ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಏಪ್ರಿಲ್ 1 ಮತ್ತು 2 ರಂದು (KPSC Recruitment 2023) ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿ-58, ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು-20, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಾಂಖ್ಯಿಕ ನಿರೀಕ್ಷಕರ 105 ಹುದ್ದೆಗಳಿಗೆ ಈ ಪರೀಕ್ಷೆ ನಡೆಯುತ್ತಿದೆ.
ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ (Click Here) ಮಾಡಿ.
ಈ ಪರೀಕ್ಷೆ ಬರೆಯಬೇಕಾಗಿರುವ ಅಭ್ಯರ್ಥಿಗಳು ಅರ್ಜಿಯ ಸಂಖ್ಯೆ ಮತ್ತು ಜನ್ಮದಿನಾಂಕದೊಂದಿಗೆ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಪ್ರವೇಶ ಪತ್ರವಿಲ್ಲದೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ.
ಏಪ್ರಿಲ್ 1ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಏಪ್ರಿಲ್2 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವಾಗ ತಾಂತ್ರಿಕ ಸಮಸ್ಯೆಗಳು ಎದುರಾದಲ್ಲಿ ಸಹಾಯವಾಣಿ ಸಂಖ್ಯೆ : 18005728707 ಸಂಪರ್ಕಿಸಬೇಕೆಂದು ಕೆಪಿಎಸ್‌ಸಿಯು ಸೂಚಿಸಿದೆ.
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here ) ಮಾಡಿ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಮತ್ತು ದಾವಣಗೆರೆಯಲ್ಲಿ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಲಾಗಿದ್ದು, ಈ ಕುರಿತ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ. ಈ ಎರಡು ನಗರಗಳಲ್ಲಿ ಪರೀಕ್ಷೆ ಬರೆಯಬೇಕಿರುವ ಅಭ್ಯರ್ಥಿಗಳು ಈಗಾಗಲೇ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡಿದ್ದರೂ, ಇನ್ನೊಮ್ಮೆ ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗುವಂತೆ ಕೆಪಿಎಸ್‌ಸಿಯು ಕೋರಿದೆ.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ : https://kpsc.kar.nic.in
ಇದನ್ನೂ ಓದಿ: KPSC Recruitment 2023 : ಕೆಪಿಎಸ್‌ಸಿಯಿಂದ ಸದ್ಯವೇ ನಾಲ್ಕು ಅಧಿಸೂಚನೆ; ಅರ್ಜಿ ಸಲ್ಲಿಸಲು ಅರ್ಹತೆಗಳೇನು?