Site icon Vistara News

KPSC Recruitment 2022 | ಸಹಾಯಕ ಸಾಂಖ್ಯಿಕ ಅಧಿಕಾರಿ ಹುದ್ದೆ; ಮತ್ತೆ ಅರ್ಜಿ ಸಲ್ಲಿಸಲು ಅವಕಾಶ

Rakshit Shetty Richard Anthony Produce By Hombale

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯ ದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿ (ಹೈ.ಕ.) ವೃಂದದ ಹುದ್ದೆಗಳಿಗೆ (KPSC Recruitment 2022) ನಿಗದಿಯಾಗಿದ್ದ ವಿದ್ಯಾರ್ಹತೆಯಲ್ಲಿನ ಗೊಂದಲವನ್ನು ದೂರ ಮಾಡಿದ್ದು, ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಒಟ್ಟು ಐದು ಹುದ್ದೆಗಳಿಗೆ ಮಾತ್ರ ನೇಮಕ ನಡೆಯಲಿದ್ದು, ಹೈದರಾಬಾದ್‌ ಕರ್ನಾಟಕದ (ಕಲ್ಯಾಣ ಕರ್ನಾಟಕ) ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳು Mathematics, Pure Mathematics, Statistics, Applied Statistics, Economics with Statistics / Quantitative Techniques, Pure Economics, Applied Economics, Applied Mathematics, Econometrics or Computer Science ಈ ವಿಷಯಗಳಲ್ಲಿ ಮಾಸ್ಟರ್‌ ಡಿಗ್ರಿ ಮಾಡಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಮತ್ತೆ ಸ್ಪಷ್ಟಪಡಿಸಲಾಗಿದೆ.

ಇನ್ನೂ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ಸೆಪ್ಟೆಂಬರ್‌ ೧೩ ರೊಳಗೆ ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್‌ ೧೪ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿರುತ್ತದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ನೇಮಕ ಹೇಗೆ?
ಇವು ಗ್ರೂಪ್‌ ʼಸಿʼಯ ಹುದ್ದೆಗಳಾಗಿದ್ದು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಮಾಡಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಪ್ರತಿಯೊಂದು ಪತ್ರಿಕೆಯು ಗರಿಷ್ಠ ೧೦೦ ಅಂಕಗಳಿಗೆ ನಡೆಯಲಿದ್ದು, ವಸ್ತುನಿಷ್ಠ ಬಹುಆಯ್ಕೆ ಮಾದರಿಯಲ್ಲಿ ನಡೆಯಲಿದೆ. ಪತ್ರಿಕೆ-೧ ಸಾಮಾನ್ಯ ಜ್ಞಾನಕ್ಕೆ ಸಂಬಂಧ ಪಟ್ಟಿದ್ದರೆ ಪತ್ರಿಕೆ-೨ರ ಪರೀಕ್ಷೆಯಲ್ಲಿ ಸಾಮಾನ್ಯ ಕನ್ನಡ, ಸಾಮಾನ್ಯ ಇಂಗ್ಲಿಷ್‌ ಮತ್ತು ಕಂಪ್ಯೂಟರ್‌ ಜ್ಞಾನಕ್ಕೆ ಸಂಬಂಧಿಸಿದ ಪ್ರಶ್ನೆಗಳಿರಲಿವೆ.

ವಯೋಮಿತಿ ಎಷ್ಟು?
ಸಾಮಾನ್ಯ ಅಭ್ಯರ್ಥಿಗಳಿಗೆ ೧೮ ರಿಂದ ೩೫ ವರ್ಷಗಳು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38ವರ್ಷಗಳು. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ ಎಷ್ಟು ಪಾವತಿಸಬೇಕು?
ಸಾಮಾನ್ಯ ಅಭ್ಯರ್ಥಿಗಳು ೬೦೦ ರೂ. ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ೩೦೦ ರೂ. ಹಾಗೂ ಮಾಜಿ ಸೈನಿಕರು ೫೦ ರೂ. ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಲು ಅವಕಾಶ ನೀಡಲಾಗಿರುತ್ತದೆ.

ಪ್ರಕ್ರಿಯೆ ಶುಲ್ಕ (processing fees) ೩೫ ರೂ.ಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-೧, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳೂ ಸೇರಿದಂತೆ ಎಲ್ಲ ಅಭ್ಯರ್ಥಿಗಳು ಪಾವತಿಸಬೇಕಿರುತ್ತದೆ. ಈ ಶುಲ್ಕ ಪಾವತಿಸದಿದ್ದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.

ವೇತನ ಶ್ರೇಣಿ: ರೂ 37,900 ರಿಂದ 70,850 ರೂ.

ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ಭೇಟಿ ನೀಡಬೇಕಾದ ವೆಬ್‌ಸೈಟ್‌ ವಿಳಾಸ: https://kpsc.kar.nic.in/

ಇದನ್ನೂ ಓದಿ | KPSC SDA Recruitment | ಕೊನೆಗೂ ಎಸ್‌ಡಿಎ ನೇಮಕದ ಫಲಿತಾಂಶ ಪ್ರಕಟಿಸಿದ ಕೆಪಿಎಸ್‌ಸಿ

Exit mobile version