ಉದ್ಯೋಗ
Meta Layoffs : ಭಾರತದಲ್ಲೂ ಫೇಸ್‌ಬುಕ್ ಜನಪ್ರಿಯತೆ ಕುಸಿಯುತ್ತಿದೆಯೇ?! ಪ್ರಮುಖರಿಗೆ ಕಂಪನಿಯ ಗೇಟ್‌ಪಾಸ್
Meta Layoffs ಫೇಸ್‌ಬುಕ್ ಜನಪ್ರಿಯತೆ ಅಮೆರಿಕದ ಬಳಿಕ ಇದಿಗ ಭಾರತದಲ್ಲೂ ಕುಸಿಯುತ್ತಿದೆಯೇ ಎಂಬ ಆತಂಕದ ನಡುವೆ ಹಿರಿಯ ಉದ್ಯೋಗಿಗಳನ್ನು ಫೇಸ್‌ಬುಕ್ ಇಂಡಿಯಾ ವಜಾಗೊಳಿಸಿದೆ.
ನವ ದೆಹಲಿ: ಸಾಮಾಜಿಕ ಜಾಲತಾಣ ದಿಗ್ಗಜ ಫೇಸ್‌ಬುಕ್ ಸೃಷ್ಟಿಯಾಗಿದ್ದು ಅಮೆರಿಕದಲ್ಲಾದರೂ, ಅದಕ್ಕೆ ಅತಿ ದೊಡ್ಡ ಮಾರುಕಟ್ಟೆ ಇರುವುದು ಭಾರತದಲ್ಲಿ. ಆದರೆ ಇದೀಗ ( Meta Layoffs) ಭಾರತದಲ್ಲೂ ಫೇಸ್‌ಬುಕ್ ಜನಪ್ರಿಯತೆ ಕುಸಿಯುತ್ತಿದೆಯೇ ಎಂಬ ಪ್ರಶ್ನೆ ಉಂಟಾಗಿದೆ. ಇದಕ್ಕೆ ಕಾರಣ ಫೇಸ್‌ಬುಕ್ ಇಂಡಿಯಾದ ಪ್ರಮುಖರು (Facebook India) ಇದೀಗ ತಮ್ಮ ಉದ್ಯೋಗವನ್ನೇ ಕಳೆದುಕೊಂಡಿರುವುದು.
ಫೇಸ್‌ಬುಕ್ ಇಂಡಿಯಾದ ಮಾರುಕಟ್ಟೆ ವಿಭಾಗದ ನಿರ್ದೇಶಕ ಅವಿನಾಶ್ ಪಂತ್, ಮಾಧ್ಯಮ ಪಾಲುದಾರರಾದ ಸಾಕೇತ್ ಜಾ ಸೌರಭ್ ಅವರು ಉದ್ಯೋಗ ಕಳೆದುಕೊಂಡಿದ್ದಾರೆ. ಮಾರ್ಕೆಟಿಂಗ್, ಸೈಟ್ ಸೆಕ್ಯುರಿಟಿ, ಎಂಟರ್ ಪ್ರೈಸ್ ಎಂಜಿನಿಯರಿಂಗ್, ಪ್ರೋಗ್ರಾಮ್ ಮ್ಯಾನೇಜ್‌ಮೆಂಟ್, ಕಂಟೆಂಟ್ ಸ್ಟ್ರಾಟಜಿ, ಕಾರ್ಪೊರೇಟ್ ಕಮ್ಯುನಿಕೇಶನ್ ವಿಭಾಗದಲ್ಲಿ ಉದ್ಯೋಗ ಕಡಿತ ಆಗಿದೆ.
ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾ 2023ರ ಆದಿಯಲ್ಲಿಯೇ 11,000 ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಇದೀಗ ಎರಡನೇ ಸುತ್ತಿನ ಹುದ್ದೆಕಡಿತ ಶುರುವಾಗಿದೆ. ಕಂಪನಿ ಆರ್ಟಿಫಿಶಿಯಲ್ ಇಂಟಲಿಜೆನ್ಸ್‌ಗೆ ಫೋಕಸ್ ನೀಡುತ್ತಿದೆ.
ಇದನ್ನೂ ಓದಿ : Meta layoffs : ಫೇಸ್‌ಬುಕ್ ಮಾತೃಸಂಸ್ಥೆ ಮೆಟಾದಲ್ಲಿ ಮುಂದಿನವಾರ ಮತ್ತೆ 6,000 ಉದ್ಯೋಗ ಕಡಿತ
ಫೇಸ್‌ಬುಕ್‌ನ ಮಾತೃಸಂಸ್ಥೆ ಮೆಟಾ ಎರಡನೇ ಸುತ್ತಿನಲ್ಲಿ 10,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದೆ. ಒಟ್ಟು ಮೂರು ಹಂತಗಳಲ್ಲಿ ದೀರ್ಘಕಾಲ ಇದು ನಡೆಯುವ ನಿರೀಕ್ಷೆ ಇದೆ. ಕಂಪನಿಯ ವಹಿವಾಟಿನ ಸ್ವರೂಪವನ್ನೇ ಬದಲಾಯಿಸಲಾಗುತ್ತಿದೆ. ಹೀಗಾಗಿ ಉದ್ಯೋಗ ಕಡಿತ ಅನಿವಾರ್ಯವಾಗಿದೆ ಎಂದು ಸಿಇಒ ಜುಕರ್ ಬರ್ಗ್ ಹೇಳಿದ್ದರು.
2022ರಲ್ಲಿ ನಡೆಸಿದ ಅಧ್ಯಯನದ ಪ್ರಕಾರ ಫೇಸ್‌ಬುಕ್‌ನ ಬೆಳವಣಿಗೆ ಇಳಿಕೆಯಾಗಿತ್ತು. ಸಕ್ರಿಯ ಬಳಕೆದಾರರ ಸಂಖ್ಯೆ ಇಳಿದಿತ್ತು. ಅಮೆರಿಕದಲ್ಲಿ ಫೇಸ್‌ಬುಕ್ ಬಳಕೆದಾರರ ಸಂಖ್ಯೆ ಗಣನೀಯ ತಗ್ಗಿದೆ.
ಉದ್ಯೋಗ
UPSC Prelims 2023: ನಾಳೆ ಯುಪಿಎಸ್‌ಸಿ ಪ್ರಿಲಿಮ್ಸ್; ಈ ಬಾರಿಯೂ ಕನ್ನಡದಲ್ಲಿ ನಡೆಯೋಲ್ಲ ಪರೀಕ್ಷೆ
ನಾಗರಿಕ ಸೇವಾ ಹುದ್ದೆಗಳ ನೇಮಕಕ್ಕಾಗಿ ಕೇಂದ್ರ ಲೋಕಸೇವಾ ಆಯೋಗವು ಭಾನುವಾರ ಪೂರ್ವಭಾವಿ ಪರೀಕ್ಷೆ (UPSC Prelims 2023) ನಡೆಸಲಿದೆ. ಈ ಪರೀಕ್ಷೆ ಕುರಿತ ಮಾಹಿತಿ ಇಲ್ಲಿದೆ.
ಬೆಂಗಳೂರು: ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‌ಸಿ) ಭಾರತೀಯ ನಾಗರಿಕ ಸೇವಾ ಅಧಿಕಾರಿ (ಐಎಎಸ್) ಮತ್ತು ಭಾರತೀಯ ಅರಣ್ಯ ಸೇವಾ ಅಧಿಕಾರಿ (ಐಎಫ್‌ಎಸ್) ಹುದ್ದೆಗಳ ನೇಮಕಕ್ಕೆ ಮೇ 28ರ ಭಾನುವಾರದಂದು ಪೂರ್ವಭಾವಿ ಪರೀಕ್ಷೆ (UPSC Prelims 2023) ನಡೆಸಲಿದೆ.
ರಾಜ್ಯದಲ್ಲಿ ಬೆಂಗಳೂರು, ಧಾರವಾಡ ಮತ್ತು ಮೈಸೂರಿನಲ್ಲಿ ಪೂರ್ವಭಾವಿ ಪರೀಕ್ಷೆ ನಡೆಯಲಿದ್ದು ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪೂರ್ವ ಭಾವಿ ಪರೀಕ್ಷೆಯನ್ನು ಕನ್ನಡದಲ್ಲಿಯೂ ನಡೆಸಬೇಕೆಂಬ ಬೇಡಿಕೆಗೆ ಯುಪಿಎಸ್‌ಸಿಯು ಈ ಬಾರಿಯೂ ಮನ್ನಣೆ ನೀಡಿಲ್ಲ. ಹೀಗಾಗಿ ಅಭ್ಯರ್ಥಿಗಳು ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಬಹುದಾಗಿದೆ. ʻʻದೇಶದ ಪ್ರತಿಷ್ಠಿತ ಪರೀಕ್ಷೆ ಎಂದು ಹೆಸರು ಮಾಡಿರುವ ಈ ಪರೀಕ್ಷೆಯ ಪೂರ್ವಭಾವಿ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಿದರೆ ಮಾತ್ರ ರಾಜ್ಯದ ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆʼʼ ಎಂದು ಕನ್ನಡ ಪರ ಹೋರಾಟಗಾರ ಗಿರೀಶ್ ಮತ್ತೇರ ಒತ್ತಾಯಿಸಿದ್ದಾರೆ.
ಈಗಾಗಲೇ ಪ್ರವೇಶ ಪತ್ರವನ್ನು ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದ್ದು, ಅಭ್ಯರ್ಥಿಗಳು ಇದನ್ನು ಡೌನ್‌ಲೋಡ್ ಮಾಡಿ, ಪ್ರಿಂಟ್ ತೆಗೆದುಕೊಂಡು ಪರೀಕ್ಷೆಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ. ಎರಡು ಶಿಫ್ಟ್‌ಗಳಲ್ಲಿ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 9:30 ರಿಂದ 11:30ರ ವರೆಗೆ ಒಂದು ಶಿಫ್ಟ್‌ನ ಪರೀಕ್ಷೆ ನಡೆದರೆ ಮತ್ತೊಂದು ಶಿಫ್ಟ್‌ನ ಪರೀಕ್ಷೆಯು ಮಧ್ಯಾಹ್ನ 2:30 ರಿಂದ 4:30ರ ವರೆಗೆ ನಡೆಯಲಿದೆ. ಈ ಪರೀಕ್ಷೆಯು ಆಫ್‌ಲೈನ್‌ನಲ್ಲಿ ನಡೆಸಲಾಗುತ್ತದೆ.
ಪ್ರವೇಶ ಪತ್ರದೊಂದಿಗೆ ಫೋಟೊ ಇರುವ ಗುರುತಿನ ಚೀಟಿ ತರುವುದು ಕಡ್ಡಾಯ ಎಂದು ಯುಪಿಎಸ್‌ಸಿ ತಿಳಿಸಿದೆ. ಪರೀಕ್ಷೆ ಆರಂಭವಾಗುವುದಕ್ಕಿಂತಲೂ ಹತ್ತು ನಿಮಿಷ ಮೊದಲ ಪರೀಕ್ಷಾ ಕೇಂದ್ರದ ಬಾಗಿಲನ್ನು ಮುಚ್ಚಲಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ಸಾಕಷ್ಟು ಮೊದಲೇ ಪರೀಕ್ಷಾ ಕೇಂದ್ರಕ್ಕೆ ಆಗಮಿಸಬೇಕೆಂದು ಸೂಚಿಸಲಾಗಿದೆ. ಪರೀಕ್ಷಾ ಕೇಂದ್ರದ ಬಾಗಿಲು ಮುಚ್ಚಿದ ನಂತರ ಯಾವುದೇ ಅಭ್ಯರ್ಥಿಗೆ ಪರೀಕ್ಷಾ ಕೇಂದ್ರ ಪ್ರವೇಶಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಎಚ್ಚರಿಸಲಾಗಿದೆ. ಪ್ರವೇಶ ಕೇಂದ್ರ ಮಾಹಿತಿಯನ್ನು ಪ್ರವೇಶ ಪತ್ರದಲ್ಲಿ ಒದಗಿಸಲಾಗಿರುತ್ತದೆ.
ಇದನ್ನೂ ಓದಿ : IAS prelims 2022: ಕೊನೆಯ ಕ್ಷಣದ ಸಿದ್ಧತೆ ಹೇಗಿರಬೇಕು, ಏನೇನು ಓದಬೇಕು ಗೊತ್ತೇ?
ಪರೀಕ್ಷೆಯಲ್ಲಿ ಅನುಸರಿಸಬೇಕಾಗಿರುವ ನಿಯಮಗಳನ್ನು ಪ್ರವೇಶ ಪತ್ರದಲ್ಲಿ ಒದಗಿಸಲಾಗುತ್ತದೆ. ಇದನ್ನು ಅಭ್ಯರ್ಥಿಗಳು ಓದಿಕೊಂಡೇ ಪರೀಕ್ಷೆಗೆ ಹಾಜರಾಗಬೇಕಿರುತ್ತದೆ. ಪರೀಕ್ಷೆಯಲ್ಲಿ ಸರಿ ಉತ್ತರವನ್ನು ಗುರುತಿಸಲು ಕೇವಲ ಬ್ಲಾಕ್ ಬಾಲ್ ಪಾಯಿಂಟ್ ಪೆನ್ ಅನ್ನು ಮಾತ್ರ ಬಳಸುವಂತೆ ಆಯೋಗ ಕೋರಿದೆ.
ಮೊದಲಿಗೆ ಪೂರ್ವಭಾವಿ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮುಖ್ಯ ಪರೀಕ್ಷೆ ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂದರ್ಶನ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ, ನೇಮಕ ಮಾಡಿಕೊಳ್ಳಲಾಗುತ್ತದೆ.
ಪ್ರವೇಶ ಪತ್ರ ಪಡೆಯಲು ಇಲ್ಲಿ ಕ್ಲಿಕ್ (Click Here) ಮಾಡಿ.
ಈ ಬಾರಿ ಒಟ್ಟು 1,105 ಐಎಎಸ್ ಮತ್ತು 150 ಐಎಫಎಸ್ ಹುದ್ದೆಗಳಿಗೆ ನೇಮಕ ನಡೆಯಲಿದೆ. ಕಳೆದ ಕೆಲವು ವರ್ಷಗಳಿಗೆ ಹೋಲಿಸಿದಲ್ಲಿ ಈ ಬಾರಿ ಅತಿ ಹೆಚ್ಚು ಐಎಎಸ್ ಹುದ್ದೆಗಳಿಗೆ ನೇಮಕ ನಡೆಯುತ್ತಿದೆ. ಕಳೆದ ವರ್ಷ ಮೊದಲಿಗೆ ಕಡಿಮೆ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದರೂ ನಂತರ 1,011 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿತ್ತು. 2016 ರಲ್ಲಿ 1079 ಹುದ್ದೆಗಳಿಗೆ ನೇಮಕ ನಡೆದಿತ್ತು. 2017 ರಲ್ಲಿ 980, 2018 ರಲ್ಲಿ 782, 2019 ರಲ್ಲಿ 896 ಮತ್ತು 2020 ರಲ್ಲಿ 796 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿತ್ತು. 2021 ರಲ್ಲಿ ಕೇವಲ 712 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗಿತ್ತು. ಈ ಬಾರಿಯ ಹುದ್ದೆಗಳ ಸಂಖ್ಯೆ ಇನ್ನಷ್ಟು ಹೆಚ್ಚುವ ಸಾಧ್ಯತೆಗಳಿವೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : UPSC Prelims 2023: ಮೇ 28ರಂದು ಬೆಂಗಳೂರಿನಲ್ಲಿ ಬೆಳಗ್ಗೆ 6ರಿಂದಲೇ ಮೆಟ್ರೋ ಸಂಚಾರ ಆರಂಭ
ಸಹಾಯವಾಣಿ ಸಂಖ್ಯೆ: 011-23385271 / 011-23381125 / 011-23098543
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ : https://www.upsc.gov.in/
ಇದನ್ನೂ ಓದಿ: UPSC Preparation : ವೃತ್ತಿಪರರು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಸಕ್ಸೆಸ್ ಆಗಬೇಕಿದ್ದರೆ ಏನು ಮಾಡಬೇಕು?
ಉದ್ಯೋಗ
ISRO Recruitment 2023 : ಇಸ್ರೊದಲ್ಲಿ ವಿಜ್ಞಾನಿಯಾಗಬೇಕೇ? ಈಗ ಒದಗಿ ಬಂದಿದೆ ಅವಕಾಶ!
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) 303 ಸೈಂಟಿಸ್ಟ್/ಎಂಜಿನಿಯರ್-ಎಸ್‌ಸಿ ನೇಮಕಕ್ಕೆ (ISRO Recruitment 2023) ಅಧಿಸೂಚನೆ ಹೊರಡಿಸಿದ್ದು ಈ ನೇಮಕದ ಮಾಹಿತಿ ಇಲ್ಲಿದೆ.
ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ಒಂದಲ್ಲಾ ಒಂದು ರೀತಿಯ ಸಾಧನೆ ಮಾಡುತ್ತಿರುವ ನಮ್ಮ ದೇಶದ ಹೆಮ್ಮೆಯ ʻಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆʼ (ಇಸ್ರೊ) 303 ಸೈಂಟಿಸ್ಟ್/ಎಂಜಿನಿಯರ್-ಎಸ್‌ಸಿ ನೇಮಕಕ್ಕೆ (ISRO Recruitment 2023) ಅಧಿಸೂಚನೆ ಹೊರಡಿಸಿದೆ.
ಮುಖ್ಯವಾಗಿ ಉಪಗ್ರಹಗಳ ನಿರ್ಮಾಣ, ಉಪಗ್ರಹಗಳ ಉಡಾವಣೆ, ಬಾಹ್ಯಾಕಾಶದಲ್ಲಿ ಸಂಶೋಧನಾ ಚಟುವಟಿಕೆಗಳನ್ನು ನಡೆಸುತ್ತಿರುವ ಇಸ್ರೊ, ಗ್ರೂಪ್ ʻಎʼಗೆ ಸೇರಿದ ಈ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದ್ದು, ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಎಲೆಕ್ಟ್ರಾನಿಕ್ಸ್, ಮೆಕ್ಯಾನಿಕಲ್ ಮತ್ತು ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿಇ/ಬಿಟೆಕ್ ಮಾಡಿರುವ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಯಾವೆಲ್ಲಾ ಹುದ್ದೆಗಳಿಗೆ ನೇಮಕ?
1. ಸೈಂಟಿಸ್ಟ್/ಎಂಜಿನಿರ್-ಎಸ್‌ಸಿ (ಎಲೆಕ್ಟ್ರಾನಿಕ್ಸ್) – 90 ಹುದ್ದೆ
ವಿದ್ಯಾರ್ಹತೆ: ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.
2. ಸೈಂಟಿಸ್ಟ್/ ಎಂಜಿನಿಯರ್ ʻಎಸ್‌ಸಿʼ (ಮೆಕ್ಯಾನಿಕಲ್)- 160 ಹುದ್ದೆ
ವಿದ್ಯಾರ್ಹತೆ: ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.
3. ಸೈಂಟಿಸ್ಟ್/ ಎಂಜಿನಿಯರ್ ʻಎಸ್‌ಸಿʼ (ಕಂಪ್ಯೂಟರ್ ಸೈನ್ಸ್)- 47 ಹುದ್ದೆ
ವಿದ್ಯಾರ್ಹತೆ: ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.
4. ಸೈಂಟಿಸ್ಟ್/ ಎಂಜಿನಿಯರ್ ʻಎಸ್‌ಸಿʼ (ಎಲೆಕ್ಟ್ರಾನಿಕ್ಸ್)- 2 ಹುದ್ದೆ (Autonomous Body)
ವಿದ್ಯಾರ್ಹತೆ: ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.
5. ಸೈಂಟಿಸ್ಟ್/ ಎಂಜಿನಿಯರ್ ʻಎಸ್‌ಸಿʼ (ಕಂಪ್ಯೂಟರ್ ಸೈನ್ಸ್)- 01 ಹುದ್ದೆ (Autonomous Body)
ವಿದ್ಯಾರ್ಹತೆ: ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಪದವಿಯಲ್ಲಿ ಕನಿಷ್ಠ ಶೇ. 65 ರಷ್ಟು ಅಂಕ ಪಡೆದಿರಬೇಕಾದದು ಕಡ್ಡಾಯ.
ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 14-06-2023
ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 16-06-2023
ಮಾಹಿತಿ ಪಡೆಯಲು ಇ-ಮೇಲ್ ವಿಳಾಸ: [email protected]
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ: www.isro.gov.in
ಅರ್ಜಿ ಸಲ್ಲಿಸಲು ಇಲ್ಲಿ (Click Here) ಕ್ಲಿಕ್ ಮಾಡಿ.
ವಯೋಮಿತಿ ಎಷ್ಟು?
ಈ ಎಲ್ಲ ಹುದ್ದೆಗಳಿಗೂ ಗರಿಷ್ಠ ವಯೋಮಿತಿ 28 ವರ್ಷ. ವಯೋಮಿತಿಯನ್ನು ದಿನಾಂಕ 14-06-2023ಕಕ್ಕೆ ಲೆಕ್ಕ ಹಾಕಲಾಗುತ್ತದೆ.
ನೇಮಕಾತಿಯ ಸಂಪೂರ್ಣ ಮಾಹಿತಿಗೆ ಅಧಿಸೂಚನೆ (Click Here) ನೋಡಿ.
ಅರ್ಜಿ ಶುಲ್ಕ ಎಷ್ಟು?
ಅಭ್ಯರ್ಥಿಗಳು 250 ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಆನ್‌ಲೈನ್‌ನಲ್ಲಿಯೇ ಶುಲ್ಕ ಪಾವತಿಗೆ ಅವಕಾಶ ನೀಡಲಾಗಿದ್ದು, ಒಂದು ವೇಳೆ ಆನ್‌ಲೈನ್‌ನಲ್ಲಿ ಸಾಧ್ಯವಾಗದಿದ್ದರೆ ಎಸ್‌ಬಿಐ ಶಾಖೆಗಳ ಮೂಲಕವೂ ಅರ್ಜಿ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿರುತ್ತದೆ.
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ಅಭ್ಯರ್ಥಿಗಳು ಈ ಮೇಲಿನ ಯಾವುದಾದರೂ ಒಂದು ಅಥವಾ ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆದರೆ ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದಾಗ ಪ್ರತ್ಯೇಕವಾಗಿ ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಆದರೆ ಒಂದೇ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ನೀಡಲಾಗಿರುತ್ತದೆ.
ನೇಮಕ ಹೇಗೆ?
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬಹುದಾಗಿದೆ. ಅರ್ಜಿ ಸಲ್ಲಿಸುವಾಗಲೇ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಬೇಕಿರುತ್ತದೆ. ಪರೀಕ್ಷೆಯ ಕುರಿತು ಅಭ್ಯರ್ಥಿಯ ಇ-ಮೇಲ್ ವಿಳಾಸಕ್ಕೆ ಮಾಹಿತಿ ನೀಡಲಾಗುತ್ತದೆ.
ಅಬ್ಜೆಕ್ಟೀವ್ ಮಾದರಿಯಲ್ಲಿ ಲಿಖಿತ ಪರೀಕ್ಷೆಯು ನಡೆಯಲಿದ್ದು, ಪ್ರಶ್ನೆ ಪತ್ರಿಕೆಯು ಎರಡು ಭಾಗಗಳನ್ನು ಒಳಗೊಂಡಿರಲಿದೆ. 120 ನಿಮಿಷ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದಲ್ಲಿ 1:5 ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತದೆ. ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಆಧಾರದಲ್ಲಿ ನೇಮಕ ನಡೆಯಲಿದೆ.
ಇದನ್ನೂ ಓದಿ: IDBI Recruitment 2023 : ಐಡಿಬಿಐ ಬ್ಯಾಂಕ್‌ನಲ್ಲಿ 1,036 ಎಕ್ಸಿಕ್ಯೂಟಿವ್ ಹುದ್ದೆ; ಪದವೀಧರರಿಂದ ಅರ್ಜಿ ಆಹ್ವಾನ
ಉದ್ಯೋಗ
UPSC Prelims 2023: ಮೇ 28ರಂದು ಬೆಂಗಳೂರಿನಲ್ಲಿ ಬೆಳಗ್ಗೆ 6ರಿಂದಲೇ ಮೆಟ್ರೋ ಸಂಚಾರ ಆರಂಭ
UPSC Prelims 2023: ಮೇ 28ರಂದು ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ನಮ್ಮ ಮೆಟ್ರೋ ರೈಲು ಸೇವೆ ಬೆಳಗ್ಗೆ 6ರಿಂದಲೇ ಆರಂಭಿಸಲು ಬಿಎಂಆರ್‌ಸಿಎಲ್ ನಿರ್ಧರಿಸಿದೆ.
ಬೆಂಗಳೂರು: ಕೇಂದ್ರ ಲೋಕಾ ಸೇವಾ ಆಯೋಗದ (ಯುಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆ ಮೇ 28ರಂದು ನಡೆಯಲಿದೆ. ಹೀಗಾಗಿ ಪರೀಕ್ಷೆಗೆ (UPSC Prelims 2023) ಹಾಜರಾಗುವ ಅಭ್ಯರ್ಥಿಗಳಿಗೆ ಅನುಕೂಲವಾಗಲು ಭಾನುವಾರ ಬೆಳಗ್ಗೆ 6 ಗಂಟೆಯಿಂದಲೇ ನಗರದಲ್ಲಿ ಮೆಟ್ರೋ ರೈಲು ಸೇವೆ ಆರಂಭಿಸಲಾಗುತ್ತದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ತಿಳಿಸಿದೆ.
ನಗರದ ಬೈಯಪ್ಪನಹಳ್ಳಿ, ಕೆಂಗೇರಿ, ನಾಗಸಂದ್ರ, ರೇಷ್ಮೆ ಸಂಸ್ಥೆ, ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣಗಳಲ್ಲಿ ಬೆಳಗ್ಗೆ 7 ಗಂಟೆಗೆ ಬದಲಾಗಿ 6 ಗಂಟೆಗೆ ರೈಲು ಸೇವೆ ಆರಂಭವಾಗಲಿದೆ. ಇದನ್ನು ಪೂರ್ಣ ಪುಮಾಣದಲ್ಲಿ ಉಪಯೋಗಿಸಿಕೊಳ್ಳಬೇಕೆಂದು ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) ಮನವಿ ಮಾಡಿದೆ.
ಇದನ್ನೂ ಓದಿ | Jobs News : ಕೇಂದ್ರ ಸರ್ಕಾರದ ಉದ್ಯೋಗ ಬೇಕೇ? ಯುಪಿಎಸ್‌ಸಿ, ಎಸ್‌ಎಸ್‌ಸಿಯ ಈ ವೇಳಾಪಟ್ಟಿ ನೋಡಿ!
ಉದ್ಯೋಗ
IDBI Recruitment 2023 : ಐಡಿಬಿಐ ಬ್ಯಾಂಕ್‌ನಲ್ಲಿ 1,036 ಎಕ್ಸಿಕ್ಯೂಟಿವ್ ಹುದ್ದೆ; ಪದವೀಧರರಿಂದ ಅರ್ಜಿ ಆಹ್ವಾನ
ದೇಶದ ಪ್ರಮುಖ ಅಭಿವೃದ್ಧಿ ಬ್ಯಾಂಕುಗಳಲ್ಲಿ ಒಂದಾದ ಐಡಿಬಿಐ ಬ್ಯಾಂಕ್ ಎಕ್ಸಿಕ್ಯೂಟಿವ್ ಹುದ್ದೆಗಳ ನೇಮಕಕ್ಕೆ ಆನ್‌ಲೈನ್‌ನಲ್ಲಿ (IDBI Recruitment 2023) ಅರ್ಜಿ ಆಹ್ವಾನಿಸಿದೆ. ಈ ನೇಮಕದ ಸಂಪೂರ್ಣ ಮಾಹಿತಿ ಇಲ್ಲಿದೆ.
ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಮತ್ತು ಭಾರತ ಸರ್ಕಾರದ ಒಡೆತನಕ್ಕೆ ಸೇರಿದ, ದೇಶದ ಪ್ರಮುಖ ಅಭಿವೃದ್ಧಿಗೆ ಮೀಸಲಾದ ವಿತ್ತೀಯ ಸಂಸ್ಥೆಗಳಲ್ಲಿ (ಬ್ಯಾಂಕ್‌ಗಳಲ್ಲಿ) ಒಂದಾದ ಐಡಿಬಿಐ ಬ್ಯಾಂಕ್ ಗುತ್ತಿಗೆ ಆಧಾರದ ಮೇಲೆ ಎಕ್ಸಿಕ್ಯೂಟಿವ್‌ಗಳ ನೇಮಕಕ್ಕೆ (IDBI Recruitment 2023) ಅಧಿಸೂಚನೆ ಹೊರಡಿಸಿದೆ. ಒಟ್ಟು 1,036 ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ನೇಮಕ ನಡೆಯುತ್ತಿದ್ದು, ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಜೂನ್ 07 ಕೊನೆಯ ದಿನವಾಗಿರುತ್ತದೆ.
ಈ 1,036 ಹುದ್ದೆಗಳಲ್ಲಿ ಎಸ್‌ಸಿ ಅಭ್ಯರ್ಥಿಗಳಿಗೆ 160, ಎಸ್‌ಟಿ ಅಭ್ಯರ್ಥಿಗಳಿಗೆ 67 ಒಬಿಸಿ ಅಭ್ಯರ್ಥಿಗಳಿಗೆ 255, ಇಡಬ್ಲ್ಯುಎಸ್ ಅಭ್ಯರ್ಥಿಗಳಿಗೆ 103 ಹುದ್ದೆಗಳನ್ನು ಹಾಗೂ ಉಳಿದ 451 ಹುದ್ದೆಗಳನ್ನು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಶುಲ್ಕ ನಿಗದಿಪಡಿಸಲಾಗಿಲ್ಲ.
ಅರ್ಜಿ ಸಲ್ಲಿಸಲು ಇಲ್ಲಿ (Click Here) ಕ್ಲಿಕ್ ಮಾಡಿ
ವಿದ್ಯಾರ್ಹತೆ ಏನು?
ಯಾವುದೇ ವಿಷಯದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಡಿಪ್ಲೊಮಾ ಮಾಡಿದವರನ್ನು ಈ ಹುದ್ದೆಗಳಿಗೆ ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
ಅಭ್ಯರ್ಥಿಗಳು ಕಂಪ್ಯೂಟರ್‌ನಲ್ಲಿ ಕಾರ್ಯನಿರ್ವಹಿಸುವ ಜ್ಞಾನ ಹೊಂದಿರಬೇಕಾದದು ಕಡ್ಡಾಯ.
ವಯೋಮಿತಿ ಎಷ್ಟು?
ಅಭ್ಯರ್ಥಿಯ ಕನಿಷ್ಠ ವಯಸ್ಸು 20 ವರ್ಷ. ಗರಿಷ್ಠ ವಯೋಮಿತಿ 25 ವರ್ಷ. ವಯೋಮಿತಿಯನ್ನು ಮೇ 1, 2023ಕಕ್ಕೆ ಲೆಕ್ಕಹಾಕಲಾಗುತ್ತದೆ. ಎಸ್‌ಸಿ, ಎಸ್‌ಟಿ, ಓಬಿಸಿ, ಮಾಜಿ ಸೈನಿಕ, ವಿಕಲಚೇತನ ಅಭ್ಯರ್ಥಿಗಳಿಗೆ ಸರ್ಕಾರದ ನಿಯಮದ ಪ್ರಕಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿರುತ್ತದೆ.
ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 07-06-2023
ಆನ್‌ಲೈನ್‌ನ ಪರೀಕ್ಷೆಯ ದಿನಾಂಕ : ಜುಲೈ 2, 2023
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ ವಿಳಾಸ: https://www.idbibank.in
ವೇತನ ಎಷ್ಟಿರುತ್ತದೆ?
ಐಡಿಬಿಐ ಬ್ಯಾಂಕ್‌ನಲ್ಲಿನ ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಮೂರು ವರ್ಷಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಮೊದಲ ವರ್ಷ ಮಾಸಿಕ ರೂ.29,000 ವೇತನ ನೀಡಲಾಗುತ್ತದೆ. ಎರಡನೇ ವರ್ಷ ಮಾಸಿಕ 31,000ರೂ. ವೇತನ ನೀಡಿದರೆ ಮೂರನೇ ವರ್ಷ ಮಾಸಿ ರೂ.34,000 ವೇತನ ನೀಡಲಾಗುತ್ತದೆ.
ಮೂರು ವರ್ಷ ಪೂರ್ಣಗೊಳಿಸಿದವರು ಗ್ರೇಡ್ ʻಎʼಯ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಕ್ಕೆ ನಡೆಸಲಾಗುವ ನೇಮಕ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯುತ್ತಾರೆ. ಈ ಹುದ್ದೆಯ ಮಾಸಿಕ ಬೇಸಿಕ್ ವೇತನವು 36,000ಸಾವಿರ ರೂ.ಗಳಾಗಿರುತ್ತವೆ. ವೇತನ ಶ್ರೇಣಿ ಇಂತಿದೆ: 36,000-1,490(7)-46,430-1,740(2)–49,910–1,990(7)-63,840(17years)
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ನೇಮಕ ಹೇಗೆ?
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಆನ್‌ಲೈನ್ ಟೆಸ್ಟ್ (OT) ನಡೆಸಲಾಗುತ್ತದೆ. ಜುಲೈನಲ್ಲಿ ಈ ಪರೀಕ್ಷೆ ನಡೆಯಲಿದೆ. ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಈ ಪರೀಕ್ಷೆ ನಡೆಸಲಾಗುತ್ತಿದ್ದು, ಋಣಾತ್ಮಕ ಮೌಲ್ಯಮಾಪನವಿರುತ್ತದೆ. ಅಂದರೆ ತಪ್ಪು ಉತ್ತರಗಳಿಗೆ 0.25 ಅಂಕಗಳನ್ನು ಕಳೆಯಲಾಗುತ್ತದೆ.
ಒಟ್ಟು 200 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, 200 ಪ್ರಶ್ನೆಗಳನ್ನು ಕೇಳಲಾಗಿರುತ್ತದೆ. ಪರೀಕ್ಷೆ ಬರೆಯಲು 2 ಗಂಟೆ ಕಾಲಾವಕಾಶ ನೀಡಲಾಗುತ್ತದೆ. ಪರೀಕ್ಷೆಯು ನಾಲ್ಕು ವಿಷಯಗಳನ್ನು ಒಳಗೊಂಡಿದ್ದು (1.Logical Reasoning, Data Analysis & Interpretation, 2. English Language, 3.Quantitative Aptitude, 4. General/Economy/ Banking Awareness/ Computer/IT), ಪ್ರತಿ ವಿಷಯದಲ್ಲಿಯೂ ಅಭ್ಯರ್ಥಿಯು ಅರ್ಹತಾ ಅಂಕ ಪಡೆದಿರಬೇಕಾಗುತ್ತದೆ.
ಆಲ್‌ಲೈನ್ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆಸಿ, ವೈದ್ಯಕೀಯ ಪರೀಕ್ಷೆಗೊಳಪಡಿಸಿ ನೇಮಕ ಮಾಡಿಕೊಳ್ಳಲಾಗುತ್ತದೆ.
ನೇಮಕಾತಿಯ ಸಂಪೂರ್ಣ ಮಾಹಿತಿಗೆ ಅಧಿಸೂಚನೆ (Click Here) ನೋಡಿ
ರಾಜ್ಯದಲ್ಲಿ ಎಲ್ಲೆಲ್ಲಿ ಪರೀಕ್ಷೆ?
ಎಕ್ಸಿಕ್ಯೂಟಿವ್ ಹುದ್ದೆಗಾಗಿ ನಡೆಸಲಾಗುವ ಆನ್‌ಲೈನ್ ಟೆಸ್ಟ್ ಅನ್ನು ರಾಜ್ಯದ ಬೆಂಗಳೂರು, ಬೆಳಗಾವಿ ಬೀದರ್, ದಾವಣಗೆರೆ, ಧಾರವಾಡ, ಕಲಬುರಗಿ, ಹಾಸನ, ಹುಬ್ಬಳ್ಳಿ, ಮಂಡ್ಯ, ಮಂಗಳೂರು, ಮೈಸೂರು, ಶಿವಮೊಗ್ಗ ಮತ್ತು ಉಡುಪಿಯಲ್ಲಿ ನಡೆಸಲಾಗುತ್ತದೆ.
ಇದನ್ನೂ ಓದಿ: Teacher Recruitment 2023 : 33 ಸಾವಿರ ಅತಿಥಿ ಶಿಕ್ಷಕರ ನೇಮಕಕ್ಕೆ ಒಪ್ಪಿಗೆ; ಎಲ್ಲ ಜಿಲ್ಲೆಗಳಲ್ಲಿಯೂ ಖಾಲಿ ಇವೆ ಹುದ್ದೆ
-
ಕರ್ನಾಟಕ22 hours ago
ವಿಸ್ತಾರ ಯುಗಾದಿ ಕಥಾ ಸ್ಪರ್ಧೆ ಬಹುಮಾನ: ಚಂದ್ರಶೇಖರ್ ಡಿ.ಆರ್ ಪ್ರಥಮ, ದಾದಾಪೀರ್ ಜೈಮನ್ ದ್ವಿತೀಯ, ಪೂರ್ಣಿಮಾ ಮಾಳಗಿಮನಿ ತೃತೀಯ
-
ಕರ್ನಾಟಕ22 hours ago
Karnataka Cabinet Expansion: ಪ್ರಮಾಣ ವಚನ ಸಮಾರಂಭ ಬಹಿಷ್ಕಾರ; ಊರಿಗೆ ಹೊರಟ ಒಂದೇ ಜಿಲ್ಲೆಯ 5 ಶಾಸಕರು!
-
ಕಿರುತೆರೆ21 hours ago
Deepak Gowda: ‘ಶ್ರೀರಸ್ತು ಶುಭಮಸ್ತು’ಧಾರಾವಾಹಿಯಿಂದ ಹೊರನಡೆದ ದೀಪಕ್ ಗೌಡ; ಪಾತ್ರಕ್ಕೆ ಬಂದವರು ಕಿರುತೆರೆಗೆ ಹೊಸಬರಲ್ಲ!
-
ಕರ್ನಾಟಕ17 hours ago
Karnataka Cabinet: ತಾತನನ್ನು ಮಿನಿಸ್ಟರ್ ಮಾಡಿ ಪ್ಲೀಸ್: ರಾಹುಲ್ ಗಾಂಧಿಗೆ ಪತ್ರ ಬರೆದ ಟಿ.ಬಿ. ಜಯಚಂದ್ರ ಮೊಮ್ಮಗಳು
-
ಕ್ರಿಕೆಟ್12 hours ago
World Cup 2023 : ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಫೈನಲ್ ವೇಳೆ ವಿಶ್ವಕಪ್ ವೇಳಾಪಟ್ಟಿ ಪ್ರಕಟ
-
ದೇಶ5 hours ago
New Parliament Building: ಇಂದು ಹೊಸ ಸಂಸತ್ ಭವನ ಉದ್ಘಾಟನೆ; ಹೇಗೆ ನಡೆಯಲಿದೆ ಕಾರ್ಯಕ್ರಮ?
-
ಕರ್ನಾಟಕ13 hours ago
Tumkur News: ಹೆಜ್ಜೇನು ದಾಳಿ; ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ
-
EXPLAINER3 hours ago
ವಿಸ್ತಾರ Explainer: ಹೊಸ ಸಂಸತ್ ಭವನದಲ್ಲಿ ಸ್ಥಾಪಿತಗೊಂಡ ತಮಿಳುನಾಡಿನ ಚಿನ್ನದ ಸೆಂಗೋಲ್; ಏನಿದರ ಮಹತ್ವ?