Site icon Vistara News

KPSC Recruitment 2023 : ಜೂನಿಯರ್‌ ಎಂಜಿನಿಯರ್‌ ನೇಮಕ; ಅರ್ಹತಾ ಪಟ್ಟಿ ಪ್ರಕಟ

KPSC Recruitment

ಕೆಪಿಎಸ್‌ಸಿ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ರಾಜ್ಯದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ (RDWSD Karnataka) ಕಿರಿಯ ಅಭಿಯಂತರರ (Junior Engineer) (ಗ್ರೂಪ್‌-ಸಿ) ನೇಮಕಕ್ಕೆ ಸಂಬಂಧಿಸಿದಂತೆ (KPSC Recruitment 2023) ಅರ್ಹತಾ ಪಟ್ಟಿಯನ್ನು ಪ್ರಕಟಿಸಿದೆ.

1:3ರ ಅನುಪಾತದಲ್ಲಿ ಅರ್ಹತಾ ಪಟ್ಟಿ ಪ್ರಕಟಿಸಲಾಗಿದ್ದು, ಪಟ್ಟಿಯಲ್ಲಿ ಅಭ್ಯರ್ಥಿಗಳ ರಿಜಿಸ್ಟರ್‌ ನಂಬರ್‌ ಮತ್ತು ಹೆಸರನ್ನು ಒದಗಿಸಲಾಗಿದೆ. ಒಟ್ಟು ಒಟ್ಟು 136 ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಉಳಿಕೆ ಮೂಲ ವೃಂದದ ಹುದ್ದೆಗಳಿಗೆ 257 ಅಭ್ಯರ್ಥಿಗಳು, ಕಲ್ಯಾಣ ಕರ್ನಾಕದ ಹುದ್ದೆಗಳಿಗೆ 132 ಅಭ್ಯರ್ಥಿಗಳು ಅರ್ಹತಾ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

2022ರ ಮಾರ್ಚ್‌ 17 ರಂದು ಈ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಕಳೆದ ಡಿಸೆಂಬರ್‌ 24 ಮತ್ತು 25 ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು.

ಸದ್ಯವೇ ದಾಖಲೆ ಪರಿಶೀಲನೆ

ಈ ಅರ್ಹತಾ ಪಟ್ಟಿ ಪ್ರಕಟಿಸಿರುವ ಕುರಿತು ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿರುವ ಕೆಪಿಎಸ್‌ಸಿಯ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಸಲ್ಲಿಸಿದ ದಾಖಲೆಗಳ ಆಧಾರದಲ್ಲಿ ಈ ಅರ್ಹತಾ ಪಟ್ಟಿಯನ್ನು ಪ್ರಕಟಿಸಲಾಗಿದೆ. ದಾಖಲೆ ಪರಿಶೀಲನೆಯ ಸಂದರ್ಭದಲ್ಲಿ ಸೂಕ್ತ ದಾಖಲೆಗಳಿಲ್ಲದ ಅಭ್ಯರ್ಥಿಗಳನ್ನು ತಿರಸ್ಕರಿಸಲಾಗುತ್ತದೆ. ದಾಖಲೆ ಪರಿಶೀಲನೆಯ ದಿನಾಂಕವನ್ನು ಒಂದೆರಡು ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಅರ್ಹತಾ ಪಟ್ಟಿ ನೋಡಲು ಇಲ್ಲಿ ಕ್ಲಿಕ್‌ (Click Here ) ಮಾಡಿ.

ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಸಿದ್ಧ

ಕೆಪಿಎಸ್‌ಸಿಯು 18 ಇಲಾಖೆಗಳ ಗ್ರೂಪ್‌ ʻಸಿʼ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಿದೆ. ಇದನ್ನು ಆಯೋಗದ ಅಧ್ಯಕ್ಷರಿಗೆ ಸಲ್ಲಿಸಲಾಗಿದ್ದು, ಅವರು ಒಪ್ಪಿಗೆ ನೀಡುತ್ತಿದ್ದಂತೆಯೇ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.‌

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಅಭ್ಯರ್ಥಿಗಳು ದಾಖಲಿಸಿದ ಪ್ರಾಶಸ್ತ್ಯದ ಆಧಾರದಲ್ಲಿ ಈ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಇದರಿಂದಾಗಿ ಇಲಾಖೆಗಳ ಆಯ್ಕೆಯ ಕುರಿತ ಗೊಂದಲ ಕಡಿಮೆಯಾಗಬಹುದು ಎಂದು ಕೆಪಿಎಸ್‌ಸಿಯ ಕಾರ್ಯದರ್ಶಿ ತಿಳಿಸಿದ್ದಾರೆ. ಈ ತಾತ್ಕಾಲಿಕ ಆಯ್ಕೆ ಪಟ್ಟಿ ಸಹ ಸದ್ಯವೇ ಪ್ರಕಟವಾಗುವ ನಿರೀಕ್ಷೆ ಇದೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ: https://kpsc.kar.nic.in/

Exit mobile version