Site icon Vistara News

KPSC Recruitment : ಕಾರ್ಯಪಾಲಕ ಎಂಜಿನಿಯರ್‌ ನೇಮಕಕ್ಕೆ ಪರೀಕ್ಷೆ; ಕೀ ಉತ್ತರ ಪ್ರಕಟ

KPSC Key answers

ಕೆಪಿಎಸ್‌ಸಿ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ರಾಜ್ಯದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ (RDWSD Karnataka) ಕಾರ್ಯಪಾಲಕ ಎಂಜಿನಿಯರ್‌ ನೇಮಕಕ್ಕೆ (KPSC Recruitment) ನಡೆಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಕೀ ಉತ್ತರವನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ಪರೀಕ್ಷೆ ಬರೆದ ಅಭ್ಯರ್ಥಿಗಳು ಈ ಕೀ ಉತ್ತರವನ್ನು ಪರಿಶೀಲಸಬಹುದಾಗಿದೆ. ಈ ಹುದ್ದೆಗಳ ನೇಮಕಕ್ಕೆ ಜೂನ್‌ 16 ರಂದು ಪರೀಕ್ಷೆ ನಡೆಸಲಾಗಿತ್ತು. ಈ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಜೂನ್‌ 26 ರಂದು ಕೊನೆಯ ದಿನವಾಗಿರುತ್ತದೆ.

ಕೀ ಉತ್ತರವನ್ನು ನೋಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಎರಡೂ ಪತ್ರಿಕೆಗಳ ಕೀ ಉತ್ತರಗಳನ್ನು ಪ್ರತ್ಯೇಕವಾಗಿ ನೀಡಲಾಗಿದೆ. ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿಯೇ ಆಕ್ಷೇಪಣೆ ಸಲ್ಲಿಸಬೇಕಿರುತ್ತದೆ. ಆಕ್ಷೇಪಣೆಯ ಮಾದರಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಪ್ರತಿ ಆಕ್ಷೇಪಣೆಗೆ 50 ರೂ. ಶುಲ್ಕವನ್ನು ಪಾವತಿಸಬೇಕಿರುತ್ತದೆ. ಡಿಡಿಯ ಮೂಲಕ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಇದರ ಜತೆಯಲ್ಲಿಯೇ ಮುಖ್ಯ ವಿದ್ಯುತ್ ಪರಿವೀಕ್ಷಣಾಲಯದಲ್ಲಿನ ಸಹಾಯಕ ವಿದ್ಯುತ್ ಪರಿವೀಕ್ಷಕರ (ಆರ್.ಪಿ.ಸಿ.) ನೇಮಕ್ಕಕೆ ನಡೆಸಿದ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಜೂನ್ 4 ರಂದು ಪರೀಕ್ಷೆ ನಡೆಸಲಾಗಿತ್ತು. ಜೂನ್‌ 12 ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿ ಈಗ ಪರಿಷ್ಕೃತ ಕೀ ಉತ್ತರ ಪ್ರಕಟಿಸಲಾಗಿದೆ. ಇದಕ್ಕೆ ಮತ್ತೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲ ಎಂದು ಆಯೋಗವು ಸ್ಪಷ್ಟಪಡಿಸಿದೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ : https://kpsc.kar.nic.in

ಇದನ್ನೂ ಓದಿ : PDO Recruitment 2023 : ಪಿಡಿಒ ನೇಮಕಕ್ಕೆ ಮುಂದಾದ ಸರ್ಕಾರ; ಅರ್ಜಿ ಸಲ್ಲಿಸಲು ಈಗಲೇ ರೆಡಿಯಾಗಿ!

Exit mobile version