Site icon Vistara News

KPTCL Recruitment 2022 : ಕೆಪಿಟಿಸಿಎಲ್‌ ನೇಮಕ; ದಾಖಲೆ ಪರಿಶೀಲನೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟ

KPTCL

KPTCL Recruitment

ಬೆಂಗಳೂರು: ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್‌) ನಿಗಮದಲ್ಲಿ ಹಾಗೂ ವಿವಿಧ ವಿದ್ಯುತ್‌ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್‌, ಕಿರಿಯ ಎಂಜಿನಿಯರ್‌ ಮತ್ತು ಕಿರಿಯ ಸಹಾಯಕ ಹುದ್ದೆಗಳ ನೇಮಕಕ್ಕೆ  (KPTCL Recruitment 2022) ಸಂಬಂಧಿಸಿದಂತೆ ದಾಖಲೆ ಪರಿಶೀಲನೆಗೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಕೆಪಿಟಿಸಿಎಲ್‌ ವೆಬ್‌ಸೈಟ್‌ನಲ್ಲಿ ಈ ಪಟ್ಟಿ ಪ್ರಕಟಗೊಂಡಿದ್ದು, ಇದು ದಾಖಲಾತಿ ಪರಿಶೀಲನೆಗೆ ಸಂಬಂಧಿಸಿದ ಪಟ್ಟಿಯಾಗಿದೆ. ಇದು ಆಯ್ಕೆ ಪಟ್ಟಿಯಲ್ಲ ಎಂದು ಕೆಪಿಟಿಸಿಎಲ್‌ ಸ್ಪಷ್ಟಪಡಿಸಿದೆ. ದಾಖಲಾತಿ ಪರಿಶೀಲನೆಯ ದಿನಾಂಕವನ್ನು ಮುಂದೆ ತಿಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನೋಡಲು ಇಲ್ಲಿ ಕ್ಲಿಕ್‌ (Click Here) ಮಾಡಿ

ಕೆಪಿಟಿಸಿಎಲ್‌ ಪರವಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈ ನೇಮಕಕ್ಕೆ ಸಂಬಂಧಿಸಿದಂತೆ ಪರೀಕ್ಷೆಗಳನ್ನು ನಡೆಸಿದ್ದು, ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ಹುದ್ದೆವಾರು ಅರ್ಹತಾ ಪಟ್ಟಿಗಳನ್ನು ಫೆಬ್ರವರಿ 4 ಮತ್ತು 7 ರಂದು ಕೆಇಎ ಪ್ರಕಟಿಸಿತ್ತು. ಸಹಾಯಕ ಎಂಜಿನಿಯರ್‌, ಕಿರಿಯ ಎಂಜಿನಿಯರ್‌ ಹುದ್ದೆಗಳಿಗೆ ಕಳೆದ ಜುಲೈ 23 ಮತ್ತು 24 ರಂದು ಪರೀಕ್ಷೆ ನಡೆಸಲಾಗಿತ್ತು. ಕಿರಿಯ ಸಹಾಯಕ ಹುದ್ದೆಗಳಿಗೆ ಕಳೆದ ಆಗಸ್ಟ್‌ 7 ರಂದು ಪರೀಕ್ಷೆ ನಡೆಸಲಾಗಿತ್ತು.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಇದನ್ನೂ ಓದಿ : KMF SHIMUL Recruitment 2023 : ಹಾಲು ಒಕ್ಕೂಟದಲ್ಲಿ 194 ಹುದ್ದೆ; ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ

Exit mobile version