Site icon Vistara News

KPSC Recruitment 2023 : ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಫಲಿತಾಂಶ ಪ್ರಕಟ

kpsc recruitment 2023 result of compulsory kannada examination held february 25 published

KPSC Recruitment 2023

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು ವಿವಿಧ ಗ್ರೂಪ್‌ ಎ, ಬಿ ಮತ್ತು ಸಿ ವೃಂದದ ಹುದ್ದೆಗಳ ನೇಮಕಕ್ಕೆ ಫೆಬ್ರವರಿ 25 ರಂದು (KPSC Recruitment 2023) ನಡೆಸಲಾಗಿದ್ದ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯ ಫಲಿತಾಂಶವನ್ನು (KPSC-Result) ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಪೊಲೀಸ್‌ ಇಲಾಖೆಯ ನ್ಯಾಯ ವಿಜ್ಞಾನ ಪ್ರಯೋಗಾಲಯಗಳಲ್ಲಿನ ವಿವಿಧ ಹುದ್ದೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ವಿವಿಧ ಹುದ್ದೆ, ಮುದ್ರಣ, ಲೇಖನ ಸಾಮಗ್ರಿ ಮತ್ತು ಪ್ರಕಟಣೆಗಳ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ ಹುದ್ದೆ, ಭಾಷಾಂತರ ನಿರ್ದೇಶನಾಲಯದಲ್ಲಿನ ಭಾಷಾಂತರಕಾರರ ಹುದ್ದೆ, ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ನಗರ ಯೋಜಕರ ಹುದ್ದೆ, ಮುಖ್ಯ ವಿದ್ಯುತ್‌ ಪರಿವೀಕ್ಷಣಾಲಯದಲ್ಲಿನ ಸಹಾಯಕ ವಿದ್ಯುತ್‌ ಪರಿವೀಕ್ಷಕರ ಹುದ್ದೆ, ರೇಷ್ಮೆ ಇಲಾಖೆಯಲ್ಲಿನ ಹುದ್ದೆಗಳು, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ನಿರ್ದೇಶಕರ ಹುದ್ದೆ ಮತ್ತು ಮೀನುಗಾರಿಕೆ ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಈ ಪರೀಕ್ಷೆ ನಡೆಸಲಾಗಿತ್ತು.

ಫಲಿತಾಂಶ ನೋಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಇದು ಅರ್ಹತಾ ಪರೀಕ್ಷೆಯಾಗಿದ್ದು, ನೇಮಕದ ಸಂದರ್ಭದಲ್ಲಿ ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಆದರೆ ಮೆರಿಟ್‌ ಪಟ್ಟಿ ಸಿದ್ಧಪಡಿಸುವಾಗ ಈ ಪರೀಕ್ಷೆಯ ಅಂಕವನ್ನು ಪರಿಗಣಿಸಲಾಗುವುದಿಲ್ಲ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಇವರು ಮುಂದೆ ಪರೀಕ್ಷೆ ಬರೆಯಬೇಕಿಲ್ಲ!
ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆಯೋಗ ಮುಂದೆ ನಡೆಸುವ ನೇಮಕಾತಿಗಳಲ್ಲಿ ಭಾಗವಹಿಸಿದರೆ ಕಡ್ಡಾಯ ಕನ್ನಡ ಪರೀಕ್ಷೆಗಳಿಗೆ ಹಾಜರಾಗುವ ಅವಶ್ಯಕತೆ ಇರುವುದಿಲ್ಲ ಎಂದು ಕೆಪಿಎಸ್‌ಸಿಯ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಈಗಾಗಲೇ ತಿಳಿಸಿದ್ದಾರೆ.

150 ಅಂಕಗಳಿಗೆ ನಡೆದ ಈ ಪರೀಕ್ಷೆಯಲ್ಲಿ ಅಭ್ಯರ್ಥಿಯು ಕನಿಷ್ಠ 50 ಅಂಕವನ್ನು ಪಡೆದರೆ ಮಾತ್ರ ಅರ್ಹತೆ ಪಡೆಯುತ್ತಾರೆ. ಈ ಪರೀಕ್ಷೆಯಲ್ಲಿ ಎಸ್‌ಎಸ್‌ಎಲ್‌ಸಿ ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಟ್ಟುಕೊಂಡು ಸಿದ್ಧಪಡಿಸಲಾಗಿದ್ದ ಪ್ರಶ್ನೆ ಪತ್ರಿಕೆಯನ್ನು ನೀಡಲಾಗಿತ್ತು.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ: https://kpsc.kar.nic.in/

ಇದನ್ನೂ ಓದಿ : Central Bank Recruitment 2023 : ಸೆಂಟ್ರಲ್‌ ಬ್ಯಾಂಕ್‌ನಲ್ಲಿ 5 ಸಾವಿರ ಅಪ್ರೆಂಟಿಸ್‌ಗಳ ನೇಮಕ; ಅರ್ಜಿ ಸಲ್ಲಿಕೆಗೆ ಮತ್ತೆ ಅವಕಾಶ

Exit mobile version