ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) ಸಹಾಯಕ ಆಡಳಿತ ಅಧಿಕಾರಿ (Assistant Administrative Officer) 300 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು (LIC AAO Recruitment 2023), ಪೂರ್ವಭಾವಿ ಪರೀಕ್ಷೆಯನ್ನು ಫೆಬ್ರವರಿ 17 ಮತ್ತು 20 ರಂದು ನಡೆಸಲಿದೆ.
ಇದರ ಪ್ರವೇಶ ಪತ್ರವನ್ನು ಎಲ್‌ಐಸಿಯ ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ. ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ. ಪ್ರವೇಶ ಪತ್ರದಲ್ಲಿ ಪರೀಕ್ಷೆಯ ಸಮಯ, ಪರೀಕ್ಷಾ ಕೇಂದ್ರದ ಮಾಹಿತಿ ಒದಗಿಸಲಾಗಿದೆ. ಜತೆಗೆ ಯಾವೆಲ್ಲಾ ಸಾಮಗ್ರಿಗಳನ್ನು ಪರೀಕ್ಷಾ ಕೇಂದ್ರಕ್ಕೆ ತರಬಹುದೆಂಬ ಮಾಹಿತಿಯನ್ನೂ ನೀಡಲಾಗಿದೆ.
ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ (Click Here) ಮಾಡಿ
ಪೂರ್ವಭಾವಿ ಪರೀಕ್ಷೆ (100 ಅಂಕಗಳಿಗೆ) ನಡೆಸಲಾಗುತ್ತದೆ, ಇದರಲ್ಲಿ ಅರ್ಹತೆ ಪಡೆದವರಿಗೆ ಮೂಖ್ಯ ಪರೀಕ್ಷೆ (300 ಅಂಕಗಳಿಗೆ) ನಡೆಸಲಾಗುತ್ತದೆ. ಇದರ ಜತೆಗೆ 25 ಅಂಕಗಳಿಗೆ ವಿವರಣಾತ್ಮಕ ಪರೀಕ್ಷೆಯೂ ನಡೆಯಲಿದೆ. ಇದರಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಮೂರನೇ ಹಂತದಲ್ಲಿ ನಡೆಯಲಿರುವ ಸಂದರ್ಶನಕ್ಕೆ ಅಭ್ಯರ್ಥಿಗಳನ್ನು ಆಹ್ವಾನಿಸಲಾಗುತ್ತದೆ. ಮುಖ್ಯ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here ) ಮಾಡಿ.
ರಾಜ್ಯದ ಬೆಳಗಾವಿ, ಬೆಂಗಳೂರು, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಪರೀಕ್ಷಾ ಕೇಂದ್ರ ಇರಲಿದೆ. ಮುಖ್ಯ ಪರೀಕ್ಷೆಯನ್ನು ಬೆಂಗಳೂರು, ಬೆಳಗಾವಿ ಮತ್ತು ಶಿವಮೊಗ್ಗದಲ್ಲಿ ಮಾತ್ರ ನಡೆಸಲಾಗುತ್ತದೆ. ಪರೀಕ್ಷೆಯು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ನಡೆಯಲಿದ್ದು, ಕನ್ನಡದಲ್ಲಿ ಬರೆಯಲು ಅವಕಾಶವಿರುವುದಿಲ್ಲ.
ಹೆಚ್ಚಿನ ಮಾಹಿತಿಗೆ ಎಲ್‌ಐಸಿ ವೆಬ್‌ಸೈಟ್ ವಿಳಾಸ: Click Here
ಇದನ್ನೂ ಓದಿ : Land Surveyor Recruitment : 2000 ಭೂಮಾಪಕರ ನೇಮಕಕ್ಕೆ ಅರ್ಜಿ ಆಹ್ವಾನ; ಇಲ್ಲಿದೆ ಸಂಪೂರ್ಣ ಮಾಹಿತಿ