KSP Recruitment 2022 | ಸಶಸ್ತ್ರ ಮೀಸಲು ಎಸ್‌ಐ ಹುದ್ದೆಗಳಿಗೆ ಜನವರಿ 8ಕ್ಕೆ ಲಿಖಿತ ಪರೀಕ್ಷೆ - Vistara News

ಉದ್ಯೋಗ

KSP Recruitment 2022 | ಸಶಸ್ತ್ರ ಮೀಸಲು ಎಸ್‌ಐ ಹುದ್ದೆಗಳಿಗೆ ಜನವರಿ 8ಕ್ಕೆ ಲಿಖಿತ ಪರೀಕ್ಷೆ

ಪಿಎಸ್‌ಐ ನೇಮಕಾತಿ ಹಗರಣದಿಂದ ಸುದ್ದಿಯಲ್ಲಿದ್ದ ರಾಜ್ಯ ಪೊಲೀಸ್‌ ಇಲಾಖೆಯು ಈಗ ಒಂದರ ಹಿಂದೊಂದರಂತೆ ಲಿಖಿತ (KSP Recruitment 2022 ) ಪರೀಕ್ಷೆ ನಡೆಸುತ್ತಿದ್ದು, ಸಶಸ್ತ್ರ ಮೀಸಲು ಎಸ್‌ಐ ಹುದ್ದೆಗಳಿಗೆ ಜ.8 ರಂದು ಲಿಖಿತ ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿದೆ.

VISTARANEWS.COM


on

KSP recruitment
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯು ಸಶಸ್ತ್ರ ಮೀಸಲು ಪೊಲೀಸ್‌ ಸಬ್‌-ಇನ್ಸ್‌ಪೆಕ್ಟರ್‌ (ಆರ್‌ಎಸ್‌ಐ, ಸಿಎಆರ್‌/ಡಿಎಆರ್‌) (ಪುರುಷ) ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ (KSP Recruitment 2022) ಜನವರಿ 8 ರಂದು ಲಿಖಿತ ಪರೀಕ್ಷೆ ನಡೆಸಲಿದೆ.

ಕಳೆದ ಏಪ್ರಿಲ್‌ ತಿಂಗಳಿನಲ್ಲಿ ನಡೆದ ಸಹಿಷ್ಣುತೆ ಮತ್ತು ದೇಹದಾರ್ಡ್ಯತೆ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳು ಮಾತ್ರ ಈ ಪರೀಕ್ಷೆ ಬರೆಯಬಹುದಾಗಿದೆ. ಒಟ್ಟು 71 ಹುದ್ದೆಗಳಿಗೆ ಈ ನೇಮಕ ನಡೆಯುತ್ತಿದ್ದು, ಕಳೆದ ಡಿಸೆಂಬರ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು.

ಜನವರಿ 8ರ ಭಾನುವಾರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಪತ್ರಿಕೆ-1ರ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2 ರಿಂದ 3.30ರ ವರೆಗೆ ಪತ್ರಿಕೆ-2ರ ಪರೀಕ್ಷೆ ನಡೆಸಲಾಗುತ್ತದೆ.

ಪೊಲೀಸ್‌ ಇಲಾಖೆಯ ನೇಮಕಾತಿ ವೆಬ್‌ಸೈಟ್‌ನಲ್ಲಿ ಅಧಿಕೃತವಾಗಿ ಪರೀಕ್ಷಾ ದಿನಾಂಕ ಪ್ರಕಟಿಸಲಾಗಿದೆ. ಪರೀಕ್ಷೆಯ ಪ್ರವೇಶ ಪತ್ರವನ್ನು ಇಲಾಖೆಯು ವೆಬ್‌ಸೈಟ್‌ನಲ್ಲಿ ಒದಗಿಸಲಿದ್ದು, ಇದನ್ನು ಡೌನ್‌ಲೋಡ್‌ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕಿರುತ್ತದೆ.

ಡಿಸೆಂಬರ್‌ 18 ರಂದು ಇಲಾಖೆಯು ವಿಶೇಷ ಮೀಸಲು ಸಬ್‌ ಇನ್ಸ್‌ಪೆಕ್ಟರ್ (ಕೆಎಸ್‌ಆರ್‌ಪಿ ಮತ್ತು ಐಆರ್‌ಬಿ) ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಯಶಸ್ವಿಯಾಗಿ ಲಿಖಿತ ಪರೀಕ್ಷೆ ನಡೆಸಿತ್ತು. ಪಿಎಸ್‌ಐ ನೇಮಕಾತಿ ಹಗರಣ ಬೆಳಕಿಗೆ ಬಂದ ನಂತರ ಪೊಲೀಸ್‌ ಇಲಾಖೆಯು ಕಟ್ಟುನಿಟ್ಟಿನಿಂದ ಲಿಖಿತ ಪರೀಕ್ಷೆ ನಡೆಸುತ್ತಿದ್ದು, ಇದಕ್ಕಾಗಿ ಅಗತ್ಯ ಕ್ರಮ ತೆಗೆದುಕೊಂಡಿದೆ.

ಒಂದರ ಹಿಂದೆ ಒಂದು ಪರೀಕ್ಷೆ
ಈ ಪರೀಕ್ಷೆ ನಡೆದ ನಂತರ ಕೆಎಸ್‌ಐಎಸ್‌ಎಫ್‌ ಸಬ್‌ ಇನ್ಸ್‌ಪೆಕ್ಟರ್‌ 63 ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಲಿಖಿತ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸ್‌ ಮಹಾ ನಿರ್ದೇಶಕ (ಡಿಜಿಪಿ) ಪ್ರವೀಣ್‌ ಸೂದ್‌ ಟ್ವೀಟ್‌ ಮಾಡಿ ತಿಳಿಸಿದ್ದಾರೆ.

ಅಕ್ರಮದ ಕಾರಣದಿಂದಾಗಿ ರದ್ದುಗೊಂಡಿರುವ 545 ಪೊಲೀಸ್‌ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳ ನೇಮಕಕ್ಕೂ ನಂತರ ಮರು ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಈ ಸಂಬಂಧ ಹೈಕೋರ್ಟ್‌ ನೀಡುವ ತೀರ್ಪನ್ನು ಪಾಲಿಸಲಾಗುತ್ತದೆ ಎಂದು ಅವರು ಹೇಳಿದ್ದು, ಮುಂದೆ 402 ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೂ ಪರೀಕ್ಷೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ ನೀವು ನೋಡುತ್ತಿರಬೇಕಾದ ವೆಬ್‌ಸೈಟ್‌ ವಿಳಾಸ ಇಂತಿದೆ: https://arc21.ksp-recruitment.in/

ಇದನ್ನೂ ಓದಿ | KPTCL Exam | ಜನವರಿ ಮೊದಲ ವಾರದಲ್ಲಿ AE, JE ನೇಮಕ ಪರೀಕ್ಷೆ ಫಲಿತಾಂಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಕೋಸ್ಟ್‌ ಗಾರ್ಡ್‌ನಲ್ಲಿದೆ ಉದ್ಯೋಗಾವಕಾಶ; 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

Job Alert: ಭಾರತೀಯ ಕೋಸ್ಟ್‌ ಗಾರ್ಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 320 ಹುದ್ದೆಗಳು ಖಾಲಿ ಇದ್ದು, 10 ಮತ್ತು 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 3. ನಾವಿಕ್‌ (ಜನರಲ್‌ ಡ್ಯೂಟಿ) – 260 ಮತ್ತು ಯಾಂತ್ರಿಕ್‌ – 60 ಹುದ್ದೆಗಳಿವೆ.

VISTARANEWS.COM


on

Job Alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕರ ಕನಸು. ಅಂತಹವರ ಕನಸು ನನಸಾಗಿಸುವ ಸುವರ್ಣಾವಕಾಶವೊಂದು ಒದಗಿ ಬಂದಿದೆ. ಭಾರತೀಯ ಕೋಸ್ಟ್‌ ಗಾರ್ಡ್‌ (Indian Coast Guard) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Indian Coast Guard Recruitment 2024). ಸುಮಾರು 320 ಹುದ್ದೆಗಳು ಖಾಲಿ ಇದ್ದು, 10 ಮತ್ತು 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಉದ್ಯೋಗದ ಸ್ಥಳ: ಭಾರತಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 3 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ನಾವಿಕ್‌ (ಜನರಲ್‌ ಡ್ಯೂಟಿ) – 260 ಮತ್ತು ಯಾಂತ್ರಿಕ್‌ – 60 ಹುದ್ದೆಗಳಿವೆ. ನಾವಿಕ್‌ (ಜನರಲ್‌ ಡ್ಯೂಟಿ) ಹುದ್ದೆಗೆ ಅರ್ಜಿ ಸಲ್ಲಿಸುವವರು ವಿಜ್ಞಾನ ವಿಭಾಗದಲ್ಲಿ 12ನೇ ತರಗತಿ ತೇರ್ಗಡೆಯಾಗಿರಬೇಕು. 10, 12ನೇ ತರಗತಿ, ಡಿಪ್ಲೋಮಾ ಪಾಸಾದವರು ಯಾಂತ್ರಿಕ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ಗಮನಿಸಿ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ವಯೋಮಿತಿ

Indian Coast Guard Recruitment 2024 ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 22 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ, ಮಾಸಿಕ ವೇತನ ಮತ್ತು ಅರ್ಜಿ ಶುಲ್ಕ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ, ಅಸ್ಸೆಸ್‌ಮೆಂಟ್‌ ಮತ್ತು ಅಡಾಟ್ಬೆಲಿಟಿ ಟೆಸ್ಟ್‌ (Assessment and Adaptability Test), ದೈಹಿಕ ಸಾಮರ್ಥ್ಯ ಪರೀಕ್ಷೆ, ಡಾಕ್ಯುಮೆಂಟ್‌ ಪರಿಶೀಲನೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ನೇಮಕ ನಡೆಯಲಿದೆ. ಆಯ್ಕೆಯಾದವರಿಗೆ 21,700 ರೂ. – 29,200 ರೂ. ಮಾಸಿಕ ವೇತನ ದೊರೆಯಲಿದೆ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಇನ್ನು ಉಳಿದ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

Indian Coast Guard Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ. (https://cgept.cdac.in/icgreg/candidate/login)
  • ನಿಮ್ಮ ಇ-ಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
  • ಈಗ ಲಾಗಿನ್‌ ಆಗಿ ನಿಮ್ಮ ಹೆಸರು, ಸಂಪೂರ್ಣ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ, ಅರಿಯಾದ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗ ಅವಕಾಶ; ಕೂಡಲೇ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Recruitment: ಮೈಸೂರು ಮಹಾನಗರ ಪಾಲಿಕೆ; ಗ್ರೂಪ್​ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇವಲ ಕನ್ನಡ ಮಾತನಾಡಲು ಬಲ್ಲವರಿಗೆ ರಾಜ್ಯ ಸರ್ಕಾರದ ಉದ್ಯೋಗಕ್ಕೆ ಅರ್ಜಿ (Job Recruitment) ಆಹ್ವಾನಿಸಲಾಗಿದೆ. ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪೌರ ಕಾರ್ಮಿಕರ ಗ್ರೂಪ್​ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಜುಲೈ 18ರೊಳಗೆ ನೇರವಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ.

VISTARANEWS.COM


on

By

Job Recruitment
Koo

ಮೈಸೂರು (mysuru) ಮಹಾನಗರ ಪಾಲಿಕೆಯಲ್ಲಿ (Mysuru City Corporation) ಖಾಲಿ ಇರುವ ಒಟ್ಟು 252 ಪೌರಕಾರ್ಮಿಕ ಗ್ರೂಪ್​ ಡಿ (Group D) ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ (Job Recruitment) ಆಹ್ವಾನಿಸಲಾಗಿದ್ದು, ಆಸಕ್ತರು 2024ರ ಜುಲೈ 18ರೊಳಗೆ ಅರ್ಜಿ ಸಲ್ಲಿಸಬಹುದು. ಅಂಚೆ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ.

ಹುದ್ದೆಯ ವಿವರ

ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶ. ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 252 ಪೌರಕಾರ್ಮಿಕ ಗ್ರೂಪ್​ ಡಿ ನೌಕರರ ಹುದ್ದೆ ಖಾಲಿ ಇದ್ದು, ಅರ್ಹರು ಅರ್ಜಿ ಸಲ್ಲಿಸಬಹುದು. ಗ್ರೂಪ್​ ಡಿ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 17,000- 28,950 ರೂ. ಸಂಬಳ ನೀಡಲಾಗುತ್ತದೆ.

ಅರ್ಹತೆ ಏನು?

ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನೇರ ಪಾವತಿ/ ಕಲ್ಯಾಣ/ ದಿನಗೂಲಿ ಆಧಾರದ ಮೇಲೆ ಪೌರಕಾರ್ಮಿಕರಾಗಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನ್ನಡ ಮಾತನಾಡಲು ಬಲ್ಲ ಯಾವುದೇ ಶೈಕ್ಷಣಿಕ ಅರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳ ವಯಸ್ಸು 2024ರ ಜೂನ್ 13ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಪ್ರಕಾರ ವಯೋಮಿತಿ ಸಡಿಲಿಕೆ ಇದೆ.

ಇದನ್ನೂ ಓದಿ: Job Recruitment: ಬ್ಯಾಂಕ್ ಆಫ್ ಬರೋಡಾದಲ್ಲಿ 627 ಹುದ್ದೆಗಳಿಗೆ ಅರ್ಜಿ ಆಹ್ವಾನ; 55 ಲಕ್ಷದವರೆಗೆ ಸಂಬಳ!

ಅರ್ಜಿ ಪ್ರಕ್ರಿಯೆ

ಆಸಕ್ತ ಅಭ್ಯರ್ಥಿಗಳು ಮೈಸೂರಿನ ಸಯ್ಯಾಜಿರಾವ್ ರಸ್ತೆಯ ಮೈಸೂರು ಮಹಾನಗರ ಕಾರ್ಪೊರೇಷನ್ ಪ್ರಧಾನ ಕಚೇರಿಯಿಂದ ಅರ್ಜಿಯನ್ನು ಪಡೆದು ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಅಧ್ಯಕ್ಷರು, ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರ, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರು, ಮೈಸೂರು ಇವರಿಗೆ ಸಲ್ಲಿಸಬೇಕು.

Continue Reading

ಉದ್ಯೋಗ

Job Recruitment: ನಮ್ಮ ಮೆಟ್ರೋದಲ್ಲಿದೆ ಉದ್ಯೋಗ ಅವಕಾಶ; ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು ಮೆಟ್ರೋದಲ್ಲಿ ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ (Job Recruitment) ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಜುಲೈ 10ರೊಳಗೆ ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ವಿಧಾನ, ಆಯ್ಕೆ ಪ್ರಕ್ರಿಯೆ ಸೇರಿದಂತೆ ಈ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.

VISTARANEWS.COM


on

By

Job Recruitment
Koo

ಬೆಂಗಳೂರು: ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ ಬೆಂಗಳೂರು (bengaluru) ಮೆಟ್ರೋ ರೈಲು (metro train) ಕಾರ್ಪೋರೇಷನ್ ಲಿಮಿಟೆಡ್ (Bengaluru Metro Rail Corporation Limited)​ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. ಒಟ್ಟು 69 ಹುದ್ದೆಗಳಿದ್ದು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಅಥವಾ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಈ ಕುರಿತು ಬೆಂಗಳೂರು ಮೆಟ್ರೋದ ಅಧಿಕೃತ ವೆಬ್​ಸೈಟ್​ bmrc.co.in ಅಲ್ಲಿ ಸಂಪೂರ್ಣ ಮಾಹಿತಿ ಲಭ್ಯವಿದೆ. ಹುದ್ದೆಯ ಕುರಿತು ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತು ಸಂಪೂರ್ಣ ವಿವರ ಇಲ್ಲಿದೆ.

ಹುದ್ದೆಯ ವಿವರ

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನ ಒಟ್ಟು 69 ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲೇ ಪೋಸ್ಟಿಂಗ್ ನೀಡಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಮಾಸಿಕ 35,000- 82,660 ರೂ. ಸಂಬಳ ನೀಡಲಾಗುತ್ತದೆ.

ಅರ್ಹತೆ ಏನು?

ಮೆಟ್ರಿಕ್ಯುಲೇಷನ್, ಎಲೆಕ್ಟ್ರಿಕಲ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಆಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್/ ಟೆಲಿಕಮ್ಯುನಿಕೇಷನ್ಸ್/ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್/ ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್/ ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್/ ಮೆಕ್ಯಾನಿಕಲ್ ಎಂಜಿನಿಯರಿಂಗ್​​ನಲ್ಲಿ ಡಿಪ್ಲೊಮಾ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 2024ರ ಜೂನ್ 14ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಇದನ್ನೂ ಓದಿ: Job Recruitment: ಕರ್ನಾಟಕ ಗ್ರಾಮೀಣ ಬ್ಯಾಂಕ್‌ನಲ್ಲಿ 586 ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಯ್ಕೆ ಪ್ರಕ್ರಿಯೆ

ಅರ್ಹರಾದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬಳಿಕ ಸೈಕೋಮೆಟ್ರಿಕ್ ಟೆಸ್ಟ್ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ನಡೆಸಿದ ಬಳಿಕ ಸೂಕ್ತವೆನಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಪ್ರಕ್ರಿಯೆ

ಆಸಕ್ತ ಅಭ್ಯರ್ಥಿಗಳು 2024ರ ಜುಲೈ 10ರೊಳಗೆ ಅರ್ಜಿ ಸಲ್ಲಿಸಬೇಕು. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಹೆಚ್. ರಸ್ತೆ, ಶಾಂತಿನಗರ, ಬೆಂಗಳೂರು- 560027 ಇವರಿಗೆ ಸಲ್ಲಿಸಬೇಕು. ಆನ್ ;ಲೈನ್ ಮೂಲಕ ಅರ್ಜಿ ಸಲ್ಲಿಸುವವರು https://recruitr.bmrc.co.in/frminstructions.aspx ಈ ಲಿಂಕ್ ಕ್ಲಿಕ್ ಮಾಡಿ ನೇರವಾಗಿ ಅರ್ಜಿ ಸಲ್ಲಿಸಬಹುದು.

Continue Reading

ವಾಣಿಜ್ಯ

Muttiah Muralitharan: ಚಾಮರಾಜನಗರದಲ್ಲಿ ಸಿಹಿತಿಂಡಿ ಘಟಕ; 1,400 ಕೋಟಿ ಹೂಡಿಕೆ ಮಾಡಲಿದ್ದಾರೆ ಲಂಕಾ ಮಾಜಿ ಕ್ರಿಕೆಟಿಗ

ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ (Muttiah Muralitharan) ಅವರು ಚಾಮರಾಜನಗರ ಜಿಲ್ಲೆಯಲ್ಲಿ ತಂಪು ಪಾನೀಯ ಮತ್ತು ಮಿಠಾಯಿ ತಯಾರಿಕಾ ಘಟಕವನ್ನು ಸ್ಥಾಪಿಸಲು ಹಂತ ಹಂತವಾಗಿ 1,400 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಕರ್ನಾಟಕದಲ್ಲಿ ವ್ಯವಹಾರವನ್ನು ವಿಸ್ತರಿಸಲಿದ್ದಾರೆ.

VISTARANEWS.COM


on

By

Muttiah Muralitharan
Koo

ಚಾಮರಾಜನಗರ: ಶ್ರೀಲಂಕಾದ (srilanka) ಮಾಜಿ ಕ್ರಿಕೆಟಿಗ (ex-cricketer) ಮುತ್ತಯ್ಯ ಮುರಳೀಧರನ್ (Muttiah Muralitharan) ಅವರು ಕರ್ನಾಟಕದ (karnataka) ಚಾಮರಾಜನಗರದಲ್ಲಿ (chamarajanagara) ಪಾನೀಯ ಮತ್ತು ಸಿಹಿ ತಿಂಡಿ ಘಟಕವನ್ನು (beverage and confectionery unit) ಸ್ಥಾಪಿಸಲು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ. ರಾಜ್ಯದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ (Large and Medium Industries Minister) ಎಂ.ಬಿ. ಪಾಟೀಲ್ (m.b. patil) ಈ ವಿಷಯ ತಿಳಿಸಿದ್ದಾರೆ.

ಕ್ರಿಕೆಟ್ ದಂತಕಥೆ ಮುರಳೀಧರನ್ ಕರ್ನಾಟಕ ಪಾನೀಯ ಘಟಕದಲ್ಲಿ 1,400 ಕೋಟಿ ರೂ. ಹೂಡಿಕೆ ಮಾಡಲು ಆರಂಭದಲ್ಲಿ 230 ಕೋಟಿ ರೂ. ಹೂಡಿಕೆಯೊಂದಿಗೆ ಯೋಜಿಸಲಾಗಿದ್ದ ಯೋಜನೆಯನ್ನು ಈಗ ಒಟ್ಟು 1,000 ರೂ. ಕೋಟಿಗೆ ಪರಿಷ್ಕರಿಸಲಾಗಿದೆ. ಇನ್ನು ಕೆಲವೇ ವರ್ಷಗಳಲ್ಲಿ 1,400 ಕೋಟಿ ರೂ.ಗೆ ಹೆಚ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.

ಶ್ರೀಲಂಕಾದ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರು ಚಾಮರಾಜನಗರ ಜಿಲ್ಲೆಯಲ್ಲಿ ತಂಪು ಪಾನೀಯ ಮತ್ತು ಮಿಠಾಯಿ ತಯಾರಿಕಾ ಘಟಕವನ್ನು ಸ್ಥಾಪಿಸಲು ಹಂತ ಹಂತವಾಗಿ 1,400 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಕರ್ನಾಟಕದಲ್ಲಿ ವ್ಯವಹಾರವನ್ನು ವಿಸ್ತರಿಸಲಿದ್ದಾರೆ. ಮುತ್ತಯ್ಯ ಮುರಳೀಧರನ್ ಅವರನ್ನು ಅಭಿನಂದಿಸಿದ ಸಚಿವ ಪಾಟೀಲ್ ಅವರು ಈ ಕುರಿತು ತಮ್ಮ ಸಾಮಾಜಿಕ ಮಾಧ್ಯಮ ಹ್ಯಾಂಡಲ್ ಎಕ್ಸ್ ಮೂಲಕ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯಲ್ಲಿ ಪ್ರಸ್ತುತ 1,000 ಕೋಟಿ ರೂಪಾಯಿ ಉತ್ಪಾದನಾ ಘಟಕವು ಅಭಿವೃದ್ಧಿ ಹಂತದಲ್ಲಿದೆ. ಹೂಡಿಕೆಯನ್ನು 1,400 ಕೋಟಿ ರೂ. ಗೆ ಹೆಚ್ಚಿಸುವ ಯೋಜನೆ ಇದೆ ಎಂದು ಹೇಳಿದ್ದಾರೆ.

ಸಭೆಯು ಸಮನ್ವಯಕ್ಕೆ ಒತ್ತು ನೀಡಿದ್ದು, ಇಲಾಖೆ ಅಧಿಕಾರಿಗಳು ಸಕ್ರಿಯವಾಗಿ ಅಗತ್ಯ ಬೆಂಬಲವನ್ನು ಒದಗಿಸುತ್ತಿದ್ದಾರೆ ಎಂದು ಪಾಟೀಲ್ ಹೇಳಿದರು.


ಪ್ರಸ್ತಾವಿತ ಕಾರ್ಖಾನೆಯನ್ನು ಮುತ್ತಯ್ಯ ಬೆವರೇಜಸ್ ಮತ್ತು ಸಿಹಿ ತಿಂಡಿ ಹೆಸರಿನಲ್ಲಿ ಸ್ಥಾಪಿಸಲಾಗುತ್ತಿದೆ. ಈಗಾಗಲೇ 46 ಎಕರೆ ಭೂಮಿಯನ್ನು ಮಂಜೂರು ಮಾಡಿರುವ ಯೋಜನೆಗೆ ಆರಂಭದಲ್ಲಿ 230 ಕೋಟಿ ರೂ. ಹೂಡಿಕೆಯಲ್ಲಿ ಯೋಜಿಸಲಾಗಿತ್ತು, ಆದರೆ ಹೆಚ್ಚಿನದನ್ನು ಪರಿಷ್ಕರಿಸಲಾಗಿದೆ.

ಇದನ್ನೂ ಓದಿ: Virat Kohli: ಶಾರುಖ್, ಸಲ್ಮಾನ್ ಹಿಂದಿಕ್ಕಿ ಮೌಲ್ಯಯುತ ಸೆಲೆಬ್ರಿಟಿಯಾಗಿ ಹೊರಹೊಮ್ಮಿದ ಕಿಂಗ್​ ಕೊಹ್ಲಿ

2025ರ ಜನವರಿಯಲ್ಲಿ ಉತ್ಪಾದನಾ ಕಾರ್ಯಾಚರಣೆ ಆರಂಭವಾಗುವ ನಿರೀಕ್ಷೆಯಿದೆ ಎಂದು ತಿಳಿಸಿರುವ ಸಚಿವರು, ಮಂಜೂರು ಮಾಡಿದ ಭೂಮಿಗೆ ಸಂಬಂಧಿಸಿದ ಸಣ್ಣಪುಟ್ಟ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ. ಮುರಳೀಧರನ್ ಅವರು ಮುಂದಿನ ದಿನಗಳಲ್ಲಿ ಧಾರವಾಡದಲ್ಲಿ ಮತ್ತೊಂದು ಘಟಕವನ್ನು ಸ್ಥಾಪಿಸಲು ಯೋಜಿಸಿದ್ದಾರೆ ಎಂಬ ಸಂಗತಿಯನ್ನೂ ಪಾಟೀಲ್ ಬಹಿರಂಗಪಡಿಸಿದ್ದಾರೆ.

Continue Reading
Advertisement
assault Case
ಕ್ರೈಂ2 mins ago

Assault Case: 3 ವರ್ಷದ ಮಗಳ ಗುಪ್ತಾಂಗ ಕಚ್ಚಿ ಮಲತಂದೆಯ ಕ್ರೌರ್ಯ; ಸಿಗರೇಟ್‌ನಿಂದ ಸುಟ್ಟು ವಿಕೃತಿ

ram mohan raju actor darshan
ಪ್ರಮುಖ ಸುದ್ದಿ6 mins ago

Actor Darshan: ದರ್ಶನ್‌ಗೆ 40 ಲಕ್ಷ ರೂ ನೀಡಿದ ವ್ಯಕ್ತಿ ಈಗ ನಾಪತ್ತೆ! ಯಾರೀ ಆಸಾಮಿ?

Darshan Arrested in IT trouble! Is the money paid to a MLA's friend
ಸ್ಯಾಂಡಲ್ ವುಡ್9 mins ago

Darshan Arrested: ದರ್ಶನ್‌ಗೆ ಕೊಲೆ ಆರೋಪದ ಜತೆಗೆ ಐಟಿ ಸಂಕಷ್ಟ! ಹಣ ಸಂದಾಯ ಮಾಡಿದ್ರಾ ಶಾಸಕರೊಬ್ಬರ ಆಪ್ತ?

IRCTC Ticket Booking
Latest25 mins ago

IRCTC Ticket Booking: ರೈಲ್ವೆ ಟಿಕೆಟ್ ಈ ರೀತಿ ಬುಕ್ ಮಾಡಿದರೆ ಜೈಲೂಟ ಗ್ಯಾರಂಟಿ!

Viral Video
Latest28 mins ago

Viral Video : ಇನ್‌ಸ್ಟಾಗ್ರಾಂ ರೀಲ್ಸ್ ಕ್ರೇಜ್‌; ಪಾಳುಬಿದ್ದ ಕಟ್ಟಡದ ಮೇಲಿಂದ ನೇತಾಡಿದ ಹುಡುಗಿ!

Israel-Hamas Conflict
ವಿದೇಶ33 mins ago

Israel-Hamas Conflict: ಇಸ್ರೇಲ್‌ ಏರ್‌ಸ್ಟ್ರೈಕ್- ಹಮಾಸ್‌ ಕಮಾಂಡರ್‌ ಹತ್ಯೆ

Actor Darshan case sanjana galrani Reaction about ramya statement
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್‌ಗೆ ಗಲ್ಲು ಶಿಕ್ಷೆ ಆಗಬೇಕು ಎಂದ ರಮ್ಯಾಗೆ ಕೌಂಟರ್‌ ಕೊಟ್ಟ ಸಂಜನಾ ಗಲ್ರಾನಿ!

Liquor Price Karnataka
ಪ್ರಮುಖ ಸುದ್ದಿ1 hour ago

Liquor Price Karnataka: ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ನ್ಯೂಸ್‌; ಜುಲೈ 1ರಿಂದ ಬೆಲೆ ಇಳಿಕೆ

Pakistan Violence
ವಿದೇಶ2 hours ago

Pakistan Violence: ಕುರಾನ್‌ಗೆ ಅಪಮಾನ; ಪೊಲೀಸ್‌ ಸ್ಟೇಶನ್‌ಗೆ ಬೆಂಕಿ..ಠಾಣೆಯೊಳಗೇ ಆರೋಪಿಯ ಬರ್ಬರ ಕೊಲೆ

Actor Darshan was careful at every step to escape from Renuka case
ಸ್ಯಾಂಡಲ್ ವುಡ್2 hours ago

Actor Darshan: ಕೇಸ್‌ನಿಂದ ತಪ್ಪಿಸಿಕೊಳ್ಳೋಕೆ ಪ್ರತಿ ಹಂತದಲ್ಲೂ ಎಚ್ಚರವಹಿಸಿದ್ದ ದರ್ಶನ್; ಬೇಟೆಯ ಹಿಂದೆ ಭರ್ಜರಿ ಮಾಸ್ಟರ್‌ ಪ್ಲ್ಯಾನ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ17 hours ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು4 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು4 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ5 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ5 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ5 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ6 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ7 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು7 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

ಟ್ರೆಂಡಿಂಗ್‌