ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ (KPSC Recruitment 2023) ಹುದ್ದೆಗಳ ನೇಮಕಕ್ಕೆ ಸಿದ್ಧತೆ ನಡೆಸಿದ್ದು, ಸದ್ಯವೇ ಅಧಿಸೂಚನೆ ಹೊರಡಿಸಲಿದೆ.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ (ಗ್ರೂಪ್ ಎ) 23 ಹುದ್ದೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ 40 ಹುದ್ದೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶುವೈದ್ಯಾಧಿಕಾರಿಗಳ (ಗ್ರೂಪ್ ಎ)- 400 ಹಾಗೂ ಕೃಷಿ ಇಲಾಖೆಯಲ್ಲಿನ ಸಹಾಯಕ ಕೃಷಿ ಅಧಿಕಾರಿ (ಗ್ರೂಪ್ -ಬಿ) 368 ಹುದ್ದೆಗಳಿಗೆ ಸದ್ಯವೇ ಅಧಿಸೂಚನೆ ಹೊರಡಿಸಲಿದೆ.
ಈ ನೇಮಕಾತಿ ಪ್ರಸ್ತಾವನೆಗಳನ್ನು ಅಂತಿಮಗೊಳಿಸಲಾಗಿದ್ದು, ಆಯೋಗವು ಒಪ್ಪಿಗೆ ನೀಡುತ್ತಿದ್ದಂತೆಯೇ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ವಿಷಯವನ್ನು ಕೆಪಿಎಸ್‌ಸಿಯ ಕಾರ್ಯದರ್ಶಿ ವಿಕಾಸ್ ಕಿಶೋರ್ ಸುರಳ್ಕರ್ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.
ಕೆಪಿಎಸ್‌ಸಿಯಲ್ಲಿ ನೇಮಕದ ಮಾಹಿತಿ
ಇದಲ್ಲದೆ, ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ಇನ್ಸ್‌ಪೆಕ್ಟರ್, ಜಲಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಎಂಜಿನಿಯರ್ ಹಾಗೂ ಜೂನಿಯರ್ ಎಂಜಿನಿಯರ್ ಮತ್ತು ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೂ ಕೆಪಿಎಸ್‌ಸಿಯ ಸದ್ಯವೇ ಅಧಿಸೂಚನೆ ಹೊರಡಿಸಲಿದ್ದು, ಸದ್ಯ ಹುದ್ದೆಗಳ ಮೀಸಲಾತಿ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ಇದು ಪೂರ್ಣಗೊಂಡ ನಂತರ ಆಯೋಗದ ಅನುಮತಿಗಾಗಿ ಕಳಿಸಲಾಗುತ್ತದೆ ಎಂದು ಕಾರ್ಯದರ್ಶಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದ್ದಾರೆ.
ಮುಂದೆ ನಡೆಯಲಿರುವ ನೇಮಕದ ಮಾಹಿತಿ
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here ) ಮಾಡಿ.
ಸದ್ಯ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರ ಮತ್ತು ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದಲ್ಲದೆ ಮಾ. 30 ರಿಂದ ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುತ್ತಿದೆ. ಚುನಾವಣೆಯ ಸಂದರ್ಭದಲ್ಲಿಯೂ ಕೆಪಿಎಸ್‌ಸಿಯು ನೇಮಕ ಪ್ರಕ್ರಿಯೆಯನ್ನು ನಡೆಸುವ ಸಾಧ್ಯತೆಗಳಿವೆ.
ನೇಮಕದ ಮಾಹಿತಿಗೆ ನೀವು ನೋಡುತ್ತಿರಬೇಕಾದ ವೆಬ್‌ಸೈಟ್ ವಿಳಾಸ : https://kpsc.kar.nic.in
ಇದನ್ನೂ ಓದಿ : KPSC Recruitment 2023 : ಕೆಪಿಎಸ್‌ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಿರಾ? ಹೊಸದಾಗಿ ಹೆಸರು ನೊಂದಾಯಿಸಿಕೊಳ್ಳಿ!