Site icon Vistara News

KPSC-News | ಗ್ರೂಪ್‌ ಸಿ ಹುದ್ದೆ; ತಾತ್ಕಾಲಿಕ, ಅಂತಿಮ ಆಯ್ಕೆ ಪಟ್ಟಿ ಪ್ರಕಟ

Rakshit Shetty Richard Anthony Produce By Hombale

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ವಿವಿಧ ಇಲಾಖೆಗಳಲ್ಲಿ ಗ್ರೂಪ್‌ “ಸಿʼʼ ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಮತ್ತು ಅಂತಿಮ ಆಯ್ಕೆಪಟ್ಟಿಯನ್ನು (KPSC-News) ಪ್ರಕಟಿಸಿದೆ.

ಆಯುಷ್‌ ಇಲಾಖೆಯಲ್ಲಿನ ಶುಶ್ರೂಷಕರ 23 ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದ್ದು, ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಹೆಸರು, ವಿಳಾಸ, ಜನ್ಮದಿನಾಂಕ ಮತ್ತಿತರ ಮಾಹಿತಿ ನೀಡಲಾಗಿದೆ. ಈ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಆಸಕ್ತರು ಸೂಕ್ತ ದಾಖಲೆಗಳೊಂದಿಗೆ ಒಂದು ವಾರದ ಒಳಗೆ ಕೆಪಿಎಸ್‌ಸಿಗೆ ತಮ್ಮ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿರುತ್ತದೆ. ಲಿಖಿತ ರೂಪದಲ್ಲಿ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಮಾತ್ರ ಪರಿಗಣಿಸಲಾಗುತ್ತದೆ ಎಂದು ಕೆಪಿಎಸ್‌ಸಿಯು ತಿಳಿಸಿದೆ.

ಇದರ ಜತೆಯಲ್ಲಿಯೇ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ ಒಟ್ಟು 94 ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ. ಪಟ್ಟಿಯಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳ ಹೆಸರು, ವಿಳಾಸ, ವಿದ್ಯಾರ್ಹತೆ ಮತ್ತಿತರ ಮಾಹಿತಿಯನ್ನು ನೀಡಲಾಗಿದೆ.

ಆಯ್ಕೆ ಪಟ್ಟಿ ನೋಡಲು ಲಿಂಕ್‌: https://kpsc.kar.nic.in/

ಈ ನೇಮಕಕ್ಕೆ ಸಂಬಂಧಿಸಿದಂತೆ ಕಳೆದ ಮೇ 26ರಂದು ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿತ್ತು. ಇದಕ್ಕೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಈಗ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಇದಕ್ಕೆ ಮತ್ತೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲ ಎಂದು ಕೆಪಿಎಸ್‌ಸಿ ಸ್ಪಷ್ಟಪಡಿಸಿದೆ. ಈ ನೇಮಕಕ್ಕೆ ಸಂಬಂಧಿಸಿದಂತೆ 2019ರ ಸೆಪ್ಟೆಂಬರ್‌ 25ರಂದು ಅಧಿಸೂಚನೆ ಪ್ರಕಟಿಸಲಾಗಿತ್ತು.

ಇದನ್ನೂ ಓದಿ | KPSC Recruitment 2022 | ಗ್ರೂಪ್‌ ಬಿ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

Exit mobile version