ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’ಯ (ಟಿಇಟಿ) (KTET Exam 2022) ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ.
ಈಗಾಗಲೇ ಪ್ರಕಟಿಸಿದಂತೆ ನವೆಂಬರ್ 06 ರಂದು ಪರೀಕ್ಷೆ ನಡೆಯಲಿದ್ದು, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಶಿಕ್ಷಣ ಇಲಾಖೆಯ ವೆಬ್‌ಸೈಟ್‌ಗೆ ಭೇಟಿ ನೀಡಿ ಯೂಸರ್ ಐಡಿ ಮತ್ತು ಪಾಸ್‌ವರ್ಡ್ ನೊಂದಿಗೆ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಪರೀಕ್ಷೆಯ ವೇಳಾಪಟ್ಟಿ ಇಂತಿದೆ;
ಪ್ರವೇಶ ಪತ್ರದೊಂದಿಗೆ ಪರೀಕ್ಷೆಗೆ ಸಂಬಂಧಿಸಿದ ಸೂಚನೆಗಳನ್ನು ನೀಡಲಾಗಿದೆ. ಪರೀಕ್ಷೆಯನ್ನು ಅತ್ಯಂತ ಕಟ್ಟುನಿಟ್ಟಾಗಿ ನಡೆಸಲಾಗುತ್ತದೆ. ಇತ್ತೀಚೆಗೆ ಪರೀಕ್ಷಾ ಅಕ್ರಮ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಈ ಪರೀಕ್ಷೆಯಲ್ಲಿಯೂ ಕೈ ಗಡಿಯಾರ (ವಾಚ್), ಮೊಬೈಲ್, ಕ್ಯಾಲ್‌ಕ್ಯುಲೇಟರ್, ಪೇಜರ್, ಬ್ಲೂಟೂತ್ ಹಾಗೂ ಇತರೆ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಮತ್ತು ಲಾಗ್‌ಟೇಬಲ್, ಬಿಳಿ ಪ್ಲೂಯಡ್, ಬೆಂಕಿಪೊಟ್ಟಣ ಅಥವಾ ಸಿಗರೇಟ್ ಲೈಟರ್ ಮುಂತಾದ ವಸ್ತುಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವುದನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಪರೀಕ್ಷಾ ಸಿಬ್ಬಂದಿಯ ತಪಾಸಣೆಗೆ ಒಳಪಡಿಸಲಾಗುವುದು ಎಂದು ತಿಳಿಸಲಾಗಿದೆ.
ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಲಿಂಕ್ | https://sts.karnataka.gov.in/TET/
ಪರೀಕ್ಷಾ ಕೇಂದ್ರಕ್ಕೆ ಪರೀಕ್ಷೆ ಆರಂಭವಾಗುವುದಕ್ಕೆ ಒಂದು ಗಂಟೆ ಮುಂಚಿತವಾಗಿ ಹಾಜರಾಗಬೇಕು. ಎಲ್ಲ ಅಭ್ಯರ್ಥಿಗಳನ್ನು ಪರೀಕ್ಷಾ ಕೇಂದ್ರದಲ್ಲಿ ತಪಾಸಣೆಗೆ ಒಳಡಪಡಿಸಲಾಗುತ್ತದೆ. ಪರೀಕ್ಷೆ ಪ್ರಾರಂಭವಾಗುವ 30 ನಿಮಿಷಗಳ ಮೊದಲು ಅಭ್ಯರ್ಥಿಗಳಿಗೆ ಪರೀಕ್ಷಾ ಕೊಠಡಿಗೆ ಪ್ರವೇಶವನ್ನು ನೀಡಲಾಗುತ್ತದೆ. ಪರೀಕ್ಷೆ ಪ್ರಾರಂಭವಾದ (ಬೆಳಗ್ಗೆ 9.30 ಮಧ್ಯಾಹ್ನ 2.00 ಗಂಟೆಗೆ ಪರೀಕ್ಷಾ ಕೊಠಡಿಯೊಳಗೆ ಪ್ರವೇಶಕ್ಕೆ ಅವಕಾಶವಿರುವುದಿಲ್ಲ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಬಗ್ಗೆ ಗೊಂದಲಗಳಿದ್ದರೆ ಆಯಾ ಜಿಲ್ಲೆಯ ಪರೀಕ್ಷಾ ನೋಡಲ್ ಅಧಿಕಾರಿಗಳ ದೂರವಾಣಿ ಸಂಖ್ಯೆಯನ್ನೊಳಗೊಂಡ ಪಟ್ಟಿಯನ್ನೂ ಸಹ ವೆಬ್‌ಸೈಟಿನಲ್ಲಿ ಪ್ರಕಟಿಸಲಾಗಿದ್ದು, ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಳ ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ | http://www.schooleducation.kar.nic.in
ಇದನ್ನೂ ಓದಿ| 2,500 ಪ್ರೌಢಶಾಲಾ ಶಿಕ್ಷಕರ ನೇಮಕ | ಸದ್ಯವೇ ಅಧಿಸೂಚನೆ; ಡಿಸೆಂಬರ್‌ನಲ್ಲಿ ಪರೀಕ್ಷೆ