KEA Recruitment 2023 recruitment for government organization Huge reduction in application fee KEA Recruitment 2023 : ನಿಗಮ ಮಂಡಳಿಗಳಲ್ಲಿ ನೇಮಕ; ಅರ್ಜಿ ಶುಲ್ಕದಲ್ಲಿ ಭಾರಿ ಕಡಿತ Vistara News

ಉದ್ಯೋಗ

KEA Recruitment 2023 : ನಿಗಮ ಮಂಡಳಿಗಳಲ್ಲಿ ನೇಮಕ; ಅರ್ಜಿ ಶುಲ್ಕದಲ್ಲಿ ಭಾರಿ ಕಡಿತ

ವಿವಿಧ ನಿಗಮ, ಮಂಡಳಿಗಳಲ್ಲಿ ಖಾಲಿ ಇರುವ ಒಟ್ಟು670 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನೇಮಕ ಪ್ರಕ್ರಿಯೆ (KEA Recruitment 2023) ನಡೆಸುತ್ತಿದ್ದು, ಈ ಹಿಂದೆ ಪ್ರಕಟಿಸಿದ್ದ ಅರ್ಜಿ ಶುಲ್ಕದಲ್ಲಿ ಶೇ. 50 ರಷ್ಟು ಕಡಿಮೆ ಮಾಡಿ ಈಗ ಪ್ರಕಟಣೆ ಹೊರಡಿಸಿದೆ.

VISTARANEWS.COM


on

KEA Recruitment 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಭ್ಯರ್ಥಿಗಳ ಒತ್ತಡಕ್ಕೆ ಕೊನೆಗೂ ಮಣಿದಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವಿವಿಧ ನಿಗಮ, ಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ (KEA Recruitment 2023) ನಿಗದಿಪಡಿಸಿದ್ದ ಅರ್ಜಿ ಶುಲ್ಕವನ್ನು ಕಡಿಮೆ ಮಾಡಿದೆ.

ಈಗ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 500, ಹಿಂದುಳಿದ ವರ್ಗಗಳು- 2ಎ,2ಬಿ, 3ಎ,3ಬಿ ಅಭ್ಯರ್ಥಿಗಳಿಗೆ 300 ರೂ. ಎಸ್‌ಸಿ, ಎಸ್‌ಟಿ, ಪ್ರವರ್ಗ-1ರ ಅಭ್ಯರ್ಥಿಗಳಿಗೆ 200 ರೂ. ಹಾಗೂ ವಿಕಲಚೇತನರು/ ಮಾಜಿ ಸೈನಿಕರಿಗೆ 100 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದ್ದು, ಅರ್ಜಿ ಶುಲ್ಕವನ್ನು ಜೂನ್‌ 30 ರಿಂದ ಪಾವತಿಸಲು ಅವಕಾಶ ನೀಡಲಾಗತ್ತದೆ. ʻʻಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶುಲ್ಕ ಪಾವತಿಸುವುದಕ್ಕೆ ದಿನಾಂಕ 30-06-2023 ರ ಮಧ್ಯಾಹ್ನ1 ರ ನಂತರ ಚಲನ್‌ ಡೌನ್‌ಲೋಡ್‌ ಮಾಡಿಕೊಂಡು ಪಾವತಿಸಬಹುದಾಗಿದೆʼʼ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ಹಿಂದೆ ಪ್ರಕಟಿಸಿದ್ದ ಅಧಿಸೂಚನೆಯಲ್ಲಿ ಸಾಮಾನ್ಯ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 1,000 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 750 ರೂ., ಅಂಗವಿಕಲ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರಿಗೆ 250 ರೂ. ನಿಗದಿಪಡಿಸಲಾಗಿತ್ತು. ಅರ್ಜಿ ಸಲ್ಲಿಸುವಾಗ ಚಲನ್‌ ಪಡೆದು ಇ-ಅಂಚೆ ಕಚೇರಿ ಮೂಲಕ ಶುಲ್ಕವನ್ನು ಪಾವತಿಸಲು ಅವಕಾಶ ನೀಡಲಾಗಿತ್ತು.

ಅರ್ಜಿ ಶುಲ್ಕ ಪಾವತಿಸಲು ಒಂದು ಸಾವಿರ ರೂ. ನಿಗದಿಪಡಿಸಿರುವುದಕ್ಕೆ ಅಭ್ಯರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಭ್ಯರ್ಥಿಗಳಿಗೆ ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತಾದರೂ ಪ್ರತ್ಯೇಕವಾಗಿ ಶುಲ್ಕ ಪಾವತಿಸಬೇಕೆಂದು ಸೂಚಿಸಲಾಗಿತ್ತು. ಹೀಗಾಗಿ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸುವುದೇ ದೊಡ್ಡ ಹೊರೆಯಾಗಿತ್ತು. ಈ ಸಂಬಂಧ ಅಭ್ಯರ್ಥಿಗಳ ಪರವಾಗಿ ಕೆಇಎ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದ ಕರ್ನಾಟಕ ಸ್ಟೇಟ್‌ ಎಕ್ಸಾಮಿನೇಷನ್‌ ಅಸ್ಪಿರೆಂಟ್ಸ್‌ ಅಸೋಸಿಯೇಷನ್‌, ಕೂಡಲೇ ಶುಲ್ಕವನ್ನು ಕಡಿಮೆ ಮಾಡಿ, ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬೇಕೆಂದು ಕೋರಿತ್ತು.

ಕೆಇಎ ಹೇಳಿರುವುದೇನು?

ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದಲ್ಲಿನ ಒಟ್ಟು 386 ‌ಹುದ್ದೆ, ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್ ಲಿಮಿಟೆಡ್‌ನ 72, ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 186, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ 26 ಹುದ್ದೆ ಒಟ್ಟು 670 ಹುದ್ದೆಗಳಿಗೆ ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕ ಪ್ರಕ್ರಿಯೆ ನಡೆಸುತ್ತಿದೆ.

ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23-06-2023 ಮಧ್ಯಾಹ್ನ 2 ಗಂಟೆಯಿಂದ
ಇ-ಅಂಚೆ ಕಚೇರಿಗಳಲ್ಲಿ ಶುಲ್ಕಪಾವತಿ (ಕಚೇರಿಯ ವೇಳೆಯಲ್ಲಿ) ಬೆಳಗ್ಗೆ11ಗಂಟೆಯಿಂದ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-07-2023 ಸಂಜೆ 5.30ರ ವರೆಗೆ
ಶುಲ್ಕ ಪಾವತಿಗೆ ಕೊನೆಯ ದಿನಾಂಕ: 25-07-2023
ಸಹಾಯವಾಣಿ ಸಂಖ್ಯೆ: 080-23460460
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ: https://cetonline.karnataka.gov.in/kea/

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕವನ್ನು ಆಫ್‌ಲೈನ್‌ನಲ್ಲಿ ಮಾತ್ರ ಪಾವತಿಸಲು (ಅಂಚೆಕಚೇರಿ ಮೂಲಕ) ಅವಕಾಶ ನೀಡಲಾಗಿದೆ. ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ ಮತ್ತು ಪ್ರತ್ಯೇಕವಾಗಿ ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ.

ಇದನ್ನೂ ಓದಿ : IBPS Clerk Recruitment 2023 : ಬ್ಯಾಂಕುಗಳಲ್ಲಿನ ಕ್ಲರ್ಕ್‌ ಹುದ್ದೆ; ಜುಲೈ 1 ರಿಂದ ಅರ್ಜಿ ಸಲ್ಲಿಕೆ ಶುರು

ಅರ್ಜಿ ಶುಲ್ಕವನ್ನು ಇಳಿಕೆ ಮಾಡಿರುವುದನ್ನು ಬಿಟ್ಟರೆ ನೇಮಕ ಪ್ರಕ್ರಿಯೆಯಲ್ಲಿ ಬೇರೆಯಾವ ಬದಲಾವಣೆಯನ್ನೂ ಮಾಡಲಾಗಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಉದ್ಯೋಗ

Job Alert: ಏರ್‌ ಇಂಡಿಯಾದಲ್ಲಿದೆ ಉದ್ಯೋಗಾವಕಾಶ; ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಿ

Job Alert: ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸಸ್ ಲಿಮಿಟೆಡ್ ಸುಮಾರು 828 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆಸಕ್ತರು ಡಿಸೆಂಬರ್‌ 18ರಿಂದ 23ರ ವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು.

VISTARANEWS.COM


on

air india
Koo

ಬೆಂಗಳೂರು: ಏರ್‌ ಇಂಡಿಯಾದಲ್ಲಿ ಉದ್ಯೋಗಾವಕಾಶಗಳಿವೆ. ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೋರ್ಟ್‌ ಸರ್ವೀಸಸ್ ಲಿಮಿಟೆಡ್ ಸುಮಾರು 828 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (AIATSL Recruitment 2023). ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್, ರ‍್ಯಾಂಪ್‌ ಸರ್ವಿಸ್ ಎಕ್ಸಿಕ್ಯೂಟಿವ್, ಡ್ಯೂಟಿ ಆಫೀಸರ್ ಮುಂತಾದ ಹುದ್ದೆಗಳಿವೆ. ಅಭ್ಯರ್ಥಿಗಳನ್ನು 3 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಮುಂಬೈ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸಬೇಕಾಗುತ್ತದೆ. ಆಸಕ್ತರು ಡಿಸೆಂಬರ್‌ 18ರಿಂದ 23ರ ವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬಹುದು (Job Alert).

ಹುದ್ದೆಗಳ ವಿವರ

ಡೆಪ್ಯೂಟಿ ಮ್ಯಾನೇಜರ್ ರ‍್ಯಾಂಪ್‌ / ಮೇಂಟೆನೆನ್ಸ್‌: 7, ಡೆಪ್ಯೂಟಿ ಮ್ಯಾನೇಜರ್-ರ‍್ಯಾಂಪ್‌: 28, ಜೂನಿಯರ್ ಆಫೀಸರ್ ಟೆಕ್ನಿಕಲ್: 24, ರ್ಯಾಂಪ್ ಸರ್ವೀಸ್ ಎಕ್ಸಿಕ್ಯೂಟಿವ್: 138, ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್‌ ಡ್ರೈವರ್: 167, ಡ್ಯೂಟಿ ಮ್ಯಾನೇಜರ್- ಪ್ಯಾಸೆಂಜರ್: 19, ಡ್ಯೂಟಿ ಆಫೀಸರ್-ಪ್ಯಾಸೆಂಜರ್: 30, ಡ್ಯೂಟಿ ಮ್ಯಾನೇಜರ್-ಕಾರ್ಗೊ: 3, ಡ್ಯೂಟಿ ಆಫೀಸರ್-ಕಾರ್ಗೊ: 8, ಜೂನಿಯರ್ ಆಫೀಸರ್-ಕಾರ್ಗೊ: 9, ಸೀನಿಯರ್ ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್: 178, ಕಸ್ಟಮರ್ ಸರ್ವೀಸ್ ಎಕ್ಸಿಕ್ಯೂಟಿವ್: 217 ಹುದ್ದೆಗಳಿವೆ.

ಶೈಕ್ಷಣಿಕ ಅರ್ಹತೆ

ಹುದ್ದೆಗಳಿಗೆ ಅನುಗುಣವಾಗಿ ಎಸ್ಸೆಸ್ಸೆಲ್ಸಿ, ಡಿಪ್ಲೊಮ, ಐಟಿಐ, ಪದವಿ, ಇಂಜಿನಿಯರಿಂಗ್, ಇತರ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರುವವರು, 21 ವರ್ಷದಿಂದ 55 ವರ್ಷದ ಒಳಗಿರುವ ಆಸಕ್ತರು ನೇರ ಸಂದರ್ಶನಕ್ಕೆ ಹಾಜರಾಗಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ವಿಭಾಗದ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ ಎಂದು ಪ್ರಕಟಣೆ ತಿಳಿಸಿದೆ.

ಅರ್ಜಿ ಶುಲ್ಕ 500 ರೂ. ಅನ್ನು ಏರ್‌ ಇಂಡಿಯಾ ಏರ್ ಟ್ರಾನ್ಸ್‌ಪೋರ್ಟ್‌ ಸರ್ವೀಸೆಸ್ ಲಿಮಿಟೆಡ್ (AIR INDIA AIR TRANSPORT SERVICES LTD) ಹೆಸರಿನಲ್ಲಿ ಡಿಡಿ ತೆಗೆಯುವ ಮೂಲಕ ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ನಿವೃತ್ತ ಯೋಧರಿಗೆ ಯಾವುದೇ ಶುಲ್ಕವಿಲ್ಲ. ನೇರ ಸಂದರ್ಶನಕ್ಕೆ ಹಾಜರಾಗುವವರು ತಮ್ಮ ವಿದ್ಯಾರ್ಹತೆ ದಾಖಲೆಗಳು, ಕಾರ್ಯಾನುಭವ ದಾಖಲೆಗಳು, ಆಧಾರ್‌ ಕಾರ್ಡ್‌, ಅಪ್‌ಡೇಟ್‌ ಮಾಡಲಾದ ಇತ್ತೀಚಿನ ರೆಸ್ಯೂಮ್‌, ಅರ್ಜಿ ಶುಲ್ಕ ಪಾವತಿಸಿದ ಡಿಡಿ ರಶೀದಿ ತೆಗೆದುಕೊಂಡು ಹೋಗುವುದನ್ನು ಮರೆಯಬೇಡಿ.

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ ವಿಳಾಸ www.aiasl.inಗೆ ಭೇಟಿ ನೀಡಿ ಅಪ್ಲಿಕೇಷನ್‌ ಫಾರಂ ಡೌನ್‌ಲೋಡ್‌ ಮಾಡಿ
  • ಎಲ್ಲ ವಿವರಗಳೊಂದಿಗೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಅಗತ್ಯವಾದ ಎಲ್ಲ ಡ್ಯಾಕುಮೆಂಟ್‌ಗಳನ್ನು ಲಗತ್ತಿಸಿ
  • ಅಭ್ಯರ್ಥಿಗಳು ಸಂದರ್ಶನದ ಸಮಯದಲ್ಲಿ ನಿಗದಿತ ನಮೂನೆಯ ಅರ್ಜಿ ಸಲ್ಲಿಸಬೇಕಾಗುತ್ತದೆ.

ಸಂದರ್ಶನ ನಡೆಯುವ ಸ್ಥಳ:

GSD Complex, Near
Sahar Police Station,
CSMI Airport,
Terminal-2, Gate No.5,
Sahar, AndheriEast, Mumbai 400099.

ಇದನ್ನೂ ಓದಿ: Job Alert: ಬ್ಯಾಂಕ್‌ ಆಫ್‌ ಬರೋಡಾದ 250 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: 10ನೇ ತರಗತಿ ಪಾಸಾದವರಿಗೆ ಉತ್ತಮ ಅವಕಾಶ; ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

Job Alert: ಕೆಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗ ಖಾಲಿ ಇರುವ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಡಿಸೆಂಬರ್‌ 31.

VISTARANEWS.COM


on

ssc
Koo

ಬೆಂಗಳೂರು: ಕೆಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗ (The Staff Selection Commission-SSC) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC GD Vacancy 2023). ಜನರಲ್ ಡ್ಯೂಟಿ ಅಡಿಯಲ್ಲಿ ಪುರುಷ ಮತ್ತು ಮಹಿಳಾ ಕಾನ್ಸ್‌ಟೇಬಲ್‌ಗಳನ್ನು ನೇಮಿಸಿಕೊಳ್ಳಲಾಗುತ್ತಿದೆ. ಭಾರತಾದ್ಯಂತ ಸುಮಾರು 26,146 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದ್ದು, 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನಾಂಕ ಡಿಸೆಂಬರ್‌ 31 (Job Alert).

ಹುದ್ದೆಗಳ ವಿವರ

ಬಾರ್ಡರ್‌ ಸೆಕ್ಯುರಿಟಿ ಫೋರ್ಸ್‌ (ಬಿಎಸ್‌ಎಫ್‌)- 6,174, ಸೆಂಟ್ರಲ್‌ ಇಂಡಸ್ಟ್ರಿಯಲ್‌ ಸೆಕ್ಯುರಿಟಿ ಫೋರ್ಸ್‌ (ಸಿಐಎಸ್‌ಎಫ್‌)-11,025, ಸೆಂಟ್ರಲ್‌ ರಿಸರ್ವ್‌ ಪೊಲೀಸ್‌ ಫೋರ್ಸ್‌ (ಸಿಆರ್‌ಪಿಎಫ್‌)-3,337, ಸಶಸ್ತ್ರ ಸೀಮ ಬಲ್‌ (ಎಸ್‌ಎಸ್‌ಬಿ)- 635, ಇಂಡೋ-ಟಿಬೇಟಿಯನ್‌ ಬಾರ್ಡರ್‌ ಪೊಲೀಸ್‌ (ಐಟಿಬಿಪಿ)-3,189, ರೈಫಲ್‌ಮ್ಯಾನ್‌ ಇನ್‌ ಅಸ್ಸಾಂ ರೈಫಲ್ಸ್‌ (ಎಆರ್‌)-1,490 ಮತ್ತು ಸೆಕ್ರಟರಿಯೇಟ್‌ ಸೆಕ್ಯುರಿಟಿ ಫೋರ್ಸ್‌ (ಎಸ್‌ಎಸ್‌ಎಫ್‌)-296 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಮಾನ್ಯತೆ ಪಡೆದ ಮಂಡಳಿಯಿಂದ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. 18ರಿಂದ 23 ವರ್ಷದೊಳಗಿರುವವರು ಅರ್ಜಿ ಸಲ್ಲಿಸಬಹುದು.

ಆಯ್ಕೆ ವಿಧಾನ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಮತ್ತು ದೈಹಿಕ ಕ್ಷಮತಾ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ. ಜನರಲ್‌ ಇಂಟೆಲಿಜೆನ್ಸ್‌ ಮತ್ತು ರೀಸನಿಂಗ್‌, ಸಾಮಾನ್ಯ ಜ್ಞಾನ ಮತ್ತು ಸಾಮಾನ್ಯ ಅರಿವು, ಪ್ರಾಥಮಿಕ ಗಣಿತ ಮತ್ತು ಇಂಗ್ಲಿಷ್‌ / ಹಿಂದಿ ವಿಷಯಗಳ ತಲಾ 20 ಅಂಕಗಳ ಪ್ರಶ್ನೆಗಳಿರುತ್ತವೆ. ಗಮನಿಸಿ ನೀವು ಕನ್ನಡದಲ್ಲಿ ಬೇಕಾದರೂ ಪರೀಕ್ಷೆ ಬರೆಯಬಹುದು. ಇಂಗ್ಲಿಷ್‌, ಹಿಂದಿ, ಕನ್ನಡ ಸೇರಿದಂತೆ 15 ಭಾಷೆಗಳಲ್ಲಿ ಪ್ರಶ್ನೆ ಪತ್ರಿಕೆ ಲಭ್ಯ. ಆಯ್ಕೆಯಾದವರಿಗೆ 21,700 ರೂ.-69,100 ರೂ. ಮಾಸಿಕ ವೇತನ ದೊರೆಯಲಿದೆ.

ದೈಹಿಕ ಅರ್ಹತೆ

ಅಭ್ಯರ್ಥಿಗಳಿಗೆ ಶಾರೀರಿಕ ಮಾನದಂಡಗಳನ್ನು ನಿಗದಿಪಡಿಸಲಾಗಿರುತ್ತದೆ. ಪುರುಷ ಅಭ್ಯರ್ಥಿಗಳು ಕನಿಷ್ಠ 170 ಸೆಂ.ಮೀ. ಎತ್ತರವಿರಬೇಕು, ಸಾಮಾನ್ಯ ಸ್ಥಿತಿಯಲ್ಲಿ ಕನಿಷ್ಠ 80 ಸೆಂ.ಮೀ. ಎದೆ ಸುತ್ತಳಗೆ ಹೊಂದಿರಬೇಕು. ಎದೆಯ ಕನಿಷ್ಠ ಹಿಗ್ಗುವಿಕೆ 5 ಸೆಂ.ಮೀ. ಇರಬೇಕು. ಮಹಿಳಾ ಅಭ್ಯರ್ಥಿಗಳು ಕನಿಷ್ಠ 157 ಸೆಂ.ಮೀ ಎತ್ತರವಿರಬೇಕು. ಎತ್ತರಕ್ಕೆ ತಕ್ಕ ತೂಕವನ್ನು ಪುರುಷ ಅಭ್ಯರ್ಥಿಗಳು ಹೊಂದಿರಬೇಕು.

ಪರೀಕ್ಷಾ ಕೇಂದ್ರ ಮತ್ತು ಅರ್ಜಿ ಶುಲ್ಕ

ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿಗಳಲ್ಲಿ ಪರೀಕ್ಷಾ ಕೇಂದ್ರವಿದೆ. ಸಾಮಾನ್ಯ ಅಭ್ಯರ್ಥಿಗಳು 100 ರೂ. ಅರ್ಜಿ ಸಲ್ಲಿಸಬೇಕು. ಮಹಿಳೆ / ಎಸ್‌ಸಿ/ ಎಸ್‌ಟಿ/ ಮಾಜಿ ಸೈನಿಕರಿಗೆ ಯಾವುದೇ ಶುಲ್ಕವಿಲ್ಲ. ಕಂಪ್ಯೂಟರ್‌ ಆಧಾರಿತ ಪರೀಕ್ಷೆ 2024ರ ಫೆಬ್ರವರಿಯಲ್ಲಿ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಸಹಾಯವಾಣಿ: 080-25502520ಕ್ಕೆ ಕರೆ ಮಾಡಿ.

ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್‌ ವಿಳಾಸ

ಎಸ್‌ಎಸ್‌ಸಿ ಅಧಿಕೃತ ವೆಬ್‌ಸೈಟ್‌ ವಿಳಾಸ: https://ssc.nic.in/ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಗಮನಿಸಿ ಆನ್‌ಲೈನ್‌ ಮೂಲಕ ಮಾತ್ರವೇ ಅರ್ಜಿ ಸಲ್ಲಿಸಬೇಕು.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ದ್ವಿತೀಯ ಪಿಯುಸಿ ಪಾಸಾದವರಿಗೆ ಗೋಲ್ಡನ್‌ ಚಾನ್ಸ್‌; 540 ಫಾರೆಸ್ಟ್‌ ಗಾರ್ಡ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ

Continue Reading

ಉದ್ಯೋಗ

ಕರ್ನಾಟಕದಲ್ಲಿ 6 ಲಕ್ಷ ಕೋಟಿ ಹೂಡಿಕೆಗೆ ಒಡಂಬಡಿಕೆ; ಶೇ.70 ಸ್ಥಳೀಯರಿಗೆ ಉದ್ಯೋಗ: ಎಂ.ಬಿ. ಪಾಟೀಲ್‌

Belagavi Winter Session: ಸರ್ಕಾರದ ನಿಯಮಾವಳಿಗಳ ಪ್ರಕಾರ ಈ ಉದ್ಯಮಗಳಲ್ಲಿ `ಡಿ’ ಗ್ರೂಪ್ ಹುದ್ದೆಗಳನ್ನು ಕನ್ನಡಿಗರಿಗೆ ಶೇಕಡಾ 100ರಷ್ಟು ಮತ್ತು ಒಟ್ಟಾರೆಯಾಗಿ ಶೇ.70ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಕೊಡಬೇಕೆನ್ನುವ‌ ನಿಯಮ ರೂಪಿಸಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್‌ ಹೇಳಿದರು.

VISTARANEWS.COM


on

MB Patil in Belagavi Winter Session
Koo

ಬೆಳಗಾವಿ: 2022ರ ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಸಿದ ‘ಇನ್ವೆಸ್ಟ್ ಕರ್ನಾಟಕ’ ಸಮಾವೇಶದ (Invest Karnataka conference) ಮೂಲಕ 57 ಕಂಪನಿಗಳೊಂದಿಗೆ 5,41,369 ಕೋಟಿ ರೂ.ಗಳ ಹೂಡಿಕೆಗೆ ಸರ್ಕಾರವು ಒಡಂಬಡಿಕೆ ಮಾಡಿಕೊಂಡಿದೆ. ಇದೇ ರೀತಿಯಲ್ಲಿ, ಹುಬ್ಬಳ್ಳಿಯಲ್ಲಿ ನಡೆಸಲಾದ ಎಫ್ಎಂಸಿಜಿ ಹೂಡಿಕೆದಾರರ ಸಮಾವೇಶದ (FMCG Investors Meet) ಮುಖಾಂತರ 16 ಕಂಪನಿಗಳೊಂದಿಗೆ ರಾಜ್ಯದಲ್ಲಿ 1,275 ಕೋಟಿ ರೂ. ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ (Minister MB Patil) ಅವರು ವಿಧಾನ ಮಂಡಲ ಅಧಿವೇಶನದಲ್ಲಿ (Belagavi Winter Session) ಹೇಳಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಎಂ.ಬಿ. ಪಾಟೀಲ್‌, ಇನ್ವೆಸ್ಟ್ ಕರ್ನಾಟಕದಲ್ಲಿ ಕುದುರಿಸಲಾದ ಒಡಂಬಡಿಕೆಗಳ ಪೈಕಿ 7 ಯೋಜನೆಗಳಿಗೆ ಏಕಗವಾಕ್ಷಿ ಸಮಿತಿಯಲ್ಲಿ ಅನುಮೋದನೆ ನೀಡಲಾಗಿದ್ದು, ಇವುಗಳಿಗೆ ಭೂಮಿ, ನೀರು ಮತ್ತು ವಿದ್ಯುತ್ ಪೂರೈಕೆ ಒದಗಿಸಲಾಗುವುದು. ಇವು ಬೃಹತ್ ಯೋಜನೆಗಳಾದ್ದರಿಂದ ಕಾರ್ಯಾರಂಭ ಮಾಡಲು 3-4 ವರ್ಷಗಳು ಹಿಡಿಯುತ್ತವೆ ಎಂದು ವಿವರಿಸಿದರು.

ಇದನ್ನೂ ಓದಿ: CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

ಎಫ್ಎಂಸಿಜಿ ಸಮಾವೇಶದಲ್ಲಾದ 16 ಒಡಂಬಡಿಕೆಗಳ ಪೈಕಿ 3 ಯೋಜನೆಗಳಿಗೆ ಏಕಗವಾಕ್ಷಿ ವ್ಯವಸ್ಥೆ ಮೂಲಕ ಅನುಮೋದನೆ ಕೊಡಲಾಗಿದ್ದು, ಇವುಗಳಿಗೂ ಮೂಲಸೌಕರ್ಯಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಮೇಲ್ಕಂಡ ಎರಡೂ ಬಗೆಯ ಯೋಜನೆಗಳು ಅನುಷ್ಠಾನದ ನಾನಾ ಹಂತಗಳಲ್ಲಿವೆ ಎಂದು ಸಚಿವ ಎಂ.ಬಿ. ಪಾಟೀಲ್‌ ತಿಳಿಸಿದರು.

ಇನ್ವೆಸ್ಟ್ ಕರ್ನಾಟಕ-2022 ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಹಿಂದಿನ ಸರ್ಕಾರವು 74.99 ಕೋಟಿ ರೂ. ವೆಚ್ಚ ಮಾಡಿದೆ. ಹಾಗೆಯೇ, ಹುಬ್ಬಳ್ಳಿಯಲ್ಲಿ 2022ರ ನವೆಂಬರ್‌ನಲ್ಲಿ ನಡೆಸಲಾದ ಹೂಡಿಕೆದಾರರ ಸಮಾವೇಶಕ್ಕೆ 12.23 ಲಕ್ಷ ರೂ.ಗಳನ್ನು ಸರ್ಕಾರದ ವತಿಯಿಂದ ಖರ್ಚು ಮಾಡಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್‌ ವಿವರಿಸಿದರು.

ಸ್ಥಳೀಯರಿಗೆ ಶೇ.70 ಉದ್ಯೋಗ ನೀಡಬೇಕೆನ್ನುವ‌ ನಿಯಮ

ಸರ್ಕಾರದ ನಿಯಮಾವಳಿಗಳ ಪ್ರಕಾರ ಈ ಉದ್ಯಮಗಳಲ್ಲಿ `ಡಿ’ ಗ್ರೂಪ್ ಹುದ್ದೆಗಳನ್ನು ಕನ್ನಡಿಗರಿಗೆ ಶೇಕಡಾ 100ರಷ್ಟು ಮತ್ತು ಒಟ್ಟಾರೆಯಾಗಿ ಶೇ.70ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಕೊಡಬೇಕೆನ್ನುವ‌ ನಿಯಮ ರೂಪಿಸಲಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್‌ ಹೇಳಿದರು.

ಮೋಡ ಬಿತ್ತನೆಗೆ ಮುಂದಾದ ಸರ್ಕಾರ; ಶೀಘ್ರ ತೀರ್ಮಾನವೆಂದ ಡಿಕೆಶಿ

ರಾಜ್ಯದಲ್ಲಿ ತೀವ್ರ ಬರಗಾಲ ಕಾಡುತ್ತಿದೆ. ಮಳೆ ಅಂಶವೇ ಇಲ್ಲ ಎಂಬಂತೆ ಆಗಿದೆ.‌ ಇದರಿಂದ ರೈತರು ಕಂಗಾಲಾಗಿದ್ದಾರೆ. ಅಲ್ಲದೆ, ಕುಡಿಯಲು ಸೇರಿದಂತೆ ಅನೇಕ ಕಾರಣಗಳಿಗೆ ಮಳೆ ಬಂದರೆ ಅನುಕೂಲವಾಗಲಿದೆ. ಅಲ್ಲದೆ, ಕೇಂದ್ರ ಸರ್ಕಾರ ಈಗಾಗಲೇ ಮಳೆ ಸಮಸ್ಯೆ ಆಗಿರುವ ಬಗ್ಗೆ ವರದಿ ನೀಡಿದೆ. ಹೀಗಾಗಿ ರಾಜ್ಯದಲ್ಲಿ ಮೋಡ ಬಿತ್ತನೆ (cloud seeding) ಆಗಬೇಕು ಎಂದು ಶಾಸಕ ಪ್ರಕಾಶ್ ಕೋಳಿವಾಡ (MLA Prakash Koliwada) ಅವರು ವಿಧಾನಸಭಾ ಕಲಾಪದ (Belagavi Winter Session) ಶೂನ್ಯ ವೇಳೆಯಲ್ಲಿ ಪ್ರಸ್ತಾಪ ಮಾಡಿದರು. ಇದಕ್ಕೆ ಸಚಿವ ಎಚ್‌.ಕೆ. ಪಾಟೀಲ್‌ (Minister HK Patil) ಧ್ವನಿಗೂಡಿಸಿದ್ದಾರೆ. ಆಗ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar), ಮೋಡ ಬಿತ್ತನೆ ಈ ಹಿಂದೆ ಯಶಸ್ಸು ಕಂಡಿದೆ. ಹೀಗಾಗಿ ಈ ಬಗ್ಗೆ ಆರ್ಥಿಕ ಇಲಾಖೆ ಜತೆ ಮಾತನಾಡಿ ತೀರ್ಮಾನ ಪ್ರಕಟಿಸಲಾಗುವುದು ಎಂದು ಹೇಳಿದರು.

ಶೂನ್ಯ ವೇಳೆಯಲ್ಲಿ ಮೋಡ ಬಿತ್ತನೆ ಬಗ್ಗೆ ಗಮನ ಸೆಳೆದ ಶಾಸಕ ಪ್ರಕಾಶ್ ಕೋಳಿವಾಡ, ಮಳೆ ಇಲ್ಲದೆ ರೈತರಿಗೆ ಸಮಸ್ಯೆ ಆಗಿದೆ. ಕೇಂದ್ರ ಸರ್ಕಾರ ಈಗಾಗಲೇ ಮಳೆ ಸಮಸ್ಯೆ ಆಗಿರುವ ಬಗ್ಗೆ ವರದಿ ನೀಡಿದೆ. ಮೋಡ ಬಿತ್ತನೆ ಮಾಡಿರುವುದರಿಂದ ಮಳೆಯಾಗಲಿದೆ. ಕಡಿಮೆ ವೆಚ್ಚದಲ್ಲಿ ಮಳೆ ತರಿಸಿ ರೈತರಿಗೆ ಅನುಕೂಲ ಮಾಡಬಹುದು. ಅದಕ್ಕಾಗಿ ಸರ್ಕಾರ ಅನುದಾನ ನೀಡುವಂತೆ ಮನವಿ ಮಾಡಿದರು.

ಬೇಗ ಮೋಡ ಬಿತ್ತನೆ ಆಗಲಿ: ಎಚ್.ಕೆ. ಪಾಟೀಲ್

ಇದಕ್ಕೆ ಸಹಮತ ವ್ಯಕ್ತಪಡಿಸಿದ ಸಚಿವ ಎಚ್.ಕೆ. ಪಾಟೀಲ್, ಅತ್ಯಂತ ಗಂಭೀರ ಹಾಗೂ ಮಹತ್ವದ ವೈಜ್ಞಾನಿಕ ವಿಚಾರ ಎತ್ತಿದ್ದಾರೆ. ಇಂದು ಸೇರಿದಂತೆ ಇನ್ನೆರಡು ದಿನ ಮೋಡ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದನ್ನು ಉಪಯೋಗ ಮಾಡಿಕೊಳ್ಳಬೇಕು. ಅನ್ನೋದು ಅವರ ಆಶಾಭಾವನೆಯಾಗಿದೆ. ಕಡಿಮೆ ವೆಚ್ಚದಲ್ಲಿ ಮಾಡಬಹುದು ಅಂತ ಹೇಳಿದ್ದಾರೆ. ಈ ಬಗ್ಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಹೆಚ್ಚು ಮಾಹಿತಿ ಕೊಡುತ್ತಾರೆ ಎಂದು ಹೇಳಿದರು.

ಎಷ್ಟು ಖರ್ಚಾಗುತ್ತದೆಯೋ ಅಷ್ಟು ಕೊಟ್ಟರೆ ಸಾಕು

ಆಗ ಡಿಸಿಎಂ ಡಿಕೆಶಿ ಉತ್ತರ ನೀಡಿ, ಮೋಡ ಬಿತ್ತನೆಯನ್ನು ಬಹಳ ರಾಜ್ಯಗಳಲ್ಲಿ ಪ್ರಯೋಗ ಮಾಡುತ್ತಿದ್ದಾರೆ. ಈ ಹಿಂದೆ ಎಚ್.ಕೆ ಪಾಟೀಲ್ ಇದನ್ನು ಮಾಡಿದ್ದರು. ಅಲ್ಲದೆ, ಇದಕ್ಕೆ ಎಷ್ಟು ಖರ್ಚಾಗುತ್ತದೆಯೋ ಅಷ್ಟು ಕೊಟ್ಟರೆ ಸಾಕು. ಹೆಚ್ಚಿಗೆ ಏನನ್ನೂ ಕೊಡುವುದು ಬೇಡ ಅಂತ ಪ್ರಕಾಶ್‌ ಕೋಳಿವಾಡ ಹೇಳಿದ್ದಾರೆ. ಹೀಗಾಗಿ ನಾನು ಫೈನಾನ್ಸ್ ಅವರ ಜತೆ ಮಾತನಾಡುತ್ತೇನೆ. ಈ ಹಿಂದೆ ಅವರ ಜಿಲ್ಲೆಯಲ್ಲಿ ಮಾಡಿ ಅದರ ಅನುಕೂಲ ಪಡೆದಿದ್ದಾರೆ. ಹಣಕಾಸು ಇಲಾಖೆ ಜತೆ ಚರ್ಚೆ ಮಾಡಿ ಮಾಡುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: Belagavi Winter Session: ಗ್ಯಾರಂಟಿಗೆ 11000 ಕೋಟಿ ರೂ. ಬಳಕೆ; ಯಾವುದಕ್ಕೆ ಎಷ್ಟು? ಲೆಕ್ಕ ಕೊಟ್ಟ ಸರ್ಕಾರ!

ಸರ್ಕಾರ ಕೊಡದಿದ್ದರೆ ನನ್ನ ದುಡ್ಡಲ್ಲಿ ಮಾಡುತ್ತೇನೆ!

ಈ ವೇಳೆ ಮಾತನಾಡಿದ ಶಾಸಕ ಪ್ರಕಾಶ್‌ ಕೋಳಿವಾಡ, ಒಂದು ವೇಳೆ ಸರ್ಕಾರ ಹಣ ಕೊಡದಿದ್ದರೆ ನಾನೇ ಸ್ವತಃ ನನ್ನ ಹಣದಿಂದ ಮೋಡ ಬಿತ್ತನೆ ಮಾಡಿಸುತ್ತೇನೆ ಎಂದು ಹೇಳಿದರು.

Continue Reading

ಉದ್ಯೋಗ

Job Alert: ಬ್ಯಾಂಕ್‌ ಆಫ್‌ ಬರೋಡಾದ 250 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

Job Alert: ಬ್ಯಾಂಕ್‌ ಆಫ್‌ ಬರೋಡಾದ ಖಾಲಿ ಇರುವ 250 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಡಿಸೆಂಬರ್‌ 26.

VISTARANEWS.COM


on

bank of baroda 2
Koo

ಬೆಂಗಳೂರು: ಬ್ಯಾಂಕ್‌ನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಕನಸು ಕಾಣುತ್ತಿರುವವರಿಗೆ ಇಲ್ಲಿದೆ ಗುಡ್‌ ನ್ಯೂಸ್‌. ಬ್ಯಾಂಕ್‌ ಆಫ್‌ ಬರೋಡಾ (Bank of Baroda) ತನ್ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BOB Recruitment 2023). 250 ಹುದ್ದೆಗಳಿಗೆ ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಸೀನಿಯರ್‌ ಮ್ಯಾನೇಜರ್‌ ಹುದ್ದೆ ಇದಾಗಿದ್ದು, ಡಿಸೆಂಬರ್‌ 26ರೊಳಗೆ ಅರ್ಜಿ ಸಲ್ಲಿಸಬೇಕು (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ವಿಭಾಗವಾರು ಎಸ್‌ಸಿ-37, ಎಸ್‌ಟಿ-18, ಒಬಿಸಿ-67, ಇಡಬ್ಲ್ಯುಎಸ್‌-25 ಮತ್ತು ಯುಆರ್‌ (ಅನ್‌ ರಿಸರ್ವಡ್‌)-103 ಹುದ್ದೆಗಳಿವೆ. ಸೀನಿಯರ್‌ ಮ್ಯಾನೇಜರ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಲ್ಲ ಸೆಮಿಸ್ಟರ್‌ / ವರ್ಷಗಳಲ್ಲಿ ಕನಿಷ್ಠ 60% ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು ಮತ್ತು 8 ವರ್ಷಗಳ ಅನುಭವ ಹೊಂದಿರಬೇಕು ಅಥವಾ ಸ್ನಾತಕೋತ್ತರ ಪದವಿ / ಎಂಬಿಎ (ಮಾರ್ಕೆಟಿಂಗ್ ಮತ್ತು ಫೈನಾನ್ಸ್) ಓದಿರಬೇಕು ಮತ್ತು 6 ವರ್ಷಗಳ ಕೆಲಸದ ಅನುಭವ ಹೊಂದಿರಬೇಕು.

ವಯೋಮಿತಿ

ಅರ್ಜಿ ಸಲ್ಲಿಸುವವರ ವಯಸ್ಸು ಕನಿಷ್ಠ 28 ವರ್ಷ ಮತ್ತು ಗರಿಷ್ಠ 37 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಎಸ್‌ಸಿ / ಎಸ್‌ಟಿ / ಮಾಜಿ ಯೋಧರಿಗೆ 5 ವರ್ಷ, ಒಬಿಸಿ 3 ವರ್ಷ, ಪಿಡಬ್ಲ್ಯುಡಿ 10 ವರ್ಷ, ಪಿಡಬ್ಲ್ಯುಡಿ-ಒಬಿಸಿ 13 ವರ್ಷ, ಪಿಡಬ್ಲ್ಯುಡಿ-ಎಸ್‌ಸಿ / ಎಸ್‌ಟಿ 15 ವರ್ಷಗಳ ಸಡಿಲಿಕೆ ಲಭ್ಯ.

ಅರ್ಜಿ ಶುಲ್ಕ

ಪಿಡಬ್ಲ್ಯುಡಿ / ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಬೇಕು. ಸಾಮಾನ್ಯ / ಒಬಿಸಿ/ ಇಡಬ್ಲ್ಯುಎಸ್‌ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 600 ರೂ. ಇದನ್ನು ಆನ್‌ಲೈನ್‌ ಮೂಲಕ ಪಾವತಿಸುವುದು ಕಡ್ಡಾಯ. ಇದಕ್ಕಾಗಿ ಡೆಬಿಡ್‌ / ಕ್ರೆಡಿಟ್‌ ಕಾರ್ಡ್‌, ಇಂಟರ್‌ನೆಟ್‌ ಬ್ಯಾಂಕಿಂಗ್‌, ಮೊಬೈಲ್‌ ವ್ಯಾಲೆಟ್‌ ಇತ್ಯಾದಿ ಬಳಸಬಹುದು.

ಆಯ್ಕೆ ವಿಧಾನ ಮತ್ತು ವೇತನ

ಆನ್‌ಲೈನ್‌ ಪರೀಕ್ಷೆ, ಸೈಕೋಮೆಟ್ರಿಕ್ ಪರೀಕ್ಷೆ, ಗುಂಪು ಚರ್ಚೆ / ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 63,840 ರೂ.-78,230 ರೂ. ಮಾಸಿಕ ವೇತನ ಲಭಿಸಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ: Job Alert: ಪದವೀಧರರಿಗೆ ಗುಡ್‌ನ್ಯೂಸ್‌; ಗೃಹ ಸಚಿವಾಲಯದ 995 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ
  • Careers >Current Opportunities > Apply Now ಆಯ್ಕೆ ಮೇಲೆ ಕ್ಲಿಕ್‌ ಮಾಡಿ
  • ಇಮೇಲ್‌ ಐಡಿ ಮತ್ತು ಫೋನ್‌ ನಂಬರ್‌ ಬಳಸಿ ಹೆಸರು ನೋಂದಾಯಿಸಿ
  • ರಿಜಿಸ್ಟ್ರೇಷನ್‌ ನಂಬರ್‌ ಮತ್ತು ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ
  • ಸರಿಯಾದ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ
  • ಗಮನಿಸಿ, ಅರ್ಜಿಯೊಂದಿಗೆ ನಿಮ್ಮ ಬಯೋಡಾಟಾವನ್ನು ಅಪ್‌ಲೋಡ್‌ ಮಾಡುವುದು ಕಡ್ಡಾಯ
  • ಫೋಟೊ, ಸಹಿ, ಅಗತ್ಯವಾದ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ
  • SUBMIT ಬಟನ್‌ ಕ್ಲಿಕ್‌ ಮಾಡಿ
  • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂ ಪ್ರಿಂಟ್‌ ಔಟ್‌ ತೆಗೆದಿಡಿ

ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‌ಸೈಟ್‌ ವಿಳಾಸ https://www.bankofbaroda.in/ಕ್ಕೆ ಬೇಟಿ ನೀಡಿ.

ಇನ್ನಷ್ಟು ಉದ್ಯೋಗದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ ಮಾಡಿ

Continue Reading
Advertisement
Snehith Gowda
ಕಿರುತೆರೆ44 seconds ago

BBK SEASON 10: ಬಿಗ್ ಬಾಸ್ ಮನೆಯಿಂದ ಸ್ನೇಹಿತ್ ಔಟ್; ಕಣ್ಣೀರಿಟ್ಟ ನಮ್ರತಾ

Congress Mp old tweet resurfaces about black money
ದೇಶ16 mins ago

ಇಷ್ಟೊಂದು ಕಪ್ಪು ಹಣ ಎಲ್ಲಿಡುತ್ತಾರೋ ಎಂದು ಕೇಳಿದ್ದ ಕೈ ಸಂಸದನ ಬಳಿ 300 ಕೋಟಿ ರೂ. ಬ್ಲ್ಯಾಕ್ ಮನಿ!

pro kabaddi
ಕ್ರೀಡೆ20 mins ago

Pro Kabaddi: ಜಿದ್ದಾಜಿದ್ದಿನ ಪಂದ್ಯದಲ್ಲಿ ಬೆಂಗಾಲ್​, ಹರ್ಯಾಣಗೆ ಒಲಿದ ಗೆಲುವು

Nagamurthy Swamy
ಕರ್ನಾಟಕ43 mins ago

Ayodhya Ram Mandir: ರಾಮಮಂದಿರ ನಿರ್ಮಾಣಕ್ಕೆ ತೆರಳಿದ ಗದಗದ ಯುವ ಶಿಲ್ಪಿ

Saika Ishaque ran through the England middle order
ಕ್ರಿಕೆಟ್56 mins ago

ENGW vs INDW; ಅಂತಿಮ ಪಂದ್ಯದಲ್ಲಿ ಗೆದ್ದು ನಿಟ್ಟುಸಿರು ಬಿಟ್ಟ ಭಾರತ ಮಹಿಳಾ ಕ್ರಿಕೆಟ್​ ತಂಡ

CLAT Result 2024 announced
ದೇಶ58 mins ago

CLAT Result 2024: ಕಾನೂನು ಪ್ರವೇಶ ಪರೀಕ್ಷೆ ಸಿಎಲ್ಎಟಿ ರಿಸಲ್ಟ್ ಪ್ರಕಟ

girl students fall ill
ಕರ್ನಾಟಕ2 hours ago

Raichur News: ಮಾನ್ವಿ ಹಾಸ್ಟೆಲ್‌ನಲ್ಲಿ ಊಟ ಸೇವಿಸಿ 14 ವಿದ್ಯಾರ್ಥಿನಿಯರು ಅಸ್ವಸ್ಥ

Fans brave the dampness, waiting for India's tour of South Africa to kick off
ಕ್ರಿಕೆಟ್2 hours ago

IND vs SA: ಮಳೆಗೆ ಕೊಚ್ಚಿ ಹೋದ ಭಾರತ-ದಕ್ಷಿಣ ಆಫ್ರಿಕಾ ಮೊದಲ ಟಿ20 ಪಂದ್ಯ

Gautam Gambhir
ಕ್ರಿಕೆಟ್2 hours ago

Gautam Gambhir: ಮತ್ತೆ ಪಾಕ್​ ಆಟಗಾರನ ಬೆಂಬಲಕ್ಕೆ ನಿಂತ ಗೌತಮ್​ ಗಂಭೀರ್

Shakti Scheme
ಕರ್ನಾಟಕ2 hours ago

Shakti Scheme: ಒಂದೇ ಆಧಾರ್‌ ಕಾರ್ಡ್‌ ಬಳಸಿ ಇಬ್ಬರ ಪ್ರಯಾಣ; ಸಿಕ್ಕಿಬಿದ್ದ ಬುರ್ಕಾಧಾರಿ ಮಹಿಳೆಯರು!

Sharmitha Gowda in bikini
ಕಿರುತೆರೆ2 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ2 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ2 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

7th Pay Commission
ನೌಕರರ ಕಾರ್ನರ್1 year ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Kannada Serials
ಕಿರುತೆರೆ2 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ2 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ1 week ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

DCC Bank Recruitment 2023
ಉದ್ಯೋಗ11 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Karnataka bandh Majestic
ಕರ್ನಾಟಕ3 months ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

Rajendra Singh Gudha
ದೇಶ5 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Actor Shivarajkumar rejects DKS offer
ಕರ್ನಾಟಕ8 hours ago

Shiva Rajkumar: ಲೋಕಸಭೆಗೆ ಸ್ಪರ್ಧಿಸಿ ಎಂದ ಡಿಕೆಶಿ; ನಾನು ರಾಜಕೀಯಕ್ಕೆ ಬರಲ್ಲ ಎಂದ ಶಿವರಾಜ್‌ಕುಮಾರ್!

HD Kumaraswamy attack on congress
ಕರ್ನಾಟಕ11 hours ago

HD Kumaraswamy: ಬಿಜೆಪಿಗೆ ‌50 ಶಾಸಕರ ಕರ್ಕೊಂಡು ಬರ್ತೇವೆ ಎಂದಿರುವ ಕಾಂಗ್ರೆಸ್‌ ನಾಯಕ!

Dina Bhavishya
ಪ್ರಮುಖ ಸುದ್ದಿ19 hours ago

Dina Bhavishya : ಈ ರಾಶಿಯವರ ಲೆಕ್ಕಾಚಾರವು ಇಂದು ಉಲ್ಟಾ ಪಲ್ಟಾ!

read your daily horoscope predictions for december 9 2023
ಪ್ರಮುಖ ಸುದ್ದಿ2 days ago

Dina bhavishya: ಗೌಪ್ಯ ವಿಷಯ ಹೇಳುವಾಗ ಈ ರಾಶಿಯವರು ಎಚ್ಚರ!

Actress Leelavathi felicitated
South Cinema2 days ago

Actress Leelavathi: ನಮ್ಮಮ್ಮ ಲೀಲಮ್ಮ-ನಿಮ್ಮೊಳಗೆ ನಾವಮ್ಮ ಪ್ರಶಸ್ತಿ ನೀಡಿ ಗೌರವಿಸಿದ್ದ ಫಿಲ್ಮ್‌ ಚೇಂಬರ್

Actress Leelavati and Rajkumar film
South Cinema2 days ago

Actress Leelavathi: ಲೀಲಾವತಿಗೆ ಸಂದ ಪ್ರಶಸ್ತಿಗಳ ಗರಿ; ಇಲ್ಲಿದೆ ಸಿನಿ ಜರ್ನಿ ಲಿಸ್ಟ್‌

Actress Leelavati and Rajkumar film
South Cinema2 days ago

Actress Leelavathi: ತೆರೆಯಲ್ಲಿ ಮೋಡಿ ಮಾಡಿದ್ದ ಡಾ.ರಾಜ್‌ಕುಮಾರ್‌-ಲೀಲಾವತಿ ಜೋಡಿ!

PM Narenda modi and Moulvi thanveer Peera
ಕರ್ನಾಟಕ2 days ago

CM Siddaramaiah: ಮೌಲ್ವಿ ಫೋಟೊ ಹಾಕಿ ಮೋದಿ ಟಾರ್ಗೆಟ್‌ ಮಾಡಿದ ಯತ್ನಾಳ್‌ ಎಂದ ಸಿದ್ದರಾಮಯ್ಯ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya: ಇಂದು ಈ ರಾಶಿಯವರು ತುಂಬಾ ಎಚ್ಚರ ವಹಿಸಬೇಕು!

Madhu Bangarappa in Belagavi Winter Session
ಕರ್ನಾಟಕ3 days ago

Belagavi Winter Session: ಮುಂದಿನ ವರ್ಷ 8ನೇ ತರಗತಿಗೆ ಉಚಿತ ಸೈಕಲ್‌: ಸಚಿವ ಮಧು ಬಂಗಾರಪ್ಪ

ಟ್ರೆಂಡಿಂಗ್‌