Site icon Vistara News

KPSC Recruitment : ಹೈಕದ ಗ್ರೂಪ್‌ ಸಿ ಹುದ್ದೆಗಳಿಗೆ ಪರೀಕ್ಷೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ

KPSC Recruitment

ಕೆಪಿಎಸ್‌ಸಿ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಒಟ್ಟು ಮೂರು ಅಧಿಸೂಚನೆಗೆ (KPSC Recruitment) ಸಂಬಂಧಿಸಿದಂತೆ ಹೈದರಾಬಾದ್‌ ಕರ್ನಾಟಕ ವೃಂದದ ಗ್ರೂಪ್‌ ʻಸಿʼ ಹುದ್ದೆಗಳ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಮಾರ್ಚ್‌ 18 ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಯಲಿದ್ದು, ಮಾ.19 ರಂದು ಪತ್ರಿಕೆ-1 ಮತ್ತು ಪತ್ರಿಕೆ-2 ರ ಪರೀಕ್ಷೆಗಳು ನಡೆಯಲಿವೆ. ಕನ್ನಡ ಭಾಷಾ ಪರೀಕ್ಷೆಯು ಮಧ್ಯಾಹ್ನ 3 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ. ಪತ್ರಿಕೆ -1 ರ ಪರೀಕ್ಷೆಯು ಮಾ.19 ರ ಭಾನುವಾರದಂದು ಬೆಳಗ್ಗೆ 10ಗಂಟೆಯಿಂದ 11.30 ರವರೆಗೆ ನಡೆಯಲಿದೆ. ಪತ್ರಿಕೆ-2 ರ ಪರೀಕ್ಷೆಯು ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ ಎಂದು ಕೆಪಿಎಸ್‌ಸಿಯು ತಿಳಿಸಿದೆ.

ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿ -5, ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು -6, ಆರ್ಥಿಕ ಮತ್ತು ಸಾಂಖ್ಯೆಕ ನಿರ್ದೇಶನಾಲಯದಲ್ಲಿನ ಸಾಂಖ್ಯಿಕ ನಿರೀಕ್ಷಕರ 17 ಹುದ್ದೆಗಳಿಗೆ ಈ ಪರೀಕ್ಷೆ ನಡೆಯುತ್ತಿದೆ.

ಪರೀಕ್ಷೆಯ ವೇಳಾಪಟ್ಟಿಯನ್ನು ನೋಡಲು ಇಲ್ಲಿ ಕ್ಲಿಕ್‌ (Click Here) ಮಾಡಿ.

ಈ ಪರೀಕ್ಷೆಯ ಪ್ರವೇಶ ಪತ್ರವನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಒದಗಿಸಲಾಗುತ್ತದೆ. ಈ ಕುರಿತು ಮುಂದೆ ಮಾಹಿತಿ ನೀಡಲಾಗುವುದು ಎಂದು ಕೆಪಿಎಸ್‌ಸಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ : https://kpsc.kar.nic.in

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಇದನ್ನೂ ಓದಿ : KPSC Recruitment 2023 : ಎಫ್‌ಎಸ್‌ಎಲ್‌ ಸಹಾಯಕ ನಿರ್ದೇಶಕರ ನೇಮಕಕ್ಕೆ ಪರೀಕ್ಷೆ; ಪ್ರವೇಶ ಪತ್ರ ಬಿಡುಗಡೆ

Exit mobile version