Site icon Vistara News

KPSC Recruitment 2023 : ಎಫ್‌ಎಸ್‌ಎಲ್‌ ಸಹಾಯಕ ನಿರ್ದೇಶಕರ ನೇಮಕಕ್ಕೆ ಪರೀಕ್ಷೆ; ಪ್ರವೇಶ ಪತ್ರ ಬಿಡುಗಡೆ

KPSC Recruitment

ಕೆಪಿಎಸ್‌ಸಿ

ಬೆಂಗಳೂರು: ಪೊಲೀಸ್‌ ಇಲಾಖೆಯ ನ್ಯಾಯವಿಜ್ಞಾನ ಪ್ರಯೋಗಾಲಯದಗಳಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ( KPSC Recruitment 2023 ) ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಮಾರ್ಚ್‌ 07 ರಿಂದ 10 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಿದ್ದು, ಪ್ರವೇಶ ಪತ್ರವನ್ನು ಆಯೋಗದ ವೆಬ್‌ ಸೈಟ್‌ನಲ್ಲಿ ಒದಗಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಪ್ಲಿಕೇಷನ್ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ, ತಮ್ಮ ಪ್ರವೇಶ ಪತ್ರವನ್ನು ಪಡೆದುಕೊಳ್ಳಬಹುದಾಗಿದೆ. ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳುವ ಸಂದರ್ಭದಲ್ಲಿ ತಾಂತ್ರಿಕ ಸಮಸ್ಯೆಗಳು ಕಂಡುಬಂದಲ್ಲಿ ಆಯೋಗದ ಸಹಾಯವಾಣಿ ಸಂಖ್ಯೆ: 1800-572-8707 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಆಯೋಗ ಪ್ರಕಟಣೆಯಲ್ಲಿ ಹೇಳಿದೆ.

ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಈ ನೇಮಕಕ್ಕೆ ಸಂಬಂಧಿಸಿದಂತೆ 07-03-2022 ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ನೇಮಕಕ್ಕೆ ಅಭ್ಯರ್ಥಿಗಳು ಎರಡೂ ಪತ್ರಿಕೆಗಳನ್ನು ಬರೆಯಬೇಕಿರುವುದು ಕಡ್ಡಾಯವಾಗಿರುತ್ತದೆ. ಒಂದು ಸಾಮಾನ್ಯ ಪತ್ರಿಕೆಯಾದರೆ ಮತ್ತೊಂದು ನಿರ್ದಿಷ್ಟ ಪತ್ರಿಕೆಯಾಗಿದೆ. ಪ್ರತಿಯೊಂದು ಪತ್ರಿಕೆಯು ಗರಿಷ್ಠ 200 ಅಂಕಗಳಿಗೆ ನಡೆಯಲಿದ್ದು, ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ನಡೆಯಲಿದೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ : https://kpsc.kar.nic.in/

ಇದನ್ನೂ ಓದಿ : KPSC Recruitment 2023 : ಅಸಿಸ್ಟೆಂಟ್‌ ಎಂಜಿನಿಯರ್‌ ನೇಮಕ; ಕೀ ಉತ್ತರ ಪ್ರಕಟಿಸಿದ ಕೆಪಿಎಸ್‌ಸಿ

Exit mobile version