ಬೆಂಗಳೂರು: ಬಹು ದಿನಗಳಿಂದ ನಿರೀಕ್ಷಿಸಲಾಗುತ್ತಿದ್ದ ಉದ್ಯೋಗ ಪ್ರಕಟಣೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈಗ ನೀಡಿದೆ. ವಿವಿಧ ನಿಗಮ, ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕ ಪ್ರಕ್ರಿಯೆ (KEA Recruitment 2023) ನಡೆಸುವ ಸಂಬಂಧ ಅಧಿಸೂಚನೆ ಹೊರಡಿಸಿದೆ. ಒಟ್ಟು 670 ಹುದ್ದೆಗಳಿಗೆ ನೇಮಕ ನಡೆಯಲಿದೆ.
ಈ ನೇಮಕಕ್ಕೆ ಸಂಬಂಧಿಸಿದಂತೆ ಕಳೆದ ಮಾ.15 ರಂದೇ ಪ್ರಕಟಣೆ ಹೊರಡಿಸಲಾಗಿತ್ತು. ಆದರೆ ತಾಂತ್ರಿಕ ಸಿದ್ಧತೆ ಮಾಡಿಕೊಳ್ಳುವ ಕಾರಣದಿಂದ ನೇಮಕ ಪ್ರಕ್ರಿಯೆಯನ್ನು ಮುಂದೂಡಲಾಗಿತ್ತು. ಆ ನಂತರ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದ್ದರಿಂದ ಈ ನೇಮಕ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಅಧಿಸೂಚನೆ ಹೊರಡಿಸಲಾಗಿದ್ದು, ಜೂನ್ 23 ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಇಂದು ಮಧ್ಯಾಹ್ನ 2 ಗಂಟೆಯಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿದೆ. ಈ ಹಿಂದಿನ ಪ್ರಕಟಣೆಯಲ್ಲಿ ಕೆಇಎಯು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿನ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುವುದು ಎಂದು ತಿಳಿಸಿತ್ತು. ಅದನ್ನು ಈಗ ಕೈಬಿಡಲಾಗಿದೆ. ಹೀಗಾಗಿ 757 ಹುದ್ದೆಗಳಿಗೆ ಬದಲಾಗಿ ಈಗ 670 ಹುದ್ದೆಗಳಿಗೆ ನೇಮಕ ನಡೆಯಲಿದೆ.
ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23-06-2023 ಮಧ್ಯಾಹ್ನ 2 ಗಂಟೆಯಿಂದ
ಇ-ಅಂಚೆ ಕಚೇರಿಗಳಲ್ಲಿ ಶುಲ್ಕಪಾವತಿ (ಕಚೇರಿಯ ವೇಳೆಯಲ್ಲಿ) ಬೆಳಗ್ಗೆ11ಗಂಟೆಯಿಂದ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-07-2023 ಸಂಜೆ 5.30ರ ವರೆಗೆ
ಶುಲ್ಕ ಪಾವತಿಗೆ ಕೊನೆಯ ದಿನಾಂಕ: 25-07-2023
ಸಹಾಯವಾಣಿ ಸಂಖ್ಯೆ: 080-23460460
ಇದು ನಿಮಗೆ ತಿಳಿದಿರಲಿ: ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ ಮತ್ತು ಪ್ರತ್ಯೇಕವಾಗಿ ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ.
ಹುದ್ದೆಗಳ ವರ್ಗಾವಾರು ವರ್ಗೀಕರಣ, ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಜೂನ್ 23 ರಂದು ಹೊರಡಿಸಲಾಗುವ ವಿವರವಾದ ಅಧಿಸೂಚನೆಯಲ್ಲಿ ನೀಡಲಾಗುವುದು ಎಂದು ಪ್ರಾಧಿಕಾರ ಪ್ರಕಟಿಸಿದೆ.
ವಿದ್ಯಾರ್ಹತೆ ಮಾಹಿತಿ ಇಲ್ಲಿದೆ ನೋಡಿ :KEA Recruitment 2023 : ಆಹಾರ ನಿಗಮದಲ್ಲಿ ನೇಮಕ; ವಿದ್ಯಾರ್ಹತೆ, ಸ್ಪರ್ಧಾತ್ಮಕ ಪರೀಕ್ಷೆ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ!
ಯಾವೆಲ್ಲಾ ಹುದ್ದೆಗಳಿಗೆ ನೇಮಕ?
ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು
- ಸಹಾಯಕ ವ್ಯವಸ್ಥಾಪಕರು (ತಾಂತ್ರಿಕ)- ಗ್ರೂಪ್ ಬಿ – 4 (ಉಳಿಕೆ ಮೂಲ ವೃಂದ-1, ಕಲ್ಯಾಣ ಕರ್ನಾಟಕ-1, ಬ್ಯಾಕ್ಲಾಗ್-2)
- ಸಹಾಯಕ ವ್ಯವಸ್ಥಾಪಕರು (ತಾಂತ್ರಿಕೇತರ)-ಗ್ರೂಪ್ ಬಿ – 2 (ಕಲ್ಯಾಣ ಕರ್ನಾಟಕ-1, ಬ್ಯಾಕ್‌ಲಾಗ್-1)
- ಆಪ್ತ ಕಾರ್ಯದರ್ಶಿ – ಗ್ರೂಪ್ ಸಿ – 1 (ಉಳಿಕೆ ಮೂಲ ವೃಂದ-1)
- ಹಿರಿಯ ಸಹಾಯಕರು (ತಾಂತ್ರಿಕ) ಗ್ರೂಪ್ ಸಿ – 4 (ಉಳಿಕೆ ಮೂಲ ವೃಂದ-1, ಕಲ್ಯಾಣ ಕರ್ನಾಟಕ-1, ಬ್ಯಾಕ್‌ಲಾಗ್-2)
- ಹಿರಿಯ ಸಹಾಯಕರು (ತಾಂತ್ರಿಕೇತರ) ಗ್ರೂಪ್ ಸಿ – 3 ( ಕಲ್ಯಾಣ ಕರ್ನಾಟಕ-1, ಬ್ಯಾಕ್‌ಲಾಗ್-2)
- ಸಹಾಯಕರು (ತಾಂತ್ರಿಕ) ಗ್ರೂಪ್ ಸಿ- 6 (ಉಳಿಕೆ ಮೂಲ ವೃಂದ-4, ಕಲ್ಯಾಣ ಕರ್ನಾಟಕ-1, ಬ್ಯಾಕ್‌ಲಾಗ್-1)
- ಸಹಾಯಕರು (ತಾಂತ್ರಕೇತರ) ಗ್ರೂಪ್ ಸಿ -6 (ಉಳಿಕೆ ಮೂಲ ವೃಂದ-4, ಕಲ್ಯಾಣ ಕರ್ನಾಟಕ-1, ಬ್ಯಾಕ್‌ಲಾಗ್-1)
ನೇಮಕಾತಿ ಅಧಿಸೂಚನೆಯನ್ನು ನೋಡಲು ಇಲ್ಲಿ ಕ್ಲಿಕ್ (Click Here ) ಮಾಡಿ.
ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ,
- ಸಹಾಯಕ ವ್ಯವಸ್ಥಾಪಕರು -10 (ಉಳಿಕೆ ಮೂಲ ವೃಂದ-8 ಕಲ್ಯಾಣ ಕರ್ನಾಟಕ-2)
- ಗುಣಮಟ್ಟ ನಿರೀಕ್ಷಕರು – 23 (ಉಳಿಕೆ ಮೂಲ ವೃಂದ-18 ಕಲ್ಯಾಣ ಕರ್ನಾಟಕ-1, ಬ್ಯಾಕ್‌ಲಾಗ್ -3)
- ಹಿರಿಯ ಸಹಾಯಕರು (ಲೆಕ್ಕ)- 33 (ಉಳಿಕೆ ಮೂಲ ವೃಂದ-26 ಕಲ್ಯಾಣ ಕರ್ನಾಟಕ-5, ಬ್ಯಾಕ್‌ಲಾಗ್ -2)
- ಹಿರಿಯ ಸಹಾಯಕರು -57 (ಉಳಿಕೆ ಮೂಲ ವೃಂದ-49 ಕಲ್ಯಾಣ ಕರ್ನಾಟಕ-08)
- ಕಿರಿಯ ಸಹಾಯಕರು – 263 (ಉಳಿಕೆ ಮೂಲ ವೃಂದ-244 ಕಲ್ಯಾಣ ಕರ್ನಾಟಕ-19)
ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ
- ಕಲ್ಯಾಣ ಅಧಿಕಾರಿ (ಗ್ರೂಪ್ ಸಿ) -12 (ಉಳಿಕೆ ಮೂಲ ವೃಂದ-9 ಕಲ್ಯಾಣ ಕರ್ನಾಟಕ-3)
- ಕ್ಷೇತ್ರ ನಿರೀಕ್ಷಕರು (ಗ್ರೂಪ್ ಸಿ) – 60 (ಉಳಿಕೆ ಮೂಲ ವೃಂದ-45 ಕಲ್ಯಾಣ ಕರ್ನಾಟಕ-15)
- ಪ್ರಥಮ ದರ್ಜೆ ಸಹಾಯಕರು (ಗ್ರೂಪ್ ಸಿ) -12 (ಉಳಿಕೆ ಮೂಲ ವೃಂದ-8 ಕಲ್ಯಾಣ ಕರ್ನಾಟಕ-4)
- ಆಪ್ತ ಸಹಾಯಕರು(ಗ್ರೂಪ್ ಸಿ)- 02 (ಉಳಿಕೆ ಮೂಲ ವೃಂದ-2)
- ದ್ವಿತೀಯ ದರ್ಜೆ ಸಹಾಯಕರು (ಗ್ರೂಪ್ ಸಿ) -100 (ಉಳಿಕೆ ಮೂಲ ವೃಂದ-64 ಕಲ್ಯಾಣ ಕರ್ನಾಟಕ-36)
ಮೈಸೂರು ಸೇಲ್ಸ್‌ಇಂಟರ್‌ನ್ಯಾಷನಲ್ ಲಿಮಿಟೆಡ್
- ಸಹಾಯಕ ವ್ಯವಸ್ಥಾಪಕರು – 23 (ಉಳಿಕೆ ಮೂಲ ವೃಂದ-20, ಕಲ್ಯಾಣ ಕರ್ನಾಟಕ-3)
- ಮೇಲ್ವಿಚಾರಕರು – 23 (ಉಳಿಕೆ ಮೂಲ ವೃಂದ-20, ಕಲ್ಯಾಣ ಕರ್ನಾಟಕ-3)
- ಪದವೀಧರ ಗುಮಾಸ್ತರು – 6 (ಉಳಿಕೆ ಮೂಲ ವೃಂದ-5, ಕಲ್ಯಾಣ ಕರ್ನಾಟಕ-1)
- ಗುಮಾಸ್ತರು – 13 (ಉಳಿಕೆ ಮೂಲ ವೃಂದ-12, ಕಲ್ಯಾಣ ಕರ್ನಾಟಕ-1)
- ಮಾರಾಟ ಪ್ರತಿನಿಧಿ / ಪ್ರೋಗ್ರಾಮರ್ – 6 (ಕಲ್ಯಾಣ ಕರ್ನಾಟಕ-6)
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here ) ಮಾಡಿ.
ಕಲ್ಯಾಣ ಕರ್ನಾಟಕಕ್ಕೆ ಮೀಸಲಾದ ಹುದ್ದೆಗಳಿಗೆ ಸರ್ಕಾರದ ಆದೇಶದಂತೆ ಪ್ರತ್ಯೇಕವಾಗಿ ಅಧಿಸೂಚನೆ ಪ್ರಕಟಿಸಲಾಗುತ್ತದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ.
ಈ ನೇಮಕದ ಕುರಿತ ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ: https://cetonline.karnataka.gov.in/kea
ಇದನ್ನೂ ಓದಿ: Indian Army Recruitment 2023 : ಎಂಜಿನಿಯರಿಂಗ್ ಪದವೀಧರರಿಗೆ ಸೇನೆಯಲ್ಲಿ ಆಫೀಸರ್ ಹುದ್ದೆ; ಕೂಡಲೇ ಅರ್ಜಿ ಸಲ್ಲಿಸಿ!