Site icon Vistara News

KEA Recruitment 2023 : ವಿವಿಧ ಹುದ್ದೆಗಳಿಗೆ ನೇಮಕ; ತಾತ್ಕಾಲಿಕ ಅಂಕಪಟ್ಟಿ ಪ್ರಕಟ

KCET application form correction

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದಲ್ಲಿನ (ಕೆಆರ್‌ಐಡಿಎಲ್‌) ವಿವಿಧ ಹುದ್ದೆಗಳ ನೇಮಕಕ್ಕೆ (KEA Recruitment 2023) ಸಂಬಂಧಿಸಿದಂತೆ ಜನವರಿ 29 ರಿಂದ ಫೆಬ್ರವರಿ 12 ರ ವರೆಗೆ ನಡೆಸಿದ್ದ ಪರೀಕ್ಷೆಗಳ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಿದೆ.

ಅಸಿಸ್ಟೆಂಟ್‌ ಎಂಜಿನಿಯರ್‌, ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ), ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ), ಜೂನಿಯರ್‌ ಎಂಜಿನಿಯರ್‌ ಹುದ್ದೆಗಳಿಗೆ ಪರೀಕ್ಷೆ ಬರೆದ ಅಭ್ಯರ್ಥಿಗಳು ತಾವು ಪರೀಕ್ಷೆಯಲ್ಲಿ ಪಡೆದ ಅಂಕವನ್ನು ತಾತ್ಕಾಲಿಕ ಅಂಕಪಟ್ಟಿಯಲ್ಲಿ ಪರಿಶೀಲಿಸಬಹುದಾಗಿದೆ.

ಈ ನೇಮಕಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಕೀ ಉತ್ತರವನ್ನು ಪ್ರಕಟಿಲಾಗಿತ್ತು. ಈ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಆನ್‌ಲೈನ್‌ನಲ್ಲಿಯೇ ಸಂಬಂಧಿತ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಆಕ್ಷೇಪಣೆ ಸಲ್ಲಿಸಲು ಏ.17ರ ಸಂಜೆ 5 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಬೇರೆ ಯಾವುದೇ ಕ್ರಮದಲ್ಲಿ ಆಕ್ಷೇಪಣೆಯನ್ನು ಸಲ್ಲಿಸಲು ಅವಕಾಶ ನೀಡಲಾಗಿಲ್ಲ.

ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿನ ದ್ವಿತೀಯ ದರ್ಜೆ ಸಹಾಯಕರ (SDA) ಹುದ್ದೆಗಳ ನೇಮಕಕ್ಕೆ ನಡೆದ ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಇದಕ್ಕೂ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಏ. 17 ರ ಸಂಜೆ 5 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಆನ್‌ಲೈನ್‌ನಲ್ಲಿ ಮಾತ್ರ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಬೇರೆ ಯಾವುದೇ ಕ್ರಮದಲ್ಲಿ ಸಲ್ಲಿಸಲಾಗುವ ಆಕ್ಷೇಪಣೆಯನ್ನು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿನ ಪಶು ವೈದ್ಯಕೀಯ ಪರಿವೀಕ್ಷಕರ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಅಂತಿಮ ಕೀ ಉತ್ತರ ಮತ್ತು ತಾತ್ಕಾಲಿಕ ಅಂಕಪಟ್ಟಿಯನ್ನು ಸಹ ಬಿಡುಗಡೆ ಮಾಡಲಾಗಿದೆ

ಹೆಚ್ಚಿನ ಮಾಹಿತಿಗೆ ಕೆಇಎ ವೆಬ್‌ಸೈಟ್‌ ವಿಳಾಸ: https://cetonline.karnataka.gov.in/kea/

Exit mobile version