Site icon Vistara News

KPSC Departmental Examination : ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ

KPSC Recruitment

ಕೆಪಿಎಸ್‌ಸಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) 2021ನೇ ಸಾಲಿನ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ (KPSC Departmental Examination) ಅರ್ಜಿ ಸಲ್ಲಿಸಲು ಮತ್ತೆ ಅವಕಾಶ ನೀಡಿದೆ. ಈಗ ಫೆಬ್ರವರಿ 14 ರಿಂದ 16ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕಾರಣಾಂತರದಿಂದ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೆಪಿಎಸ್‌ಸಿಯು ತಿಳಿಸಿದೆ. ಇನ್ನೂ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ಫೆಬ್ರವರಿ 16ರ ಸಂಜೆ ಆರು ಗಂಟೆಯ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಈ ಪರೀಕ್ಷೆಗೆ ಸಂಬಂಧಿಸಿದಂತೆ ಜನವರಿ 6 ರಂದು ಅಧಿಸೂಚನೆ ಹೊರಡಿಸಿದ್ದ ಕೆಪಿಎಸ್‌ಸಿಯು ಜ.12ರಿಂದ ಜನವರಿ 31 ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿತ್ತು. ಇದೀಗ ಮತ್ತೆ ಅವಕಾಶ ನೀಡಿದೆ.

ಯಾರು ಈ ಪರೀಕ್ಷೆ ಬರೆಯಬಹುದು?
ಎ. ಸರ್ಕಾರಿ ನೌಕರರು (ಗ್ರೂಪ್‌-ಡಿ ನೌಕರರು ಇಲಾಖಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ)
ಬಿ. ಸರ್ಕಾರಿ ಸ್ವಾಮ್ಯಕ್ಕೊಳಪಟ್ಟ ನಿಗಮ/ಮಂಡಳಿ/ಸ್ಥಳೀಯ ಸಂಸ್ಥೆಗಳು/ ವಿಶ್ವವಿದ್ಯಾಲಯಗಳ/ ಪ್ರಾಧಿಕಾರಗಳ ಕಾಯಂ ನೌಕರರು.

ಅಧಿಸೂಚನೆಯನ್ನು ನೋಡಲು ಇಲ್ಲಿ ಕ್ಲಿಕ್‌ (Click Here ) ಮಾಡಿ.

ಈ ಇಲಾಖಾ ಪರೀಕ್ಷೆಯನ್ನು ಒಟ್ಟು ಎರಡು ಹಂತದಲ್ಲಿ ನಡೆಸಲಾಗುತ್ತದೆ. ಪ್ರಥಮ ಹಂತದ ಪರೀಕ್ಷೆಯನ್ನು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಎರಡನೇ ಹಂತದ ಪರೀಕ್ಷೆಯನ್ನು ಬೆಂಗಳೂರಿನಲ್ಲಿ ಮಾತ್ರ ನಡೆಸಲಾಗುತ್ತದೆ. ವಿವಿಧ ವಿಷಯಗಳ ವಸ್ತುನಿಷ್ಠ ಬಹು ಆಯ್ಕೆ ಮಾದರಿಯ ಒಟ್ಟು 99 ಪತ್ರಿಕೆಗಳಿಗೆ ಹಾಗೂ ವಿವರಣಾತ್ಮಕ ಮಾದರಿಯ ಒಟ್ಟು 19 ಪತ್ರಿಕೆಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಈ ಇಲಾಖಾ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಕೆಲವು ಇಲಾಖೆಗಳ ಪಠ್ಯಕ್ರಮಗಳು ಪರಿಷ್ಕೃತಗೊಂಡಿದ್ದು, ಈ ಮಾಹಿತಿಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ.

ಅರ್ಜಿ ಸಲ್ಲಿಸುವಾಗ ತಾಂತ್ರಿಕ ಸಮಸ್ಯೆಗಳು ಕಂಡು ಬಂದಲ್ಲಿ ಸಹಾಯವಾಣಿ ಸಂಖ್ಯೆ 080-22279954/9380206704/8088304855 ಯನ್ನು ಸಂಪರ್ಕಿಸಬಹುದಾಗಿದೆ. ಈ ಬಾರಿ ಕಂಪ್ಯೂಟರ್‌ ಆಧಾರಿತ ಪರೀಕ್ಷೆ ನಡೆಯುವ ಸಾಧ್ಯತೆಗಳಿವೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ: https://kpsc.kar.nic.in/

ಇದನ್ನೂ ಓದಿ : KPSC Recruitment 2022 | ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ; ಇನ್ನು ಒಮ್ಮೆ ಬರೆದರೆ ಸಾಕು!

Exit mobile version