ಉದ್ಯೋಗ
Motivational | ಮಗನೊಂದಿಗೆ ಓದುತ್ತಾ ಓದುತ್ತಾ ಅಮ್ಮನೂ ಪಿಎಸ್‌ಸಿ ಪರೀಕ್ಷೆ ಪಾಸ್ ಮಾಡಿದ್ಳು!
ಕೇರಳದಲ್ಲಿ ಅಮ್ಮ-ಮಗ ಸೇರಿ ಕಮಾಲ್ ಮಾಡಿದ್ದಾರೆ. ಇಬ್ಬರೂ ಕೇರಳ ಲೋಕಸೇವಾ ಆಯೋಗ ಪರೀಕ್ಷೆಯಲ್ಲಿ ಉನ್ನತ ರ‍್ಯಾಂಕ್‌ನೊಂದಿಗೆ ಪಾಸ್ ಆಗಿ ಕೆಲಸ ಗಿಟ್ಟಿಸಿಕೊಂಡಿದ್ದಾರೆ. ಅವರಿಬ್ಬರ ಯಶೋಗಾಥೆಯಲ್ಲಿ ಹಲವು ತಾಯಂದಿರಿಗೆ ಒಳ್ಳೆಯ ಪಾಠವಿದೆ.
ಮಲಪ್ಪುರಂ: ಮಕ್ಕಳನ್ನು ಓದಿ ಓದಿ ಎಂದು ಬೊಬ್ಬೆ ಹೊಡೆಯುತ್ತಾ ತಾವು ಮಾತ್ರ ಮೊಬೈಲ್ ನೋಡುತ್ತಾ, ಟೀವಿ ವೀಕ್ಷಿಸುತ್ತಾ, ಇನ್ನೊಬ್ಬರ ಜತೆ ಹರಟೆ ಹೊಡೆಯುತ್ತಾ ಇರುವ ಕೆಲವು ತಾಯಂದಿರನ್ನು ನಾವು ನೋಡಿದ್ದೇವೆ. ಆದರೆ, ಇಲ್ಲೊಬ್ಬ ತಾಯಿ ಮಗನನ್ನು ಓದಿಸುತ್ತಾ ಓದಿಸುತ್ತಾ ತಾನೂ ಪುಸ್ತಕ ಹಿಡಿದು ಕುಳಿತಿದ್ದರು. ಮಗ ಎಷ್ಟು ಹೊತ್ತು ಓದುತ್ತಾನೋ ಅಷ್ಟು ಹೊತ್ತು ತಾವೂ ಓದಿದರು. ಈಗ ಅವರಿಬ್ಬರೂ ಉನ್ನತ ಸರಕಾರಿ ಅಧಿಕಾರಿಗಳು!
ಹೌದು, ಕಳೆದ ವಾರ ಪ್ರಕಟಗೊಂಡ ಕೇರಳ ಲೋಕಸೇವಾ ಆಯೋಗದ ಪರೀಕ್ಷಾ ಫಲಿತಾಂಶದಲ್ಲಿ ತಾಯಿ ಮತ್ತು ಮಗ ಇಬ್ಬರೂ ಉನ್ನತ ಶ್ರೇಯಾಂಕದೊಂದಿಗೆ ಪಾಸ್ ಆಗಿದ್ದು, ಇನ್ನೇನು ಜತೆಗೇ ಕೆಲಸಕ್ಕೆ ಸೇರಿಕೊಳ್ಳಲಿದ್ದಾರೆ. ಸಾಮಾನ್ಯವಾಗಿ ಮಗನಿಗೆ ಉದ್ಯೋಗ ಸಿಕ್ಕಿತು ಎಂದು ತಾಯಿ ಖುಷಿಪಡುತ್ತಾಳೆ. ಆದರೆ, ಇಲ್ಲಿ ಇಬ್ಬರಿಗೂ ಒಟ್ಟಿಗೇ ಒಳ್ಳೆಯ ಉದ್ಯೋಗ ಸಿಗಲಿದೆ ಎಂದು ಅವರ ಮನೆ ಸಂಭ್ರಮಿಸುತ್ತಿದೆ.
ಹೀಗೆ ಪುತ್ರನ ಜತೆ ಕಲಿತು ಪಿಎಸ್‌ಸಿ ಪರೀಕ್ಷೆ ಪಾಸ್ ಮಾಡಿದವರು ಕೇರಳದ ಮಲಪ್ಪುರಂನ ಬಿಂದು. ಇವರಿಗೆ 42 ವರ್ಷ. ಇವರ ಪುತ್ರ ವಿವೇಕ್‌ಗೆ 24 ವರ್ಷ. ಬಿಂದು ಅವರು ಎನ್‌ಜಿಎಸ್ ಪರೀಕ್ಷೆಯಲ್ಲಿ ೯೨ನೇ ರ‍್ಯಾಂಕ್ ಪಡೆದಿದ್ದರೆ, ವಿವೇಕ್ ಕ್ಲರ್ಕ್ ಎಕ್ಸಾಂನಲ್ಲಿ ೩೮ನೇ ರ‍್ಯಾಂಕ್ ಪಡೆದಿದ್ದಾರೆ.
ಇದೆಲ್ಲ ಆರಂಭವಾಗಿದ್ದು ವಿವೇಕ್ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಸಿದ್ಧನಾಗುತ್ತಿದ್ದಾಗ. ೧೦ನೇ ತರಗತಿ ಪರೀಕ್ಷೆಗೆ ಮಗ ಚೆನ್ನಾಗಿ ಓದಬೇಕು ಎಂದು ಬಯಸಿದ ತಾಯಿ ಬಿಂದು ಅವರು ತಾನೂ ಮಗನ ಜತೆ ಓದಲು ಕುಳಿತರು. ತಾನೂ ಪುಸ್ತಕ ಓದಲು ಆರಂಭಿಸಿದರು. ಜನರಲ್ ನಾಲೆಡ್ಜ್, ವಿಜ್ಞಾನ, ಕಥೆ, ಕಾದಂಬರಿ ಸೇರಿದಂತೆ ಎಲ್ಲವನ್ನೂ ಓದಿದರು. ಆಗ ಆರಂಭವಾದ ಹವ್ಯಾಸ ಬಳಿಕ ನಿರಂತರವಾಯಿತು.
ಬಿಂದು ಅವರು ಕಳೆದ ೧೦ ವರ್ಷಗಳಿಂದ ಅಂಗನವಾಡಿಯಲ್ಲಿ ಶಿಕ್ಷಕಿಯಾಗಿಯೂ ಕೆಲಸ ಮಾಡುತ್ತಿದ್ದಾರೆ. ಆದರೂ ಓದುವ ಹವ್ಯಾಸ ಬಿಟ್ಟಿಲ್ಲ. ನಿಜ ಅಂದರೆ, ಬಿಂದು ಹಲವು ಬಾರಿ ಲೋಕಸೇವಾ ಆಯೋಗ ಪರೀಕ್ಷೆ ಬರೆದಿದ್ದರು. ಮೂರು ವಿಫಲ ಪ್ರಯತ್ನಗಳು ಅವರ ಅನುಭವವನ್ನು ಹೆಚ್ಚಿಸಿದೆ! ಈ ನಡುವೆ ಮಗ ವಿವೇಕ್ ಕೂಡಾ ಪಿಎಸ್‌ಸಿ ಪರೀಕ್ಷೆಗೆ ಸಿದ್ಧತೆ ನಡೆಸತೊಡಗಿದ. ಆಗ ಅವರಿಬ್ಬರೂ ಮತ್ತೆ ಜಿದ್ದಿಗೆ ಬಿದ್ದಂತೆ ಓದಿದರು. ಪರೀಕ್ಷೆಗೆ ಏನೇನು ಬೇಕೋ ಅದೆಲ್ಲವನ್ನು ಕಲಿಯಲು ಶುರು ಮಾಡಿದರು. ಹೀಗೆ ಓದುತ್ತಾ ಓದುತ್ತಾ ಎಲ್ಲವನ್ನೂ ಅರಗಿಸಿಕೊಂಡು ಜತೆಯಾಗಿ ಗೆದ್ದು ಬಿಟ್ಟರು.
‘ನಾನು ಕೆಲಸ ಮಾಡುತ್ತಿರುವುದರಿಂದ ಮಗನೊಂದಿಗೆ ಕೂತು ಓದಲು ಸಾಧ್ಯವಾಗಲಿಲ್ಲ. ಆದರೆ, ಇಬ್ಬರೂ ಸೇರಿ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸುತ್ತಿದ್ದೆವು. ಪರೀಕ್ಷೆಯ 6 ತಿಂಗಳ ಮುಂಚೆ ತಾನು ಸಿದ್ಧತೆ ಆರಂಭಿಸಿದ್ದೆʼʼ ಎಂದು ಬಿಂದು ಹೇಳಿದ್ದಾರೆ.
‘ನನ್ನ ನಿಜವಾದ ಗುರಿ ಇಂಟಿಗ್ರೇಟೆಡ್ ಚೈಲ್ಡ್ ಡೆವಲಪ್‌ಮೆಂಟ್ ಸರ್ವಿಸಸ್ (ಐಸಿಡಿಎಸ್) ಮೇಲ್ವಿಚಾರಕರ ಹುದ್ದೆ ಪಡೆಯುವುದಾಗಿತ್ತು. ಆದರೆ ಎಲ್‌ಜಿಎಸ್ ಆಗಿ ನೇಮಕಗೊಂಡಿದ್ದೇನೆ. ಎಷ್ಟು ಸಾರಿ ಸೋತರೂ ಮತ್ತೆ ಗೆಲ್ಲಬಹುದು ಎನ್ನುವುದು ನಾನು ಮೂರು ಬಾರಿ ಸೋತು ನಾಲ್ಕನೇ ಬಾರಿ ಗೆದ್ದಾಗ ಕಂಡುಕೊಂಡ ಸತ್ಯʼʼ ಎಂದಿದ್ದಾರೆ ಬಿಂದು.
ʻʻನಾನು ಮತ್ತು ಅಮ್ಮ ಜತೆಯಾಗಿ ಸ್ಟಡಿ ಮಾಡುತ್ತಿರಲಿಲ್ಲ. ಕೆಲವು ವಿಷಯಗಳನ್ನು ಚರ್ಚೆ ಮಾಡುತ್ತಿದ್ದೆವು. ಅಮ್ಮ ಕೆಲಸ ಮತ್ತು ಮನೆ ಕೆಲಸ ಮಾಡಿ ನಂತರ ಓದುತ್ತಿದ್ದರು. ನನಗೆ ಸಿಕ್ಕಿದ್ದಷ್ಟು ಸಮಯ ತಾಯಿಗೆ ಸಿಕ್ಕಿಲ್ಲ. ಆದರೂ 92ನೇ ರ‍್ಯಾಂಕ್ ಪಡೆದಿರುವುದು ಹೆಮ್ಮೆ ತಂದಿದೆ ಎಂದಿದ್ದಾರೆ ಪುತ್ರ ವಿವೇಕ್. ಅಂದ ಹಾಗೆ ಅಮ್ಮ-ಮಗನ ಈ ಸಾಹಸಕ್ಕೆ ಸಂಪೂರ್ಣ ಬೆಂಬಲ ಕೊಟ್ಟವರು ತಂದೆ.
ಇದನ್ನೂ ಓದಿ | NDA-NA Exam | ಸೇನೆ ಸೇರಿ ಅಧಿಕಾರಿಯಾಗಬೇಕೇ? ನೀವು ಪಿಯು ಓದುವಾಗಲೇ ಈ ಪರೀಕ್ಷೆ ಬರೆಯಿರಿ!
ಉದ್ಯೋಗ
Job News : ಸರ್ಕಾರಿ ನೌಕರಿಯ ಹೊಸ ಅಧಿಸೂಚನೆಗಳಿಲ್ಲ; ನೇಮಕ ಪ್ರಕ್ರಿಯೆ ನಡೆಸಲು ಅಡ್ಡಿಯಿಲ್ಲ!
ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ಸರ್ಕಾರಿ ಹುದ್ದೆಗಳಿಗೆ (Job News) ನೇಮಕಾತಿ ನಡೆಯುತ್ತದೆಯೇ? ಈಗಾಗಲೇ ನಿಗದಿಯಾಗಿರುವ ಪರೀಕ್ಷೆಗಳನ್ನು ನಡೆಸಲಾಗುತ್ತದೆಯೇ ಎಂಬೆಲ್ಲಾ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿ, ನೀತಿ ಸಂಹಿತೆ ಜಾರಿಗೆ ಬಂದಿದೆ. ಇದು ಸರ್ಕಾರಿ ನೇಮಕ ಪ್ರಕ್ರಿಯೆಯ ಮೇಲೂ ಪರಿಣಾಮ ಬೀರಲಿದೆ. ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಹೊಸ ನೇಮಕಾತಿ (Job News) ಅಧಿಸೂಚನೆಗಳು ಪ್ರಕಟವಾಗುವುದಿಲ್ಲ.
ಆದರೆ ಈಗಾಗಲೇ ಚಾಲ್ತಿಯಲ್ಲಿರುವ ನೇಮಕ ಪ್ರಕ್ರಿಯೆಗಳಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ನಡೆಸಲು, ನೇಮಕ ಪ್ರಕ್ರಿಯೆ ಮುಂದುವರಿಸಲು ಯಾವುದೇ ತೊಂದರೆ ಇಲ್ಲ. ಹೀಗಾಗಿ ಕೆಪಿಎಸ್‌ಸಿಯು ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ಈಗಾಗಲೇ ನಿಗದಿಪಡಿಸಿದ ದಿನಾಂಕದಂದು ನಡೆಸಲಿದೆ ಎಂದು ಕೆಪಿಎಸ್‌ಸಿಯ ಕಾರ್ಯದರ್ಶಿ ವಿಕಾಸ್ ಕಿಶೋರ್ ಸುರಳ್ಕರ್ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.
ನೇಮಕಾತಿ ಪರೀಕ್ಷೆ ನಡೆಸಲು ಅಡ್ಡಿಯಿಲ್ಲ!
ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿರುವುದರಿಂದ ಹೊಸ ನೇಮಕಾತಿ ಪ್ರಕಟಣೆಗೆ ಅವಕಾಶವಿರುವುದಿಲ್ಲ. ಕೇವಲ ತುರ್ತು ಪ್ರಸ್ತಾವನೆಗಳಿಗೆ ಮಾತ್ರ ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿನ ಪರಿಶೀಲನಾ ಸಮಿತಿಯು ಪರಿಶೀಲನೆ ನಡೆಸಿ ಅನುಮತಿ ನೀಡಲಿದೆ. ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಬುಧವಾರ ಸುತ್ತೋಲೆ ಹೊರಡಿಸಿದ್ದಾರೆ.
ಹೀಗಾಗಿ ಕೆಪಿಎಸ್‌ಸಿಯು, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ (ಗ್ರೂಪ್ ಎ) 23 ಹುದ್ದೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ 40 ಹುದ್ದೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶುವೈದ್ಯಾಧಿಕಾರಿಗಳ (ಗ್ರೂಪ್ ಎ)- 400 ಹಾಗೂ ಕೃಷಿ ಇಲಾಖೆಯಲ್ಲಿನ ಸಹಾಯಕ ಕೃಷಿ ಅಧಿಕಾರಿ (ಗ್ರೂಪ್ -ಬಿ) 368 ಹುದ್ದೆಗಳ ನೇಮಕಕ್ಕೆ ಹೊರಡಿಸಬೇಕಾಗಿದ್ದ ಅಧಿಸೂಚನೆಗಳು ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ನಂತರವಷ್ಟೇ ಹೊರಡಿಸಬಹುದಾಗಿದೆ. ಆದರೆ ಈಗಾಗಲೇ ಅಧಿಸೂಚನೆ ಪ್ರಕಟವಾಗಿರುವ ನೇಮಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು.
ಕೆಇಎಯಿಂದ ನೇಮಕಾತಿ
ಈ ನಡುವೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಕರ್ನಾಟಕ ಸ್ಟೇಟ್ಸ್ ಮಿನರಲ್ಸ್ ಕಾರ್ಪೋರೇಷನ್ ಲಿಮಿಟೆಡ್, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಮತ್ತು ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಸಿದ್ಧತೆ ನಡೆಸಿದ್ದು, ಈ ನೇಮಕ ಪ್ರಕ್ರಿಯೆ ಚುನಾವಣೆಯ ಸಂದರ್ಭದಲ್ಲಿಯೇ ನಡೆಯುವ ಸಾಧ್ಯತೆಗಳಿವೆ.
ಪ್ರಾಧಿಕಾರವು ಮಾರ್ಚ್ 15 ರಂದೇ ಈ ನೇಮಕಕ್ಕೆ ಸಂಬಂಧಿಸಿದಂತೆ ಪ್ರಕಟಣೆ ಹೊರಡಿಸಿತ್ತು. ಮಾರ್ಚ್ 24 ರಂದು ಅಧಿಸೂಚನೆ ಪ್ರಕಟಿಸಿದೆ. ಇದರ ಪ್ರಕಾರ ಏಪ್ರಿಲ್ 17 ರಿಂದ ಅರ್ಜಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗುತ್ತದೆ. ಮೇ.17 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇ-ಅಂಚೆ ಕಚೇರಿಗಳಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಮೇ.20 ಕೊನೆಯ ದಿನವಾಗಿದೆ.
ಈ ನೇಮಕಾತಿಗೆ ಸಂಬಂಧಿಸಿದ ಪ್ರಕಟಣೆ ನೋಡಲು ಇಲ್ಲಿ ಕ್ಲಿಕ್ (Click Here ) ಮಾಡಿ.
ಸದ್ಯ ಈ ನೇಮಕಾತಿ ಆರಂಭವಾಗುತ್ತದೆಯೇ ಇಲ್ಲವೇ ಎಂಬುದರ ಕುರಿತು ತೀವ್ರ ಚರ್ಚೆ ನಡೆಯುತ್ತಿದ್ದು, ಈಗಾಗಲೇ ಅಧಿಸೂಚನೆ ಪ್ರಕಟವಾಗಿರುವುದರಿಂದ ಈ ನೇಮಕ ಪ್ರಕ್ರಿಯೆ ನಡೆಸಲು ನೀತಿ ಸಂಹಿತೆ ಅಡ್ಡಿ ಬರುವುದಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಕೆಲ ನೇಮಕಾತಿ ತಜ್ಞರು ಈ ನೇಮಕ ಪ್ರಕ್ರಿಯೆ ಆರಂಭವಾಗುವ ಕುರಿತು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಕೆಇಎ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ.
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here ) ಮಾಡಿ.
ಇದನ್ನೂ ಓದಿ : KPSC Recruitment 2023 : ಕೆಪಿಎಸ್‌ಸಿಯಿಂದ ಸದ್ಯವೇ ನಾಲ್ಕು ಅಧಿಸೂಚನೆ; ಅರ್ಜಿ ಸಲ್ಲಿಸಲು ಅರ್ಹತೆಗಳೇನು?
ಉದ್ಯೋಗ
KPSC Recruitment 2023 : ಕೆಪಿಎಸ್‌ಸಿಯಿಂದ ಏ.1 ಮತ್ತು 2 ರಂದು ಪರೀಕ್ಷೆ; ಪ್ರವೇಶ ಪತ್ರ ಪ್ರಕಟ
ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ವಿವಿಧ ಹುದ್ದೆಗಳ ನೇಮಕಕ್ಕೆ ( KPSC Recruitment 2023 ) ನಡೆಸಲಿರುವ ಪರೀಕ್ಷೆಗೆ ಪ್ರವೇಶ ಪತ್ರವನ್ನು ಪ್ರಕಟಿಸಿದೆ. ಈ ಕುರಿತ ಮಾಹಿತಿ ಇಲ್ಲಿದೆ.
ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಏಪ್ರಿಲ್ 1 ಮತ್ತು 2 ರಂದು (KPSC Recruitment 2023) ನಡೆಸಲಿರುವ ಸ್ಪರ್ಧಾತ್ಮಕ ಪರೀಕ್ಷೆಯ ಪ್ರವೇಶ ಪತ್ರವನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಹಾಯಕ ಸಾಂಖ್ಯಿಕ ಅಧಿಕಾರಿ-58, ಕಾರ್ಮಿಕ ಇಲಾಖೆಯಲ್ಲಿನ ಕಾರ್ಮಿಕ ನಿರೀಕ್ಷಕರು-20, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿನ ಸಾಂಖ್ಯಿಕ ನಿರೀಕ್ಷಕರ 105 ಹುದ್ದೆಗಳಿಗೆ ಈ ಪರೀಕ್ಷೆ ನಡೆಯುತ್ತಿದೆ.
ಪರೀಕ್ಷೆಯ ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ (Click Here) ಮಾಡಿ.
ಈ ಪರೀಕ್ಷೆ ಬರೆಯಬೇಕಾಗಿರುವ ಅಭ್ಯರ್ಥಿಗಳು ಅರ್ಜಿಯ ಸಂಖ್ಯೆ ಮತ್ತು ಜನ್ಮದಿನಾಂಕದೊಂದಿಗೆ ಲಾಗಿನ್ ಆಗಿ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಪ್ರವೇಶ ಪತ್ರವಿಲ್ಲದೆ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದಿಲ್ಲ.
ಏಪ್ರಿಲ್ 1ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಏಪ್ರಿಲ್2 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳುವಾಗ ತಾಂತ್ರಿಕ ಸಮಸ್ಯೆಗಳು ಎದುರಾದಲ್ಲಿ ಸಹಾಯವಾಣಿ ಸಂಖ್ಯೆ : 18005728707 ಸಂಪರ್ಕಿಸಬೇಕೆಂದು ಕೆಪಿಎಸ್‌ಸಿಯು ಸೂಚಿಸಿದೆ.
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here ) ಮಾಡಿ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಮತ್ತು ದಾವಣಗೆರೆಯಲ್ಲಿ ಪರೀಕ್ಷಾ ಕೇಂದ್ರಗಳನ್ನು ಬದಲಾಯಿಸಲಾಗಿದ್ದು, ಈ ಕುರಿತ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಒದಗಿಸಲಾಗಿದೆ. ಈ ಎರಡು ನಗರಗಳಲ್ಲಿ ಪರೀಕ್ಷೆ ಬರೆಯಬೇಕಿರುವ ಅಭ್ಯರ್ಥಿಗಳು ಈಗಾಗಲೇ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಂಡಿದ್ದರೂ, ಇನ್ನೊಮ್ಮೆ ಡೌನ್‌ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗುವಂತೆ ಕೆಪಿಎಸ್‌ಸಿಯು ಕೋರಿದೆ.
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್ : https://kpsc.kar.nic.in
ಇದನ್ನೂ ಓದಿ: KPSC Recruitment 2023 : ಕೆಪಿಎಸ್‌ಸಿಯಿಂದ ಸದ್ಯವೇ ನಾಲ್ಕು ಅಧಿಸೂಚನೆ; ಅರ್ಜಿ ಸಲ್ಲಿಸಲು ಅರ್ಹತೆಗಳೇನು?
ಉದ್ಯೋಗ
KPSC Recruitment 2023 : ಕೆಪಿಎಸ್‌ಸಿಯಿಂದ ಸದ್ಯವೇ ನಾಲ್ಕು ಅಧಿಸೂಚನೆ; ಅರ್ಜಿ ಸಲ್ಲಿಸಲು ಅರ್ಹತೆಗಳೇನು?
ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ (KPSC Recruitment 2023) 831 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಿದೆ ಎಂದು ಕೆಪಿಎಸ್‌ಸಿಯ ಕಾರ್ಯದರ್ಶಿ ತಿಳಿಸಿದ್ದಾರೆ. ಯಾವ ಹುದ್ದೆಗಳಿಗೆ ನೇಮಕ ನಡೆಯಲಿದೆ, ಅರ್ಹತೆಗಳೇನು ಎಂಬ ಮಾಹಿತಿ ಇಲ್ಲಿದೆ.
ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ (KPSC Recruitment 2023) ಹುದ್ದೆಗಳ ನೇಮಕಕ್ಕೆ ಸದ್ಯವೇ ಅಧಿಸೂಚನೆ ಹೊರಡಿಸಲಿದೆ. ಯಾವೆಲ್ಲಾ ಹುದ್ದೆಗಳಿಗೆ ನೇಮಕ ನಡೆಯಲಿದೆ. ವಿದ್ಯಾರ್ಹತೆ ಏನು? ಎಂಬ ಮಾಹಿತಿ ಇಲ್ಲಿದೆ.
ಸಹಾಯಕ ನಿರ್ದೇಶಕರ ಹುದ್ದೆ
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ (ಗ್ರೂಪ್ ಎ) 23 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ ಮೂರು ಹುದ್ದೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಾಗಿದ್ದು, ಇದಕ್ಕೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುತ್ತದೆ.
ವಿದ್ಯಾರ್ಹತೆ : ಯಾವುದೇ ಎಂಜಿನಿಯರಿಂಗ್ ಪದವಿ ಪಡೆದವರು ಅಥವಾ ಬಿ.ಟೆಕ್ ಪದವೀಧರರು ಅಥವಾ ಬಿಸ್ನೆಸ್ ಮ್ಯಾನೇಜ್‌ಮೆಂಟ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದವರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.
ವೇತನ ಎಷ್ಟು? : ರೂ. 45,300-88,300
ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಹುದ್ದೆ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ 40 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ 19 ಹುದ್ದೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಾಗಿದ್ದು, ಇದಕ್ಕೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುತ್ತದೆ.
ವಿದ್ಯಾರ್ಹತೆ: ಯಾವುದೇ ಪದವೀಧರರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
ವೇತನ ಎಷ್ಟು? : ರೂ. 45,300-83,900
ಪಶುವೈದ್ಯಾಧಿಕಾರಿ ಹುದ್ದೆ
ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶುವೈದ್ಯಾಧಿಕಾರಿಗಳ (ಗ್ರೂಪ್ ಎ)- 400 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ 58 ಹುದ್ದೆಗಳು ಬ್ಯಾಕ್‌ಲಾಗ್ ಹುದ್ದೆಗಳಾಗಿವೆ.
ವಿದ್ಯಾರ್ಹತೆ: ಯಾವುದೇ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯದಿಂದ ಅಥವಾ ಭಾರತದಲ್ಲಿ ಕಾನೂನು ಮೂಲಕ ಸ್ಥಾಫಿಸಲಾದ ಪಶು ವಿಶ್ವವಿದ್ಯಾಲಯ ಅಥವಾ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಿಂದ ಕನಿಷ್ಠ ಶೇ.50 ಅಂಕಗಳೊಂದಿಗೆ ಬಿ.ವಿ.ಎಸ್.ಸಿ ಅಥವಾ ಬಿ.ವಿ.ಎಸ್.ಸಿ ಮತ್ತು ಎ.ಹೆಚ್ ಪದವಿ ಹೊಂದಿರಬೇಕು.
ಭಾರತೀಯ ಪಶುವೈದ್ಯಕೀಯ ಪರಿಷತ್ತಿನ ಕಾಯ್ದೆ 1984 ರ ಅಡಿಯಲ್ಲಿ ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನಲ್ಲಿ ನೋಂದಣಿಯಾಗಿರಬೇಕು
ವೇತನ ಎಷ್ಟು? : ರೂ. 52,650-97,100
ಸಹಾಯಕ ಕೃಷಿ ಅಧಿಕಾರಿ ಹುದ್ದೆ
ಕೃಷಿ ಇಲಾಖೆಯಲ್ಲಿನ ಸಹಾಯಕ ಕೃಷಿ ಅಧಿಕಾರಿ (ಗ್ರೂಪ್ -ಬಿ) 368 ಹುದ್ದೆಗಳಿಗೆ ನೇಮಕ ನಡೆಯಲಿದೆ. ಇದರಲ್ಲಿ 60 ಹುದ್ದೆ ಕಲ್ಯಾಣ ಕರ್ನಾಟಕದ ಅಭ್ಯರ್ಥಿಗಳಿಗೆ ಮೀಸಲಾಗಿದ್ದು, ಇದಕ್ಕೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುತ್ತದೆ. 8 ಬ್ಯಾಕ್‌ಲಾಗ್ ಹುದ್ದೆಗಳಾಗಿವೆ.
ವಿದ್ಯಾರ್ಹತೆ: ಶೇ.85 ರಷ್ಟು ಹುದ್ದೆಗಳಿಗೆ ಬಿಎಸ್ಸಿ (ಕೃಷಿ) ಅಥವಾ ಬಿಎಸ್ಸಿ (ಆನರ್ಸ್) ಕೃಷಿ ಹಾಗೂ ಶೇ.15 ರಷ್ಟು ಹುದ್ದೆಗಳಿಗೆ ಬಿ.ಟೆಕ್ (ಆಹಾರ ವಿಜ್ಞಾನ ಮತ್ತು ತಂತ್ರಜ್ಞಾನ)/ ಬಿಟೆಕ್ (ಆಹಾರ ತಂತ್ರಜ್ಞಾನ) ಅಥವಾ ಬಿ.ಎಸ್ಸಿ (ಕೃಷಿ ಮಾರುಕಟ್ಟೆ ಮತ್ತು ಸಹಕಾರ)/ ಬಿ.ಎಸ್ಸಿ(ಆನರ್ಸ್) ಕೃಷಿ, ಮಾರಾಟ ಮತ್ತು ಸಹಕಾರ/ ಬಿ.ಎಸ್ಸಿ (ಆನರ್ಸ್) ಆಗ್ರಿ ಬಿಸಿನೆಸ್ ಮ್ಯಾನೇಜ್ ಮೆಂಟ್ ಅಥವಾ ಬಿ.ಎಸ್ಸಿ. (ಕೃಷಿ ಜೈವಿಕ ತಂತ್ರಜ್ಞಾನ)/ ಬಿ.ಟೆಕ್ (ಜೈವಿಕ ತಂತ್ರಜ್ಞಾನ) ಅಥವಾ ಬಿ.ಎಸ್ಸಿ. (ಅಗ್ರಿಕಲ್ಚರಲ್ ಎಂಜಿನಿಯರಿಂಗ್) / ಬಿ.ಟೆಕ್ (ಅಗ್ರಿಕಲ್ಚರಲ್ ಎಂಜಿನಿಯರಿಂಗ್) ಮಾಡಿದವರು ಅರ್ಜಿ ಸಲ್ಲಿಸಬಹುದಾಗಿದೆ.
ವೇತನ ಎಷ್ಟು? : ರೂ.40,900-78,200
ವಯೋಮಿತಿ ಎಷ್ಟು?
ಸಾಮಾನ್ಯ ಅಭ್ಯರ್ಥಿಗಳಿಗೆ 18 ರಿಂದ 35 ವರ್ಷಗಳು. ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38ವರ್ಷಗಳು. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ ಎಷ್ಟು ಪಾವತಿಸಬೇಕು?
ಸಾಮಾನ್ಯ ಅಭ್ಯರ್ಥಿಗಳು 600 ರೂ. ಹಾಗೂ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300 ರೂ. ಹಾಗೂ ಮಾಜಿ ಸೈನಿಕರು 50ರೂ. ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ. ಪರಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲಿಯೇ ಪಾವತಿಸಲು ಅವಕಾಶ ನೀಡಲಾಗಿರುತ್ತದೆ.
ಪ್ರಕ್ರಿಯೆ ಶುಲ್ಕ (processing fees)35 ರೂ.ಗಳನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ಅಂಗವಿಕಲ ಅಭ್ಯರ್ಥಿಗಳೂ ಸೇರಿದಂತೆ ಎಲ್ಲ ಅಭ್ಯರ್ಥಿಗಳು ಪಾವತಿಸಬೇಕಿರುತ್ತದೆ. ಈ ಶುಲ್ಕ ಪಾವತಿಸದಿದ್ದಲ್ಲಿ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ.
ನೇಮಕ ಹೇಗೆ?
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಗಳಿಸಿದ ಶೇಕಡಾವಾರು ಅಂಕಗಳ ಆಧಾರದಲ್ಲಿ ನೇಮಕಮಾಡಿಕೊಳ್ಳಲಾಗುತ್ತದೆ. ಸಂದರ್ಶನ ಇರುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಯ ವಿಷಯಗಳು, ಸಿಲಬಸ್ ಕುರಿತು ಅಧಿಸೂಚನೆಯಲ್ಲಿ ಮಾಹಿತಿ ನೀಡಲಾಗುತ್ತದೆ.
ಈ ನೇಮಕಾತಿ ಪ್ರಸ್ತಾವನೆಗಳನ್ನು ಅಂತಿಮಗೊಳಿಸಲಾಗಿದ್ದು, ಆಯೋಗವು ಒಪ್ಪಿಗೆ ನೀಡುತ್ತಿದ್ದಂತೆಯೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಕೆಪಿಎಸ್‌ಸಿಯ ಕಾರ್ಯದರ್ಶಿ ವಿಕಾಸ್ ಕಿಶೋರ್ ಸುರಳ್ಕರ್ ಮಂಗಳವಾರ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.
ನೇಮಕದ ಮಾಹಿತಿಗೆ ನೀವು ನೋಡುತ್ತಿರಬೇಕಾದ ವೆಬ್‌ಸೈಟ್ ವಿಳಾಸ : https://kpsc.kar.nic.in
ಇದನ್ನೂ ಓದಿ : KPSC Recruitment 2023 : ಕೆಪಿಎಸ್‌ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಿರಾ? ಹೊಸದಾಗಿ ಹೆಸರು ನೊಂದಾಯಿಸಿಕೊಳ್ಳಿ!
ಉದ್ಯೋಗ
KPSC Recruitment 2023 : ಗುಡ್ ನ್ಯೂಸ್! ಕೆಪಿಎಸ್‌ಸಿಯಿಂದ ಸದ್ಯವೇ ನಾಲ್ಕು ಅಧಿಸೂಚನೆ; 831 ಹುದ್ದೆಗಳಿಗೆ ನೇಮಕ
ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ (KPSC Recruitment 2023) 831 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಿದೆ ಎಂದು ಕೆಪಿಎಸ್‌ಸಿಯ ಕಾರ್ಯದರ್ಶಿ ತಿಳಿಸಿದ್ದಾರೆ. ಯಾವ ಹುದ್ದೆಗಳಿಗೆ ನೇಮಕ ನಡೆಯಲಿದೆ ಎಂಬ ಮಾಹಿತಿ ಇಲ್ಲಿದೆ.
ಬೆಂಗಳೂರು: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ (KPSC Recruitment 2023) ಹುದ್ದೆಗಳ ನೇಮಕಕ್ಕೆ ಸಿದ್ಧತೆ ನಡೆಸಿದ್ದು, ಸದ್ಯವೇ ಅಧಿಸೂಚನೆ ಹೊರಡಿಸಲಿದೆ.
ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿನ ಸಹಾಯಕ ನಿರ್ದೇಶಕರ (ಗ್ರೂಪ್ ಎ) 23 ಹುದ್ದೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿನ ಪತ್ರಾಂಕಿತ ವ್ಯವಸ್ಥಾಪಕರು/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ 40 ಹುದ್ದೆ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿನ ಪಶುವೈದ್ಯಾಧಿಕಾರಿಗಳ (ಗ್ರೂಪ್ ಎ)- 400 ಹಾಗೂ ಕೃಷಿ ಇಲಾಖೆಯಲ್ಲಿನ ಸಹಾಯಕ ಕೃಷಿ ಅಧಿಕಾರಿ (ಗ್ರೂಪ್ -ಬಿ) 368 ಹುದ್ದೆಗಳಿಗೆ ಸದ್ಯವೇ ಅಧಿಸೂಚನೆ ಹೊರಡಿಸಲಿದೆ.
ಈ ನೇಮಕಾತಿ ಪ್ರಸ್ತಾವನೆಗಳನ್ನು ಅಂತಿಮಗೊಳಿಸಲಾಗಿದ್ದು, ಆಯೋಗವು ಒಪ್ಪಿಗೆ ನೀಡುತ್ತಿದ್ದಂತೆಯೇ ಅಧಿಸೂಚನೆ ಹೊರಡಿಸಲಾಗುತ್ತದೆ. ಈ ವಿಷಯವನ್ನು ಕೆಪಿಎಸ್‌ಸಿಯ ಕಾರ್ಯದರ್ಶಿ ವಿಕಾಸ್ ಕಿಶೋರ್ ಸುರಳ್ಕರ್ ಟ್ವಿಟ್ಟರ್‌ನಲ್ಲಿ ತಿಳಿಸಿದ್ದಾರೆ.
ಕೆಪಿಎಸ್‌ಸಿಯಲ್ಲಿ ನೇಮಕದ ಮಾಹಿತಿ
ಇದಲ್ಲದೆ, ವಾಣಿಜ್ಯ ತೆರಿಗೆ ಇಲಾಖೆಯಲ್ಲಿನ ಇನ್ಸ್‌ಪೆಕ್ಟರ್, ಜಲಸಂಪನ್ಮೂಲ ಇಲಾಖೆಯಲ್ಲಿನ ಸಹಾಯಕ ಎಂಜಿನಿಯರ್ ಹಾಗೂ ಜೂನಿಯರ್ ಎಂಜಿನಿಯರ್ ಮತ್ತು ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರ ಹುದ್ದೆಗಳಿಗೂ ಕೆಪಿಎಸ್‌ಸಿಯ ಸದ್ಯವೇ ಅಧಿಸೂಚನೆ ಹೊರಡಿಸಲಿದ್ದು, ಸದ್ಯ ಹುದ್ದೆಗಳ ಮೀಸಲಾತಿ ಹಂಚಿಕೆ ಪ್ರಕ್ರಿಯೆ ನಡೆಯುತ್ತಿದೆ. ಇದು ಪೂರ್ಣಗೊಂಡ ನಂತರ ಆಯೋಗದ ಅನುಮತಿಗಾಗಿ ಕಳಿಸಲಾಗುತ್ತದೆ ಎಂದು ಕಾರ್ಯದರ್ಶಿ ವಿಕಾಸ್ ಕಿಶೋರ್ ಸುರಳ್ಕರ್ ಹೇಳಿದ್ದಾರೆ.
ಮುಂದೆ ನಡೆಯಲಿರುವ ನೇಮಕದ ಮಾಹಿತಿ
ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here ) ಮಾಡಿ.
ಸದ್ಯ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಲೆಕ್ಕ ಸಹಾಯಕರ ಮತ್ತು ಕಿರಿಯ ಲೆಕ್ಕ ಸಹಾಯಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇದಲ್ಲದೆ ಮಾ. 30 ರಿಂದ ಸಹಕಾರ ಸಂಘಗಳ ನಿರೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗುತ್ತಿದೆ. ಚುನಾವಣೆಯ ಸಂದರ್ಭದಲ್ಲಿಯೂ ಕೆಪಿಎಸ್‌ಸಿಯು ನೇಮಕ ಪ್ರಕ್ರಿಯೆಯನ್ನು ನಡೆಸುವ ಸಾಧ್ಯತೆಗಳಿವೆ.
ನೇಮಕದ ಮಾಹಿತಿಗೆ ನೀವು ನೋಡುತ್ತಿರಬೇಕಾದ ವೆಬ್‌ಸೈಟ್ ವಿಳಾಸ : https://kpsc.kar.nic.in
ಇದನ್ನೂ ಓದಿ : KPSC Recruitment 2023 : ಕೆಪಿಎಸ್‌ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಿರಾ? ಹೊಸದಾಗಿ ಹೆಸರು ನೊಂದಾಯಿಸಿಕೊಳ್ಳಿ!
-
ದೇಶ21 hours ago
Chenab Bridge | ಐಫೆಲ್ ಟವರ್ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ
-
ಕರ್ನಾಟಕ21 hours ago
SSLC Exam 2023: ಇಂದಿನಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು
-
ಗ್ಯಾಜೆಟ್ಸ್11 hours ago
Aadhaar Update: ಆನ್‌ಲೈನ್‌ನಲ್ಲಿ ಆಧಾರ್ ಅಪ್ಡೇಟ್ ಉಚಿತ; ಈ ಸೌಲಭ್ಯ ಜೂನ್ 14ರವರೆಗೆ ಮಾತ್ರ
-
ಅಂಕಣ22 hours ago
ಗೋ ಸಂಪತ್ತು: ಆಹಾರವಾಗಿ ಮಾತ್ರವಲ್ಲ, ಔಷಧವಾಗಿಯೂ ಮಜ್ಜಿಗೆಗೆ ಮಹತ್ವವಿದೆ!
-
ಅಂಕಣ22 hours ago
Brand story : ಚೀನಾದ ಇ-ಕಾಮರ್ಸ್ ದಿಗ್ಗಜ ಅಲಿಬಾಬಾ, 6 ಕಂಪನಿಗಳಾಗಿ ವಿಭಜನೆಯಾಗುತ್ತಿರುವುದೇಕೆ?
-
ಕರ್ನಾಟಕ12 hours ago
B.Y. Vijayendra: ಯಾವುದೇ ಕಾರಣಕ್ಕೆ ವರುಣಾದಿಂದ ವಿಜಯೇಂದ್ರ ಸ್ಪರ್ಧಿಸಲ್ಲ: ಗೊಂದಲಕ್ಕೆ ತೆರೆಯೆಳೆದ ಯಡಿಯೂರಪ್ಪ
-
ದೇಶ13 hours ago
Gujarat High Court: ಪಿಎಂ ಮೋದಿ ಪದವಿ ಸರ್ಟಿಫಿಕೇಟ್ ಕೇಳಿದ್ದ ದಿಲ್ಲಿ ಸಿಎಂ ಕೇಜ್ರಿವಾಲ್ಗೆ 25 ಸಾವಿರ ರೂ. ದಂಡ!
-
ಕರ್ನಾಟಕ15 hours ago
SSLC Exam 2023: ಕಲಬುರಗಿಯಲ್ಲಿ ಎಸ್‌ಎಸ್‌ಎಲ್‌ಸಿ ಪ್ರಶ್ನೆಪತ್ರಿಕೆ ಸೋರಿಕೆ ಶಂಕೆ; ವಾಟ್ಸಾಪ್ನಲ್ಲಿ ಹರಿದಾಡಿದ ಕನ್ನಡ ಪೇಪರ್