ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ರಾಜ್ಯದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ (RDWSD Karnataka) ಕಿರಿಯ ಅಭಿಯಂತರರ (Junior Engineer) (ಗ್ರೂಪ್-ಸಿ) ನೇಮಕಕ್ಕೆ ಸಂಬಂಧಿಸಿದಂತೆ (KPSC Recruitment 2022) ಕೀ ಉತ್ತರ ಪ್ರಕಟಿಸಿದೆ.
ಡಿಸೆಂಬರ್ 24 ಮತ್ತು 25 ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು. ಪ್ರತಿಯೊಂದು ಪ್ರಶ್ನೆಗೂ ಒಂದೊಂದು ಅಂಕ ನಿಗದಿಯಾಗಿದ್ದು, ಅಭ್ಯರ್ಥಿಗಳು ತಪ್ಪು ಉತ್ತರ ಗುರುತಿಸಿದ್ದರೆ 1/4 ಅಂಕ ಕಳೆಯಲಾಗುತ್ತದೆ ಎಂದು ಕೆಪಿಎಸ್‌ಸಿಯು ತಿಳಿಸಿದೆ.
ಈ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದ್ದು, ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿಯೇ ಆಕ್ಷೇಪಣೆ ಸಲ್ಲಿಸಬೇಕಿರುತ್ತದೆ. ಆಕ್ಷೇಪಣೆಯ ಮಾದರಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ.
ಆಸಕ್ತರು ಪ್ರಮಾಣೀಕೃತ ಪುಸ್ತಕ, ದಾಖಲೆಗಳೊಂದಿಗೆ ತಮ್ಮ ಆಕ್ಷೇಪಣೆಯನ್ನು ಜನವರಿ 2ರ ಒಳಗೆ ಆಯೋಗದ ಕಚೇರಿಗೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಒಂದು ಆಕ್ಷೇಪಣೆಗೆ 50 ರೂ. ಶುಲ್ಕವನ್ನು ಪಾವತಿಸಬೇಕಿರುತ್ತದೆ. ಡಿಡಿಯ ಮೂಲಕ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.
ಒಟ್ಟು 136 ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಕಳೆದ ಮಾರ್ಚ್‌ನಲ್ಲಿ ಈ ನೇಮಕಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಲಾಗಿತ್ತು.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ : https://kpsc.kar.nic.in
ಇದನ್ನೂ ಓದಿ| Job News | ಸರ್ಕಾರದ ಯಾವ ಇಲಾಖೆಗಳಲ್ಲಿ ಎಷ್ಟು ಹುದ್ದೆ ಖಾಲಿ ಇವೆ?; ಇಲ್ಲಿದೆ ಸಂಪೂರ್ಣ ಮಾಹಿತಿ