಸ್, ಬೆಲ್ಸ್‌ಗಳು, ಕ್ಯಾಪ್‌ಗಳು, ಪರಿಕರಗಳು, ಕ್ಯಾಮೆರಾ ಮತ್ತು ಆಭರಣಗಳನ್ನು ಪರೀಕ್ಷಾ ಕೇಂದ್ರದೊಳಗೆ ಒಯ್ಯಲು ಅನುಮತಿಸಲಾಗುವುದಿಲ್ಲ ಎಂದು ಪರೀಕ್ಷಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ | KEA Recruitment 2023 : ಕೆಇಎನಿಂದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆ; ಪರಿಷ್ಕೃತ ವೇಳಾಪಟ್ಟಿ, ಪ್ರವೇಶ ಪತ್ರ ಬಿಡುಗಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

IT Hiring: ಟಿಸಿಎಸ್‌ನಲ್ಲಿ ಫ್ರೆಶರ್‌ಗಳಿಗೆ ಅರ್ಜಿ ಆಹ್ವಾನ, ಅರ್ಜಿ ಸಲ್ಲಿಸುವುದು ಹೇಗೆ? ಯಾವಾಗ ಕೊನೆಯ ದಿನ?

IT Hiring: 2023-24ರಲ್ಲಿ ಟಿಸಿಎಸ್‌ 40,000 ಫ್ರೆಶರ್‌ಗಳನ್ನು ನೇಮಿಸಿಕೊಳ್ಳುವ ಗುರಿಯನ್ನು ಹೊಂದಿತ್ತು. ಈ ವರ್ಷವೂ ಹೆಚ್ಚಿನ ಪ್ರಮಾಣದಲ್ಲಿ ನೇಮಕ ಆಗಲಿದೆ.

VISTARANEWS.COM


on

tcs jobs IT hiring
Koo

ಹೊಸದಿಲ್ಲಿ: ಭಾರತದ ಅತಿದೊಡ್ಡ ಐಟಿ ಸೇವೆಗಳ (IT services) ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್ – TCS) ನೂತನ ಉದ್ಯೋಗಿಗಳನ್ನು ನೇಮಿಸಿಕೊಳ್ಳಲು (IT Hiring) ಪ್ರಾರಂಭಿಸಿದೆ. ಏಪ್ರಿಲ್ 10ರವರೆಗೆ ಹೊಸ ಉದ್ಯೋಗಗಳಿಗಾಗಿ (Job Openings) ಅರ್ಜಿಗಳನ್ನು ಕರೆಯಲಾಗುತ್ತಿದೆ.

ಇದುವರೆಗಿನ ನೇಮಕಾತಿ ಸ್ಥಗಿತದಿಂದ ಸಂಕಷ್ಟದಲ್ಲಿರುವ ಎಂಜಿನಿಯರಿಂಗ್ ಪದವೀಧರರಿಗೆ ಇದು ಸಿಹಿ ಸುದ್ದಿಯಾಗಿದೆ. ಕಲೆದೆರಡು ವರ್ಷಗಳಲ್ಲಿ ವಿವಿಧ ದೊಡ್ಡ ಐಟಿ ಸಂಸ್ಥೆಗಳು ನೇಮಕಾತಿ ನಿಲ್ಲಿಸಿದ್ದವು.

TCS ಏಪ್ರಿಲ್ 26ರಂದು ಪರೀಕ್ಷೆಗಳನ್ನು ನಡೆಸಲಿದೆ. ಕಂಪನಿಯು 2024ರ BTech, BE, MCA, MSc ಮತ್ತು MS ಬ್ಯಾಚ್‌ನಿಂದ ಏಪ್ರಿಲ್ 10ರವರೆಗೆ ಉದ್ಯೋಗ ಅರ್ಜಿಗಳನ್ನು ಆಹ್ವಾನಿಸುತ್ತಿದೆ ಎಂದು TCS ವೆಬ್‌ಸೈಟ್‌ನ ಇತ್ತೀಚಿನ ಪ್ರಕಟಣೆ ತಿಳಿಸಿದೆ. TCS ಮೂರು ವಿಭಾಗಗಳಲ್ಲಿ- ನಿಂಜಾ, ಡಿಜಿಟಲ್ ಮತ್ತು ಪ್ರೈಮ್- ನೇಮಕಾತಿ ಮಾಡುತ್ತಿದೆ.

ನಿಂಜಾ ವರ್ಗವು ವರ್ಷಕ್ಕೆ 3.36 ಲಕ್ಷ ರೂಪಾಯಿಗಳ, ಡಿಜಿಟಲ್ ಮತ್ತು ಪ್ರೈಮ್ ವಿಭಾಗಗಳು ವಾರ್ಷಿಕವಾಗಿ ಕ್ರಮವಾಗಿ 7 ಲಕ್ಷ ಮತ್ತು 9-11.5 ಲಕ್ಷ ರೂ.ಗಳ ಪ್ಯಾಕೇಜ್‌ ಅನ್ನು ನೀಡಲಿವೆ. ಖಾಲಿ ಇರುವ ಹುದ್ದೆಗಳ ಸಂಖ್ಯೆಯನ್ನು ಟಿಸಿಎಸ್‌ ಬಹಿರಂಗಪಡಿಸಿಲ್ಲ.

ಡಿಸೆಂಬರ್ 2023ರಂದೇ ಸಂಸ್ಥೆ ಹೊಸ ಉದ್ಯೋಗಗಳ ಸೂಚನೆ ನೀಡಿತ್ತು. “ನಾವು ಮುಂದಿನ ವರ್ಷಕ್ಕೆ ನಮ್ಮ ಕ್ಯಾಂಪಸ್ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದೇವೆ. TCSಗೆ ಸೇರಲು ಫ್ರೆಶರ್‌ಗಳಲ್ಲಿ ಪ್ರಚಂಡ ಉತ್ಸಾಹವನ್ನು ಕಾಣುತ್ತಿದೇವೆ” ಎಂದು TCS ಮುಖ್ಯ ಮಾನವ ಸಂಪನ್ಮೂಲ ಅಧಿಕಾರಿ ಮಿಲಿಂದ್ ಲಕ್ಕಡ್ ಹೇಳಿದ್ದರು.

“ಉದ್ಯೋಗಿಗಳ ಸಂಖ್ಯೆಯನ್ನು ನಿರ್ದಿಷ್ಟಪಡಿಸುವುದು ಕಷ್ಟ” ಎಂದು ಲಕ್ಕಾಡ್ ಹೇಳಿದ್ದರು. ದೊಡ್ಡ ಪ್ರಮಾಣದಲ್ಲಿ ನೇಮಕಾತಿ ಆಗುವ ಸಂಭವ ಇದೆ. 2023-24ರಲ್ಲಿ ಟಿಸಿಎಸ್‌ 40,000 ಫ್ರೆಶರ್‌ಗಳನ್ನು ನೇಮಿಸಿಕೊಳ್ಳುವ ಗುರಿಯನ್ನು ಹೊಂದಿತ್ತು.

ಏತನ್ಮಧ್ಯೆ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಶುಕ್ರವಾರ ಅಮೆಜಾನ್ ವೆಬ್ ಸೇವೆಗಳು (AWS) ಜನರೇಟಿವ್ AI (GenAI) ಅನ್ನು ಬಿಡುಗಡೆ ಪಾಲುದಾರನಾಗಿ ಹೊಂದಿದೆ. GenAIನಲ್ಲಿ 350,000ಕ್ಕೂ ಹೆಚ್ಚು ಉದ್ಯೋಗಿಗಳು ಮೂಲಭೂತ ಕೌಶಲ್ಯಗಳ ಬಗ್ಗೆ ತರಬೇತಿ ಪಡೆದಿದ್ದು, TCS ವಿಶ್ವದಲ್ಲೇ ಅತಿ ದೊಡ್ಡ AI ಕಾರ್ಯಪಡೆಗಳಲ್ಲಿ ಒಂದನ್ನು ನಿರ್ಮಿಸಲು ಸಿದ್ಧವಾಗಿದೆ.

TCS ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?

ಹಂತ 1: TCS NextStep ಪೋರ್ಟಲ್‌ಗೆ ಲಾಗಿನ್ ಮಾಡಿ
ಹಂತ 2: ಡ್ರೈವ್‌ಗಾಗಿ ನೋಂದಾಯಿಸಿ ಮತ್ತು ಅರ್ಜಿ ಸಲ್ಲಿಸಿ
ಸನ್ನಿವೇಶ A: ನೀವು TCS NextStep ಪೋರ್ಟಲ್, ‘IT’ ವರ್ಗದ ಅಡಿಯಲ್ಲಿ ನೋಂದಾಯಿತ ಬಳಕೆದಾರರಾಗಿದ್ದರೆ, ದಯವಿಟ್ಟು ನಿಮ್ಮ TCS ಉಲ್ಲೇಖ ID (CT/ DT ಉಲ್ಲೇಖ ಸಂಖ್ಯೆ) ಒಂದಿಗೆ ಲಾಗಿನ್ ಮಾಡಿ ಮತ್ತು ಅರ್ಜಿ ನಮೂನೆಯನ್ನು ಪೂರ್ಣಗೊಳಿಸಿ. ಸಲ್ಲಿಸಿದ ನಂತರ, ದಯವಿಟ್ಟು Apply For Drive ಮೇಲೆ ಕ್ಲಿಕ್ ಮಾಡಿ.
ಸನ್ನಿವೇಶ B: ನೀವು ಹೊಸ ಬಳಕೆದಾರರಾಗಿದ್ದರೆ, Register Now ಕ್ಲಿಕ್ ಮಾಡಿ. “IT” ವರ್ಗವನ್ನು ಆಯ್ಕೆಮಾಡಿ ಮತ್ತು ನಿಮ್ಮ ವಿವರಗಳನ್ನು ಭರ್ತಿ ಮಾಡಿ. ನಿಮ್ಮ ಅರ್ಜಿ ನಮೂನೆಯನ್ನು ಸಲ್ಲಿಸಿ ಮತ್ತು Apply For Drive ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ: Bangalore Water Crisis: “ನೀರು ಕೊಡ್ತೀವಿ, ಪ್ಲೀಸ್‌ ಹೋಗ್ಬೇಡಿ…” ಐಟಿ ಸಂಸ್ಥೆಗಳಿಗೆ ರಾಜ್ಯ ಮನವಿ; ಗಾಳ ಹಾಕಿದ ಕೇರಳ

Continue Reading

ಕರ್ನಾಟಕ

KEA: ಕೆಸೆಟ್-‌2023ರ ಪರಿಷ್ಕೃತ ಕೀ ಉತ್ತರ ಪ್ರಕಟ; ಹೀಗೆ ಪರಿಶೀಲಿಸಿ

KEA: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ವರ್ಷದ ಜನವರಿ 13ರಂದು ನಡೆಸಿದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET 2023)ಯ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಿದೆ. ಅದನ್ನು ಪರಿಶೀಲಿಸುವ ವಿಧಾನ ಇಲ್ಲಿದೆ.

VISTARANEWS.COM


on

kea
Koo

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಈ ವರ್ಷದ ಜನವರಿಯಲ್ಲಿ ನಡೆಸಿದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (KSET 2023)ಯ ಪರಿಷ್ಕೃತ ಕೀ ಉತ್ತರಗಳನ್ನು ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಜನವರಿ 13ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ 42 ವಿವಿಧ ವಿಷಯಗಳ ಪರೀಕ್ಷೆ ನಡೆಸಿತ್ತು. ಇದಕ್ಕೆ ಸಂಬಂಧಿಸಿದ ಕೀ ಉತ್ತರಗಳನ್ನು ಜನವರಿ 29ರಂದು ಪ್ರಕಟಿಸಿ ಆಕ್ಷೇಪಣೆ ಸಲ್ಲಿಸಲು ಫೆಬ್ರವರಿ 7ರ ತನಕ ಅವಕಾಶ ನೀಡಿತ್ತು. ಬಳಿಕ ಕೆಲವು ಅಭ್ಯರ್ಥಿಗಳು ದಿನಾಂಕವನ್ನು ವಿಸ್ತರಿಸಬೇಕೆಂದು ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಕಾಲಾವಕಾಶವನ್ನು ಫೆಬ್ರವರಿ 17ರ ತನಕ ಮುಂದೂಡಲಾಗಿತ್ತು.

ಅದರಂತೆ ಪರೀಕ್ಷಾ ಪ್ರಾಧಿಕಾರಕ್ಕೆ 23 ಪತ್ರಿಕೆಗಳ ಆಯ್ದ ಕೀ ಉತ್ತರಗಳಿಗೆ ಮಾತ್ರ ಆಕ್ಷೇಪಣೆ ಸಲ್ಲಿಕೆಯಾಗಿದ್ದವು. ಬಳಿಕ ವಿಷಯ ತಜ್ಞರು ಒಟ್ಟು 22 ಪತ್ರಿಕೆಗಳ ಕೆಲವು ಉತ್ತರಗಳಿಗೆ ಬದಲಾವಣೆ ಸೂಚಿಸಿದ್ದರು. ಇನ್ನು ಒಂದು ಪತ್ರಿಕೆಯಲ್ಲಿನ ಆಕ್ಷೇಪಣೆಗೆ ಯಾವುದೇ ಬದಲಾವಣೆ ತಂದಿಲ್ಲ. ಅಲ್ಲದೆ ಉಳಿದ 19 ಪತ್ರಿಕೆಗಳಿಗೆ ಯಾವುದೇ ಆಕ್ಷೇಪಣೆ ಕಂಡು ಬರದ ಹಿನ್ನೆಲೆಯಲ್ಲಿ ಕೀ ಉತ್ತರದಲ್ಲಿ ಯಾವುದೇ ಬದಲಾವಣೆ ಇಲ್ಲ.

”ಆಕ್ಷೇಪಣೆ ವ್ಯಕ್ತವಾದ 23 ಪತ್ರಿಕೆಗಳ ಪ್ರಶ್ನೆಗಳನ್ನು ವಿಷಯ ತಜ್ಞರು ಕೂಲಂಕುಷವಾಗಿ ಪರಿಶೀಲಿಸಿದ್ದಾರೆ. ಆ ಪೈಕಿ ಮನಃಶಾಸ್ತ್ರ ವಿಷಯವನ್ನು ಹೊರತುಪಡಿಸಿ ಉಳಿದ 22 ಪತ್ರಿಕೆಗಳ ಪರಿಷ್ಕೃತ ಕೀ ಉತ್ತರಗಳನ್ನು ಈಗ ಪಕ್ರಟಿಸಲಾಗಿದೆ” ಎಂದು ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

ಪರಿಷ್ಕೃತ ಕೀ ಉತ್ತರ ಹೀಗೆ ಪರಿಶೀಲಿಸಿ

  • ಪರಿಷ್ಕೃತ ಕೀ ಉತ್ತರ ಪರಿಶೀಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಈಗ ತೆರೆದುಕೊಳ್ಳುವ ವೆಬ್‌ಪೇಜ್‌ನ ಮೇಲ್ಭಾಗದಲ್ಲಿರುವ ‘ಪ್ರವೇಶʼ ಆಯ್ಕೆಯನ್ನು ಕ್ಲಿಕ್‌ ಮಾಡಿ.
  • ಬಳಿಕ ʼಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ 2023′ ಆಯ್ಕೆ ಮೇಲೆ ಕ್ಲಿಕ್ ಮಾಡಿ.
  • ನಂತರ ತೆರೆದ ವೆಬ್‌ಪೇಜ್‌ನಲ್ಲಿ ಕಂಡುಬರುವ ‘KSET ಪರಿಷ್ಕೃತ ಕೀ ಉತ್ತರಗಳು’ ಆಯ್ಕೆಯನ್ನು ಕ್ಲಿಕ್ ಮಾಡಿ.
  • ಆಗ ವಿಷಯವಾರು ಪರಿಷ್ಕೃತ ಕೀ ಉತ್ತರಗಳ ಲಿಂಕ್ ಕಂಡು ಬರುತ್ತದೆ.
  • ನೀವೂ ನೋಡಲು ಇಚ್ಛಿಸುವ ವಿಷಯದ ಕೀ ಉತ್ತರದ ಲಿಂಕ್‌ ಮೇಲೆ ಕ್ಲಿಕ್ ಮಾಡಿ.
  • ತೆರೆದುಕೊಳ್ಳುವ ಪಿಡಿಎಫ್‌ ಪುಟದಲ್ಲಿ ಕೀ ಉತ್ತರ ಪರಿಶೀಲಿಸಿಕೊಳ್ಳಬಹುದು.

ಬೆಂಗಳೂರು ನಗರ ಸೇರಿದಂತೆ ಧಾರವಾಡ, ಹಾವೇರಿ, ಬಳ್ಳಾರಿ, ದಾವಣಗೆರೆ, ತುಮಕೂರು, ಮೈಸೂರು, ಮಂಡ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಗೆ ಒಟ್ಟು 1,17,302 ಅಭ್ಯರ್ಥಿಗಳು ಹೆಸರು ನೋಂದಾಯಿಸಿದ್ದರು. ಈ ಪೈಕಿ ವಾಣಿಜ್ಯಶಾಸ್ತ್ರದ ಪರೀಕ್ಷೆಯನ್ನು ಅತಿ ಹೆಚ್ಚು ಅಂದರೆ 16,000 ಜನ ತೆಗೆದುಕೊಂಡಿದ್ದರು. ಕನ್ನಡ ವಿಷಯವನ್ನು 11 ಸಾವಿರ ಮಂದಿ ಆಯ್ದುಕೊಂಡಿದ್ದರು. ಅತಿ ಕಡಿಮೆ ಅಂದರೆ 25 ಜನ ಭಾಷಾಶಾಸ್ತ್ರದ ವಿಷಯದಲ್ಲಿ ಪರೀಕ್ಷೆ ಬರೆಯಲು ಹೆಸರು ನೋಂದಾಯಿಸಿಕೊಂಡಿದ್ದರು. ಬಿಗಿ ಭದ್ರತೆಯಲ್ಲಿ ಪರೀಕ್ಷೆ ನಡೆಸಲಾಗಿತ್ತು.

ಪರೀಕ್ಷೆ ಬರೆದ ಒಟ್ಟು ಅಭ್ಯರ್ಥಿಗಳ ಪೈಕಿ ಅತಿ ಹೆಚ್ಚು ಅಂಕ ಪಡೆದ ಶೇ. 6 ಆಕಾಂಕ್ಷಿಗಳಿಗೆ ಅಂತಿಮವಾಗಿ ಕೆಸೆಟ್ ಪರೀಕ್ಷೆಯ ಅರ್ಹತೆ ಸಿಗಲಿದೆ. ಇದರಲ್ಲಿ ರೋಸ್ಟರ್ ನಿಯಮಗಳನ್ನು ಪಾಲಿಸಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಇದನ್ನೂ ಓದಿ: KEA Exam Scam: ಸರ್ಕಾರಿ ನೌಕರಿಗೆ ಸೇರಿ ಒಂದೇ ತಿಂಗಳಲ್ಲಿ ಜೈಲು ಸೇರಿದ ವಾರ್ಡನ್!

Continue Reading

ಉದ್ಯೋಗ

Job Alert: ಗುಡ್‌ನ್ಯೂಸ್‌; 93 ಬ್ಯಾಂಕ್‌ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ

Job Alert: ಬೆಂಗಳೂರಿನಲ್ಲೇ ಉದ್ಯೋಗ ಹೊಂದಬೇಕು ಇಲ್ಲಿದೆ ಗುಡ್‌ನ್ಯೂಸ್‌. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ 93 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್‌ 6.

VISTARANEWS.COM


on

job alert
Koo

ಬೆಂಗಳೂರು: ಬೆಂಗಳೂರಿನಲ್ಲೇ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುವವರಿಗೆ ಇಲ್ಲಿದೆ ಸುವರ್ಣಾವಕಾಶ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಯಮಿತ (The Karnataka State Co-Operative Apex Bank Ltd)ದ ಬೆಂಗಳೂರು ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. 93 ಬ್ಯಾಂಕ್‌ ಸಹಾಯಕ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್‌ 6 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಸಾಮಾನ್ಯ 85, ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ 8 ಹುದ್ದೆಗಳಿವೆ. ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಭಾಷಾ ವಿಷಯಗಳು ಸೇರಿದಂತೆ ಕ್ರೋಢೀಕೃತ ಶೇ. 55ರಷ್ಟು ಅಂಕ ಹಾಗೂ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ ಶೇ. 50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.

ಕಂಪ್ಯೂಟರ್‌ ಜ್ಞಾನ ಕಡ್ಡಾಯ

ಅಭ್ಯರ್ಥಿಗಳು ಕನ್ನಡ ಓದುವ ಜತೆಗೆ ಬರೆಯಲು, ಸ್ಪಷ್ಟವಾಗಿ ಮಾತನಾಡಲು ಮತ್ತು ಅರ್ಥ ಮಾಡಿಕೊಳ್ಳುವಂತಿರಬೇಕು. ಕಂಪ್ಯೂಟರ್ ಅಪರೇಷನ್ ಮತ್ತು ಅಪ್ಲಿಕೇಷನ್‌ನಲ್ಲಿ ಉತ್ತಮ ಜ್ಞಾನ ಹೊಂದಿರಬೇಕು. ಸಹಕಾರ ವಿಷಯದಲ್ಲಿ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿರುವವರಿಗೆ ಆದ್ಯತೆ ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ

ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-Iರ ಅಭ್ಯರ್ಥಿಗಳಿಗೆ 5 ವರ್ಷ, ಇತರ ಹಿಂದುಳಿದ ಜಾತಿ, ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 500 ರೂ. + ಜಿಎಸ್‌ಟಿ, ಸಾಮಾನ್ಯ ವರ್ಗ ಮತ್ತು ಇತರ ಹಿಂದುಳಿದ ಜಾತಿ, ಹಿಂದುಳಿದ ವರ್ಗಗಳ ಅಂದರೆ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 1,000 ರೂ. + ಜಿಎಸ್‌ಟಿಯನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಅರ್ಜಿ ಪರಿಶೀಲನೆಯ ನಂತರ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಮೌಖಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದವರಿಗೆ 28,425 ರೂ.- 87,125 ರೂ. ಮಾಸಿಕ ವೇತನ ಸಿಗಲಿದೆ. ಗಮನಿಸಿ ಅಭ್ಯರ್ಥಿಯ ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ಭಾವಚಿತ್ರವನ್ನು ಒಂದು ಹಾಳೆಯ ಮೇಲಿಟ್ಟು ಆದರ ಕೆಳಗೆ ಕಪ್ಪು ಶಾಹಿಯ ಸ್ಕೆಚ್/ ಮಾರ್ಕರ್ ಪೆನ್‌ನಲ್ಲಿ ಸಹಿಯನ್ನು ಸ್ಕ್ಯಾನ್ ಮಾಡಿ ಅರ್ಜಿ ಜತೆಗೆ ಅಪ್‌ಲೋಡ್‌ ಮಾಡಬೇಕು. ಭಾವಚಿತ್ರ ಹಾಗೂ ಸಹಿಯನ್ನು ಅಪ್‌ಲೋಡ್‌ ಮಾಡದ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಆಗ್ನೇಯ ಮಧ್ಯ ರೈಲ್ವೆಯಿಂದ 733 ಅಪ್ರೆಂಟಿಸ್‌ಗಳ ನೇಮಕಕ್ಕೆ ಅರ್ಜಿ ಆಹ್ವಾನ; ಐಟಿಐ ಪಾಸಾದವರು ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ಎಸ್‌ವಿಸಿ ಕೋ-ಆಪರೇಟಿವ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಏ. 9ರೊಳಗೆ ಅರ್ಜಿ ಸಲ್ಲಿಸಿ

Job Alert: ಪ್ರಮುಖ ಬ್ಯಾಂಕ್‌ಗಳಲ್ಲಿ ಒಂದು ಎನಿಸಿಕೊಂಡಿರುವ, ಸುಮಾರು 117 ವರ್ಷಗಳ ಇತಿಹಾಸ ಹೊಂದಿರುವ ಎಸ್‌ವಿಸಿ ಕೋ-ಆಪರೇಟಿವ್‌ ಬ್ಯಾಂಕ್‌ ಲಿಮಿಟೆಡ್‌ ತನ್ನಲ್ಲಿ ಖಾಲಿ ಇರುವ 113 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಏಪ್ರಿಲ್‌ 9ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

VISTARANEWS.COM


on

job alert
Koo

ಬೆಂಗಳೂರು: ಬ್ಯಾಂಕ್‌ ಉದ್ಯೋಗಿಯಾಗಬೇಕು ಎಂದುಕೊಂಡಿದ್ದೀರಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. ಎಸ್‌ವಿಸಿ ಕೋ-ಆಪರೇಟಿವ್‌ ಬ್ಯಾಂಕ್‌ ಲಿಮಿಟೆಡ್‌ (SVC Co-operative Bank) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬ್ರ್ಯಾಂಚ್‌ ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌ ಸೇರಿ ಸುಮಾರು 113 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ (SVC Co-operative Bank Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಏಪ್ರಿಲ್‌ 9 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಚೀಫ್ ಮ್ಯಾನೇಜರ್ – 2 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್‌ಎ, ಪದವಿ, ಎಂಬಿಎ
ಕ್ಲಸ್ಟರ್ ಮ್ಯಾನೇಜರ್ – 6 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್‌ಎ, ಪದವಿ
ಬ್ರ್ಯಾಂಚ್‌ ಮ್ಯಾನೇಜರ್ – 10 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್‌ಎ, ಎಂಬಿಎ
ರೀಜನಲ್ ಮ್ಯಾನೇಜರ್ – 3 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್‌ಎ, ಎಂಬಿಎ
ಸೇಲ್ಸ್ ಮ್ಯಾನೇಜರ್ – 15 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್‌ಎ, ಎಂಬಿಎ
ಮ್ಯಾನೇಜರ್ / ಅಸಿಸ್ಟೆಂಟ್ ಮ್ಯಾನೇಜರ್ ಇನ್‌ಸ್ಟಿಟ್ಯೂಷನಲ್‌ ಸೇಲ್ಸ್‌ – 7 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್‌ಎ, ಎಂಬಿಎ
ಅಸಿಸ್ಟೆಂಟ್ ಮ್ಯಾನೇಜರ್ – 20 ಹುದ್ದೆ, ವಿದ್ಯಾರ್ಹತೆ: ಸಿಎ ಅಥವಾ ಐಸಿಡಬ್ಲ್ಯುಎ, ಸಿಎಫ್‌ಎ, ಡಿಪ್ಲೋಮಾ, ಪದವಿ, ಎಂಬಿಎ, ಬಿ.ಆರ್ಕ್‌.
ಗ್ರಾಹಕ ಸೇವಾ ಅಧಿಕಾರಿ – 50 ಹುದ್ದೆ, ವಿದ್ಯಾರ್ಹತೆ: ಪದವಿ, ಎಂಬಿಎ

ಉದ್ಯೋಗ ಸ್ಥಳ ಮತ್ತು ಅರ್ಜಿ ಶುಲ್ಕ

ಆಯ್ಕೆಯಾದವರಿಗೆ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್‌, ಮಧ್ಯಪ್ರದೇಶ, ಹೊಸದಿಲ್ಲಿ, ತಮಿಳುನಾಡುಗಳಲ್ಲಿ ಪೋಸ್ಟಿಂಗ್‌ ನೀಡಲಾಗುತ್ತದೆ. ಯಾವ ಅಭ್ಯರ್ಥಿಗೂ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ ಮತ್ತು ವಯೋಮಿತಿ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಹುದ್ದೆಗೆ ಅನುಗುಣವಾಗಿ ಗರಿಷ್ಠ ವಯೋಮಿತಿ 27ರಿಂದ 55 ವರ್ಷ.

SVC Co-operative Bank Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಹೆಚ್ಚಿನ ವಿವರಗಳಿಗಾಗಿ ಬ್ಯಾಂಕ್‌ನ ವೆಬ್‌ಸೈಟ್‌ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಆಸಕ್ತರು ತಮ್ಮ ರೆಸ್ಯೂಮ್‌ ಅನ್ನು ಬ್ಯಾಂಕ್‌ನ ಅಧಿಕೃತ ಇಮೇಲ್‌ careers@svcbank.comಗೆ ಕಳುಹಿಸುವ ಮೂಲಕ ಅರ್ಜಿ ಸಲ್ಲಿಸಬಹುದು. ರೆಸ್ಯೂಮ್‌ ಕಳುಹಿಸುವಾಗ ಗಮನಿಸಬೇಕಾದ ಅಂಶಗಳು: ಸಬ್ಜೆಕ್ಟ್‌ನಲ್ಲಿ ನೀವು ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೀರಿ ಎನ್ನುವುದನ್ನು ದಾಖಲಿಸಿ. ಮೊಬೈಲ್‌ ನಂಬರ್‌, ಇಮೇಲ್‌ ವಿಳಾಸಗಳನ್ನು ಸರಿಯಾಗಿ ನಮೂದಿಸಿ. ಮುಂದೆ ನಿಮ್ಮೊಂದಿಗೆ ಸಂವಹನ ನಡೆಸಲು ಇದು ಬೇಕಾಗುತ್ತದೆ. ರೆಸ್ಯೂಮ್‌ ಅನ್ನು ಇಮೇಲ್‌ ಮೂಲಕ ಮಾತ್ರವೇ ಕಳುಹಿಸಬೇಕು. ಬೇರೆ ವಿಧಾನಗಳಲ್ಲಿ ಕಳುಹಿಸಿದ ರೆಸ್ಯೂಮ್‌ಗಳನ್ನು ಸ್ವೀಕರಿಸುವುದಿಲ್ಲ. ಎವಿಸಿ ಬ್ಯಾಂಕ್ ಉದ್ಯೋಗಿಗಳ ನೇಮಕಾತಿಗಾಗಿ ಯಾವುದೇ ಏಜೆಂಟ್‌ / ಏಜೆನ್ಸಿಯನ್ನು ನೇಮಿಸಿಕೊಂಡಿಲ್ಲ ಎಂದು ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Job Alert: ಹಟ್ಟಿ ಚಿನ್ನದ ಗಣಿ ಕಂಪೆನಿಯಲ್ಲಿದೆ ಉದ್ಯೋಗಾವಕಾಶ; ಐಟಿಐ, ಡಿಪ್ಲೋಮಾ ಪಾಸಾದವರು ಅರ್ಜಿ ಸಲ್ಲಿಸಿ

Continue Reading
Advertisement
Kodagu University
ಕೊಡಗು35 seconds ago

Kodagu University : ಉದ್ಯೋಗ ಸೃಷ್ಟಿ ಜತೆಗೆ ಗುಣಮಟ್ಟದ ಶಿಕ್ಷಣಕ್ಕೆ ಒತ್ತು: ಪ್ರೊ.ಅಶೋಕ್ ಸಂಗಪ್ಪ

Alia Bhatt wore diamond jewellery
ಸಿನಿಮಾ5 mins ago

Alia Bhatt: ಲಂಡನ್‌ ʻಹೋಪ್ ಗಾಲಾʼದಲ್ಲಿ ಆಲಿಯಾ ಭಟ್‌ ಧರಿಸಿದ ವಜ್ರದ ನೆಕ್ಲೇಸ್ ಬೆಲೆ ಎಷ್ಟು?

Heat Stroke
ಆರೋಗ್ಯ17 mins ago

Heat Stroke: ನೀರು ಕುಡಿದು ತಂಪಾಗಿರಿ, ಹೀಟ್‌ ಸ್ಟ್ರೋಕ್‌ ತಪ್ಪಿಸಿಕೊಳ್ಳಿ

Rahul Gandhi And Tejashwi Yadav
Lok Sabha Election 202423 mins ago

Lok Sabha Election: ಬಿಹಾರದಲ್ಲಿ ಕಾಂಗ್ರೆಸ್‌, ಆರ್‌ಜೆಡಿ ಸೀಟು ಹಂಚಿಕೆ; ಯಾರಿಗೆ ಎಷ್ಟು ಕ್ಷೇತ್ರ?

IPL 2024
ಕ್ರೀಡೆ29 mins ago

IPL 2024: ಹಾರ್ದಿಕ್​ ಪಾಂಡ್ಯ ಮೇಲೆ ಬೌಲಿಂಗ್​ ಕೋಚ್​ ಮುನಿಸು; ವಿಡಿಯೊ ವೈರಲ್​​

Sringeri Shankar Mutt
ಮೈಸೂರು29 mins ago

Sringeri Shankar Mutt: ಮೈಸೂರಿನಲ್ಲಿ ಮಾ.30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ

LIC
ದೇಶ2 hours ago

LIC Offices: ವೀಕೆಂಡ್‌ನಲ್ಲೂ ಕಾರ್ಯನಿರ್ವಹಿಸಲಿವೆ ಎಲ್‌ಐಸಿ ಕಚೇರಿಗಳು; ಕಾರಣ ಇಲ್ಲಿದೆ

Dead Body Found in water tank
ಬೀದರ್‌2 hours ago

Dead Body Found : ವಾಟರ್‌ ಟ್ಯಾಂಕರ್‌ನಲ್ಲಿತ್ತು ಕೊಳೆತ ಶವ; ಅದೇ ನೀರು ಕುಡಿದವರು ಕಕ್ಕಾಬಿಕ್ಕಿ

Varthur Santhosh tears
ಬಿಗ್ ಬಾಸ್2 hours ago

Varthur Santhosh: ಟೀಕೆಗಳಿಗೆ ಮನನೊಂದು ಕಣ್ಣೀರಿಟ್ಟ ವರ್ತೂರ್‌ ಸಂತೋಷ್‌!

Lok Sabha Election 2024 Brijesh Chowta declares assets
Lok Sabha Election 20242 hours ago

Lok Sabha Election 2024: ಅವಿವಾಹಿತ ಬ್ರಿಜೇಶ್ ಚೌಟ ಬಳಿ ಇಲ್ಲ ಕೋಟಿ ಕೋಟಿ ಆಸ್ತಿ! ಸಾಲ ಮಾಡಿ ಕಾರು ಖರೀದಿ

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ4 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ6 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ12 hours ago

Dina Bhavishya : ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ; ಈ ರಾಶಿಯವರು ಎಚ್ಚರಿಕೆ ವಹಿಸಿ

Lok Sabha Election 2024 DK Brothers hold roadshow in Ramanagara and DK Suresh file nomination
Lok Sabha Election 20241 day ago

Lok Sabha Election 2024: ರಾಮನಗರದಲ್ಲಿ ಡಿಕೆ ಬ್ರದರ್ಸ್‌ ಶಕ್ತಿ ಪ್ರದರ್ಶನ, ರೋಡ್‌ ಶೋ ಮಾಡಿ ನಾಮಪತ್ರ ಸಲ್ಲಿಸಿದ ಡಿಕೆಸು

Lok Sabha Election 2024 personal prestige will not be allowed DK Shivakumar warns Kolar leaders
Lok Sabha Election 20241 day ago

Lok Sabha Election 2024: ಯಾರ ವೈಯಕ್ತಿಕ ಪ್ರತಿಷ್ಠೆಗೂ ಅವಕಾಶ ನೀಡಲ್ಲ; ಕೋಲಾರ ನಾಯಕರಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

dina bhavishya read your daily horoscope predictions for March 28 2024
ಭವಿಷ್ಯ2 days ago

Dina Bhavishya : ಇಂದು ಈ ರಾಶಿಯವರಿಗೆ ಒತ್ತಡ ಹೆಚ್ಚು; ಜಾಗ್ರತೆ ವಹಿಸುವುದು ಉತ್ತಮ!

R Ashok Pressmeet and attack on CM Siddaramaiah Congress Government
Lok Sabha Election 20242 days ago

Lok Sabha Election 2024: ಬೈ ಬೈ ಬೆಂಗಳೂರು ಎನ್ನುತ್ತಿರುವ ಜನ; ಸರ್ಕಾರದ ವಿರುದ್ಧ ಹರಿಹಾಯ್ದ ಆರ್.‌ ಅಶೋಕ್

Tejaswini Gowda resigns from BJP Council Impact on BJP
Lok Sabha Election 20242 days ago

Tejaswini Gowda: ಬಿಜೆಪಿ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ತೇಜಸ್ವಿನಿ ಗೌಡ! ಬಿಜೆಪಿಗೆ ಎಫೆಕ್ಟ್?

Lok Sabha Election 2024 Gokarna priest shalls to make DK Shivakumar CM Whats wrong says Shivakumar
Lok Sabha Election 20242 days ago

Lok Sabha Election 2024: ಡಿಕೆಶಿ ಸಿಎಂ ಆಗಲಿ ಎಂದು ಗೋಕರ್ಣ ಅರ್ಚಕರಿಂದ ಸಂಕಲ್ಪ; ತಪ್ಪೇನು ಎಂದ ಶಿವಕುಮಾರ್

Dina Bhavishya
ಭವಿಷ್ಯ3 days ago

Dina Bhavishya : ಉತ್ಸಾಹದಲ್ಲಿ ಆಶ್ವಾಸನೆ ಕೊಟ್ಟು ಅಪಾಯದ ಸುಳಿಗೆ ಸಿಲುಕಬೇಡಿ

BBMP marshals harass street vendors in Jayanagar
ಬೆಂಗಳೂರು3 days ago

BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್‌ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್‌

Dina Bhavishya
ಭವಿಷ್ಯ4 days ago

Dina Bhavishya : ಆಪ್ತರ ವರ್ತನೆಯು ಈ ರಾಶಿಯವರ ಮನಸ್ಸಿಗೆ ನೋವು ತರಲಿದೆ

ಟ್ರೆಂಡಿಂಗ್‌