ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ (ನಗರಸಭೆ/ಪುರಸಭೆ/ಪಟ್ಟಣ ಪಂಚಾಯಿತಿ) ವಿವಿಧ ಗ್ರೂಪ್ “ಸಿ” ಹುದ್ದೆಗಳಿಗೆ ಮತ್ತು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿನ ಸಹಾಯಕ ನಗರ ಯೋಜಕರ ಹುದ್ದೆಗಳಿಗೆ ನಡೆಸಲಿರುವ ನೇಮಕಾತಿ (KPSC Recruitment) ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
ಜನವರಿ 21 ಮತ್ತು 22 ರಂದು ಕಡ್ಡಾಯ ಕನ್ನಡ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆ ಬರೆಯಬೇಕಾಗಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಆಯೋಗದ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಪ್ರವೇಶ ಪತ್ರದೊಂದಿಗೆ ಪರೀಕ್ಷೆಗೆ ಹಾಜರಾಗುವುದು ಕಡ್ಡಾಯ ಎಂದು ಕೆಪಿಎಸ್‌ಸಿ ತಿಳಿಸಿದೆ. ಜನವರಿ 13 ರಿಂದ ಡೌನ್‌ಲೋಡ್ ಮಾಡಿಕೊಳ್ಳಲು ಲಿಂಕ್ ಒದಗಿಸಲಾಗುತ್ತದೆ.
ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವಾಗ ತಾಂತ್ರಿಕ ಸಮಸ್ಯೆಗಳು ಎದುರಾದಲ್ಲಿ ಸಹಾಯವಾಣಿ ಸಂಖ್ಯೆ 18005728707 ಅನ್ನು ಸಂಪರ್ಕಿಸಬೇಕೆಂದು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ಮತ್ತು ಪ್ರವೇಶ ಪತ್ರಡೌನ್ ಲೋಡ್ ಮಾಡಿಕೊಳ್ಳಲು ವೆಬ್‌ಸೈಟ್ ವಿಳಾಸ: https://kpsc.kar.nic.in/
ಇದನ್ನೂ ಓದಿ | New year 2023 | ನೂತನ ವರ್ಷದ ಆರಂಭದಲ್ಲೇ ನಡೆಯಲಿದೆ ವಿವಿಧ ಹುದ್ದೆಗಳಿಗೆ ನೇಮಕಾತಿ ಪರೀಕ್ಷೆ