ಬೆಂಗಳೂರು: ಭಾರತೀಯ ಜೀವ ವಿಮಾ ನಿಗಮವು (ಎಲ್‌ಐಸಿ) ಸಹಾಯಕ ಆಡಳಿತ ಅಧಿಕಾರಿ (Assistant Administrative Officer) 300 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು (LIC AAO Recruitment 2023), ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ಇನ್ನೂ ಅರ್ಜಿ ಸಲ್ಲಿಸದೇ ಇರುವ ಆಸಕ್ತ ಅಭ್ಯರ್ಥಿಗಳು ಇಂದು ಮಧ್ಯರಾತ್ರಿಯ ಒಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಯಾವುದೇ ವಿಷಯದಲ್ಲಿ ಪದವಿ ಪಡೆದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಶುಲ್ಕ ಪಾವತಿಸಲು ಕೂಡ ಇಂದೇ ಕೊನೆಯ ದಿನವಾಗಿರುತ್ತದೆ.
ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ (Click Here) ಮಾಡಿ
ಹುದ್ದೆಗಳ ಮೀಸಲಾತಿ ಹಂಚಿಕೆ ಈ ರೀತಿ ಇದೆ;
ವಯೋಮಿತಿ ಎಷ್ಟು?
21 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ವಯೋಮಿತಿಯನ್ನು ದಿನಾಂಕ 01–01-2023ಕ್ಕೆ ಲೆಕ್ಕ ಹಾಕಲಾಗುತ್ತದೆ. ಗರಿಷ್ಠ ವಯೋಮಿತಿಯಲ್ಲಿ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಸಡಿಲಿಕೆ ನೀಡಲಾಗಿರುತ್ತದೆ.
ಅರ್ಜಿ ಶುಲ್ಕ ಎಷ್ಟು?
ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯುಎಸ್ ಅಭ್ಯರ್ಥಿಗಳಿಗೆ 700 ರೂ.ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಸಬಹುದಾಗಿದೆ. ಎಸ್‌ಸಿ/ಎಸ್‌ಟಿ, PwBD ಅಭ್ಯರ್ಥಿಗಳು ಇಂಟಿಮೇಷನ್ ಶುಲ್ಕ 85 ರೂ. ಪಾವತಿಸಬೇಕಿರುತ್ತದೆ.
ವೇತನ ಶ್ರೇಣಿ: ಬೇಸಿಕ್ ವೇತನ ಮಾಸಿಕ 53,600 ರೂ. ಗಳಾಗಿದ್ದು, ವೇತನ ಶ್ರೇಣಿ ಇಂತಿದೆ: ರೂ.53,600- 2,645(14)-90,630-2,865(4)-1,02,090. ಇದಲ್ಲದೆ, ಡಿಎ/ಎಚ್‌ಆರ್‌ಎ, ಮೆಡಿಕಲ್ ಇನ್ನಿತರ ಭತ್ಯೆಗಳೂ ಇರುತ್ತವೆ.
ಹೆಚ್ಚಿನ ಮಾಹಿತಿಗೆ ಎಲ್‌ಐಸಿ ವೆಬ್‌ಸೈಟ್ ವಿಳಾಸ: Click Here
ನೇಮಕ ಹೇಗೆ?
ಮೂರು ಹಂತದ ನೇಮಕ ಪ್ರಕ್ರಿಯೆ ಮೂಲಕ ಈ ಹುದ್ದೆಗಳಿಗೆ ನೇಮಕ ನಡೆಯಲಿದೆ. ಮೊದಲಿಗೆ ಪೂರ್ವಭಾವಿ ಪರೀಕ್ಷೆ (100 ಅಂಕಗಳಿಗೆ) ನಡೆಸಲಾಗುತ್ತದೆ, ಇದರಲ್ಲಿ ಅರ್ಹತೆ ಪಡೆದವರಿಗೆ ಮೂಖ್ಯ ಪರೀಕ್ಷೆ (300 ಅಂಕಗಳಿಗೆ) ನಡೆಸಲಾಗುತ್ತದೆ. ಇದರ ಜತೆಗೆ 25 ಅಂಕಗಳಿಗೆ ವಿವರಣಾತ್ಮಕ ಪರೀಕ್ಷೆಯೂ ನಡೆಯಲಿದೆ. ಇದರಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಮೂರನೇ ಹಂತದಲ್ಲಿ ನಡೆಯಲಿರುವ ಸಂದರ್ಶನಕ್ಕೆ ಅಭ್ಯರ್ಥಿಗಳನ್ನು ಆಹ್ವಾನಿಸಲಾಗುತ್ತದೆ. ಮುಖ್ಯ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here ) ಮಾಡಿ.
ರಾಜ್ಯದಲ್ಲಿ ಎಲ್ಲೆಲ್ಲಿ ಪರೀಕ್ಷೆ?
ರಾಜ್ಯದ ಬೆಳಗಾವಿ, ಬೆಂಗಳೂರು, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ಪರೀಕ್ಷಾ ಕೇಂದ್ರ ಇರಲಿದೆ. ಮುಖ್ಯ ಪರೀಕ್ಷೆಯನ್ನು ಬೆಂಗಳೂರು, ಬೆಳಗಾವಿ ಮತ್ತು ಶಿವಮೊಗ್ಗದಲ್ಲಿ ಮಾತ್ರ ನಡೆಸಲಾಗುತ್ತದೆ. ಪರೀಕ್ಷೆಯು ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಮಾತ್ರ ನಡೆಯಲಿದ್ದು, ಕನ್ನಡದಲ್ಲಿ ಬರೆಯಲು ಅವಕಾಶವಿರುವುದಿಲ್ಲ.
ಇದನ್ನೂ ಓದಿ : DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ