Site icon Vistara News

KPSC Recruitment : ಅಸಿಸ್ಟೆಂಟ್‌ ಎಂಜಿನಿಯರ್‌ ನೇಮಕ; ಅಂತಿಮ ಆಯ್ಕೆ ಪಟ್ಟಿ ಪ್ರಕಟ

KPSC Recruitment

ಕೆಪಿಎಸ್‌ಸಿ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಲೋಕೋಪಯೋಗಿ ಇಲಾಖೆಯಲ್ಲಿನ ಸಹಾಯಕ ಎಂಜಿನಿಯರ್‌ ನೇಮಕಕ್ಕೆ ಸಂಬಂಧಿಸಿದಂತೆ (KPSC Recruitment) ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಿದೆ. ಒಟ್ಟು 600+60 (ಹೈಕ) ಹುದ್ದೆಗಳಿಗೆ ಈ ನೇಮಕ ನಡೆಯುತ್ತಿದೆ.

ಆಯೋಗದ ವೆಬ್‌ಸೈಟ್‌ನಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಹೆಸರು, ವಿಳಾಸ, ಜನ್ಮದಿನಾಂಕ, ವಿದ್ಯಾರ್ಹತೆ, ಪಡೆದ ಅಂಕಗಳ ವಿವರವನ್ನು ಒದಗಿಸಲಾಗಿದೆ. ಇದರ ಜತೆಯಲ್ಲಿ ಕಟ್‌ಆಫ್‌ ಅಂಕಗಳ ಪಟ್ಟಿಯನ್ನೂ ಒದಗಿಸಲಾಗಿದೆ.

ಜನವರಿ 7 ರಂದು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಈಗ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. ಈ ನೇಮಕಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಲ್ಲಿ (KSAT) ಪ್ರಕರಣವಿದ್ದು, ಈ ಅಂತಿಮ ಆಯ್ಕೆಪಟ್ಟಿಯು ಇದರ ತೀರ್ಮಾನಕ್ಕೆ ಒಳಪಟ್ಟಿರುತ್ತದೆ ಎಂದು ಕೆಪಿಎಸ್‌ಸಿಯು ತಿಳಿಸಿದೆ.

ಈ ನೇಮಕಕ್ಕೆ ಸಂಬಂಧಿಸಿದಂತೆ 30-07-2020 ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. 2021ರ ಡಿಸೆಂಬರ್‌ 14ರಂದು ಲಿಖಿತ ಪರೀಕ್ಷೆ ನಡೆಸಲಾಗಿತ್ತು.

ಅಂತಿಮ ಆಯ್ಕೆ ಪಟ್ಟಿ ನೋಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಇದನ್ನೂ ಓದಿ: Teacher Recruitment : ಕೂಡಲೇ ಶಿಕ್ಷಕರ ನೇಮಕ ಪ್ರಕ್ರಿಯೆ ಪೂರ್ಣಗೊಳಿಸಲು ಆಯ್ಕೆಯಾದ ಅಭ್ಯರ್ಥಿಗಳ ಒತ್ತಾಯ

Exit mobile version