MSIL Recruitment 2023 job opportunities for sales and marketing details in kannadaMSIL Recruitment 2023 : ಎಂಎಸ್‌ಐಎಲ್‌ನಲ್ಲಿ 72 ಹುದ್ದೆ; ಮಾರಾಟ ಕ್ಷೇತ್ರದಲ್ಲಿದ್ದವರಿಗೆ ಅಪೂರ್ವ ಅವಕಾಶ Vistara News

ಉದ್ಯೋಗ

MSIL Recruitment 2023 : ಎಂಎಸ್‌ಐಎಲ್‌ನಲ್ಲಿ 72 ಹುದ್ದೆ; ಮಾರಾಟ ಕ್ಷೇತ್ರದಲ್ಲಿದ್ದವರಿಗೆ ಅಪೂರ್ವ ಅವಕಾಶ

ವಿವಿಧ ನಿಗಮ, ಮಂಡಳಿಗಳಲ್ಲಿ ಖಾಲಿ ಇರುವ ಒಟ್ಟು670 ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನೇಮಕ ಪ್ರಕ್ರಿಯೆ (KEA Recruitment 2023) ನಡೆಸುತ್ತಿದ್ದು, ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್ ಲಿಮಿಟೆಡ್‌ನಲ್ಲಿನ (MSIL Recruitment 2023) ಹುದ್ದೆಗಳ ನೇಮಕದ ಕುರಿತ ಮಾಹಿತಿ ಇಲ್ಲಿದೆ.

VISTARANEWS.COM


on

MSIL Recruitment 2023
Follow us on
Koo

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬೆಂಗಳೂರಿನ ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್ ಲಿಮಿಟೆಡ್‌ನಲ್ಲಿನ (MSIL Recruitment 2023 ) ಒಟ್ಟು 72 ಹುದ್ದೆಗಳು ಸೇರಿದಂತೆ ವಿವಿಧ ನಿಗಮ ಮಂಡಳಿಗಳಲ್ಲಿ ಖಾಲಿ ಇರುವ 670 ಹುದ್ದೆಗಳ ನೇಮಕ ಪ್ರಕ್ರಿಯೆ (KEA Recruitment 2023) ಆರಂಭಿಸಿದೆ. ಈಗಾಗಲೇ ವಿವರವಾದ ಅಧಿಸೂಚನೆ ಪ್ರಕಟಿಸಿ, ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಮೈಸೂರು ಸೇಲ್ಸ್‌ ಇಂಟರ್‌ನ್ಯಾಷನಲ್ ಲಿಮಿಟೆಡ್‌ನ 72 ಹುದ್ದೆಗಳಲ್ಲದೆ, ಕರ್ನಾಟಕ ಕಟ್ಟಡ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 186, ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತದ 386, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ 26 ಹುದ್ದೆಗಳಿಗೆ ಈ ನೇಮಕ ನಡೆಯುತ್ತಿದೆ.

ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಸಲು ಜುಲೈ 22 ಕೊನೆಯ ದಿನವಾಗಿದೆ. ಅರ್ಜಿ ಶುಲ್ಕವನ್ನು ಆಫ್‌ಲೈನ್‌ನಲ್ಲಿ ಮಾತ್ರ ಪಾವತಿಸಲು (ಅಂಚೆಕಚೇರಿ ಮೂಲಕ) ಅವಕಾಶ ನೀಡಲಾಗಿದೆ. ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ ಮತ್ತು ಪ್ರತ್ಯೇಕವಾಗಿ ಅರ್ಜಿ ಶುಲ್ಕ ಪಾವತಿಸಬೇಕಿರುತ್ತದೆ.

ಇತ್ತ ಗಮನಿಸಿ
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 23-06-2023 ಮಧ್ಯಾಹ್ನ 2 ಗಂಟೆಯಿಂದ
ಇ-ಅಂಚೆ ಕಚೇರಿಗಳಲ್ಲಿ ಶುಲ್ಕಪಾವತಿ (ಕಚೇರಿಯ ವೇಳೆಯಲ್ಲಿ) ಬೆಳಗ್ಗೆ11ಗಂಟೆಯಿಂದ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22-07-2023 ಸಂಜೆ 5.30ರ ವರೆಗೆ
ಶುಲ್ಕ ಪಾವತಿಗೆ ಕೊನೆಯ ದಿನಾಂಕ: 25-07-2023

ಸಹಾಯವಾಣಿ ಸಂಖ್ಯೆ: 080-23460460
ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ:
https://cetonline.karnataka.gov.in/kea/

ಯಾವೆಲ್ಲಾ ಹುದ್ದೆಗಳಿಗೆ ನೇಮಕ?

MSIL Recruitment 2023
post wise details

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ಯಾವ ಹುದ್ದೆಗೆ ಏನು ವಿದ್ಯಾರ್ಹತೆ?

1.ಸಹಾಯಕ ವ್ಯವಸ್ಥಾಪಕರು ( Assistant Manager (Sales))
MBA or equivalent post Graduate, Diploma in Marketing Management, with a minimum of 2 years experience in Marketing/Sales/Product Management of Consumer Products/ Exports in a reputed Organization.
OR
Degree with minimum 5 years experience in Marketing/Sales/Product/ Exports in Supervisory capacity in reputed Organization.

2. ಸಹಾಯಕ ವ್ಯವಸ್ಥಾಪಕರು ( Assistant Manager (Accounts))
CA/ICWA/MBA (Finance) from IIM.
OR
Inter CA/ICWA/M.Com with 5 years experience in accounts & Finance Department.

3. ಸಹಾಯಕ ವ್ಯವಸ್ಥಾಪಕರು (Assistant Manager (Personnel))
MSW/MBA or equivalent post graduate Diploma in personnel Management/ Business Administration with a minimum of 2 years experience in supervisory capacity. Degree in Law is compulsory.

4. ಸಹಾಯಕ ವ್ಯವಸ್ಥಾಪಕರು (Assistant Manager (Pharma))
M.Sc in Chemistry or M.Pharma/Doctor with 5 years experience in reputed Organization.

5. ಸಹಾಯಕ ವ್ಯವಸ್ಥಾಪಕರು (Assistant Manager (Tours & Travels))
Post Graduate, IATA in tours & Travels with 5 years experience in reputed Organization.

6. ಸಹಾಯಕ ವ್ಯವಸ್ಥಾಪಕರು (Assistant Manager (EDP))
Degree in Engineering (Computer Science)/ MCA, with 2 years experience.
OR
Degree in Computer Science with 5 years experience in developing software or related work.

7. ಮಾರಾಟ ಮೇಲ್ವಿಚಾರಕರು (Sales Supervisor )
ಮಾರಾಟ ಕ್ಷೇತ್ರದಲ್ಲಿ ಐದು ವರ್ಷಗಳ ಅನುಭವ ಹೊಂದಿರುವ ಪದವೀಧರರು ಅರ್ಜಿ ಸಲ್ಲಿಸಬಹುದು.

8. ಮಾರಾಟ ಎಂಜಿನಿಯರ್‌ ( Sales Engineer (Mechanical))
ಮಾರುಕಟ್ಟೆ/ ಮಾರಾಟ ಕ್ಷೇತ್ರದಲ್ಲಿ ಐದು ವರ್ಷಗಳ ಅನುಭವ ಹೊಂದಿರುವ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಮಾಡಿದವರು ಅಥವಾ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ ಪದವೀಧರರು ಅರ್ಜಿ ಸಲ್ಲಿಸಬಹುದು.

9. ಮಾರಾಟ ಎಂಜಿನಿಯರ್‌ (Sales Engineer (Electrical))
ಮಾರುಕಟ್ಟೆ/ ಮಾರಾಟ ಕ್ಷೇತ್ರದಲ್ಲಿ ಐದು ವರ್ಷಗಳ ಅನುಭವ ಹೊಂದಿರುವ ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಮಾಡಿದವರು ಅಥವಾ ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ಪದವೀಧರರು ಅರ್ಜಿ ಸಲ್ಲಿಸಬಹುದು.

10. ಮಾರಾಟ ಎಂಜಿನಿಯರ್‌ (Sales Engineer (CIVIL))
ಮಾರುಕಟ್ಟೆ/ ಮಾರಾಟ ಕ್ಷೇತ್ರದಲ್ಲಿ ಐದು ವರ್ಷಗಳ ಅನುಭವ ಹೊಂದಿರುವ ಸಿವಿಲ್‌ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಮಾಡಿದವರು ಅಥವಾ ಸಿವಿಲ್‌ ಎಂಜಿನಿಯರಿಂಗ್‌ ಪದವೀಧರರು ಅರ್ಜಿ ಸಲ್ಲಿಸಬಹುದು.

11. ಮಾರಾಟ ಎಂಜಿನಿಯರ್‌ (Sales Engineer (E&C))
ಮಾರುಕಟ್ಟೆ/ ಮಾರಾಟ ಕ್ಷೇತ್ರದಲ್ಲಿ ಐದು ವರ್ಷಗಳ ಅನುಭವ ಹೊಂದಿರುವ Electrical & Communicationನಲ್ಲಿ ಡಿಪ್ಲೊಮಾ ಮಾಡಿದವರು ಅಥವಾ Electrical & Communication ಎಂಜಿನಿಯರಿಂಗ್‌ ಪದವೀಧರರು ಅರ್ಜಿ ಸಲ್ಲಿಸಬಹುದು.

12. ಅಕೌಂಟ್‌ ಕ್ಲರ್ಕ್‌ (Accounts Clerk)
ಬಿಕಾಂ/ಸ್ಟ್ಯಾಟಿಟಿಕ್ಸ್‌/ ಎಕನಾಮಿಕ್ಸ್‌/ ಮ್ಯಾಥ್‌ಮೆಟಿಕ್ಸ್‌ ಪದವೀಧರರು ಅರ್ಜಿ ಸಲ್ಲಿಸಬಹುದು. ಮೂರು ವರ್ಷಗಳ ಅನುಭವ ಕಡ್ಡಾಯ.

13. ಕ್ಲರ್ಕ್‌ (Clerk)
ಯಾವುದೇ ಪದವೀಧರರು ಅರ್ಜಿ ಸಲ್ಲಿಸಬಹುದು.

14. ಮಾರಾಟ ಪ್ರತಿನಿಧಿಗಳು (Sales Representative)
ಮಾರುಕಟ್ಟೆ ಮತ್ತು ಮಾರಾಟದಲ್ಲಿ ಐದು ವರ್ಷಗಳ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ (Click Here ) ಮಾಡಿ.

ವಯೋಮಿತಿ ಎಷ್ಟು?

ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ಅಭ್ಯರ್ಥಿಗೆ ಗರಿಷ್ಠ ವಯೋಮಿತಿ 35 ವರ್ಷ. ಪ್ರವರ್ಗ- 2ಎ, 2ಬಿ, 3ಎ,3ಬಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 38 ವರ್ಷ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷ ನಿಗದಿಪಡಿಸಲಾಗುತ್ತದೆ.

ಅರ್ಜಿ ಶುಲ್ಕ ಎಷ್ಟು?

ಸಾಮಾನ್ಯ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 1,000 ರೂ. ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 750 ರೂ., ಅಂಗವಿಕಲ ಅಭ್ಯರ್ಥಿಗಳು ಮತ್ತು ಮಾಜಿ ಸೈನಿಕರು 250 ರೂ. ನಿಗದಿಪಡಿಸಲಾಗುತ್ತದೆ. ಅರ್ಜಿ ಸಲ್ಲಿಸುವಾಗ ಚಲನ್‌ ಪಡೆದು ಇ-ಅಂಚೆ ಕಚೇರಿ ಮೂಲಕ ಶುಲ್ಕವನ್ನು ಪಾವತಿಸಲು ಅವಕಾಶ ನೀಡಲಾಗುತ್ತದೆ.

ಅರ್ಜಿ ಶುಲ್ಕ ಪಾವತಿಸಲು ಇಲ್ಲಿ ಕ್ಲಿಕ್‌ (Click Here ) ಮಾಡಿ.

ನೇಮಕ ಹೇಗೆ?

ಆಹಾರ ಮತ್ತು ನಾಗರೀಕ ಸರಬರಾಜು ನಿಗಮ(ನಿ)ದಲ್ಲಿನ ಹುದ್ದೆಗಳನ್ನು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ನಿಯಮಿತ (ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ನೇರ ನೇಮಕಾತಿ ಮತ್ತು ಆಯ್ಕೆ) (ಸಾಮಾನ್ಯ) ನಿಯಮಗಳು 2014ರಡಿ ನಿರ್ದಿಷ್ಟಪಡಿಸಲಾದ ಮತ್ತು ಕರ್ನಾಟಕ ನಾಗರೀಕ ಸೇವೆಗಳು (ಲಿಪಿಕ ಹುದ್ದೆಗಳ ನೇಮಕಾತಿ) ನಿಯಮಗಳು 1978ರಡಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲಾಗುತ್ತದೆ.

ಇದನ್ನೂ ಓದಿ: KARBWWB Recruitment 2023 : ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ 186 ಹುದ್ದೆ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯನ್ನು ಮುಂದೆ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ. ಪರೀಕ್ಷೆಯ ಪಠ್ಯಕ್ರಮವನ್ನೂ ಕೆಇಎ ವೆಬ್‌ಸೈಟ್‌ನಲ್ಲಿ ಒದಗಿಸಲಾಗುತ್ತದೆ. ಆಫ್‌ಲೈನ್‌ನಲ್ಲಿ- ಒಎಂಆರ್‌ ಮಾದರಿಯಲ್ಲಿ ಈ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಮೈಸೂರು, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಬೆಳಗಾವಿ, ಕಲಬುರಗಿ, ವಿಜಯಪುರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಪರೀಕ್ಷಾ ಕೇಂದ್ರಗಳಿರಲಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News Special Face Book ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
ವೈವಿಧ್ಯಮಯ ಸುದ್ದಿಗಳಿಗಾಗಿ Vistara News Twitter ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

CPCB Recruitment: ಮಾಲಿನ್ಯ ನಿಯಂತ್ರಣ ಬೋರ್ಡ್‌ನಲ್ಲಿದೆ 74 ಹುದ್ದೆ; ಇಂದೇ ಅರ್ಜಿ ಸಲ್ಲಿಸಿ

CPCB Recruitment: ಮಾಲಿನ್ಯ ನಿಯಂತ್ರಣ ಬೋರ್ಡ್‌ನಲ್ಲಿ 74 ಹುದ್ದೆಗಳು ಖಾಲಿ ಇದ್ದು ಆನ್‌ಲೈನ್‌ ಮೂಲಕ ಆಸಕ್ತರು ಅರ್ಜಿ ಸಲ್ಲಿಸಬಹುದು.

VISTARANEWS.COM


on

cpcb
Koo

ನವ ದೆಹಲಿ: ಸೆಂಟ್ರಲ್‌ ಪೊಲ್ಯುಷನ್‌ ಕಂಟ್ರೋಲ್‌ ಬೋರ್ಡ್‌ ಖಾಲಿ ಇರುವ ವಿವಿಧ 74 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (CPCB Recruitment 2023). ಕನ್ಸಲ್ಟಂಟ್‌ ಎ, ಕನ್ಸಲ್ಟಂಟ್‌ ಬಿ ಮತ್ತು ಕನ್ಸಲ್ಟಂಟ್‌ ಸಿ ಹುದ್ದೆಗಳು ಖಾಲಿ ಇದ್ದು ಆಸಕ್ತರು ಆನ್‌ಲೈನ್‌ ಮೂಲಕ ಅಕ್ಟೋಬರ್‌ 10ರೊಳಗೆ ಅರ್ಜಿ ಸಲ್ಲಿಸಬೇಕು. ಕೇಂದ್ರ ಸರ್ಕಾರದ ಉದ್ಯೋಗ ಇದಾಗಿದ್ದು, ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ cpcb.nic.in ಸಂಪರ್ಕಿಸಿ.

ಹುದ್ದೆಗಳ ವಿವರ

ಕನ್ಸಲ್ಟಂಟ್‌ ಎ-19, ಕನ್ಸಲ್ಟಂಟ್‌ ಬಿ-52 ಮತ್ತು ಕನ್ಸಲ್ಟಂಟ್‌ ಸಿ-3 ಹುದ್ದೆಗಳಿವೆ. ಅಭ್ಯರ್ಥಿಗಳು ಎನ್ವಿಯೋರ್ನಮೆಂಟಲ್‌ ಎಂಜಿನಿಯರಿಂಗ್‌/ ಟೆಕ್ನಾಲಜಿ/ ಸೈನ್ಸ್‌ನಲ್ಲಿ ಸ್ನಾತಕೋತ್ತರ ಪದವಿ ಅಥವಾ ಎನ್ವಿಯೋರ್ನಮೆಂಟಲ್‌ ಎಂಜಿನಿಯರಿಂಗ್‌/ ಟೆಕ್ನಾಲಜಿಯಲ್ಲಿ ಪದವಿ ಪಡೆದಿರಬೇಕು. ಜತೆಗೆ ಎಂ.ಎಸ್‌. ಆಫೀಸ್‌ ಬಗ್ಗೆ ಉತ್ತಮ ಜ್ಞಾನ ಹೊಂದಿರಬೇಕು. ಪರಿಸರ ಮಾಲಿನ್ಯ ನಿರ್ವಹಣೆ ಕ್ಷೇತ್ರದಲ್ಲಿ 3ರಿಂದ 15 ವರ್ಷಗಳ ಅನುಭವ ಹೊಂದಿರಬೇಕು. ಗರಿಷ್ಠ 65 ವರ್ಷದೊಳಗಿನ ಅಭ್ಯೃಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಆಯ್ಕೆಯಾದ ಅಭ್ಯರ್ಥಿಗಳಿಗೆ 60,000 to 1,00,000 ರೂ. ವೇತನ ದೊರೆಯಲಿದೆ. ದಿಲ್ಲಿಯಲ್ಲಿ ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಧಾನ

 • ಆರಂಭದಲ್ಲಿ ವೆಬ್‌ಸೈಟ್‌ http://www.cpcbncaprecruitment.co.in ಮೇಲೆ ಕ್ಲಿಕ್‌ ಮಾಡಿ
 • ಲಾಗಿನ್‌ ಆಗಿ ನಿಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಿ
 • ನೀವು ಅರ್ಜಿ ಸಲ್ಲಿಸಲು ಇಚ್ಛಿಸುವ ಹುದ್ದೆಯನ್ನು ಆಯ್ಕೆ ಮಾಡಿ
 • ಅದರಲ್ಲಿ ಕೇಳಿರುವ ಮಾಹಿತಿಗಳನ್ನು ಒದಗಿಸಿ ಫಾರ್ಮ್‌ ತುಂಬಿ
 • ಭವಿಷ್ಯದ ಅಗತ್ಯಗಳಿಗಾಗಿ ಅರ್ಜಿಯ ಪ್ರಿಂಟ್‌ ಔಟ್‌ ತೆಗೆದಿಡಿ.

ಇದನ್ನೂ ಓದಿ: Job News : ಅರಣ್ಯ ಇಲಾಖೆಯಲ್ಲಿ 310 ವೀಕ್ಷಕ ಹುದ್ದೆ ಭರ್ತಿ; ಅರ್ಜಿ ಸಲ್ಲಿಕೆ ಹೇಗೆ, ಕೊನೇ ದಿನಾಂಕ ಎಂದು?

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವಿಲ್ಲ. ಕಾಂಟ್ರಾಕ್ಟ್‌ ಆಧಾರದ ಮೇಲೆ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಸದ್ಯಕ್ಕೆ ಒಂದು ವರ್ಷದ ಅವಧಿಗೆ ನೇಮಿಸಿಕೊಂಡು ಬಳಿಕ ಅಭ್ಯರ್ಥಿಯ ಕೆಲಸ ಆಧಾರದಲ್ಲಿ ಉದ್ಯೋಗ ಮುಂದುವರಿಸುವ ಸಾಧ್ಯತೆ ಇದೆ.

Continue Reading

ಉದ್ಯೋಗ

ESICK Recruitment: ಡೆಂಟಲ್‌ ಮೆಕ್ಯಾನಿಕ್‌, ರೇಡಿಯೋಗ್ರಾಫರ್‌ ಸೇರಿ 57 ಹುದ್ದೆ; ಇಂದೇ ಅರ್ಜಿ ಸಲ್ಲಿಸಿ

ESICK Recruitment: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 57 ಹುದ್ದೆಗಳಿವೆ.

VISTARANEWS.COM


on

esic
Koo

ಬೆಂಗಳೂರು: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ (Employees State Insurance Corporation Karnataka-ESIC recruitment) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಒಟ್ಟು 57 ಜೂನಿಯರ್ ರೇಡಿಯೋಗ್ರಾಫರ್, ಡೆಂಟಲ್ ಮೆಕ್ಯಾನಿಕ್ ಹುದ್ದೆಗಳು ಖಾಲಿ ಇದೆ. ಕರ್ನಾಟಕದಲ್ಲೇ ಉದ್ಯೋಗ ಮಾಡಲು ಬಯಸುವವರು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಅಕ್ಟೋಬರ್ 30ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ

 • ಡೆಂಟಲ್ ಮೆಕ್ಯಾನಿಕ್- 9
 • ECG ಟೆಕ್ನಿಷಿಯನ್- 8
 • ಜೂನಿಯರ್ ರೇಡಿಯೋಗ್ರಾಫರ್- 11
 • ಜೂನಿಯರ್ ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಜಿಸ್ಟ್​-13
 • ಮೆಡಿಕಲ್ ರೆಕಾರ್ಡ್​ ಅಸಿಸ್ಟೆಂಟ್-1ಫಾರ್ಮಾಸಿಸ್ಟ್-5
 • ರೇಡಿಯೋಗ್ರಾಫರ್- 5
 • ರೇಡಿಯೋಗ್ರಾಫರ್- 5

ಶೈಕ್ಷಣಿಕ ಅರ್ಹತೆ

 • ಡೆಂಟಲ್ ಮೆಕ್ಯಾನಿಕ್- 12ನೇ ತರಗತಿ, ಡಿಪ್ಲೊಮಾ
 • ECG ಟೆಕ್ನಿಷಿಯನ್- 12ನೇ ತರಗತಿ, ಡಿಪ್ಲೊಮಾ
 • ಜೂನಿಯರ್ ರೇಡಿಯೋಗ್ರಾಫರ್- 12ನೇ ತರಗತಿ, ಡಿಪ್ಲೊಮಾ
 • ಜೂನಿಯರ್ ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಜಿಸ್ಟ್​-12ನೇ ತರಗತಿ, ಡಿಪ್ಲೊಮಾ
 • ರೇಡಿಯೋಗ್ರಾಫರ್- 12ನೇ ತರಗತಿ, ಡಿಪ್ಲೊಮಾ
 • ಮೆಡಿಕಲ್ ರೆಕಾರ್ಡ್​ ಅಸಿಸ್ಟೆಂಟ್- 12ನೇ ತರಗತಿ
 • ಫಾರ್ಮಾಸಿಸ್ಟ್- 12ನೇ ತರಗತಿ, ಡಿಪ್ಲೊಮಾ, ಫಾರ್ಮಸಿಯಲ್ಲಿ ಪದವಿ
 • ಸೋಷಿಯಲ್ ಗೈಡ್/ ಸೋಷಿಯಲ್ ವರ್ಕರ್- ಡಿಗ್ರಿ, ಸೋಷಿಯಲ್ ವರ್ಕ್​​ನಲ್ಲಿ ಡಿಪ್ಲೊಮಾ

ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ

ಲಿಖಿತ ಪರೀಕ್ಷೆ, ಟೈಪಿಂಗ್/ ಡೇಟಾ ಎಂಟ್ರಿ ಟೆಸ್ಟ್, ಸಂದರ್ಶನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಮೀಸಲಾತಿಗೆ ಅನುಗುಣವಾಗಿ ರಿಯಾಯಿತಿ ಲಭ್ಯ. ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯುಬಿಡಿ/ ಮಹಿಳಾ/ ಮಾಜಿ ಸೈನಿಕ & ಡಿಪಾರ್ಟ್​ಮೆಂಟಲ್​ ಅಭ್ಯರ್ಥಿಗಳು 250 ರೂ. ಪಾವತಿಸಿದರೆ ಸಾಕು. ಆನ್‌ಲೈನ್‌ ಮೂಲಕವೇ ಶುಲ್ಕ ಪಾವತಿಸಬೇಕು.

ಇದನ್ನೂ ಓದಿ: NHB Recruitment 2023: ನ್ಯಾಷನಲ್ ಹೌಸಿಂಗ್ ಬೋರ್ಡ್‌ನಲ್ಲಿ 43 ಹುದ್ದೆ ನೇಮಕಾತಿ; ಇಂದೇ ಅರ್ಜಿ ಸಲ್ಲಿಸಿ

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

Continue Reading

ಉದ್ಯೋಗ

BEML Group C Recruitment: ಐಟಿಐ ಪಾಸಾದವರಿಗೆ ಸಿಹಿ ಸುದ್ದಿ; ಬಿಇಎಂಎಲ್‌ನಲ್ಲಿ 119 ಹುದ್ದೆಗೆ ಅರ್ಜಿ ಸಲ್ಲಿಸಿ

BEML Group C Recruitment: Bharat Earth Movers Limited ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 119  ಹುದ್ದೆಗಳಿದ್ದು, ಅಕ್ಟೋಬರ್‌ 18ರೊಳಗೆ ಅರ್ಜಿ ಸಲ್ಲಿಸಬಹುದು.

VISTARANEWS.COM


on

beml
Koo

ಬೆಂಗಳೂರು: ಕರ್ನಾಟಕ/ ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಸುವರ್ಣಾವಕಾಶ. Bharat Earth Movers Limited (BEML) ಖಾಲಿ ಇರುವ 119  ಹುದ್ದೆಗಳ ಭರ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಕ್ಟೋಬರ್‌ 18ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್‌ ವಿಳಾಸ https://www.bemlindia.in/ ಸಂದರ್ಶಿಸಿ.

ಶೈಕ್ಷಣಿಕ ಅರ್ಹತೆ

 • ಡಿಪ್ಲೋಮಾ ಟ್ರೈನೀಸ್ (ಮೆಕ್ಯಾನಿಕಲ್)52 ಹುದ್ದೆ-ವಿದ್ಯಾರ್ಹತೆ: ಡಿಪ್ಲೋಮಾ ಇನ್‌ ಮೆಕ್ಯಾನಿಕಲ್‌ ಎಂಜಿನಿಯರಿಂಗ್‌
 • ಡಿಪ್ಲೋಮಾ ಟ್ರೈನೀಸ್‌ (ಎಲೆಕ್ಟ್ರಿಕಲ್‌) 27 ಹುದ್ದೆ-ವಿದ್ಯಾರ್ಹತೆ: ಡಿಪ್ಲೋಮಾ ಇನ್‌ ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌
 • ಡಿಪ್ಲೋಮಾ ಟ್ರೈನೀಸ್‌ (ಸಿವಿಲ್‌) 7 ಹುದ್ದೆ-ವಿದ್ಯಾರ್ಹತೆ: ಡಿಪ್ಲೋಮಾ ಇನ್‌ ಸಿವಿಲ್ ಎಂಜಿನಿಯರಿಂಗ್‌‌
 • ಐಟಿಐ ಟ್ರೈನೀಸ್‌(ಟರ್ನರ್‌) 16 ಹುದ್ದೆ-ವಿದ್ಯಾರ್ಹತೆ: ಐಟಿಐ
 • ಐಟಿಐ ಟ್ರೈನೀಸ್‌ (ಮೆಕ್ಯಾನಿಸ್ಟ್‌ ) 16 ಹುದ್ದೆ-ವಿದ್ಯಾರ್ಹತೆ: ಐಟಿಐ
 • ಸ್ಟಾಫ್‌ ನರ್ಸ್‌ 01 ಹುದ್ದೆ-ವಿದ್ಯಾರ್ಹತೆ: ಬಿ.ಎಸ್‌ಸಿ. (ನರ್ಸಿಂಗ್‌)

ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ. ಜನರಲ್‌/ ಇಡಬ್ಲ್ಯುಎಸ್‌/ ಒಬಿಸಿ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 200 ರೂ. ಪಾವತಿಸಬೇಕು. ಎಸ್‌ಸಿ/ಎಸ್‌ಟಿ/ಪಿಡಬ್ಲುಡಿಎಸ್‌ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಆನ್‌ಲೈನ್‌ ಮೂಲಕವೇ ಸುಲ್ಕ ಪಾವತಿಸಬೇಕು.

ವಯೋಮಿತಿ

ಡಿಪ್ಲೋಮಾ ಟ್ರೈನೀಸ್ (ಮೆಕ್ಯಾನಿಕಲ್), ಡಿಪ್ಲೋಮಾ ಟ್ರೈನೀಸ್‌ (ಎಲೆಕ್ಟ್ರಿಕಲ್‌), ಡಿಪ್ಲೋಮಾ ಟ್ರೈನೀಸ್ (ಸಿವಿಲ್‌), ಐಟಿಐ ಟ್ರೈನೀಸ್‌(ಟರ್ನರ್‌), ಐಟಿಐ ಟ್ರೈನೀಸ್‌(ಮೆಕ್ಯಾನಿಸ್ಟ್‌ ) ಹುದ್ದೆಗಳಿಗೆ ಸರ್ಜಿ ಸಲ್ಲಿಸುವ ಸಾಮಾನ್ಯ ವಿಭಾಗದವರ ವಯೋಮಿತಿ ಗರಿಷ್ಠ 29 ವರ್ಷ. ಮೀಸಲಾತಿಗೆ ಅನುಗುಣವಾಗಿ ರಿಯಾಯಿತಿ ಲಭ್ಯ. ಒಬಿಸಿ 32 ವರ್ಷ ಮತ್ತು ಎಸ್‌/ ಎಸ್‌ಟಿ ವಿಭಾಗದವರಿಗೆ 34 ವರ್ಷ.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job News : ಅರಣ್ಯ ಇಲಾಖೆಯಲ್ಲಿ 310 ವೀಕ್ಷಕ ಹುದ್ದೆ ಭರ್ತಿ; ಅರ್ಜಿ ಸಲ್ಲಿಕೆ ಹೇಗೆ, ಕೊನೇ ದಿನಾಂಕ ಎಂದು?

Continue Reading

ಉದ್ಯೋಗ

7th Pay Commission : 7ನೇ ವೇತನ ಆಯೋಗದಿಂದ ಸಿಎಂ ಸಿದ್ದರಾಮಯ್ಯ ಭೇಟಿ; ಮಹತ್ವದ ಚರ್ಚೆ

7th Pay Commission : ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು (Revision of pay scales of state government employees) ಮತ್ತು ನೂತನ ವೇತನ ರಚನೆ (New pay structure) ಸೇರಿದಂತೆ ಇನ್ನಿತರ ಅಂಶಗಳಿಗಾಗಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ರಾಜ್ಯ ವೇತನ ಆಯೋಗವನ್ನು ರಾಜ್ಯ ಸರ್ಕಾರ ರಚನೆ ಮಾಡಿತ್ತು. ಈ ಆಯೋಗವು ಈಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೆಲವು ಸಂಗತಿಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದೆ.

VISTARANEWS.COM


on

7th pay commission meets CM Siddaramaiah
Koo

ಬೆಂಗಳೂರು: 7ನೇ ವೇತನ ಆಯೋಗದ ಅಧ್ಯಕ್ಷ ಸುಧಾಕರ್ ರಾವ್ (7th Pay Commission Chairman Sudhakar Rao) ಹಾಗೂ ಸದಸ್ಯರ ನಿಯೋಗವು ಶುಕ್ರವಾರ (ಸೆ. 29) ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು. ಈ ವೇಳೆ ಕೆಲವು ಮಹತ್ವದ ಸಂಗತಿಗಳ ಬಗ್ಗೆ ಸಿಎಂ ಗಮನ ಸೆಳೆಯಲಾಗಿದೆ ಎಂದು ತಿಳಿದು ಬಂದಿದೆ.

ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಕಾರ್ಯದರ್ಶಿಗಳಾದ ಪಿ.ಸಿ. ಜಾಫರ್, ಡಾ. ಎಂ.ಟಿ. ರೇಜು ಈ ವೇಳೆ ಭಾಗಿಯಾಗಿದ್ದರು.

ಇದನ್ನೂ ಓದಿ: Cauvery water dispute : ಸಂಕಷ್ಟ ಸೂತ್ರಕ್ಕೆ ಒತ್ತಡ ಹಾಕುವೆನೆಂದ ಸಿಎಂ; ನೀರು ಬಿಡದಿದ್ದರೆ ಸರ್ಕಾರವೇ ವಜಾ ಆಗಬಹುದು!

ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳನ್ನು ಪರಿಷ್ಕರಿಸಲು (Revision of pay scales of state government employees) ಮತ್ತು ನೂತನ ವೇತನ ರಚನೆ (New pay structure) ಸೇರಿದಂತೆ ಇನ್ನಿತರ ಅಂಶಗಳಿಗಾಗಿ ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 7ನೇ ರಾಜ್ಯ ವೇತನ ಆಯೋಗವನ್ನು ರಾಜ್ಯ ಸರ್ಕಾರ ರಚನೆ ಮಾಡಿತ್ತು. ಈ ಆಯೋಗವು ಈಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೆಲವು ಸಂಗತಿಗಳ ಬಗ್ಗೆ ಮಹತ್ವದ ಚರ್ಚೆ ನಡೆಸಿದೆ.

7th pay commission meets CM Siddaramaiah

2022ರಲ್ಲಿ ರಚನೆಯಾಗಿದ್ದ ಆಯೋಗ

2022ರ ನವೆಂಬರ್‌ 19ರಂದು ಆಗಿನ ಸಿಎಂ ಬಸವರಾಜ ಬೊಮ್ಮಾಯಿ (Former CM Basavaraj Bommai) ಅವರು 7ನೇ ರಾಜ್ಯ ವೇತನ ಆಯೋಗ ರಚನೆ ಮಾಡಿ ಆದೇಶಿಸಿದ್ದರು. ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ಪರಿಷ್ಕರಣೆ ಕುರಿತಂತೆ ರಾಜ್ಯ ಸರ್ಕಾರಿ ನೌಕರರ ಬೇಡಿಕೆಗಳನ್ನು ಪರಿಶೀಲಿಸಿ 6 ತಿಂಗಳ ಕಾಲಮಿತಿಯಲ್ಲಿ ವರದಿಯನ್ನು ಸಲ್ಲಿಸಲು, ತ್ರಿಸದಸ್ಯರ ಆಯೋಗವನ್ನು ಅವರು ರಚಿಸಿದ್ದರು.

ಈ 7ನೇ ರಾಜ್ಯ ವೇತನ ಆಯೋಗಕ್ಕೆ ಸುಧಾಕರ್ ರಾವ್ ಅಧ್ಯಕ್ಷ. ಪಿ. ಬಿ. ರಾಮಮೂರ್ತಿ, ಶ್ರೀಕಾಂತ್ ಬಿ. ವನಹಳ್ಳಿ, ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಕಾರ್ಯದರ್ಶಿಗಳಾಗಿ ನೇಮಕವಾಗಿದ್ದರು. ಈ ಹಿಂದಿನ ಆದೇಶದನ್ವಯ ಆಯೋಗವು 19/5/2023ಕ್ಕೆ ವರದಿ ನೀಡಬೇಕಿತ್ತು. ಆದರೆ, ಬಳಿಕ ವಿಧಾನಸಭಾ ಚುನಾವಣೆ ಬಂದಿತ್ತು. ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮೇ 19ಕ್ಕೆ ವರದಿ ನೀಡಬೇಕಿದ್ದ ಕಾಲಾವಧಿಯನ್ನು ಮತ್ತೆ 6 ತಿಂಗಳ ಅವಧಿಗೆ ವಿಸ್ತರಣೆ ಮಾಡಿ ಆದೇಶಿಸಿತ್ತು.

7ನೇ ವೇತನ ಆಯೋಗದ ಕಾರ್ಯಚಟುವಟಿಕೆ ಏನು?

ಈ 7ನೇ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ (ಯುಜಿಸಿ/ ಎಐಸಿಟಿಇ/ ಐಸಿಎಆರ್/ ಎನ್‌ಜೆಪಿಸಿ ವೇತನ ಶ್ರೇಣಿ ಹೊಂದಿರುವವರನ್ನು ಹೊರತುಪಡಿಸಿ), ಅನುದಾನಿತ ಶಿಕ್ಷಣ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಬೋಧಕೇತರ ಸಿಬ್ಬಂದಿಗೆ ಮರಣ ಹಾಗೂ ನಿವೃತ್ತಿ ಉಪದಾನ ಸೌಲಭ್ಯಗಳನ್ನೊಳಗೊಂಡಂತೆ ಲಭ್ಯವಿರುವ ಎಲ್ಲ ಕ್ರೋಢೀಕೃತ ಸೌಲಭ್ಯಗಳನ್ನು ಗಣನೆಗೆ ತೆಗೆದುಕೊಂಡು, ಈ ಸಿಬ್ಬಂದಿ ಪ್ರಸ್ತುತ ವೇತನ ರಚನೆಯನ್ನು ಪರಿಶೀಲಿಸುವುದು ಹಾಗೂ ಅಪೇಕ್ಷಣೀಯವಾದ ಹಾಗೂ ಕಾರ್ಯಸಾಧ್ಯವಿರುವ ನೂತನ ವೇತನ ರಚನೆಯನ್ನು ರೂಪಿಸಬೇಕು ಎಂಬುದಾಗಿ ರಾಜ್ಯ ಸರ್ಕಾರವು ಕಾರ್ಯಚಟುವಟಿಕೆಯನ್ನು ಸೂಚಿಸಿತ್ತು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ವೃಂದದ ಹುದ್ದೆಗಳನ್ನು ಸಮೀಕರಿಸಿ ಕೇಂದ್ರ ಸರ್ಕಾರದ ವೇತನ ರಚನೆಯನ್ನು ಅಳವಡಿಸಿಕೊಳ್ಳುವ ಕಾರ್ಯಸಾಧ್ಯತೆಗಳನ್ನು ಪರಿಶೀಲನೆ ಮಾಡಬೇಕು. ರಾಜ್ಯ ಸರ್ಕಾರವು ಅಳವಡಿಸಿಕೊಳ್ಳಬಹುದಾದ ತುಟ್ಟಿಭತ್ಯೆಯ ಸೂತ್ರವನ್ನು ನಿರ್ಧರಿಸಿ ಪರಿಶೀಲಿಸಬೇಕು. ಮನೆ ಬಾಡಿಗೆ ಭತ್ಯೆ ಮತ್ತು ನಗರ ಪರಿಹಾರ ಭತ್ಯೆ, ವಿಶೇಷ ಭತ್ಯೆಗಳು ಇತ್ಯಾದಿ ಮತ್ತು ರಜೆ ಪ್ರಯಾಣ ರಿಯಾಯಿತಿ ಹಾಗೂ ವೈದ್ಯಕೀಯ ಮರುಪಾವತಿ ಸೌಲಭ್ಯಗಳನ್ನೊಳಗೊಂಡಂತಹ ವಿವಿಧ ಭತ್ಯೆಗಳನ್ನು ಪರಿಶೀಲಿಸುವುದರ ಜತೆಗೆ ಅಪೇಕ್ಷಣೀಯವಾದ ಹಾಗೂ ಕಾರ್ಯಸಾಧ್ಯವಿರುವ ಬದಲಾವಣೆಗಳನ್ನು 7ನೇ ವೇತನ ಆಯೋಗವು ಸಲಹೆ ಮಾಡಬೇಕಿದೆ.

ಪರಿಶೀಲನೆ ಮಾಡಬೇಕಾದ ಇತರೆ ಅಂಶಗಳೇನು?

ಆಯೋಗವು ಶಿಫಾರಸು ಮಾಡುವಲ್ಲಿ, ರಾಜ್ಯ ಸಂಪನ್ಮೂಲಗಳು ಹಾಗೂ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಯೋಜನೆಗಳ ಕುರಿತಾಗಿ ರಾಜ್ಯ ಸರ್ಕಾರದ ಹೊಣೆಗಳು, ಶಾಸನಬದ್ಧ ಹಾಗೂ ಕ್ರಮಬದ್ಧ ಕಾರ್ಯಗಳು, ಋಣಸೇವಾ ನಿರ್ವಹಣೆಗಳು ಮತ್ತು ಇತರೆ ಅಭಿವೃದ್ಧಿಯೇತರ ಅಗತ್ಯಗಳನ್ನು ಹಾಗೂ ವಿತ್ತೀಯ ಹೊಣೆಗಾರಿಕೆ ನಿರ್ವಹಣೆ ಅಧಿನಿಯಮ, 2002ರ ಅಧ್ಯಾದೇಶದ ಅವಕಾಶಗಳ ಪರಿಮಿತಿಯನ್ನು ಗಮನದಲ್ಲಿರಿಸಿಕೊಳ್ಳುವುದು ಹಾಗೂ ನಿವೃತ್ತಿ ವೇತನ ಮತ್ತು ನಿವೃತ್ತಿ ಸೌಲಭ್ಯಗಳನ್ನು ಪರಿಶೀಲಿಸುವುದು. ರಾಜ್ಯ ಸರ್ಕಾರದಿಂದ ವಹಿಸಲ್ಪಡುವ/ ಸೂಚಿಸಬಹುದಾದ ಇತರೆ ವಿಷಯಗಳನ್ನು ಈ ಆಯೋಗವು ಪರಿಶೀಲಿಸಬೇಕಿದೆ.

ಆಯೋಗವು ತನ್ನದೇ ಆದ ಕಾರ್ಯವಿಧಾನಗಳನ್ನು ರೂಪಿಸಿಕೊಳ್ಳುವುದು ಹಾಗೂ ಪರಿಶೀಲನಾರ್ಹ ಅಂಶಗಳಿಗೆ ಅಗತ್ಯವೆನಿಸಿದ ಮಾಹಿತಿಗಳನ್ನು ವಿವಿಧ ಇಲಾಖೆಗಳಿಂದ ಪಡೆಯಬಹುದಾಗಿರುತ್ತದೆ. ಸರ್ಕಾರದ ಎಲ್ಲ ಇಲಾಖೆಗಳು ಆಯೋಗವು ಅಪೇಕ್ಷಿಸುವ ಎಲ್ಲ ಮಾಹಿತಿ, ದಾಖಲೆ ಹಾಗೂ ಇನ್ನಿತರೆ ಸಹಕಾರವನ್ನು ಒದಗಿಸಬೇಕು. ಎಲ್ಲ ಸೇವಾ ಸಂಘಟನೆಗಳು, ಸ್ಥಳೀಯ ಸಂಸ್ಥೆಗಳು, ಅನುದಾನಿತ ಸಂಸ್ಥೆಗಳು ಮತ್ತು ಇತರೆ ಸಂಬಂಧಪಟ್ಟವರು ಆಯೋಗಕ್ಕೆ ಅವುಗಳ ಸಂಪೂರ್ಣ ಸಹಕಾರ ಮತ್ತು ನೆರವನ್ನು ನೀಡುತ್ತವೆ ಎಂದು ಸರ್ಕಾರವು ಭಾವಿಸುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿತ್ತು.

ವೇತನ ಹೆಚ್ಚಳದ ನಿರೀಕ್ಷೆಯಲ್ಲಿ ಸರ್ಕಾರಿ ನೌಕರರು

ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸಿನ ಅನ್ವಯ ಶೇ 38 ರಿಂದ 40ರಷ್ಟು ವೇತನ ಹೆಚ್ಚಾಗುವ ವಿಶ್ವಾಸವಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ. ಎಸ್. ಷಡಾಕ್ಷರಿ ಹೇಳಿದ್ದಾರೆ.

ಇದನ್ನೂ ಓದಿ: Cauvery Water Dispute : ಕಾವೇರಿ ನೀರು ಹರಿಸುವ ಹೊಸ ಸೂತ್ರಕ್ಕೆ ಆಗ್ರಹ: ಡಿಸಿಎಂ ಡಿ.ಕೆ.ಶಿವಕುಮಾರ್

ನವೆಂಬರ್‌ ಅಂತ್ಯಕ್ಕೆ ವರದಿ?

7ನೇ ವೇತನ ಆಯೋಗವು ನವೆಂಬರ್ ಅಂತ್ಯದ ವೇಳೆಗೆ ವೇತನ ಹೆಚ್ಚಳಕ್ಕೆ ಪೂರಕವಾಗಿರುವ ವರದಿ ಸಲ್ಲಿಸುವ ಸಾಧ್ಯತೆ ಇದೆ. ಈಗಾಗಲೇ ಮತ್ತೆ ಆರು ತಿಂಗಳು ಕಾಲ ಮಿತಿಯನ್ನು ವಿಸ್ತರಣೆ ಮಾಡಿರುವ ಹಿನ್ನೆಲೆಯಲ್ಲಿ ನವೆಂಬರ್‌ ಅಂತ್ಯಕ್ಕೆ ವರದಿ ನೀಡಬಹುದಾಗಿದೆ. ಸಮಿತಿಯ ಸದಸ್ಯರನ್ನು ಭೇಟಿ ಮಾಡಿ ಶೇ. 38ರಿಂದ 40ವೇತನ ಹೆಚ್ಚಳಕ್ಕೆ ಮನವಿ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

Continue Reading
Advertisement
dina bhavishya
ಪ್ರಮುಖ ಸುದ್ದಿ21 mins ago

Dina Bhavishya : ಈ ರಾಶಿಯವರು ಹೂಡಿಕೆ ಮಾಡಿದ್ರೆ ಲಾಭ ಗ್ಯಾರಂಟಿ

Sphoorti Salu
ಸುವಚನ21 mins ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

Vivek Ramaswamy offering rs 80 lakh to nanny Says media report
ಪ್ರಮುಖ ಸುದ್ದಿ5 hours ago

ಮಕ್ಕಳನ್ನು ನೋಡಿಕೊಳ್ಳುವ ಆಯಾ ಕೆಲಸಕ್ಕೆ 80 ಲಕ್ಷ ರೂ. ಸ್ಯಾಲರಿ ಆಫರ್!

MLC TA Sharavana
ಬೆಂಗಳೂರು6 hours ago

TA Sharavana: ಅನಾಮಿಕರಾಗಿದ್ದ ಜಮೀರ್‌ಗೆ ರಾಜಕೀಯ ಬದುಕು ಕೊಟ್ಟಿದ್ದೇ ಜೆಡಿಎಸ್: ಟಿ.ಎ.ಶರವಣ

Justin Trudeau
ದೇಶ6 hours ago

India Canada Row: ಥಂಡಾ ಹೊಡೆದ ಕೆನಡಾ ಪಿಎಂ! ಭಾರತದೊಂದಿಗೆ ಇನ್ನು ಜಗಳ ಮಾಡಲ್ಲ ಎಂದ ಟ್ರೂಡೋ

Netherlands cricket team
ಕ್ರಿಕೆಟ್6 hours ago

ICC World Cup 2023 : ವಿಶ್ವ ಕಪ್​ನಲ್ಲಿ ಆಡಲಿರುವ ನೆದರ್ಲ್ಯಾಂಡ್ಸ್​​ ತಂಡದ ಬಲವೇನು? ದೌರ್ಬಲ್ಯವೇನು?

Modi and KTR
ದೇಶ6 hours ago

ಎನ್‌ಡಿಎಗೆ ಸೇರಿಸಿಕೊಳ್ಳಿ ಎಂದಿದ್ದ ಕೆಸಿಆರ್; ಮೋದಿ! ಬಿಜೆಪಿ ಜತೆ ಹೋಗಲು ನಮಗೇನು ಹುಚ್ಚು ನಾಯಿ ಕಚ್ಚಿದೆಯಾ; ಕೆಟಿಆರ್

Child dies
ಕರ್ನಾಟಕ6 hours ago

Anekal News: ಮಹಡಿ ಮೇಲಿಂದ ಬಿದ್ದು 2 ವರ್ಷದ ಮಗು ಸಾವು

MB Patil visits america
ಕರ್ನಾಟಕ7 hours ago

MB Patil : ಬೆಂಗಳೂರಿನಲ್ಲಿ 800 ಕೋಟಿ ರೂ. ಹೂಡಲು ಕ್ರಿಪ್ಟನ್ ಸೊಲ್ಯೂಷನ್ಸ್ ಒಲವು: ಎಂ.ಬಿ. ಪಾಟೀಲ್

Top 10 news
ಟಾಪ್ 10 ನ್ಯೂಸ್7 hours ago

VISTARA TOP 10 NEWS : ಜಾತಿ ಗಣತಿಗೆ ಮೋದಿ ವಿರೋಧ, ಶಿವಮೊಗ್ಗದಲ್ಲಿ ಪೊಲೀಸರಿಗೇ ಬೆದರಿಕೆ ಹಾಕಿದ್ದ ಕಿಡಿಗೇಡಿಗಳು ಮತ್ತಿತರ ದಿನದ ಪ್ರಮುಖ ಸುದ್ದಿಗಳು

7th Pay Commission
ನೌಕರರ ಕಾರ್ನರ್11 months ago

7th Pay Commission | ಸದ್ಯವೇ 7ನೇ ವೇತನ ಆಯೋಗ ರಚಿಸಿ ಆದೇಶ; ಮುಖ್ಯಮಂತ್ರಿ ಭರವಸೆ

Karnataka bandh Majestic
ಕರ್ನಾಟಕ1 week ago

Bangalore Bandh Live: ಚರ್ಚಿಲ್ ಮಾತು ಉಲ್ಲೇಖಿಸಿ ಸಿಎಂಗೆ ಜಲಪಾಠ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ!

DCC Bank Recruitment 2023
ಉದ್ಯೋಗ8 months ago

DCC Bank Recruitment 2023 : ಬೆಂಗಳೂರು ಡಿಸಿಸಿ ಬ್ಯಾಂಕ್‌ನಲ್ಲಿ 96 ಹುದ್ದೆಗಳಿಗೆ ನೇಮಕ; ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನ

Sphoorti Salu
ಸುವಚನ4 months ago

ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ

kpsc recruitment 2023 pdo recruitment 2023
ಉದ್ಯೋಗ3 months ago

PDO Recruitment 2023 : 350+ ಪಿಡಿಒ ಹುದ್ದೆಗಳಿಗೆ ಈ ಬಾರಿ ಕೆಪಿಎಸ್‌ಸಿ ಮೂಲಕ ನೇಮಕ

Govt employees ssociation
ಕರ್ನಾಟಕ8 months ago

7th pay commission | ಸರ್ಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ, ಹಳೆ ಪಿಂಚಣಿ ಯೋಜನೆ; ವೇತನ ಆಯೋಗದ ಮುಂದೆ ಬೇಡಿಕೆ ಪಟ್ಟಿ

Rajendra Singh Gudha
ದೇಶ3 months ago

Rajasthan Minister: ಸೀತಾ ಮಾತೆ ಸುಂದರಿ! ಅದ್ಕೆ ರಾಮ, ರಾವಣ ಆಕೆ ಹಿಂದೆ ಬಿದ್ದಿದ್ದರು; ಕಾಂಗ್ರೆಸ್ ಸಚಿವ

Village Accountant Recruitment
ಉದ್ಯೋಗ8 months ago

Village Accountant Recruitment : ರಾಜ್ಯದಲ್ಲಿ 2007 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ; ಯಾವ ಜಿಲ್ಲೆಯಲ್ಲಿ ಎಷ್ಟು ಹುದ್ದೆಗಳಿವೆ ನೋಡಿ

Entitled leave for employees involved in strike; Order from Govt
ನೌಕರರ ಕಾರ್ನರ್7 months ago

Govt Employees Strike : ಮುಷ್ಕರದಲ್ಲಿ ಭಾಗಿಯಾದ ನೌಕರರಿಗೆ ವೇತನ ಸಹಿತ ರಜೆ; ಸದ್ಯವೇ ಸರ್ಕಾರದಿಂದ ಆದೇಶ

betel nut smuggling Areca News
ಕರ್ನಾಟಕ10 months ago

Areca News | ಅಕ್ರಮ ಅಡಿಕೆ ಆಮದಿನ ಕಿಂಗ್‌ಪಿನ್‌ ಅರೆಸ್ಟ್‌; ಇನ್ನಾದರೂ ಏರೀತೆ ಅಡಿಕೆಯ ಬೆಲೆ?

dina bhavishya
ಪ್ರಮುಖ ಸುದ್ದಿ21 mins ago

Dina Bhavishya : ಈ ರಾಶಿಯವರು ಹೂಡಿಕೆ ಮಾಡಿದ್ರೆ ಲಾಭ ಗ್ಯಾರಂಟಿ

The maintenance train finally lifted Metro services as usual
ಕರ್ನಾಟಕ14 hours ago

Namma Metro : ಕೊನೆಗೂ ಲಿಫ್ಟ್ ಆಯ್ತು ಮೆಂಟೈನ್ಸ್‌ ವೆಹಿಕಲ್‌; ಎಂದಿನಂತೆ ಮೆಟ್ರೋ ಓಡಾಟ

BBK Season 10 KicchaSudeep
ಕಿರುತೆರೆ15 hours ago

BBK Season 10 : ಅಕ್ಟೋಬರ್‌ 8 ರಿಂದ ಬಿಗ್‌ ಬಾಸ್‌ ಆಟ; ಚಾರ್ಲಿ ಎಂಟ್ರಿ ಕನ್ಫರ್ಮ್, ಉಳಿದವರು ಯಾರು ?

dina bhavishya
ಪ್ರಮುಖ ಸುದ್ದಿ1 day ago

Dina Bhavishya : ಈ ರಾಶಿಯವರಿಗೆ ಮಾತೇ ಮುತ್ತು, ಮಾತೇ ಮೃತ್ಯು!

Actor Nagabhushana
ಕರ್ನಾಟಕ2 days ago

Actor Nagabhushana : ಡ್ರಂಕ್‌ ಆ್ಯಂಡ್‌ ಡ್ರೈವ್‌ನಲ್ಲಿ ನಟ ನಾಗಭೂಷಣ್‌ ನೆಗಟಿವ್‌; ವಿಚಾರಣೆಗೆ ಕರೆದ ಪೊಲೀಸರು

Dina Bhavishya
ಪ್ರಮುಖ ಸುದ್ದಿ2 days ago

Dina Bhavishya : ಆಪ್ತರೊಂದಿಗೆ ಮಾಡುವ ವ್ಯಾಪಾರ ನಷ್ಟ ತಂದೀತು ಹುಷಾರ್‌!

Terrorist Attack in Turkey Suicide bomber blows himself near parliament
ಪ್ರಮುಖ ಸುದ್ದಿ2 days ago

Terrorist Attack: ಟರ್ಕಿ ಸಂಸತ್ ಬಳಿ ಆತ್ಮಹತ್ಯಾ ಬಾಂಬ್ ದಾಳಿ, ಸಿಸಿಟಿವಿಯಲ್ಲಿ ಸೆರೆಯಾಯ್ತು ಸ್ಫೋಟದ ಕ್ಷಣಗಳು!

prajwal and yashswini
ಕರ್ನಾಟಕ3 days ago

Actor Nagabhushana : ಆ್ಯಕ್ಟಿಂಗ್‌ ನೋಡಿ ಮೆಚ್ಚಿದವರ ಪಾಲಿಗೆ ಯಮನಾಗಿಬಿಟ್ಟ; ಮೃತ ಕುಟುಂಬಸ್ಥರ ಆಕ್ರೋಶ

Dina Bhavishya
ಪ್ರಮುಖ ಸುದ್ದಿ3 days ago

Dina Bhavishya : ಆಪ್ತರೊಂದಿಗೆ ಅತಿಯಾದ ಸಲುಗೆ ಈ ರಾಶಿಯವರಿಗೆ ಒಳ್ಳೆಯದಲ್ಲ!

dina bhavishya
ಪ್ರಮುಖ ಸುದ್ದಿ4 days ago

Dina Bhavishya : ದಿನ ಪೂರ್ತಿ ಈ ರಾಶಿಯವರಿಗೆ ಟೆನ್ಷನ್‌ ಜತೆಗೆ ಪ್ರೆಶರ್‌

ಟ್ರೆಂಡಿಂಗ್‌