ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯಿಂದ 3,484 ಸಶಸ್ತ್ರ ಪೊಲೀಸ್ ಕಾನ್ಸ್‌ಟೆಬಲ್ (ಸಿಎಆರ್/ ಡಿಎಆರ್) ಹುದ್ದೆಗಳ ನೇಮಕಾತಿಗೆ(KSP recruitment) ಅಧಿಸೂಚನೆ (Good News) ಹೊರಡಿಸಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಕ್ಟೋಬರ್ 31ರಂದು ಸಂಜೆ 6 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು.
ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ಟೆಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) ಹುದ್ದೆಗಳ ನೇಮಕಾತಿ ಮಾಡಲಾಗುತ್ತಿದ್ದು, ಸೆಪ್ಟೆಂಬರ್ 19ರ ಬೆಳಗ್ಗೆ 10 ಗಂಟೆಯಿಂದ https://ksp-recruitment.in ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆ ಹೆಸರು: ಸಶಸ್ತ್ರ ಪೊಲೀಸ್ ಕಾನ್ಸ್‌ಟೆಬಲ್
ಒಟ್ಟು ಹುದ್ದೆಗಳ ಸಂಖ್ಯೆ-3,484
ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ಟೆಬಲ್ ಹುದ್ದೆಗಳು: 3,064
ಕಲ್ಯಾಣ ಕರ್ನಾಟಕ ವೃಂದದ ಸಶಸ್ತ್ರ ಪೊಲೀಸ್ ಕಾನ್ಸ್‌ಟೆಬಲ್ ಹುದ್ದೆಗಳು: 420
ವಿದ್ಯಾರ್ಹತೆ : ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
ವೆಬ್‌ಸೈಟ್ ವಿಳಾಸ : https://ksp-recruitment.in
ಅರ್ಜಿ ಶುಲ್ಕ
ಸಾಮಾನ್ಯ ಅರ್ಹತೆ, ಇತರೆ ಹಿಂದುಳಿದ ವರ್ಗ- 400 ರೂ.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1- 200 ರೂ.
ಶುಲ್ಕ ಪಾವತಿಗೆ ಕೊನೆ ದಿನಾಂಕ: 03-11-2022
ವಯೋಮಿತಿ: ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆ ದಿನಾಂಕ ಅಕ್ಟೋಬರ್ 31ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ಮಿತಿ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳು, ಒಬಿಸಿ ಅಭ್ಯರ್ಥಿಗಳಿಗೆ 27 ವರ್ಷ, ಇತರೆ ಅಭ್ಯರ್ಥಿಗಳಿಗೆ 25 ವರ್ಷ, ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ.
ವೇತನ ಶ್ರೇಣಿ: 23,500 ರೂ. – 47,650 ರೂ.
ಇದನ್ನೂ ಓದಿ | ದಸರಾ ಸಿಹಿ ಸುದ್ದಿ | 2,500 ಪ್ರೌಢ ಶಾಲಾ ಶಿಕ್ಷಕರ ನೇಮಕಕ್ಕೆ ಸರ್ಕಾರ ತೀರ್ಮಾನ, ಶೀಘ್ರವೇ ಪ್ರಕ್ರಿಯೆ ಆರಂಭ