Site icon Vistara News

KPSC-Result | ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಫಲಿತಾಂಶ ಪ್ರಕಟ

kpsc recruitment 2023 result of compulsory kannada examination held february 25 published

KPSC Recruitment 2023

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಆಯುಷ್‌ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕಾಗಿ ಹೊರಡಿಸಿದ್ದ ಅಧಿಸೂಚನೆಗೆ ಸಂಬಂಧಿಸಿದಂತೆ ನಡೆಸಲಾಗಿದ್ದ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯ ಫಲಿತಾಂಶವನ್ನು (KPSC-Result) ಪ್ರಕಟಿಸಿದೆ.

ಒಟ್ಟು ೧, ೫೯೧ ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ಅರ್ಹತೆ ಪಡೆದಿದ್ದು, ಅವರುಗಳ ರಿಜಿಸ್ಟರ್‌ ನಂಬರ್‌ ಅನ್ನು ಕೆಪಿಎಸ್‌ಸಿಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಕಳೆದ ಡಿಸೆಂಬರ್‌ 15 ರಂದು ಈ ಪರೀಕ್ಷೆ ನಡೆಸಲಾಗಿತ್ತು.

ಫಲಿತಾಂಶ ನೋಡಲು ಲಿಂಕ್‌: https://kpsc.kar.nic.in/KANRES-15-12-2021.TXT

ಇದು ಅರ್ಹತಾ ಪರೀಕ್ಷೆಯಾಗಿದ್ದು, ಅಭ್ಯರ್ಥಿಯು ಈ ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆಯದ ಹೊರತು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.

150 ಅಂಕಗಳಿಗೆ ನಡೆದ ಈ ಪರೀಕ್ಷೆಯಲ್ಲಿ ಅಭ್ಯರ್ಥಿಯು ಕನಿಷ್ಠ 50 ಅಂಕವನ್ನು ಪಡೆದರೆ ಮಾತ್ರ ಅರ್ಹತೆ ಪಡೆಯುತ್ತಾರೆ. ಈ ಪರೀಕ್ಷೆಯಲ್ಲಿ ಎಸ್‌ಎಸ್‌ಎಲ್‌ಸಿ ಹಂತದಲ್ಲಿನ ಪ್ರಥಮ ಭಾಷೆ ಕನ್ನಡವನ್ನು ಮಾನದಂಡವನ್ನಾಗಿಟ್ಟುಕೊಂಡು ಸಿದ್ಧಪಡಿಸಲಾಗಿದ್ದ ಪ್ರಶ್ನೆ ಪತ್ರಿಕೆಯನ್ನು ನೀಡಲಾಗಿತ್ತು.

ಇದನ್ನೂ ಓದಿ | KPSC Recruitment 2022 | ಗ್ರೂಪ್‌ ಬಿ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ

Exit mobile version