ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) 2021ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳ (KPSC Departmental Examination) ಪ್ರವೇಶ ಪತ್ರವನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅರ್ಜಿ ಸಂಖ್ಯೆ ಅಥವಾ ನೋಂದಾಯಿತ ಮೊಬೈಲ್ ಸಂಖ್ಯೆಯನ್ನು ನಮೂದಿಸಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಜೂನ್ 9 ರಿಂದ ಪರೀಕ್ಷೆಗಳು ಆರಂಭವಾಗಲಿದ್ದು, ಜುಲೈ 9 ರವರೆಗೆ ನಡೆಯಲಿವೆ.
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ (Click Here) ಮಾಡಿ.
ಆಫ್‌ಲೈನ್ ಮಾದರಿಯಲ್ಲಿಯೇ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ಸಂಬಂಧಿಸಿದಂತೆ ಜನವರಿ 6 ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರಿ ನೌಕರರು (ಗ್ರೂಪ್-ಡಿ ನೌಕರರು ಹೊರತುಪಡಿಸಿ), ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ/ಮಂಡಳಿ/ಸ್ಥಳೀಯ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ/ ಪ್ರಾಧಿಕಾರಗಳ ಕಾಯಂ ನೌಕರರಿಗೆ ಈ ಪರೀಕ್ಷೆ ನಡೆಸಲಾಗುತ್ತದೆ.
ಎಲ್ಲ ವಿಭಾಗೀಯ ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಸಲಾಗುತ್ತದೆ. ಅಧಿಸೂಚನೆಯಲ್ಲಿ ಆನ್‌ಲೈನ್ ಮಾದರಿಯ ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಸಲಾಗುತ್ತದೆ ಎಂದು ತಿಳಿಸಲಾಗಿತ್ತಾದರೂ ಈಗ ಕೆಪಿಎಸ್‌ಸಿಯು ಆಫ್‌ಲೈನ್ ಪರೀಕ್ಷೆ ನಡೆಸುವುದಾಗಿ ಹೇಳಿದೆ. ಈ ಇಲಾಖಾ ಪರೀಕ್ಷೆಯನ್ನು ಒಟ್ಟು ಎರಡು ಹಂತದಲ್ಲಿ ನಡೆಸಲಾಗುತ್ತದೆ. ಪ್ರಥಮ ಹಂತದ ಪರೀಕ್ಷೆಯನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಎರಡನೇ ಹಂತದ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುತ್ತದೆ.
ವಿವಿಧ ವಿಷಯಗಳ ವಸ್ತುನಿಷ್ಠ ಬಹು ಆಯ್ಕೆ ಮಾದರಿಯ ಒಟ್ಟು 99 ಪತ್ರಿಕೆಗಳಿಗೆ ಹಾಗೂ ವಿವರಣಾತ್ಮಕ ಮಾದರಿಯ ಒಟ್ಟು 19 ಪತ್ರಿಕೆಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಈ ಇಲಾಖಾ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕೆಲವು ಇಲಾಖೆಗಳ ಪಠ್ಯಕ್ರಮಗಳು ಪರಿಷ್ಕೃತಗೊಂಡಿದ್ದು, ಈ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.
ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಇಲ್ಲಿದೆ;
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ: https://kpsc.kar.nic.in/