ಬೆಂಗಳೂರು: ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ (ತುಮುಲ್) ಖಾಲಿ ಇರುವ (KMF TUMUL Recruitment 2023 ) ವಿವಿಧ 219 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಿದೆ.
ಒಟ್ಟು 35 ಪದನಾಮಗಳಲ್ಲಿ 219 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 17 ಕೊನೆಯ ದಿನವಾಗಿರುತ್ತದೆ. ಖುದ್ದಾಗಿ, ಅಂಚೆ, ಕೋರಿಯರ್ ಮೂಲಕ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತುಮುಲ್ ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 17-04-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 17-04-2023
ಸಹಾಯವಾಣಿ ಸಂಖ್ಯೆ: 9036072155
ಹೆಚ್ಚಿನ ಮಾಹಿತಿಗೆ ಮತ್ತು ಅರ್ಜಿ ಸಲ್ಲಿಸಲು ವೆಬ್ ವಿಳಾಸ: https://www.tumul.coop/recruitment-2023
ಯಾವೆಲ್ಲಾ ಹುದ್ದೆಗಳಿಗೆ ನೇಮಕ?
ಸಹಾಯಕ ವ್ಯವಸ್ಥಾಪಕರು (ಪ.ವೈ ಮತ್ತು ಕೃ.ಗ) – 14, ಸಹಾಯಕ ವ್ಯವಸ್ಥಾಪಕರು (ಮೆಕ್ಯಾನಿಕಲ್ ಎಂಜಿನಿಯರ್) – 01, ಸಹಾಯಕ ವ್ಯವಸ್ಥಾಪಕರು (ಇಲೆಕ್ಟ್ರಾನಿಕ್ಸ್ ಮತ್ತು ಕಂಮ್ಯುನಿಕೇಷನ್) – 01, ಸಹಾಯಕ ವ್ಯವಸ್ಥಾಪಕರು (ಎಫ್ ಅಂಡ್ ಎಫ್ ) – 03, ವೈದ್ಯಾಧಿಕಾರಿ – 01, ಆಡಳಿತಾಧಿಕಾರಿ- 01, ಖರೀದಿ (ಉಗ್ರಾಣಾಧಿಕಾರಿ)- 03, MES (ಸಿಸ್ಟಮ್ಸ್ ಅಧಿಕಾರಿ) – 03,, ಲೆಕ್ಕಾಧಿಕಾರಿ- 02, ಮಾರುಕಟ್ಟೆ ಅಧಿಕಾರಿ- 03,ತಾಂತ್ರಿಕ ಅಧಿಕಾರಿ (ಡಿ.ಟಿ) – 11, ತಾಂತ್ರಿಕ ಅಧಿಕಾರಿ (ವಿವಿಧ ವಿಭಾಗ)- 3, ವಿಸ್ತರಣಾ ಅಧಿಕಾರಿ (ದರ್ಜೆ)- 3: 22, MES (ದರ್ಜೆ 01) – 02, ಆಡಳಿತ ಸಹಾಯಕ ದರ್ಜೆ( 02)- 13, ಲೆಕ್ಕ ಸಹಾಯಕ (ದರ್ಜೆ-2) – 12, ಮಾರುಕಟ್ಟೆ ಸಹಾಯಕ (ದರ್ಜೆ-2)- 18, ಖರೀದಿ ಸಹಾಯಕ (ದರ್ಜೆ-2) -06, ಕೆಮಿಸ್ಟ್ (ದರ್ಜೆ-2)- 04, ಕಿರಿಯ ಸಿಸ್ಟಂ ಆಪರೇಟರ್ – 10, ಕೋ-ಆರ್ಡಿನೇಟರ್ (ಪ್ರೊಟೆಕ್ಷನ್) – 02, ಟೆಲಿಫೋನ್ ಆಪರೇಟರ್ – 02, ಕಿರಿಯ ತಾಂತ್ರಿಕ (ವಿವಿಧ ಟ್ರೇಡ್)- 59, ಚಾಲಕರು – 08, ಲ್ಯಾಬ್ ಸಹಾಯಕ ದರ್ಜೆ-2(ವಿವಿಧ ವಿಭಾಗ)- 02 ಹುದ್ದೆ ಹೀಗೆ ಒಟ್ಟು 219 ಹುದ್ದೆಗಳಿಗೆ ನೇಮಕ ನಡೆಯಲಿದೆ.
ವಿದ್ಯಾರ್ಹತೆ ಏನು?
ಸಹಾಯಕ ವ್ಯವಸ್ಥಾಪಕರು
ಎಎಚ್/ಎಐ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಶುವೈದ್ಯಕೀಯ ವಿಜ್ಞಾನ ಮತ್ತು ಪಶು ಸಂಗೋಪನೆ ವಿಷಯದಲ್ಲಿ (ಬಿ.ವಿ.ಎಸ್ಸಿ ಅಂಡ್ ಎಹೆಚ್) ಪದವಿಯನ್ನು ಹೊಂದಿರಬೇಕು. ಕರ್ನಾಟಕ ವೆಟರ್ನರಿ ಕೌನ್ಸಿಲ್ ಪ್ರಮಾಣ ಪತ್ರ ಪಡೆದಿರಬೇಕು.
ಸಹಾಯಕ ವ್ಯವಸ್ಥಾಪಕರು (ಅಭಿಯಂತರ) ಹುದ್ದೆಗೆ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ ಪಡೆದಿರಬೇಕು ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಸಹಾಯಕ ವ್ಯವಸ್ಥಾಪಕರ ಹುದ್ದೆಗೆ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಷನ್ ಎಂಜಿನಿಯರಿಂಗ್ ಪದವಿ ಪಡೆದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು.
ಎಫ್ ಅಂಡ್ ಎಫ್ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕೃಷಿ ವಿಜ್ಞಾನ ವಿಷಯದಲ್ಲಿ ಎಂ.ಎಸ್ಸಿ (ಅಗ್ರಿ) ಪದವಿಯನ್ನು ಅಗ್ರೋನಮಿ/ಸೀಡ್ ಟೆಕ್ನಾಲಜಿಯಲ್ಲಿ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಇರಬೇಕು. ಹಾಗೂ ಸಂಬಂಧ ಪಟ್ಟ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ವೇತನ ಶ್ರೇಣಿ ರೂ. 52,650-97,100
ವೈದ್ಯಾಧಿಕಾರಿ
ಎಂಬಿಬಿಎಸ್ ಪದವಿ ಪಡೆದಿರಬೇಕು ಮತ್ತು ಕರ್ನಾಟಕ ಮೆಡಿಕಲ್ ಕೌನ್ಸಿಲ್ ಪ್ರಮಾಣ ಪತ್ರ ಪಡೆದಿರಬೇಕು ಹಾಗೂ ಆಸ್ಪತ್ರೆಯಲ್ಲಿ ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ವೇತನ ಶ್ರೇಣಿ : ರೂ. 52,650-97,100
ಆಡಳಿತಾಧಿಕಾರಿ
ಎಲ್‌ಎಲ್‌ಬಿ ಅಥವಾ ಬಿಎಎಲ್ ಎಲ್‌ಎಲ್‌ಬಿ/ ಎಂಬಿಎ (ಎಚ್‌ಆರ್)/ ಎಂಎಸ್‌ಡಬ್ಲ್ಯೂ ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಸಂಬಂಧಪಟ್ಟ ಯಾವುದೇ ಕೈಗಾರಿಕೋದ್ಯಮದಲ್ಲಿ ಅಥವಾ ಕಾನೂನು ಸಂಸ್ಥೆಗಳಲ್ಲಿ ಅಥವಾ ಅಸೋಸಿಯೇಷನ್‌ಗಳಲ್ಲಿ ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ವೇತನ ಶ್ರೇಣಿ : ರೂ. 43,100-83,900
ಖರೀದಿ/ ಉಗ್ರಾಣಾಧಿಕಾರಿ
ಬಿಕಾಂ/ಬಿಬಿಎಂ/ಬಿಬಿಎಂ ಪದವಿ ಜತೆಗೆ ಎಂಕಾಂ/ಎಂಬಿಎ ಇನ್ ಮೆಟೀರಿಯಲ್ ಮ್ಯಾನೇಜ್‌ಮೆಂಟ್/ ಪಿಜಿ ಡಿಪ್ಲೊಮೊ ಇನ್ ಮೆಟೀರಿಯಲ್ ಮ್ಯಾನೇಜ್‌ಮೆಂಟ್‌ನಲ್ಲಿ ಪದವಿ ಪಡೆದಿರಬೇಕು. ಸಂಬಂಧಪಟ್ಟ ಕ್ಷೇತ್ರದ ಯಾವುದೇ ಸಂಸ್ಥೆಯಲ್ಲಿ ಸಂಬಂಧಪಟ್ಟ ಯಾವುದೇ ಕೈಗಾರಿಕೋದ್ಯಮದಲ್ಲಿ ಅಥವಾ ಕಾನೂನು ಸಂಸ್ಥೆಗಳಲ್ಲಿ ಅಥವಾ ಅಸೋಸಿಯೇಷನ್‌ಗಳಲ್ಲಿ ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ವೇತನ ಶ್ರೇಣಿ : ರೂ. 43,100-83,900
ಎಂಐಎಸ್/ಸಿಸ್ಟಂ ಆಫೀಸರ್
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ ಕಂಪ್ಯೂಟರ್ ಸೈನ್ಸ್ / ಇನ್‌ಫಾರ್ಮೆಷನ್ ಸೈನ್ಸ್ /ಇ&ಸಿ ಪದವಿಯನ್ನು ಪಡೆದಿರಬೇಕು. ಕೈಗಾರೀಕೋದ್ಯ/ ಸಾಫ್ಟ್‌ವೇರ್ ಸಂಸ್ಥೆಯಲ್ಲಿ ಕನಿಷ್ಠ 2 ವರ್ಷ ಕೆಲಸ ನಿರ್ವಹಿಸಿದ ಅನುಭವ ಇರಬೇಕು.
ವೇತನ ಶ್ರೇಣಿ: ರೂ. 43,100-83,900
ಲೆಕ್ಕಾಧಿಕಾರಿ
ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿತವಾದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂ.ಕಾಂ./ ಎಂಬಿಎ (ಫೈನಾನ್ಸ್) ವಿದ್ಯಾರ್ಹತೆ ಹೊಂದಿರಬೇಕು. ಸಂಬಂಧಪಟ್ಟ ಕ್ಷೇತ್ರದಲ್ಲಿಯಲ್ಲಿ ಕನಿಷ್ಠ 2 ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ವೇತನ ಶ್ರೇಣಿ: ರೂ. 43,100-83,900
ಮಾರುಕಟ್ಟೆ ಅಧಿಕಾರಿ
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಬಿಎ (ಮಾರುಕಟ್ಟೆ)/ ಬಿ.ಎಸ್ಸಿ (ಅಗ್ರಿಕಲ್ಚರಲ್ ಮಾರ್ಕೆಟಿಂಗ್ ಅಂಡ್ ಕೋ-ಆಪರೇಷನ್) ವಿದ್ಯಾರ್ಹತೆ ಹೊಂದಿರಬೇಕು ಹಾಗೂ ಡೇರಿ ಉದ್ದಿಮೆಯಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ ಆಗಿ ಕನಿಷ್ಠ 4 ವರ್ಷಗಳ ಅನುಭವ ಹೊಂದಿರಬೇಕು.
ವೇತನ ಶ್ರೇಣಿ : ರೂ. 43,100-83,900
ತಾಂತ್ರಿಕ ಅಧಿಕಾರಿ (ಡಿಟಿ)
ಬಿಟೆಕ್ (ಡಿಟಿ) ಪದವಿ ಪಡೆದಿರಬೇಕು. ಕನಿಷ್ಠ 2 ವರ್ಷಗಳ ಅನುಭವ ಇರಬೇಕು.
ವೇತನ ಶ್ರೇಣಿ : ರೂ. 43,100-83,900
ತಾಂತ್ರಿಕ ಅಧಿಕಾರಿ
ಅಭಿಯಂತರ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ (ಸಿವಿಲ್) ಪದವಿ ಹೊಂದಿರಬೇಕು. ಗುಣನಿಯಂತ್ರಣ ಅಧಿಕಾರಿ ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಎಂಎಸ್ಸಿ (ಕೆಮಿಸ್ಟ್ರಿ) ಸ್ನಾತಕೋತ್ತರ ಪದವಿ/ ಎಂಎಸ್ಸಿ (ಮೈಕ್ರೊಬಯಾಲಜಿ) ಸ್ನಾತಕೋತ್ತರ ಪದವಿ ಪಡೆದು ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿದವರು ಅರ್ಜಿ ಸಲ್ಲಿಸಬಹುದು.
ವೇತನ ಶ್ರೇಣಿ : ರೂ. 43,100-83,900
ವಿಸ್ತರಣಾಧಿಕಾರಿ ದರ್ಜೆ-3
ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಜೊತೆಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನದೊಂದಿರಬೇಕು. ತುಮಕೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವ್ಯಾಪ್ತಿಯ ಪ್ರಾಥಮಿಕ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕನಿಷ್ಟ 05 ವರ್ಷಗಳ ಸೇವೆ ಸಲ್ಲಿಸಿರಬೇಕು. ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ ಆ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ.
ಇನ್ನು 12 ವಿಸ್ತರಣಾಧಿಕಾರಿ ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣೆ ಜ್ಞಾನ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಶ್ರೇಣಿ: ರೂ. 33,450-62,600
ಕೋ-ಆರ್ಡಿನೇಟರ್ (ಪ್ರೊಡಕ್ಷನ್)
ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವೇತನ ಶ್ರೇಣಿ: ರೂ. 27,650-52,650
ಟೆಲಿಫೋನ್ ಆಪರೇಟರ್
ಪದವಿ ಹೊಂದಿರಬೇಕು. ಜೊತೆಗೆ ಟೆಲಿಫೋನ್ ನಿರ್ವಹಣೆಯಲ್ಲಿ ಪ್ರಮಾಣ ಪತ್ರ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವೇತನ ಶ್ರೇಣಿ: ರೂ. 27,650-52,650
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here ) ಮಾಡಿ.
ಕಿರಿಯ ತಾಂತ್ರಿಕ
ಮೆಕ್ಯಾನಿಕಲ್: ಮೆಕ್ಯಾನಿಕಲಿನಲ್ಲಿ ಡಿಪ್ಲೊಮಾ ಮಾಡಿರಬೇಕು ಹಾಗೂ ಕೈಗಾರಿಕೋದ್ಯಮದಲ್ಲಿ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ಎಲೆಕ್ಟ್ರಿಕಲ್&ಎಲೆಕ್ಟ್ರಾನಿಕ್ಸ್: ಎಲೆಕ್ಟ್ರಿಕಲ್&ಎಲೆಕ್ಟ್ರಾನಿಕ್ಸ್ ಡಿಪ್ಲೊಮಾ ಮಾಡಿರಬೇಕು ಹಾಗೂ ಕೈಗಾರಿಕೋದ್ಯಮದಲ್ಲಿ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ಎಲೆಕ್ಟ್ರಾನಿಕ್ಸ್&ಕಮ್ಯೂನಿಕೇಷನ್: ಎಲೆಕ್ಟ್ರಾನಿಕ್ಸ್&ಕಮ್ಯೂನಿಕೇಷನ್‌ನಲ್ಲಿ ಡಿಪ್ಲೊಮಾ ಮಾಡಿರಬೇಕು ಹಾಗೂ ಕೈಗಾರಿಕೋದ್ಯಮದಲ್ಲಿ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ರೆಫ್ರಿಜಿರೇಷನ್&ಏರ್‌ಕಂಡೀಷನನಿಂಗ್: ರೆಫ್ರಿಜಿರೇಷನ್&ಏರ್‌ಕಂಡೀಷನನಿಂಗ್‌ನಲ್ಲಿ ಐಟಿಐ ಮಾಡಿರಬೇಕು ಹಾಗೂ ಕೈಗಾರಿಕೋದ್ಯಮದಲ್ಲಿ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ಫಿಟ್ಟರ್: ಫಿಟ್ಟರ್ ಟ್ರೇಡ್‌ನಲ್ಲಿ ಐಟಿಐ ಮಾಡಿರಬೇಕು ಹಾಗೂ ಕೈಗಾರಿಕೋದ್ಯಮದಲ್ಲಿ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ವೆಲ್ಡರ್: ವೆಲ್ಡಿಂಗ್ ಟ್ರೇಡ್‌ನಲ್ಲಿ ಐಟಿಐ ಮಾಡಿರಬೇಕು ಹಾಗೂ ಕೈಗಾರಿಕೋದ್ಯಮದಲ್ಲಿ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್: ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್ ಟ್ರೇಡ್‌ನಲ್ಲಿ ಐಟಿಐ ಮಾಡಿರಬೇಕು ಹಾಗೂ ಕೈಗಾರಿಕೋದ್ಯಮದಲ್ಲಿ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ಎಲೆಕ್ಟ್ರಾನಿಕ್ ಮೆಕ್ಯಾನಿಕ್: ಈ ಟ್ರೇಡ್‌ನಲ್ಲಿ ಐಟಿಐ ಮಾಡಿರಬೇಕು ಹಾಗೂ ಕೈಗಾರಿಕೋದ್ಯಮದಲ್ಲಿ ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.
ಬಾಯ್ಲರ್ : ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಡೈರೆಕ್ಟರ್ ಆಫ್ ಫ್ಯಾಕ್ಟರಿ &ಬಾಯ್ಲರ್ ರವರಿಂದ ಎರಡನೇ ದರ್ಜೆ ಬಾಯ್ಲರ್ ಅಟೆಂಡೆಂಟ್ ಸರ್ಟಿಫಿಕೇಟ್ ಹೊಂದಿರಬೇಕು.
ವೇತನ ಶ್ರೇಣಿ ರೂ. 21,400-42,000
ಚಾಲಕರು
ಎಸ್‌ಎಸ್‌ಎಲ್‌ಸಿಯಲ್ಲಿ ತೇರ್ಗಡೆಯಾಗಿರಬೇಕು ( ಕನ್ನಡವನ್ನು ಒಂದು ವಿಷಯವಾಗಿ ಓದಿರಬೇಕು) ಹಾಗೂ ಎಲ್‌ಎಂವಿ/ಎಚ್‌ಎಂವಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
ವೇತನ ಶ್ರೇಣಿ ರೂ. 21,400-42,000
ವಯೋಮಿತಿ ಎಷ್ಟು?
ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಮತ್ತು ಗರಿಷ್ಠ ವಯೋಮಿತಿ 35 ವರ್ಷ. ಗರಿಷ್ಠ ವಯೋಮಿತಿಯಲ್ಲಿ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ ಐದು ವರ್ಷ ಸಡಿಲಿಕೆ ನೀಡಲಾಗುತ್ತದೆ. ವಯೋಮಿತಿಯನ್ನು ನೇಮಕಾತಿ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ: 17-04-2023 ಕ್ಕೆ ಲೆಕ್ಕಾಚಾರ ಹಾಕಲಾಗುತ್ತದೆ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ (Click Here) ಮಾಡಿ.
ಅರ್ಜಿ ಶುಲ್ಕ ಎಷ್ಟು?
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-3 ಹಾಗೂ ಅಂಗವಿಕಲ ಅಭ್ಯರ್ಥಿಗಳು ರೂ. 500 (ಬ್ಯಾಂಕ್ ಶುಲ್ಕ ಪ್ರತ್ಯೇಕ) ಅರ್ಜಿ ಶುಲ್ಕ ಪಾವತಿಸಬೇಕು. ಇತರೆ ವರ್ಗದ ಅಭ್ಯರ್ಥಿಗಳು ಪಾವತಿಸಬೇಕಾದ ಅರ್ಜಿ ಶುಲ್ಕ ರೂ. 1000 (ಬ್ಯಾಂಕ್ ಶುಲ್ಕ ಪ್ರತ್ಯೇಕ). ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ (ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್/ ಇಂಟರ್‌ನೆಟ್ ಬ್ಯಾಂಕಿಂಗ್) ಮೂಲಕ ಪಾವತಿಸಬಹುದಾಗಿರುತ್ತದೆ. ಆಫ್ ಲೈನ್‌ನಲ್ಲಿ ಅರ್ಜಿ ಶುಲ್ಕ ಪಾವತಿಸಲು ಅವಕಾಶವಿರುವುದಿಲ್ಲ.
ನೇಮಕಾತಿಯ ಸಂಪೂರ್ಣ ಮಾಹಿತಿಯ ಅಧಿಸೂಚನೆಗಾಗಿ ಇಲ್ಲಿ (Click Here) ಕ್ಲಿಕ್ ಮಾಡಿ.
ನೇಮಕ ಹೇಗೆ?
ಮೊದಲಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಪದವಿ ವಿದ್ಯಾರ್ಹತೆ ಹೊಂದಿರಬೇಕಾದ ಹುದ್ದೆಗಳಿಗೆ ಮತ್ತು ಪದವಿಗಿಂತ ಕಡಿಮೆ ವಿದ್ಯಾರ್ಹತೆ ಹೊಂದಿರಬೇಕಾದ ಹುದ್ದೆಗಳಿಗೆ (ಕಿರಿಯ ತಾಂತ್ರಿಕ ಹುದ್ದೆ) ಪ್ರತ್ಯೇಕವಾಗಿ ಲಿಖಿತ ಪರೀಕ್ಷೆಯನ್ನು ಒಟ್ಟು 200 ಅಂಕಗಳಿಗೆ ನೆಡೆಸಲಾಗುತ್ತದೆ.
ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:5 ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು. ಮೌಖಿಕ ಸಂದರ್ಶನಕ್ಕೆ ಗರಿಷ್ಟ 15 ಅಂಕಗಳನ್ನು ನಿಗದಿಪಡಿಸಲಾರುತ್ತದೆ. ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇ. 85 ಕ್ಕೆ ಇಳಿಸಿ ಹಾಗೆ ಪ್ರಾಪ್ತವಾಗುವ ಅಂಕಗಳಿಗೆ ಮೌಖಿಕ ಸಂದರ್ಶನದಲ್ಲಿ ಗಳಿಸುವ ಅಂಕಗಳನ್ನು ಒಟ್ಟುಗೂಡಿಸಿ ಅಂತಿಮ ಮೆರಿಟ್ ಪಟ್ಟಿಯನ್ನು ತಯಾರಿಸಿ ಮೆರಿಟ್ ಹಾಗೂ ಮೀಸಲಾತಿ ಆಧಾರದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಇದನ್ನೂ ಓದಿ : KPSC Recruitment 2023 : 67 ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳಿಗೆ ನೇಮಕ; ಪಿಯುಸಿ ಪಾಸಾದವರಿಂದ ಅರ್ಜಿ ಆಹ್ವಾನ