ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿನ 3,484 ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ (KSP Recruitment 2022) ಅರ್ಜಿ ಸಲ್ಲಿಸಲು ಇನ್ನು ಮೂರು ದಿನ ಮಾತ್ರ ಕಾಲಾವಕಾಶವಿದೆ. ಇನ್ನೂ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿರುತ್ತದೆ.
ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಅರ್ಜಿ ಶುಲ್ಕವನ್ನು ಆನ್ಲೈನ್ನಲ್ಲಿ ಅಥವಾ ಅಧಿಕೃತ ಬ್ಯಾಂಕ್ ಶಾಖೆಗಳ/ ಸ್ಥಳೀಯ ಅಂಚೆಕಚೇರಿಗಳ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದ್ದು, ನವೆಂಬರ್ 03 ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನವಾಗಿರುತ್ತದೆ.
ಅರ್ಜಿ ಸಲ್ಲಿಸಲು ಲಿಂಕ್ಗೆ ಇಲ್ಲಿ ಕ್ಲಿಕ್ ಮಾಡಿ| https://apc3064.ksp-recruitment.in/
ಒಟ್ಟು 3,484 ಹುದ್ದೆಗಳಲ್ಲಿ 420 ಹುದ್ದೆಗಳನ್ನು ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ (ಹೈಕ) ಮೀಸಲಿಡಲಾಗಿದೆ. ಸರ್ಕಾರದ ತೀರ್ಮಾನದಂತೆ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕವಾಗಿ ಅಧಿಸೂಚನೆ ಪ್ರಕಟಿಸಲಾಗಿದೆ. ಪ್ರತ್ಯೇಕವಾಗಿಯೇ ಅರ್ಜಿನ ಸಲ್ಲಿಸಲು ಅವಕಾಶ ನೀಡಲಾಗಿದೆ.
ಅಭ್ಯರ್ಥಿಯು ಒಂದಕ್ಕಿಂತ ಹೆಚ್ಚು ಅರ್ಜಿಯನ್ನು ಒಂದೇ ಹುದ್ದೆಗೆ ಸಲ್ಲಿಸಿದ್ದಲ್ಲಿ, ಒಂದೇ ಅರ್ಜಿಯನ್ನು (ಅಂತಿಮವಾಗಿ ಸಲ್ಲಿಸಿದ) ಮಾತ್ರ ಪರಿಗಣಿಸಲಾಗುವುದು ಎಂದು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ.
ವಿದ್ಯಾರ್ಹತೆ ಏನು?
ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಎಸ್ಎಸ್ಎಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ತತ್ಸಮಾನ ವಿದ್ಯಾರ್ಹತೆ ಎಂದರೆ;
೧. ಸಿ.ಬಿ.ಎಸ್.ಇ ಮತ್ತು ಐ.ಸಿ.ಎಸ್.ಇ ಮಂಡಳಿಯು ನಡೆಸು 10ನೇ ತರಗತಿ ಪರೀಕ್ಷೆ.
೨. ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳು ನಡೆಸುವ 10ನೇತ ತರಗತಿ ಪರೀಕ್ಷೆ.
೩. ನ್ಯಾಷನ್ ಇನ್ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್(ಎನ್.ಐ.ಓ.ಎಸ್) ವತಿಯಿಂದ ನಡೆಸುವ ಪ್ರೌಢ ಶಿಕ್ಷಣ ಕೋರ್ಸ್/ಹೆಚ್.ಎಸ್.ಸಿ.
೪. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್ (ಕೆಒಎಸ್)
ದೈಹಿಕ ಅರ್ಹತೆ ಏನು?
ಎಲ್ಲ ಸಾಮಾನ್ಯ ಪುರಷ ಮತ್ತು ತೃತೀಯ ಲಿಂಗ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳು ಕನಿಷ್ಠ 168 ಸೆ.ಮೀ. ಎತ್ತರವಿರಬೇಕು. ಕನಿಷ್ಠ ಎದೆ ಸುತ್ತಳತೆ 86 ಸೆಂ.ಮೀ. (ಪೂರ್ತಿ ವಿಸ್ತರಿಸಿದಾಗ) ಕನಿಷ್ಠ ವಿಸ್ತರಣೆ 5 ಸೆಂ.ಮೀ. ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಪುರುಷ ಅಭ್ಯರ್ಥಿಗಳು ಕನಿಷ್ಠ 155 ಸೆಂ.ಮೀ ಎತ್ತರವಿರಬೇಕು ಮತ್ತು 5 ಸೆಂ.ಮೀ. ಕನಿಷ್ಠ ವಿಸ್ತರಿಸುವುದರೊಂದಿಗೆ ಸಂಪರ್ಣವಾಗಿ ಹಿಗ್ಗಿಸಿದಾಗ 75 ಸೆಂ.ಮೀ.ಗಳಿಗಿಂತ ಕಡಿಮೆ ಇಲ್ಲದಂತಿರಬೇಕು.
ವಯೋಮಿತಿ ಎಷ್ಟು?
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷ, ಇತರೆ ಅಭ್ಯರ್ಥಿಗಳಿಗೆ 25 ವರ್ಷ ಹಾಗೂ ಬುಡುಕಟ್ಟು ಅಭ್ಯರ್ಥಿಗಳಿಗೆ 30 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31-10-2022
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 03-11-2022
ಸಹಾಯವಾಣಿ ಸಂಖ್ಯೆ: 080-22943346 & 080-22943039
ಅರ್ಜಿ ಸಲ್ಲಿಸಲು ಮತ್ತು ಹೆಚ್ಚಿನ ಮಾಹಿತಿಗೆ ವೆಬ್: https://ksp-recruitment.in
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 400ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 200ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಅರ್ಜಿ ಶುಲ್ಕವನ್ನು ಆನ್ಲೈನ್ ಮುಖಾಂತರ ಪಾವತಿಸಬಹುದು ಅಥವಾ ಚಲನ್ ಡೌನ್ಲೋಡ್ ಮಾಡಿಕೊಂಡು ಕೆನರಾಬ್ಯಾಂಕ್ ಅಥವಾ ಸ್ಥಳೀಯ ಇ-ಅಂಚೆಕಚೇರಿಗಳಲ್ಲಿ ಪಾವತಿಸಬಹುದಾಗಿರುತ್ತದೆ. ಅರ್ಜಿ ಶುಲ್ಕದೊಂದಿಗೆ ಸೇವಾ ಶುಲ್ಕವನ್ನು ಅಭ್ಯರ್ಥಿಗಳೇ ಪಾವತಿಸಬೇಕಿರುತ್ತದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನದವರೆಗೆ ಕಾಯದೆ, (ಕೊನೆಯ ದಿನಗಳಲ್ಲಿ ಹೆಚ್ಚಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಮುಂದಾಗುವುದರಿಂದ ಸರ್ವರ್ನಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಬಹುದು) ಈ ಕೂಡಲೇ ಅರ್ಜಿ ಸಲ್ಲಿಸಬೇಕೆಂದು ಪೊಲೀಸ್ ಇಲಾಖೆಯು ಕೋರಿದೆ.
ಇದನ್ನೂ ಓದಿ | KPSC Recruitment 2022 | ಸಾಂಖ್ಯಿಕ ನಿರೀಕ್ಷಕರ 105 ಹುದ್ದೆಗಳಿಗೆ ಇಂದಿನಿಂದ ಅರ್ಜಿ ಸಲ್ಲಿಸಲು ಅವಕಾಶ