Site icon Vistara News

KPTCL Recruitment 2022 | ಪರೀಕ್ಷೆಯ ಕೀ ಉತ್ತರ ಪ್ರಕಟಿಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ

KCET Result 2023

kea

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್‌) ನಿಗಮದಲ್ಲಿ ಹಾಗೂ ವಿವಿಧ ವಿದ್ಯುತ್‌ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್‌, ಕಿರಿಯ ಎಂಜಿನಿಯರ್‌ ಮತ್ತು ಕಿರಿಯ ಸಹಾಯಕ ಹುದ್ದೆಗಳ ನೇಮಕಕ್ಕೆ  (KPTCL Recruitment 2022) ನಡೆಸಿದ್ದ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ.

ಕೆಪಿಟಿಸಿಎಲ್‌ ಪರವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈ ಪರೀಕ್ಷೆಗಳನ್ನು ನಡೆಸಿದ್ದು, ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಕೀ ಉತ್ತರ ಪ್ರಕಟಿಸಲಾಗಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಇದನ್ನು ಪರಿಶೀಲಿಸಬಹುದಾಗಿದೆ. ಸಹಾಯಕ ಎಂಜಿನಿಯರ್‌, ಕಿರಿಯ ಎಂಜಿನಿಯರ್‌ ಹುದ್ದೆಗಳಿಗೆ ಜುಲೈ 23 ಮತ್ತು ೨೪ ರಂದು ಪರೀಕ್ಷೆ ನಡೆಸಲಾಗಿತ್ತು. ಕಿರಿಯ ಸಹಾಯಕ ಹುದ್ದೆಗಳಿಗೆ ಆಗಸ್ಟ್‌ 7 ರಂದು ಪರೀಕ್ಷೆ ನಡೆಸಲಾಗಿತ್ತು.

ಆಕ್ಷೇಪಣೆ ಸಲ್ಲಿಸಲು ಅವಕಾಶ
ಈ ಕೀ ಉತ್ತರಗಳಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಆಸಕ್ತರು ಆಧಾರ ಸಹಿತ ತಮ್ಮ ಆಕ್ಷೇಪಣೆಗಳನ್ನು recruitment 2021 kea@ gmail.com ಇ-ಮೇಲ್‌ ವಿಳಾಸಕ್ಕೆ ಸೆಪ್ಟೆಂಬರ್‌ 2 ರ ಸಂಜೆ 5.30 ಗಂಟೆಯ ಒಳಗೆ ಕಳುಹಿಸಿಕೊಡಬಹುದಾಗಿದೆ. ಆಕ್ಷೇಪಣೆಗಳನ್ನು ಸಲ್ಲಿಸುವಾಗ ಹುದ್ದೆಯ ಮತ್ತು ಪತ್ರಿಕೆಯ ಹೆಸರು, ವರ್ಷನ್‌ ಕೋಡ್‌, ಪ್ರಶ್ನೆ ಸಂಖ್ಯೆ ಮತ್ತು ನಿರ್ದಿಷ್ಟವಾದ ನಿಗದಿತ ಆಕ್ಷೇಪಣೆಯನ್ನು ಎಲ್ಲ ವಿವರಗಳೊಂದಿಗೆ ಸಲ್ಲಿಸಬೇಕಿರುತ್ತದೆ.

ಹುದ್ದೆಯ ವಿವರ, ಪ್ರಶ್ನೆ ಸಂಖ್ಯೆ ಇಲ್ಲದ ಆಧಾರ ರಹಿತ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ವಿಷಯ ತಜ್ಞರ ಸಮಿತಿಯು ನಿರ್ಧರಿಸಿ ನೀಡುವ ಕೀ ಉತ್ತರಗಳೇ ಅಂತಿಮವಾಗಿರುತ್ತವೆ ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ.

ಕೀ ಉತ್ತರ ನೋಡಲು ಮತ್ತು ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌: https://cetonline.karnataka.gov.in/kea/

ಇದನ್ನೂ ಓದಿ| ವಿಶ್ವವಿದ್ಯಾಲಯಗಳಿಗೆ ಬೋಧಕರ ನೇಮಕಕ್ಕೆ ಕೆಇಎ ಮೂಲಕ ಪರೀಕ್ಷೆ

Exit mobile version