Site icon Vistara News

KPSC Recruitment 2023 : ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಫಲಿತಾಂಶ ಪ್ರಕಟ

KPSC Recruitment

ಕೆಪಿಎಸ್‌ಸಿ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಕಿರಿಯ ಅಭಿಯಂತರರ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ (KPSC Recruitment 2023) ನಡೆಸಲಾಗಿದ್ದ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯ ಫಲಿತಾಂಶವನ್ನು (KPSC-Result) ಪ್ರಕಟಿಸಿದೆ.

ಒಟ್ಟು 8,759 ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದು, ಅವರುಗಳ ರಿಜಿಸ್ಟರ್‌ ನಂಬರ್‌ ಅನ್ನು ಕೆಪಿಎಸ್‌ಸಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಒಟ್ಟು 27 ಅಭ್ಯರ್ಥಿಗಳ ಫಲಿತಾಂಶವನ್ನು ತಡೆ ಹಿಡಿಯಲಾಗಿದೆ. ಕಳೆದ ಡಿಸೆಂಬರ್‌ 24 ರಂದು ಈ ಪರೀಕ್ಷೆ ನಡೆಸಲಾಗಿತ್ತು.

ಫಲಿತಾಂಶ ನೋಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಇದು ಅರ್ಹತಾ ಪರೀಕ್ಷೆಯಾಗಿದ್ದು, ನೇಮಕದ ಸಂದರ್ಭದಲ್ಲಿ ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಆದರೆ ಮೆರಿಟ್‌ ಪಟ್ಟಿ ಸಿದ್ಧಪಡಿಸುವಾಗ ಈ ಪರೀಕ್ಷೆಯ ಅಂಕವನ್ನು ಪರಿಗಣಿಸಲಾಗುವುದಿಲ್ಲ.

ಮುಂದೆ ಪರೀಕ್ಷೆ ಬರೆಯಬೇಕಿಲ್ಲ
ಈ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆಯೋಗ ಮುಂದೆ ನಡೆಸುವ ನೇಮಕಾತಿಗಳಲ್ಲಿ ಭಾಗವಹಿಸಿದರೆ ಕಡ್ಡಾಯ ಕನ್ನಡ ಪರೀಕ್ಷೆಗಳಿಗೆ ಹಾಜರಾಗುವ ಅವಶ್ಯಕತೆ ಇರುವುದಿಲ್ಲ ಎಂದು ಕೆಪಿಎಸ್‌ಸಿಯ ಕಾರ್ಯದರ್ಶಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ತಿಳಿಸಿದ್ದಾರೆ.

150 ಅಂಕಗಳಿಗೆ ನಡೆದ ಈ ಪರೀಕ್ಷೆಯಲ್ಲಿ ಅಭ್ಯರ್ಥಿಯು ಕನಿಷ್ಠ 50 ಅಂಕವನ್ನು ಪಡೆದರೆ ಮಾತ್ರ ಅರ್ಹತೆ ಪಡೆಯುತ್ತಾರೆ. ಈ ಪರೀಕ್ಷೆಯಲ್ಲಿ ಎಸ್‌ಎಸ್‌ಎಲ್‌ಸಿ ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಟ್ಟುಕೊಂಡು ಸಿದ್ಧಪಡಿಸಲಾಗಿದ್ದ ಪ್ರಶ್ನೆ ಪತ್ರಿಕೆಯನ್ನು ನೀಡಲಾಗಿತ್ತು.

ಇದನ್ನೂ ಓದಿ |KPSC Recruitment 2023 | ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯ ಅವಧಿ ಅರ್ಧ ಗಂಟೆ ಹೆಚ್ಚಳ

Exit mobile version