Site icon Vistara News

KPSC Recruitment 2023 : 67 ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳಿಗೆ ನೇಮಕ; ಪಿಯುಸಿ ಪಾಸಾದವರಿಂದ ಅರ್ಜಿ ಆಹ್ವಾನ

kpsc-recruitment-2023 notification for Junior accounts assistant post in the dept of state accounts is published

kpsc

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ ಇಲಾಖೆಯಲ್ಲಿ ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳ ನೇಮಕಕ್ಕೂ (KPSC Recruitment 2023) ಅಧಿಸೂಚನೆ ಹೊರಡಿಸಿದೆ. ಈ ಹುದ್ದೆಗಳಿಗೆ ಮಾರ್ಚ್‌ 25 ರಿಂದ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.

ಉಳಿಕೆ ಮೂಲ ವೃಂದದ 67 ಹುದ್ದೆಗಳಿಗೆ ನೇಮಕ ನಡೆಯಲಿದೆ. ಏಪ್ರಿಲ್‌ 25 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಅರ್ಜಿ ಶುಲ್ಕ ಪಾವತಿಸಲು ಏಪ್ರಿಲ್‌ 26ರ ವರೆಗೆ ಕಾಲಾವಕಾಶ ನೀಡಲಾಗಿದೆ. ಇವು ಗ್ರೂಪ್‌ ʻಸಿʼಯ ಹುದ್ದೆಗಳಾಗಿವೆ.

ಹುದ್ದೆಗಳ ಮೀಲಸಾತಿ ಹಂಚಿಕೆ ಇಂತಿದೆ;

ಯಾರು ಅರ್ಜಿ ಸಲ್ಲಿಸಬಹುದು?

ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು (Must have passed PUC in Commerce with Accountency as Optional Subject) ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ನಿಗದಿಪಡಿಸಿದರುವ ವಿದ್ಯಾರ್ಹತೆಯನ್ನು ಹೊಂದದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಕೆಪಿಎಸ್‌ಸಿಯು ಸ್ಪಷ್ಟಪಡಿಸಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ವಿದ್ಯಾರ್ಹತೆಯನ್ನು ಪೂರ್ಣಗೊಳಿಸರಬೇಕಾದದು ಕಡ್ಡಾಯ.

ವಯೋಮಿತಿ ಎಷ್ಟು?

ಸಾಮಾನ್ಯ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷಗಳು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38ವರ್ಷಗಳು. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.

ಇದನ್ನು ಗಮಿಸಿ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 25-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-04-2023
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 26-04-2023
ಸಹಾಯವಾಣಿ ಸಂಖ್ಯೆ: 18005728707

ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ : https://kpsc.kar.nic.in

ಅರ್ಜಿ ಶುಲ್ಕ ಎಷ್ಟು ಪಾವತಿಸಬೇಕು?

ಸಾಮಾನ್ಯ ಅಭ್ಯರ್ಥಿಗಳು 600 ರೂ. ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಹಾಗೂ ಮಾಜಿ ಸೈನಿಕರು 50ರೂ. ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಲು ಅವಕಾಶ ನೀಡಲಾಗಿರುತ್ತದೆ.

ಪ್ರಕ್ರಿಯೆ ಶುಲ್ಕ (processing fees)35 ರೂ.ಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳೂ ಸೇರಿದಂತೆ ಎಲ್ಲ ಅಭ್ಯರ್ಥಿಗಳು ಪಾವತಿಸಬೇಕಿರುತ್ತದೆ. ಈ ಶುಲ್ಕ ಪಾವತಿಸದಿದ್ದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.

ಅಧಿಸೂಚನೆ ನೋಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ನೇಮಕ ಹೇಗೆ?

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಗಳಿಸಿದ ಶೇಕಡಾವಾರು ಅಂಕಗಳ ಆಧಾರದಲ್ಲಿ ನೇಮಕಮಾಡಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಪ್ರತಿಯೊಂದು ಪತ್ರಿಕೆಯು ಗರಿಷ್ಠ 100 ಅಂಕಗಳಿಗೆ ನಡೆಯಲಿದ್ದು, ವಸ್ತುನಿಷ್ಠ ಬಹು ಆಯ್ಕೆ ಮಾದರಿಯಲ್ಲಿ ನಡೆಯಲಿದೆ. ಪತ್ರಿಕೆ-1 ಸಾಮಾನ್ಯ ಜ್ಞಾನಕ್ಕೆ ಸಂಬಂಧ ಪಟ್ಟಿದ್ದರೆ ಪತ್ರಿಕೆ-2 ಮೂರು ವಿಭಾಗಗಳನ್ನು ಹೊಂದಿರುತ್ತದೆ. ಅವುಗಳೆಂದರೆ;
ಸಾಮಾನ್ಯ ಕನ್ನಡ-35 ಅಂಕ, ಸಾಮಾನ್ಯ ಇಂಗ್ಲಿಷ್‌-35 ಅಂಕ, ಕಂಪ್ಯೂಟರ್‌ ಜ್ಞಾನ-30 ಅಂಕ.

ಪತ್ರಿಕೆ-1 ಪರೀಕ್ಷೆ ಬರೆಯಲು ಒಂದೂವರೆ ಗಂಟೆ ಹಾಗೂ ಪತ್ರಿಕೆ-2 ರ ಪರೀಕ್ಷೆ ಬರೆಯಲು ಎರಡು ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಈ ಪರೀಕ್ಷೆಯ ಪಠ್ಯ ಕ್ರಮವನ್ನು ಆಯೋಗದ ವೆಬ್‌ನಲ್ಲಿ ಒದಗಿಸಲಾಗಿದೆ. ಪ್ರಶ್ನೆ ಪತ್ರಿಕೆಯು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ಇರಲಿದೆ. ಈ ಪರೀಕ್ಷೆಯಲ್ಲಿ ಶೇ.35 ರಷ್ಟು ಅಂಕ ಪಡೆದವರು ಮಾತ್ರ ನೇಮಕಕ್ಕೆ ಅರ್ಹರಾಗಿರುತ್ತಾರೆ. ಋಣಾತ್ಮಕ ಮೌಲ್ಯಮಾಪನ (Negative) ನಡೆಸಲಾಗುತ್ತದೆ. ಅಂದರೆ ಪ್ರತಿ ತಪ್ಪು ಉತ್ತರಕ್ಕೆ ಪ್ರಶ್ನೆಗೆ ನಿಗದಿಪಡಿಸಿದ ಅಂಕಗಳ ನಾಲ್ಕನೇ ಒಂದು ಭಾಗದಷ್ಟು(1/4) ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಕನ್ನಡ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಪ್ರಶ್ನೆ ಪತ್ರಿಕೆ ನೀಡಲಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ರಾಜ್ಯದ ವಿವಿಧ ಭಾಗಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಮಾಹಿತಿಯನ್ನು ಮುಂದೆ ನೀಡಲಾಗುತ್ತದೆ. ಅಗತ್ಯ ಇರುವ ಅಭ್ಯರ್ಥಿಗಳು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನೂ ಬರೆದು ಅರ್ಹತೆ ಪಡೆಯಬೇಕಿರುತ್ತದೆ. ಪರೀಕ್ಷಾ ವೇಳಾಪಟ್ಟಿಯನ್ನು ಮುಂದೆ ಪ್ರಕಟಿಸಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವೇತನ ಶ್ರೇಣಿ ಎಷ್ಟು?

ಲೆಕ್ಕ ಸಹಾಯಕರ ಹುದ್ದೆ : ರೂ. 21,400-42,000

ಇದನ್ನೂ ಓದಿ : KPSC Recruitment 2023 : 242 ಲೆಕ್ಕ ಸಹಾಯಕರ ಹುದ್ದೆಗಳಿಗೆ ನೇಮಕ; ಬಿಕಾಂ ಪದವೀಧರರಿಂದ ಅರ್ಜಿ ಆಹ್ವಾನ

Exit mobile version