ಬೆಂಗಳೂರು: ನವೆಂಬರ್ 26ರಂದು ನಡೆಯಬೇಕಿದ್ದ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗಾಗಿನ ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯನ್ನು (Karnataka State Eligibility Test -KSET- for Assistant Professorship) ದಿಢೀರ್ ಆಗಿ ಮುಂದೂಡಲಾಗಿದೆ (Exam Postpone). ಇದನ್ನು ಮುಂದಿನ ಡಿಸೆಂಬರ್ 31ಕ್ಕೆ ನಡೆಸಲು (KSET Exam) ತಾತ್ಕಾಲಿಕ ದಿನಾಂಕವನ್ನು ನಿಗದಿಪಡಿಸಲಾಗಿದೆ (KSET 2023 Date Postponed). ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಈ ಪರೀಕ್ಷೆಯನ್ನು ನಡೆಸುತ್ತದೆ.
ಅಕ್ಟೋಬರ್ 28 ಮತ್ತು 29ರಂದು ನಿಗಮ ಮತ್ತು ಮಂಡಳಿಗಳಲ್ಲಿನ ಖಾಲಿ ಹುದ್ದೆಗಾಗಿ ನಡೆದ ನೇಮಕಾತಿ ಪರೀಕ್ಷೆಯಲ್ಲಿ ಭಾರಿ ಪ್ರಮಾಣದ ಅಕ್ರಮಗಳು ನಡೆದಿವೆ ಎಂಬ ಆರೋಪ ಕೇಳಿಬಂದಿದೆ. ಕಲಬುರಗಿಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ ನಡೆಸಲಾಗಿದೆ ಎಂದು ಕೇಸು ದಾಖಲಾಗಿದ್ದು, ಹಲವರನ್ನು ಬಂಧಿಸಲಾಗಿದೆ. ಪ್ರಕರಣದ ಕಿಂಗ್ ಪಿನ್ ಆಗಿರುವ ಆರ್.ಡಿ ಪಾಟೀಲ್ ಎಂಬಾತ ಈ ಹಿಂದೆ ನಡೆದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಪರೀಕ್ಷೆಯ ಅಕ್ರಮದಲ್ಲೂ ಭಾಗಿಯಾಗಿದ್ದ. ನಾಲ್ಕು ದಿನದ ಹಿಂದೆ ಆತನನ್ನು ಬಂಧಿಸುವ ಪ್ರಯತ್ನವೂ ವಿಫಲವಾಗಿದೆ.
*ಕೆ-ಸೆಟ್ ಪರೀಕ್ಷೆ ಮುಂದಕ್ಕೆ*
— KEA (@KEA_karnataka) November 8, 2023
ನ.26 ರಂದು ನಡೆಸಲು ಉದ್ದೇಶಿಸಿದ್ದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯನ್ನು (ಕೆ-ಸೆಟ್ 23) ಮುಂದೂಡಲಾಗಿದೆ.
ಡಿ 31ರಂದು ನಡೆಸಲು ತಾತ್ಕಾಲಿಕ ದಿನಾಂಕವನ್ನು ನಿಗದಿ ಮಾಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. @CMofKarnataka@drmcsudhakar #kset
ನಿಗಮ ಮಂಡಳಿ ನೇಮಕಾತಿ ಪರೀಕ್ಷೆಗಳನ್ನು ನಡೆಸಿದ ಕರ್ನಾಟಕ ಪರೀಕ್ಷಾ ಪ್ರಾಧಿಕಾರವೇ (Karnataka Education Authority-KEA) KSET ಪರೀಕ್ಷೆಯನ್ನು ನಡೆಸುತ್ತಿದೆ. ಹೀಗಾಗಿ ಅಕ್ರಮದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
ಪರೀಕ್ಷಾ ಅಕ್ರಮದ ಆರೋಪದ ನಡುವೆ ಮತ್ತೊಂದು ಪರೀಕ್ಷೆ ನಡೆಸುವುದು ಬೇಡ ಎಂಬ ಕಾರಣಕ್ಕಾಗಿ ನವೆಂಬರ್ 26ರಂದು ನಡೆಯಬೇಕಿದ್ದ ಕೆ ಸೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಆದರೆ, ಮುಂದಿನ ದಿನಾಂಕ ಇನ್ನೂ ಸರಿಯಾಗಿ ನಿರ್ಧಾರವಾಗಿಲ್ಲ. ಡಿಸೆಂಬರ್ 31 ಎಂದು ಈಗ ತಾತ್ಕಾಲಿಕ ದಿನಾಂಕ ನಿಗದಿಯಾಗಿದೆ.
ಇದನ್ನೂ ಓದಿ: Job News: ಇಂಡಿಯನ್ ಓವರ್ಸೀಸ್ ಬ್ಯಾಂಕ್‌ನಲ್ಲಿದೆ 66 ಸ್ಪೆಷಲಿಸ್ಟ್ ಆಫೀಸರ್ ಹುದ್ದೆ
ಕೆ-ಸೆಟ್ ಪರೀಕ್ಷೆ ಎದುರಿಸಲು ಅಕ್ಕನ ತರಬೇತಿ
ಪ್ರಾಧ್ಯಾಪಕ ಹುದ್ದೆಯನ್ನು ಪಡೆಯಲು ಅತ್ಯಗತ್ಯವಾಗಿರುವ ಕೆ-ಸೆಟ್ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವ ನಿಟ್ಟಿನಲ್ಲಿ ಆಕಾಂಕ್ಷಿಗಳಿಗೆ ಸಹಾಯ ಮಾಡಲು ಈಗ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಮುಂದಾಗಿದೆ.
ಪರೀಕ್ಷೆಗೆ ವಿದ್ಯಾರ್ಥಿನಿಯರನ್ನು ಸಜ್ಜುಗೊಳಿಸುವುದಕ್ಕಾಗಿ ಆನ್ ಮತ್ತು ಯೂಟ್ಯೂಬ್ ಮೂಲಕ ತರಬೇತಿ ನೀಡಲು ಅದು ನಿರ್ಧರಿಸಿದ್ದು, ಈಗಾಗಲೇ ಈ ಕಾರ್ಯಕ್ರಮ ಶುರುವಾಗಿದೆ.
ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಬರುವ ಪ್ರಶ್ನೆಗಳಿಗಿಂತ ಭಿನ್ನವಾದ ರೀತಿಯಲ್ಲಿ ಕೆ-ಸೆಟ್ ಪರೀಕ್ಷೆಗಳಲ್ಲಿ ಪ್ರಶ್ನೆಗಳಿರುವುದರಿಂದ ಇವುಗಳನ್ನು ಅರ್ಥೈಸಿಕೊಂಡು ಉತ್ತರಿಸುವ ಜಾಣ್ಮೆಯನ್ನು ಕಲಿಸುವ ತರಬೇತಿ ಇದಾಗಿದೆ.
ಕೆ-ಸೆಟ್ ಪರೀಕ್ಷೆಯ ಮೊದಲ ಪತ್ರಿಕೆಯ 10 ವಿಷಯಗಳ ಕುರಿತು ತರಬೇತಿ ಆಯೋಜಿಸಲಾಗಿದ್ದು 16ಕ್ಕೂ ಹೆಚ್ಚು ವಿವಿಧ ವಿಷಯಗಳ ತಜ್ಞರು ಉಪನ್ಯಾಸ ನೀಡಲಿದ್ದಾರೆ. ಈ ತರಬೇತಿ ಕಾರ್ಯಕ್ರಮದಲ್ಲಿ ವಿಜಯಪುರ, ರಾಯಚೂರು, ಶಿವಮೊಗ್ಗ, ಬೆಂಗಳೂರು, ಮೈಸೂರು ಮತ್ತಿತರ ಕಡೆಗಳಲ್ಲಿನ ತಜ್ಞರು ಭಾಗವಹಿಸಲಿದ್ದಾರೆ. ಆನ್‌ಲೈನ್ ತರಬೇತಿಗೆ ಈಗಾಗಲೇ ರಾಜ್ಯದ 30 ಜಿಲ್ಲೆಗಳ 2223 ಅಭ್ಯರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದಾರೆ.