Site icon Vistara News

KPSC Recruitment 2023 : ಎಫ್‌ಎಸ್‌ಎಲ್‌ ಸಹಾಯಕ ನಿರ್ದೇಶಕರ ನೇಮಕಕ್ಕೆ ಪರೀಕ್ಷೆ; ಕೀ ಉತ್ತರ ಪ್ರಕಟ

KPSC Key answers

ಕೆಪಿಎಸ್‌ಸಿ

ಬೆಂಗಳೂರು: ಪೊಲೀಸ್‌ ಇಲಾಖೆಯ ನ್ಯಾಯವಿಜ್ಞಾನ ಪ್ರಯೋಗಾಲಯದಗಳಲ್ಲಿನ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ( KPSC Recruitment 2023 ) ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಮಾರ್ಚ್‌ 07 ರಿಂದ 10 ರವರೆಗೆ ನಡೆಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಕೀ ಉತ್ತರಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಪ್ರತಿಯೊಂದು ಪ್ರಶ್ನೆಗೂ ಮೂರು ಅಂಕ ನಿಗದಿಯಾಗಿದ್ದು, ಅಭ್ಯರ್ಥಿಗಳು ತಪ್ಪು ಉತ್ತರ ಗುರುತಿಸಿದ್ದರೆ 1/4 (0.25) ಅಂಕ ಕಳೆಯಲಾಗುತ್ತದೆ ಎಂದು ಕೆಪಿಎಸ್‌ಸಿಯು ತಿಳಿಸಿದೆ. ಈ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದ್ದು, ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿಯೇ ಆಕ್ಷೇಪಣೆ ಸಲ್ಲಿಸಬೇಕಿರುತ್ತದೆ. ಆಕ್ಷೇಪಣೆಯ ಮಾದರಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ.

ಕೀ ಉತ್ತರವನ್ನು ನೋಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಆಸಕ್ತರು ಪ್ರಮಾಣೀಕೃತ ಪುಸ್ತಕ, ದಾಖಲೆಗಳೊಂದಿಗೆ ತಮ್ಮ ಆಕ್ಷೇಪಣೆಯನ್ನು ಮಾರ್ಚ್‌ 17ರ ಒಳಗೆ ಆಯೋಗದ ಕಚೇರಿಗೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಒಂದು ಆಕ್ಷೇಪಣೆಗೆ 50 ರೂ. ಶುಲ್ಕವನ್ನು ಪಾವತಿಸಬೇಕಿರುತ್ತದೆ. ಡಿಡಿಯ ಮೂಲಕ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಈ ನೇಮಕಕ್ಕೆ ಸಂಬಂಧಿಸಿದಂತೆ 07-03-2022 ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿತ್ತು. ಒಂದು ಸಾಮಾನ್ಯ ಪತ್ರಿಕೆಯಾದರೆ ಮತ್ತೊಂದು ನಿರ್ದಿಷ್ಟ ಪತ್ರಿಕೆಯಾಗಿದೆ. ಪ್ರತಿಯೊಂದು ಪತ್ರಿಕೆಗೂ ಗರಿಷ್ಠ 300 ಅಂಕ ನಿಗದಿಯಾಗಿತ್ತು.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ : https://kpsc.kar.nic.in

ಇದನ್ನೂ ಓದಿ : DCC Bank Recruitment 2023 : ಕೋಲಾರ ಮತ್ತು ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್‌ನಲ್ಲಿ 36 ಹುದ್ದೆ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Exit mobile version