Site icon Vistara News

KPSC Recruitment : ಗ್ರೂಪ್‌ ಸಿ ಹುದ್ದೆಗಳಿಗೆ ನೇಮಕ; ಅಂತಿಮ ಆಯ್ಕೆ ಪಟ್ಟಿ ಪ್ರಕಟ

kpsc

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಗ್ರೂಪ್‌ ʻಸಿʼ ಹುದ್ದೆಗಳ ನೇಮಕದ ಒಟ್ಟು ಐದು ಅಧಿಸೂಚನೆಗೆ (KPSC Recruitment) ಸಂಬಂಧಿಸಿದಂತೆ ಅಂತಿಮ ಆಯ್ಕೆ ಪಟ್ಟಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಸರ್ಕಾರದ ಸಚಿವಾಲಯದ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆಯಲ್ಲಿನ ಪ್ರಾರೂಪಣಾ ಸಹಾಯಕರ 3 ಹುದ್ದೆ, ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕಸಹಾಯಕರ 72 ಹೈ.ಕ. ಹುದ್ದೆಗಳಿಗೆ, ಸಹಕಾರ ಸಂಘಗಳ ಲೆಕ್ಕಪರಿಶೋಧನೆ ಇಲಾಖೆಯಲ್ಲಿನ ಲೆಕ್ಕ ಪರಿಶೋಧಕರ 20 ಹೈ.ಕ. ಹುದ್ದೆಗಳಿಗೆ ಹಾಗೂ ಪೌರಾಡಳಿ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರ 66 ಹೈ.ಕ. ಹುದ್ದೆಗಳಿಗೆ, ಕೃಷಿ ಮಾರಾಟ ಇಲಾಖೆಯಲ್ಲಿನ ಮಾರುಕಟ್ಟೆ ಮೇಲ್ವಿಚಾರಕರ 6 ಹೈ.ಕ. ಹುದ್ದೆಗಳಿಗೆ ಸಂಬಂಧಿಸಿದಂತೆ ಈ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಈಗಾಗಲೇ ಆಯೋಗವು ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿದ್ದ ಹಿನ್ನೆಲೆಯಲ್ಲಿ ಮತ್ತೆ ಅಂತಿಮ ಆಯ್ಕೆಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲ ಎಂದು ಆಯೋಗವು ಸ್ಪಷ್ಟವಾಗಿ ತಿಳಿಸಿದೆ.

ಅಂತಿಮ ಆಯ್ಕೆ ಪಟ್ಟಿಯನ್ನು ನೋಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಪರೀಕ್ಷಾ ವೇಳಾಪಟ್ಟಿ ಪ್ರಕಟ

ಲೋಕ ಸೇವಾ ಆಯೋಗವು ಕಳೆದ ಮಾರ್ಚ್‌ನಲ್ಲಿ ವಿವಿಧ ಗ್ರೂಪ್‌-ಸಿ ವೃಂದದ ಹುದ್ದೆಗಳ ನೇಮಕಕ್ಕಾಗಿ ಹೊರಡಿಸಿದ ಅಧಿಸೂಚನೆಗೆ ಸಂಬಂಧಿಸಿದಂತೆ ಸ್ಪರ್ಧಾತ್ಮಕ ಮತ್ತು ಕನ್ನಡ ಭಾಷಾ ಪರೀಕ್ಷೆಗಳು ನಡೆಯುವ ಸಂಭವನೀಯ ದಿನಾಂಕಗಳನ್ನು ಪ್ರಕಟಿಸಿದೆ. ನವೆಂಬರ್‌ 4 ರಿಂದ ಡಿಸೆಂಬರ್‌ 17 ರವರೆಗೆ ಈ ಪರೀಕ್ಷೆಗಳು ನಡೆಯಲಿವೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಮೊದಲಿಗೆ ಎಲ್ಲ ಗ್ರೂಪ್‌ ಸಿ ವೃಂದದ ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯು ನವೆಂಬರ್‌ 4 ರಂದು ನಡೆಯಲಿದೆ. ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರ 242 (ಉಳಿಕೆ ಮೂಲವೃಂದ) ಹುದ್ದೆಗಳಿಗೆ ಹಾಗೂ ಸಹಕಾರ ಸಂಘಗಳ ನಿರೀಕ್ಷಕರ 47 ಹುದ್ದೆಗಳಿಗೆ ನವೆಂಬರ್‌ 5 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ.

ಸ್ಪರ್ಧಾತ್ಮಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ನೋಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಕಲ್ಯಾಣ ಕರ್ನಾಟಕ ವೃಂದದ ಸಹಾರ ಸಂಘಗಳ ನಿರೀಕ್ಷಕರ 53 ಹುದ್ದೆಗಳಿಗೆ ಡಿಸೆಂಬರ್‌ 03 ರಂದು ಪರೀಕ್ಷೆ ನಡೆಯಲಿದೆ. ರಾಜ್ಯ ಲೆಕ್ಕ ಪರಿಶೋಧನೆ ಮತ್ತ ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರ 67 (ಉಳಿಕೆ ಮೂಲವೃಂದ) ಹುದ್ದೆಗಳಿಗೆ ಡಿಸೆಂಬರ್‌ 17 ರಂದು ಸ್ಪರ್ಧಾತ್ಮ ಪರೀಕ್ಷೆ ನಡೆಯಲಿದೆ ಎಂದು ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ : https://kpsc.kar.nic.in

ಇದನ್ನೂ ಓದಿ : IBPS RRB Notification 2023 : ಗ್ರಾಮೀಣ ಬ್ಯಾಂಕಿನ ಎಲ್ಲ ಹುದ್ದೆಗಳಿಗೂ ಕನ್ನಡದಲ್ಲಿ ಏಕಿಲ್ಲ ಪರೀಕ್ಷೆ?

Exit mobile version