Site icon Vistara News

KPSC CBRT Exam | ಕೆಪಿಎಸ್‌ಸಿಯ ಕಂಪ್ಯೂಟರ್‌ ಆಧಾರಿತ ಪರೀಕ್ಷೆಗೆ ನಾಳೆ ಮಾಕ್‌ ಟೆಸ್ಟ್‌

KPSC Key answers

ಕೆಪಿಎಸ್‌ಸಿ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಸದ್ಯವೇ ಕಂಪ್ಯೂಟರ್‌ ಆಧಾರಿತ ಪರೀಕ್ಷೆಗಳನ್ನು (KPSC CBRT Exam) ಆರಂಭಿಸುತ್ತಿದ್ದು (Computer based recruitment test-CBRT), ಇದಕ್ಕಾಗಿ ಶನಿವಾರ (ಜ.07) ಮಾಕ್‌ ಟೆಸ್ಟ್‌ ನಡೆಸಲಾಗುತ್ತಿದೆ.

ಈ ಪರೀಕ್ಷೆ ಹೇಗೆ ನಡೆಯುತ್ತದೆ, ಇದರಿಂದ ಆಗುವ ಸಮಸ್ಯೆಗಳೇನು ಎಂಬುದನ್ನು ತಿಳಿದುಕೊಳ್ಳಲು ಪ್ರಾಯೋಗಿಕವಾಗಿ ಈ ಅಣಕು ಪರೀಕ್ಷೆ (Mock Test)ಯನ್ನು ರಾಜ್ಯದ ಆಯ್ದ ಜಿಲ್ಲೆಗಳಲ್ಲಿ ನಡೆಸಲಾಗುತ್ತಿದೆ. ಇದಕ್ಕೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರವನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ.

ಪರೀಕ್ಷೆ ಬರೆಯಬೇಕಾಗಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಂಡು ನಿಗದಿತ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕೆಂದು ಕೋರಲಾಗಿದೆ.

ಪ್ರವೇಶ ಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್‌ (Click Here) ಮಾಡಿ

ಪರೀಕ್ಷೆ ಹೇಗಿರುತ್ತದೆ?
ಪರೀಕ್ಷೆಯನ್ನು ಪ್ರಾಯೋಗಿಕವಾಗಿ Computer based recruitment test-CBRT ಕರ್ನಾಟಕ ರಾಜ್ಯದ ಆಯ್ದ ಜಿಲ್ಲೆಗಳಲ್ಲಿ ನಡೆಸಲಾಗುತ್ತದೆ. ಪರೀಕ್ಷೆಯು ಎರಡು ಗಂಟೆಗಳ ಕಾಲ ನಡೆಯಲಿದೆ. ಪ್ರಶ್ನೆ ಪತ್ರಿಕೆಯನ್ನು ಕನ್ನಡ ಮತ್ತು ಆಂಗ್ಲಭಾಷೆ ಎರಡರಲ್ಲೂ ಸಿದ್ಧಪಡಿಸಲಾಗುತ್ತದೆ. ವಸ್ತುನಿಷ್ಠ (Objective type or multiple choice) ಮಾದರಿಯಲ್ಲಿರುತ್ತದೆ.

ಪ್ರತಿ ಪ್ರಶ್ನೆ ಪತ್ರಿಕೆಯು 100 ಪ್ರಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ಪ್ರಶ್ನೆಗೆ 02 (ಎರಡು) ಅಂಕಗಳನ್ನು ನಿಗದಿಪಡಿಸಲಾ ಗಿರುತ್ತದೆ. ಪ್ರತಿ ಪ್ರಶ್ನೆಯು 04 (ನಾಲ್ಕು) ಆಯ್ಕೆಗಳನ್ನು ಒಳಗೊಂಡಿರುತ್ತದೆ. ಅಭ್ಯರ್ಥಿಯು ತಪ್ಪು ಉತ್ತರ ನೀಡಿದಲ್ಲಿ ಆ ಪ್ರಶ್ನೆಗೆ ನಿಗದಿಪಡಿಸಲಾದ ಅಂಕಗಳಲ್ಲಿ 1/4 ರಷ್ಟು ಅಂಕಗಳನ್ನು ದಂಡದ ರೂಪದಲ್ಲಿ ಕಳೆಯಲಾಗುತ್ತದೆ. ಅಭ್ಯರ್ಥಿಯು ಯಾವುದೇ ಪ್ರಶ್ನೆಗೆ ಉತ್ತರಿಸದೆ ಖಾಲಿ ಬಿಟ್ಟಲ್ಲಿ ಅಂದರೆ ಉತ್ತರವನ್ನು ನೀಡದಿದ್ದಲ್ಲಿ ಆ ಪ್ರಶ್ನೆಗೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ. ಪರೀಕ್ಷೆಯ ಸಿಲಬಸ್‌ ಅನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ: https://kpsc.kar.nic.in
ಸಹಾಯವಾಣಿ ಸಂಖ್ಯೆ: 9310611990/8448513269

ಇದನ್ನೂ ಓದಿ| KPSC Recruitment 2022 | ಕೆಪಿಎಸ್‌ಸಿಯಿಂದ ವಿವಿಧ 23 ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

Exit mobile version