ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ (KPSC Recruitment 2023) ಹುದ್ದೆಗಳ ನೇಮಕಕ್ಕೆ ಸದ್ಯವೇ ಅಧಿಸೂಚನೆ ಹೊರಡಿಸಲಿದೆ. ಯಾವೆಲ್ಲಾ ಹುದ್ದೆಗಳಿಗೆ ನೇಮಕ ನಡೆಯಲಿದೆ. ವಿದ್ಯಾರ್ಹತೆ ಏನು? ಎಂಬ ಮಾಹಿತಿ ಇಲ್ಲಿದೆ.
ಸಹಾಯಕ ನಿರ್ದೇಶಕರ ಹುದ್ದೆ
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ (ಗ್ರೂಪ್ ಎ) 23 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ ಮೂರು ಹುದ್ದೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಾಗಿದ್ದು, ಇದಕ್ಕೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುತ್ತದೆ.
ವಿದ್ಯಾರ್ಹತೆ : ಯಾವುದೇ ಎಂಜಿನಿಯರಿಂಗ್ ಪದವಿ ಪಡೆದವರು ಅಥವಾ ಬಿ.ಟೆಕ್ ಪದವೀಧರರು ಅಥವಾ ಬಿಸ್ನೆಸ್ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ವೇತನ ಎಷ್ಟು? : ರೂ. 45,300-88,300
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ 40 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ 19 ಹುದ್ದೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಾಗಿದ್ದು, ಇದಕ್ಕೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುತ್ತದೆ.
ವಿದ್ಯಾರ್ಹತೆ: ಯಾವುದೇ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವೇತನ ಎಷ್ಟು? : ರೂ. 45,300-83,900
ಪಶುವೈದ್ಯಾಧಿಕಾರಿ ಹುದ್ದೆ
ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶುವೈದ್ಯಾಧಿಕಾರಿಗಳ (ಗ್ರೂಪ್ ಎ)- 400 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ 58 ಹುದ್ದೆಗಳು ಬ್ಯಾಕ್‌ಲಾಗ್ ಹುದ್ದೆಗಳಾಗಿವೆ.
ವಿದ್ಯಾರ್ಹತೆ: ಯಾವುದೇ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಅಥವಾ ಭಾರತದಲ್ಲಿ ಕಾನೂನು ಮೂಲಕ ಸ್ಥಾಫಿಸಲಾದ ಪಶು ವಿಶ್ವವಿದ್ಯಾಲಯ ಅಥವಾ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ.50 ಅಂಕಗಳೊಂದಿಗೆ ಬಿ.ವಿ.ಎಸ್.ಸಿ ಅಥವಾ ಬಿ.ವಿ.ಎಸ್.ಸಿ ಮತ್ತು ಎ.ಹೆಚ್ ಪದವಿ ಹೊಂದಿರಬೇಕು.
ಭಾರತೀಯ ಪಶುವೈದ್ಯಕೀಯ ಪರಿಷತ್ತಿನ ಕಾಯ್ದೆ 1984 ರ ಅಡಿಯಲ್ಲಿ ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನಲ್ಲಿ ನೋಂದಣಿಯಾಗಿರಬೇಕು
ವೇತನ ಎಷ್ಟು? : ರೂ. 52,650-97,100
ಸಹಾಯಕ ಕೃಷಿ ಅಧಿಕಾರಿ ಹುದ್ದೆ
ಕೃಷಿ ಇಲಾಖೆಯಲ್ಲಿನ ಸಹಾಯಕ ಕೃಷಿ ಅಧಿಕಾರಿ (ಗ್ರೂಪ್ -ಬಿ) 368 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ 60 ಹುದ್ದೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಾಗಿದ್ದು, ಇದಕ್ಕೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುತ್ತದೆ. 8 ಬ್ಯಾಕ್‌ಲಾಗ್ ಹುದ್ದೆಗಳಾಗಿವೆ.
ವಿದ್ಯಾರ್ಹತೆ: ಶೇ.85 ರಷ್ಟು ಹುದ್ದೆಗಳಿಗೆ ಬಿಎಸ್ಸಿ (ಕೃಷಿ) ಅಥವಾ ಬಿಎಸ್ಸಿ (ಆನರ್ಸ್) ಕೃಷಿ ಹಾಗೂ ಶೇ.15 ರಷ್ಟು ಹುದ್ದೆಗಳಿಗೆ ಬಿ.ಟೆಕ್ (ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ)/ ಬಿಟೆಕ್ (ಆಹಾರ ತಂತ್ರಜ್ಞಾನ) ಅಥವಾ ಬಿ.ಎಸ್ಸಿ (ಕೃಷಿ ಮಾರುಕಟ್ಟೆ ಮತ್ತು ಸಹಕಾರ)/ ಬಿ.ಎಸ್ಸಿ(ಆನರ್ಸ್) ಕೃಷಿ, ಮಾರಾಟ ಮತ್ತು ಸಹಕಾರ/ ಬಿ.ಎಸ್ಸಿ (ಆನರ್ಸ್) ಆಗ್ರಿ ಬಿಸಿನೆಸ್ ಮ್ಯಾನೇಜ್ ಮೆಂಟ್ ಅಥವಾ ಬಿ.ಎಸ್ಸಿ. (ಕೃಷಿ ಜೈವಿಕ ತಂತ್ರಜ್ಞಾನ)/ ಬಿ.ಟೆಕ್ (ಜೈವಿಕ ತಂತ್ರಜ್ಞಾನ) ಅಥವಾ ಬಿ.ಎಸ್ಸಿ. (ಅಗ್ರಿಕಲ್ಚರಲ್ ಎಂಜಿನಿಯರಿಂಗ್) / ಬಿ.ಟೆಕ್ (ಅಗ್ರಿಕಲ್ಚರಲ್ ಎಂಜಿನಿಯರಿಂಗ್) ಮಾಡಿದವರು ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಎಷ್ಟು? : ರೂ.40,900-78,200
ವಯೋಮಿತಿ ಎಷ್ಟು?
ಸಾಮಾನ್ಯ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷಗಳು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38ವರ್ಷಗಳು. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ ಎಷ್ಟು ಪಾವತಿಸಬೇಕು?
ಸಾಮಾನ್ಯ ಅಭ್ಯರ್ಥಿಗಳು 600 ರೂ. ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಹಾಗೂ ಮಾಜಿ ಸೈನಿಕರು 50ರೂ. ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಲು ಅವಕಾಶ ನೀಡಲಾಗಿರುತ್ತದೆ.
ಪ್ರಕ್ರಿಯೆ ಶುಲ್ಕ (processing fees)35 ರೂ.ಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳೂ ಸೇರಿದಂತೆ ಎಲ್ಲ ಅಭ್ಯರ್ಥಿಗಳು ಪಾವತಿಸಬೇಕಿರುತ್ತದೆ. ಈ ಶುಲ್ಕ ಪಾವತಿಸದಿದ್ದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ.
ನೇಮಕ ಹೇಗೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಗಳಿಸಿದ ಶೇಕಡಾವಾರು ಅಂಕಗಳ ಆಧಾರದಲ್ಲಿ ನೇಮಕಮಾಡಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯ ವಿಷಯಗಳು, ಸಿಲಬಸ್ ಕುರಿತು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗುತ್ತದೆ.
ಈ ನೇಮಕಾತಿ ಪ್ರಸ್ತಾವನೆಗಳನ್ನು ಅಂತಿಮಗೊಳಿಸಲಾಗಿದ್ದು, ಆಯೋಗವು ಒಪ್ಪಿಗೆ ನೀಡುತ್ತಿದ್ದಂತೆಯೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಕೆಪಿಎಸ್‌ಸಿಯ ಕಾರ್ಯದರ್ಶಿ ವಿಕಾಸ್ ಕಿಶೋರ್ ಸುರಳ್ಕರ್ ಮಂಗಳವಾರ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.
ನೇಮಕದ ಮಾಹಿತಿಗೆ ನೀವು ನೋಡುತ್ತಿರಬೇಕಾದ ವೆಬ್‌ಸೈಟ್ ವಿಳಾಸ : https://kpsc.kar.nic.in
ಇದನ್ನೂ ಓದಿ : KPSC Recruitment 2023 : ಕೆಪಿಎಸ್‌ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಿರಾ? ಹೊಸದಾಗಿ ಹೆಸರು ನೊಂದಾಯಿಸಿಕೊಳ್ಳಿ!