ಕಲಬುರಗಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ವಿವಿಧ ಘಟಕಗಳಲ್ಲಿನ ಶಿಶಿಕ್ಷು ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ (KKRTC Recruitment 2023) ಅರ್ಜಿ ಆಹ್ವಾನಿಸಿದೆ. ಒಟ್ಟು 249 ಶಿಶಿಕ್ಷುಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.
ನಿಗದಿತ ಟ್ರೇಡ್‌ನಲ್ಲಿ ಐಟಿಐ ಮಾಡಿದ ಅಭ್ಯರ್ಥಿಗಳು ಈ ತರಬೇತಿಗೆ ಅರ್ಹರಾಗಿರುತ್ತಾರೆ. ಶಿಶಿಕ್ಷು ಕಾಯ್ದೆಯನ್ವಯ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ 1:8 ಅನುಪಾತದಲ್ಲಿ ಹಾಗೂ ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ 1:20 ಮೀಸಲಾತಿ ನೀಡಲಾಗುತ್ತದೆ.
ಯಾವ ಘಟಕಗಳಲ್ಲಿ ನೇಮಕ?
ವಯೋಮಿತಿ ಎಷ್ಟು?
ದಿನಾಂಕ 23-03-2023ಕ್ಕೆ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ತುಂಬಿರಬೇಕು ಮತ್ತು 40 ವರ್ಷ ಪೂರ್ತಿಗೊಂಡಿರಬಾರದು.
ನೇಮಕ ಹೇಗೆ?
ಮೌಖಿಕ ಸಂದರ್ಶನದ ಮೂಲಕ ನೇಮಕ ನಡೆಯಲಿದೆ. ಶಿಶಿಕ್ಷು ತರಬೇತಿ ಪಡೆಯಲು ಇಚ್ಛೆಯುಳ್ಳ ಅಭ್ಯರ್ಥಿಗಳು http://www.apprenticeship.gov.in ಪೋರ್ಟಲ್‌ನಲ್ಲಿ apprenticeship ನಲ್ಲಿ ಎನ್‌ಎಪಿಸ್ ಅಡಿ ತಮ್ಮ ಹೆಸರು, ವಿದ್ಯಾರ್ಹತೆ, ಆಧಾರ್ ಸಂಖ್ಯೆ ಸೇರಿದಂತೆ ಇನ್ನಿತರೆ ಅಗತ್ಯ ಮಾಹಿತಿಯನ್ನು ನಮೂದಿಸುವ ಮೂಲಕ ಕಡ್ಡಾಯವಾಗಿ ನೊಂದಣಿ ಮಾಡಿಕೊಂಡು, ನೊಂದಣಿ ಸಂಖ್ಯೆಯನ್ನು ಹೊಂದಿರಬೇಕು. ನೇರವಾಗಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.
ಆನ್‌ಲೈನ್‌ನಲ್ಲಿ ನೊಂದಣಿ ಮಾಡಿಕೊಳ್ಳದ ಅಭ್ಯರ್ಥಿಗಳು ಕೂಡಾ ಅಗತ್ಯ ಮಾಹಿತಿ/ ದಾಖಲೆಗಳೊಂದಿಗೆ ಮೌಖಿಕ ಸಂದರ್ಶನಕ್ಕೆ ಹಾಜರಾಗಬಹುದು. ಅವರಿಗೆ ನೊಂದಣಿ ಮಾಡಿಕೊಳ್ಳಲು ಸಮಯ ಒದಗಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರ್ಹ ಅಭ್ಯರ್ಥಿಗಳು ದಿನಾಂಕ: 23-03-20023 ರಂದು ಮೂಲ ದಾಖಲೆಗಳು ಹಾಗೂ ಒಂದು ಸೆಟ್ ಝೆರಾಕ್ಸ್ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕೆಂದು ಸೂಚಿಸಲಾಗಿದೆ.
ಶಿಶಿಕ್ಷ ಭತ್ಯೆ ಎಷ್ಟು?
ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು ಭತ್ಯೆ ನೀಡಲಾಗುತ್ತದೆ. ಭತ್ಯೆಯನ್ನು ಅಭ್ಯರ್ಥಿಗಳ ಬ್ಯಾಂಕ್ ಖಾತೆಗೆ ಪಾವತಿಸಲಾಗುತ್ತದೆ.
ಯಾರಿಗೆ ಎಷ್ಟು ಭತ್ಯೆ ಎಂಬ ಮಾಹಿತಿ ಇಲ್ಲಿದೆ;
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here ) ಮಾಡಿ.
ತಾಂತ್ರಿಕ ಶಿಶಿಕ್ಷು ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಉತ್ತಮ ದೇಹದಾರ್ಡ್ಯತೆ ಹೊಂದಿರಬೇಕು. ಕನ್ನಡ ಓದಲು, ಬರೆಯಲು ಮತ್ತು ಮಾತನಾಡಲು ಕಡ್ಡಾಯವಾಗಿ ತಿಳಿದಿರಬೇಕು ಹಾಗೂ ಶಿಶಿಕ್ಷು ತರಬೇತಿಗೆ ದೈಹಿಕವಾಗಿ ಸಮರ್ಥರಿರಬೇಕು ಎಂದು ತಿಳಿಸಲಾಗಿದೆ.
ಇದನ್ನೂ ಓದಿ : KMF SHIMUL Recruitment 2023 : ಹಾಲು ಒಕ್ಕೂಟದಲ್ಲಿ 194 ಹುದ್ದೆ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ