ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ರಾಜ್ಯದ ವಿವಿಧ ನ್ಯಾಯಾಂಗ ಘಟಕಗಳಲ್ಲಿನ ದ್ವಿತೀಯ ದರ್ಜೆ ಸಹಾಯಕರ (ಎಸ್‌ಡಿಎ) (KPSC SDA Recruitment) ನೇಮಕಕ್ಕೆ ಸಂಬಂಧಿಸಿದಂತೆ ಹೆಚ್ಚುವರಿ ಆಯ್ಕೆ ಪಟ್ಟಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
2018 ನೇ ಸಾಲಿನ ಈ ನೇಮಕಕ್ಕೆ ಸಂಬಂಧಿಸಿದಂತೆ ಕಳೆದ ಜನವರಿಯಲ್ಲಿ ಅಂತಿಮ ಅಧಿಸೂಚನೆ ಪ್ರಕಟಗೊಂಡಿತ್ತು. ಒಟ್ಟು 575 (494+81ಹೈಕ) ಕಿರಿಯ ಸಹಾಕರು/ ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಹೆಚ್ಚುವರಿ ಆಯ್ಕೆ ಪಟ್ಟಿ ಇಲ್ಲಿದೆ: https://kpsc.kar.nic.in/Addnl%20SDA%202018.pdf
ಈ ನೇಮಕಕ್ಕೆ ಸಂಬಂಧಿಸಿದಂತೆ 2021ರ ಮಾರ್ಚ್‌ನಲ್ಲಿ ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು. ಈಗ ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಹೆಚ್ಚುವರಿ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ. ಜತೆಗೆ ಕಟ್ ಆಫ್ ಅಂಕಗಳ ಮಾಹಿತಿಯೂ ಇದೆ. ಒಟ್ಟು ಆರು ಅಭ್ಯರ್ಥಿಗಳು ಹೆಚ್ಚುವರಿ ಆಯ್ಕೆಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಕಲ್ಯಾಣ ಕರ್ನಾಟಕಕ್ಕೆ ಮೀಸಲಾದ ಹುದ್ದೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಎಸ್‌ಸಿಯು ತಿಳಿಸಿದೆ.
ಈ ನೇಮಕಾತಿಯ ಕುರಿತ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್: https://kpsc.kar.nic.in/index.html
ಇದನ್ನೂ ಓದಿ| KPSC Recruitment 2022 | ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ