PSI Recruitment: ಶೀಘ್ರದಲ್ಲೇ 660 ಪಿಎಸ್‌ಐ ಹುದ್ದೆ ನೇಮಕಾತಿಗೆ ಅಧಿಸೂಚನೆ: ಡಾ.ಜಿ. ಪರಮೇಶ್ವರ್ - Vistara News

ಉದ್ಯೋಗ

PSI Recruitment: ಶೀಘ್ರದಲ್ಲೇ 660 ಪಿಎಸ್‌ಐ ಹುದ್ದೆ ನೇಮಕಾತಿಗೆ ಅಧಿಸೂಚನೆ: ಡಾ.ಜಿ. ಪರಮೇಶ್ವರ್

PSI Recruitment: 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಮರು ಪರೀಕ್ಷೆ ಸುಗಮವಾಗಿ ನಡೆದಿದೆ. ನೇಮಕಾತಿ ಪ್ರಕ್ರಿಯೆ ಆದಷ್ಟು ಬೇಗ ಮುಗಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

VISTARANEWS.COM


on

Dr G Parameshwara
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನಿರೀಕ್ಷೆಯಂತೆ ಪಿಎಸ್ಐ ಮರುಪರೀಕ್ಷೆ ಬಹಳ ಸುಗಮವಾಗಿ ನಡೆದಿದೆ. ಇದರ ಬಳಿಕ 403 ಹುದ್ದೆಗಳ ಆಯ್ಕೆಗೆ ಲಿಖಿತ ಪರೀಕ್ಷೆ ನಡೆಯಲಿದ್ದು, ನಂತರ 660 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ (PSI Recruitment) ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಮರು ಪರೀಕ್ಷೆಯನ್ನು(ಜ.23ರಂದು) 54 ಸಾವಿರ ಅಭ್ಯರ್ಥಿಗಳು ಬರೆಯಬೇಕಿತ್ತು. ಕೆಲವರು ಗೈರಾಗಿದ್ದು, ಶೇ.65ರಿಂದ 70ರಷ್ಟು ಮಂದಿ ಪರೀಕ್ಷೆ ಬರೆದಿದ್ದಾರೆ. ಆದಷ್ಟು ಬೇಗ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು. ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ಇದರ ಬಳಿಕ 403 ಪಿಎಸ್‌ಐ ಹುದ್ದೆಗಳಿಗೆ ಪರೀಕ್ಷೆ ಮಾಡಬೇಕು. ಇದಕ್ಕೆ ಈಗಾಗಲೇ ದೈಹಿಕ ಪರೀಕ್ಷೆ ನಡೆದಿದೆ. ತದನಂತರ 660 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಪಿಎಸ್‌ಐ ಮರುಪರೀಕ್ಷೆಯನ್ನು ಸುಗಮವಾಗಿ ನಡೆಸಿರುವುದಕ್ಕೆ ಕೆಇಎಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ನೇಮಕಾತಿ ಪರೀಕ್ಷೆ ಜವಾಬ್ದಾರಿಯನ್ನು ಕೂಡ ಕೆಇಎ ಅವರಿಗೇ ವಹಿಸಬೇಕು ಎಂದುಕೊಂಡಿದ್ದೇವೆ. 660 ಪಿಎಸ್ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Job Alert: ಭಾರತೀಯ ರೈಲ್ವೆಯಲ್ಲಿದೆ 5,696 ಸಹಾಯಕ ಲೋಕೋ ಪೈಲಟ್‌ ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

ಸದ್ಯ ಎರಡೂ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡರೆ 948 ಸಬ್ ಇನ್‌ಸ್ಪೆಕ್ಟರ್‌ಗಳು ಲಭ್ಯವಾಗುತ್ತಾರೆ. ಇದಾದ ಮೇಲೆ 660 ಸಬ್ ಇನ್‌ಸ್ಪೆಕ್ಟರ್‌ ಹುದ್ದೆಗಳಿಗೆ ಆಯ್ಕೆ ನಡೆಯಬೇಕಿದೆ. ಒಟ್ಟಾರೆ ಇನ್ನೆರಡು ವರ್ಷದಲ್ಲಿ ಇವೆಲ್ಲವನ್ನು ಕೂಡ ಮಾಡಬೇಕಾಗುತ್ತದೆ. ಈಗ ಅಭ್ಯರ್ಥಿಗಳನ್ನು ಸೆಲೆಕ್ಷನ್ ಮಾಡಿ ಟ್ರೈನಿಂಗ್‌ಗೆ ಒಂದು ವರ್ಷ ಕಳುಹಿಸುತ್ತೇವೆ ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ಅಂಬೇಡ್ಕರ್ ಪ್ರತಿಮೆಗೆ ಅವಮಾನ ವಿಚಾರಕ್ಕೆ ಮಾತನಾಡಿ, ಪ್ರಕರಣದಲ್ಲಿ ಈಗಾಗಲೇ ನಾಲ್ಕು ಜನರನ್ನು ಬಂಧಿಸಿದ್ದೇವೆ. ಇದರ ಹಿಂದಿನ ಉದ್ದೇಶ ಏನು ಎಂಬುದನ್ನು ತನಿಖೆ ಮಾಡಬೇಕು. ಈ ರೀತಿ ಘಟನೆಯಾದಾಗ ಯಾವುದಾದರೂ ಉದ್ದೇಶ ಇದ್ದೇ ಇರುತ್ತದೆ. ಅವರ ಉದ್ದೇಶ ಏನು ಎಂಬುವುದನ್ನು ತಿಳಿದುಕೊಳ್ಳಬೇಕು. ಅದಕ್ಕೆ ಯಾರಾದರೂ ಕುಮ್ಮಕ್ಕು ನೀಡಿದ್ದಾರಾ ಎಂಬ ಬಗ್ಗೆ ತನಿಖೆ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ | Job Alert: ಬ್ಯಾಂಕ್‌ ಆಫ್‌ ಬರೋಡಾದ 250 ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಬಿಜೆಪಿ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯಿಸಿ, ಬಹುಶಃ ಬಿಜೆಪಿ ಅವರಿಗೆ ಯಾರು ಈ ಕೃತ್ಯ ಮಾಡಿದ್ದಾರೆ ಎಂಬುವುದು ಗೊತ್ತಾದ ಮೇಲೆ ಸುಮ್ಮನಾಗಬಹುದು ಎಂದು ಅನಿಸುತ್ತದೆ. ನಾನು ಯಾವುದೇ ಊಹಾತ್ಮಕವಾಗಿ ಯಾರು ಮಾಡಿದ್ದಾರೆ, ಯಾಕೆ ಮಾಡಿದ್ದಾರೆ ಅಂತ ಹೇಳಲ್ಲ. ಯಾರು ಹೇಳಿ ಕೊಟ್ಟಿದ್ದಾರೆ ಇದೆಲ್ಲವನ್ನು ಕೂಡ ನಾವು ಪರಿಶೀಲನೆ ಮಾಡಬೇಕು. ಹಾಗಾಗಿ ಸಾರ್ವಜನಿಕವಾಗಿ ಯಾರು ಅಂತ ಹೇಳುವುದಕ್ಕೆ ಬರುವುದಿಲ್ಲ ಎಂದು ಹೇಳಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Fair : ಫೆ.26-27ರಂದು ಬೃಹತ್ ಉದ್ಯೋಗ ಮೇಳ, 500 ಕಂಪನಿಗಳು ಭಾಗಿ, 1 ಲಕ್ಷ ಜಾಬ್‌!

Job Fair : ಫೆ 26 ಮತ್ತು 27ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್‌ ಉದ್ಯೋಗ ಮೇಳ ನಡೆಯಲಿದೆ. ಇದಲ್ಲಿ 500 ಕಂಪನಿಗಳು ಭಾಗಿಯಾಗಲಿದ್ದು 1 ಲಕ್ಷ ಹುದ್ದೆಗಳ ನೇಮಕಾತಿ ನಡೆಯುವ ಸಾಧ್ಯತೆಗಳಿವೆ.

VISTARANEWS.COM


on

Job fair Bangalore
Koo

ಬೆಂಗಳೂರು: ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ ಹಾಗೂ ವೃತ್ತಿಪರ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಯುವಜರಿಗೆ ಉದ್ಯೋಗ (Employment for youth) ಅವಕಾಶ ಕಲ್ಪಿಸುವ ಬೃಹತ್ ಯುವ ಸಮೃದ್ಧಿ ಸಮ್ಮೇಳ (Job fair) ಇದೇ ತಿಂಗಳ 26ರಿಂದ ಎರಡು ದಿನಗಳ ಕಾಲ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.

ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಇಲಾಖೆ ಸಹಭಾಗಿತ್ವದಲ್ಲಿ ನಡೆಯಲಿರುವ ಯುವ ಸಮೃದ್ಧಿ ಸಮ್ಮೇಳನದ ಉದ್ಯೋಗ ಮೇಳ ಕುರಿತು ಬುಧವಾರ ವಿಧಾನ ಸೌಧದ ಸಮ್ಮೇಳನದ ಸಭಾಂಗಣದಲ್ಲಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ (Sharan Prakash Pateel) ಹಾಗೂ ಐಟಿ-ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ (Priyank Kharge) ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

Job fair Bangalore2

ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಮಾತನಾಡಿ, ಇದೇ ತಿಂಗಳ 26 ಮತ್ತು 27ರಂದು ಬೆಂಗಳೂರಿನ ಅರಮನೆಯಲ್ಲಿ ಯುವ ಸಮೃದ್ಧಿ ಸಮ್ಮೇಳನ ಎಂಬ ಹೆಸರಿನಡಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಪದವಿ, ಎಂಜಿನಿಯರಿಂಗ್, ಡಿಪ್ಲೊಮಾ, ಐಟಿಐ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿರುವ ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಒದಗಿಸಿಕೊಡುವ ಮೇಳ ಇದಾಗಿದೆ ಎಂದು ಹೇಳಿದರು.

ಈಗಾಗಲೇ ಈ ಮೇಳಕ್ಕೆ ರಾಜ್ಯಾದ್ಯಂತ ಒಟ್ಟು 31 ಸಾವಿರ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ರಿಜಿಸ್ಟರ್ ಮೂಲಕ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

500ಕ್ಕೂ ಅಧಿಕ ಕಂಪನಿಗಳು, 1 ಲಕ್ಷ ಹುದ್ದೆಗಳು

ಉದ್ಯೋಗ ಮೇಳದಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಹೆಸರಾಂತ 500ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ. ಅಂದಾಜು ಒಂದು ಲಕ್ಷ ಹುದ್ದೆಗಳು ನಮ್ಮ ಬಳಿ ಲಭ್ಯವಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಉದ್ಯೋಗಗಳನ್ನು ಒದಗಿಸಿಕೊಡಲು ಇದು ವೇದಿಕೆಯಾಗಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ಸಚಿವರು ಮನವಿ ಮಾಡಿದರು.

ಉದ್ಯೋಗ ಮೇಳದಲ್ಲಿ ಅನುಕೂಲ ಕಲ್ಪಿಸುವ ಸದುದ್ದೇಶದಿಂದ 600ಕ್ಕೂ ಹೆಚ್ಚು ಸ್ಟಾಲ್‍ಗಳನ್ನು ಹಾಕಲಾಗಿದೆ. ಅಭ್ಯರ್ಥಿಗಳು ಪ್ರತಿಯೊಂದು ಸ್ಟಾಲಿಗೂ ಭೇಟಿ ನೀಡಿ, ತಮ್ಮ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಎಲ್ಲಿ ಯಾವ ಹುದ್ದೆಗಳು ಖಾಲಿ ಇವೆ ಎಂಬುದರ ಕುರಿತು ಮಾಹಿತಿ ಪಡೆಯಬಹುದು. ಇದಕ್ಕಾಗಿ ಆಯಾ ಕಂಪನಿಗಳ ನುರಿತ ತಜ್ಞರು, ಪರಿಣಿತರು ಇರುತ್ತಾರೆ. ಉದ್ಯೋಗವನ್ನರಸಿ ಬರುವವರಿಗೆ ಸಂಪೂರ್ಣವಾದ ಮಾಹಿತಿ ಲಭ್ಯವಿರಲಿದೆ ಎಂದು ಪಾಟೀಲ್ ಮಾಹಿತಿ ನೀಡಿದರು.

Job fair Bangalore

ಇದನ್ನೂ ಓದಿ: Job Alert: ರಾಷ್ಟ್ರೀಯ ತನಿಖಾ ಸಂಸ್ಥಯಲ್ಲಿದೆ 119 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನಾಂಕ

ಬೇರೆ ಯಾವ ರಾಜ್ಯದಲ್ಲೂ ನಡೆಯದಷ್ಟು ಬೃಹತ್‌ ಮೇಳ: ಪಾಟೀಲ್‌

ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಧಿಕಾರ ಅವಧಿಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ನಡೆಸಲಾಗಿತ್ತು. ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಯುವ ಜನತೆಗೆ ಉದ್ಯೋಗ ಒದಗಿಸಿಕೊಡಲು ಉದ್ಯೋಗ ಮೇಳ ಆರಂಭಿಸಬೇಕೆಂದು ಸೂಚನೆ ಕೊಟ್ಟಿದ್ದರು. ಇದು ಬೃಹತ್ ಮೇಳವಾಗಲಿದ್ದು, ಬೇರೆ ಯಾವುದೇ ರಾಜ್ಯದಲ್ಲೂ ಇಂಥ ಮೇಳ ನಡೆಯುವುದಿಲ್ಲ ಎಂದು ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದರು.

ಉದ್ಯೋಗ ಮೇಳದಲ್ಲಿ ಯಾರಿಗೆ ಕೆಲಸ ಸಿಗುವುದಿಲ್ಲವೋ ಅಂಥವರಿಗೆ ತರಬೇತಿ ನೀಡುವ ಉದ್ದೇಶವನ್ನು ಇಟ್ಟುಕೊಂಡಿದ್ದೇವೆ. ತರಬೇತಿ ಪಡೆದವರು ಮುಂದಿನ ದಿನಗಳಲ್ಲಿ ಉದ್ಯೋಗಗಿಟ್ಟಿಸಿಕೊಳ್ಳಬಹುದು. ಈ ತರಬೇತಿ ನೀಡಲು ನುರಿತ ತಜ್ಞರು ಮುಂದೆ ಬಂದಿದ್ದಾರೆ ಎಂದರು.

ಯಾರು ಯಾವ ಸ್ಟಾಲ್‌ಗೆ, ಮೊದಲೇ ಸಿಗಲಿದೆ ಮಾಹಿತಿ

ಉದ್ಯೋಗ ಮೇಳದಲ್ಲಿ ಹೆಸರು ನೋಂದಣಿ ಮಾಡಿಕೊಂಡವರು ಇಂತಿಂತಹ ಸ್ಟಾಲ್‍ಗಳಿಗೆ ಹೋಗಲು ಅವರಿಗೆ ಪ್ರತ್ಯೇಕ ಮೆಸೇಜ್ ಕಳಿಸಲಾಗುವುದು. ಯಾರೂ ಕೂಡ ತೊಂದರೆ ಅನುಭವಿಸಬಾರದು ಎಂಬ ಕಾರಣಕ್ಕಾಗಿ ನಮ್ಮ ಇಲಾಖೆ ವತಿಯಿಂದಲೇ ಇದನ್ನು ನಿರ್ವಹಣೆ ಮಾಡುತ್ತಿದ್ದೇವೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಉದ್ಯೋಗ ಪಡೆದುಕೊಂಡರೆ ಸಾರ್ಥಕವಾಗುತ್ತದೆ ಎಂದು ಪಾಟೀಲ್ ಸಲಹೆ ಮಾಡಿದರು.

ದೇಶದಲ್ಲಿ ದೊಡ್ಡ ಪ್ರಮಾಣದ ಉದ್ಯೋಗ ಮೇಳ ನಡೆದಿದ್ದರೆ ಅದು ನಮ್ಮ ಸರ್ಕಾರದಿಂದ ಮಾತ್ರ. ಇಲ್ಲಿರುವ ಮಾನವ ಸಂಪನ್ಮೂಲ, ಮೂಲ ಸೌಕರ್ಯಗಳು ಸೇರಿದಂತೆ ಹಲವಾರು ಕಾರಣಗಳಿಂದ ದೊಡ್ಡ ದೊಡ್ಡ ಕಂಪನಿಗಳು ಮುಂದೆ ಬಂದಿವೆ. ಯುವಜನತೆ ಇದನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು
ಸಚಿವರಾದ ಪ್ರಿಯಾಂಕ್ ಖರ್ಗೆ ಕರೆ ನೀಡಿದರು.

ನಾವು ಕೇವಲ ಉದ್ಯೋಗ ಮಾತ್ರ ಕೊಡುತ್ತಿಲ್ಲ. ಅವರ ಸ್ಕಿಲ್ ಗ್ಯಾಪ್‍ಗಳನ್ನು ಸರಿಮಾಡಲು ನಾವು ಸೆಂಟರ್‌ ಗಳನ್ನು ಮಾಡಿಕೊಂಡಿದ್ದೇವೆ. ಇಲ್ಲಿ ನೋಂದಣಿ ಮಾಡಿಕೊಂಡವರನ್ನು ಟ್ರ್ಯಾಕ್ ಮಾಡಿ ಉದ್ಯೋಗ ಕೊಡಿಸುವ ಪ್ರಯತ್ನ ಮಾಡುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದರು.

ದೇಶದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗಿದ್ದು, ಪ್ರಧಾನಿ ಮಂತ್ರಿಗಳು 20 ಕೋಟಿ ಉದ್ಯೋಗ ಕೊಡುತ್ತೇವೆ ಎಂದಿದ್ದರು. ಯಾವ ಉದ್ಯೋಗವನ್ನೂ ನೀಡಿಲ್ಲ. ಸುಮಾರು 40 ಸಾವಿರ ಉದ್ಯೋಗಗಳನ್ನು ನಾವು ಕಳೆದುಕೊಂಡಿದ್ದೇವೆ. ಎನ್‍ಎಸ್ ಓ ಸರ್ವೆ ಗಳಿಂದ ಬಂದಿರುವ ಮಾಹಿತಿ ಇದು. ಈ ವರದಿ ಬಂದ ಮೇಲೆ ಎನ್‍ಎಸ್‍ಓ ಸರ್ವೆಗಳು ನಿಲ್ಲಿಸಿಬಿಟ್ಟರು. ಯುಪಿಎ ಸರ್ಕಾರ 10 ಸಾವಿರ ಐಟಿಗಳನ್ನು ಸ್ಥಾಪನೆ ಮಾಡಿತ್ತು ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಉದ್ಯೋಗಾರ್ಥಿಗಳಿಗೆ ಉಚಿತ ಊಟ, ಉಚಿತ ಬಸ್‌ ವ್ಯವಸ್ಥೆ

ಯುವ ಸಮೃದ್ದಿ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಸಮ್ಮೇಳನಕ್ಕೆ ಬರುವವರಿಗೆ ಉಚಿತ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಉದ್ಯೋಗ ಮೇಳಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಬರುವ ಅಭ್ಯರ್ಥಿಗಳಿಗೆ ಅನುಕೂಲ ಕಲ್ಪಿಸಲು ಮೆಜೆಸ್ಟಿಕ್ ರೈಲ್ವೆ ಹಾಗು ಬಸ್ ನಿಲ್ದಾಣಗಳಿಂದ ಮತ್ತು ಶಾಂತಿ ನಗರ ಬಸ್ ನಿಲ್ದಾಣದಿಂದ ಉಚಿತ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಉದ್ಯೋಗ ಮೇಳಕ್ಕಾಗಿ ವಿಶೇಷ ಬಸ್‍ಗಳು ಬರಲಿವೆ.

ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್, ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮದ ವ್ಯವಸ್ಥಾಪಕ ನಿದೇರ್ಶಕಿ ಎಂ.ಕನಗವಳ್ಳಿ ಉಪಸ್ಥಿತರಿದ್ದರು.

Continue Reading

ಉದ್ಯೋಗ

Job Alert: ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿದೆ 119 ಹುದ್ದೆ; ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನಾಂಕ

Job Alert: ರಾಷ್ಟ್ರೀಯ ತನಿಖಾ ಸಂಸ್ಥೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 119 ಹುದ್ದೆಗಳು ಲಭ್ಯವಿದ್ದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ನಾಳೆಯೇ (ಫೆಬ್ರವರಿ 22) ಕೊನೆಯ ದಿನಾಂಕ.

VISTARANEWS.COM


on

nia jobs
Koo

ಬೆಂಗಳೂರು: ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 119 ಹುದ್ದೆಗಳು ಲಭ್ಯವಿದ್ದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (NIA Recruitment 2024). ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ ನಾಳೆ (ಫೆಬ್ರವರಿ 22). ಹೀಗಾಗಿ ಈಗಲೇ ಅರ್ಜಿ ಸಲ್ಲಿಸಿ (Job Alert).

ಹುದ್ದೆಗಳ ವಿವರ

ಇನ್ಸ್‌ಪೆಕ್ಟರ್‌: 43 ಹುದ್ದೆ, ಸಬ್‌ ಇನ್ಸ್‌ಪೆಕ್ಟರ್‌: 51 ಹುದ್ದೆ, ಅಸಿಸ್ಟಂಟ್‌ ಸಬ್‌ ಇನ್ಸ್‌ಪೆಕ್ಟರ್‌: 13 ಹುದ್ದೆ ಮತ್ತು ಹೆಡ್‌ ಕಾನ್ಸ್‌ಟೇಬಲ್‌: 12 ಹುದ್ದೆಗಳಿವೆ.

ವಿದ್ಯಾರ್ಹತೆ

ಇನ್ಸ್‌ಪೆಕ್ಟರ್‌: ಅಧಿಕೃತ ವಿಶ್ವ ವಿದ್ಯಾನಿಲಯದಿಂದ ಪದವಿ.
ಸಬ್‌ ಇನ್ಸ್‌ಪೆಕ್ಟರ್‌: ಅಧಿಕೃತ ವಿಶ್ವ ವಿದ್ಯಾನಿಲಯದಿಂದ ಪದವಿ.
ಅಸಿಸ್ಟಂಟ್‌ ಸಬ್‌ ಇನ್ಸ್‌ಪೆಕ್ಟರ್‌: ಅಧಿಕೃತ ವಿಶ್ವ ವಿದ್ಯಾನಿಲಯದಿಂದ ಪದವಿ.
ಹೆಡ್‌ ಕಾನ್ಸ್‌ಟೇಬಲ್‌: 12ನೇ ತರಗತಿ ತೇರ್ಗಡೆ. ಜತೆಗೆ ಎಲ್ಲ ಹುದ್ದೆಗಳಿಗೆ ಕನಿಷ್ಠ 2 ವರ್ಷಗಳ ಕಾರ್ಯಾನುಭವ ಕಡ್ಡಾಯ.

ವಯೋಮಿತಿ

ಕನಿಷ್ಠ 18 ವರ್ಷದಿಂದ ಗರಿಷ್ಠ 56 ವರ್ಷದ ಒಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಮತ್ತು ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ: ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿರುವ ಸ್ಥಾನಕ್ಕೆ ಸಂಬಂಧಿಸಿದ ತಮ್ಮ ಜ್ಞಾನ ಮತ್ತು ಕೌಶಲ್ಯಗಳನ್ನು ಮೌಲ್ಯಮಾಪನ ಮಾಡಲು ಲಿಖಿತ ಪರೀಕ್ಷೆಯನ್ನು ಪೂರ್ಣಗೊಳಿಸಬೇಕು.

ದಾಖಲೆ ಪರಿಶೀಲನೆ/ವೈದ್ಯಕೀಯ ಪರೀಕ್ಷೆ: ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳ ದಾಖಲೆಗಳ ಸಿಂಧುತ್ವವನ್ನು ಖಾತರಿಪಡಿಸಲು ದಾಖಲೆ ಪರಿಶೀಲನೆ ನಡೆಯಲಿದೆ. ಬಳಿಕ ಅವರು ತಮ್ಮ ದೈಹಿಕ ಸಾಮರ್ಥ್ಯವನ್ನು ನಿರ್ಧರಿಸಲು ವೈದ್ಯಕೀಯ ಪರೀಕ್ಷೆಗೆ ಒಳಗಾಗಬೇಕು.

ಅಂತಿಮ ಹಂತ: ಕೊನೆಯಲ್ಲಿ ಅರ್ಜಿದಾರರ ಒಟ್ಟಾರೆ ಕಾರ್ಯಕ್ಷಮತೆ ಮತ್ತು ಅರ್ಹತೆಗಳ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

ಹೆಚ್ಚಿನ ವಿವರಗಳಿಗೆ NIA Recruitment 2024ರ ಅಧಿಕೃತ ಅಧಿಸೂಚನೆ ಪರಿಶೀಲಿಸಿ. ಅದಕ್ಕಾಗಿ ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಡಿಪ್ಲೋಮಾ ಪದವೀಧರರಿಗೆ ಗುಡ್‌ನ್ಯೂಸ್‌; ರೈಲ್ವೇ ನೇಮಕಾತಿ ಮಂಡಳಿಯಿಂದ 9,000 ಹುದ್ದೆ ಭರ್ತಿ

Continue Reading

ಉದ್ಯೋಗ

Job Alert: ಬೆಂಗಳೂರು ಗ್ರಾಮಾಂತರ ಕೋರ್ಟ್‌ನಲ್ಲಿದೆ 58 ಹುದ್ದೆ; ಎಸ್ಸೆಸ್ಸೆಲ್ಸಿ ಪಾಸಾದವರು ಅರ್ಜಿ ಸಲ್ಲಿಸಿ

Job Alert: ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಟೈಪಿಸ್ಟ್‌ ಮತ್ತು ಪಿಯೋನ್‌ (ಜವಾನ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಮಾರ್ಚ್‌ 20.

VISTARANEWS.COM


on

typist
Koo

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ ಟೈಪಿಸ್ಟ್‌ ಮತ್ತು ಪಿಯೋನ್‌ (ಜವಾನ) ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ (Bengaluru Rural district court recruitment 2024). ಒಟ್ಟು 58 ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮಾರ್ಚ್‌ 20 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಜವಾನ (Peon): 28 ಹುದ್ದೆಗಳಿದ್ದು, ಎಸ್ಸೆಸ್ಸೆಲ್ಸಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಕನ್ನಡ ಓದಲು ಮತ್ತು ಬರೆಯಲು ಗೊತ್ತಿರಬೇಕು. ಆಯ್ಕೆ ವಿಧಾನ: ಎಸ್ಸೆಸ್ಸೆಲ್ಸಿಯಲ್ಲಿ ಪಡೆದ ಅಂಕಗಳಿಗೆ ಅನುಗುಣವಾಗಿ ಮೆರಿಟ್‌ ಪಟ್ಟಿಯನ್ನು ಸಿದ್ಧಪಡಿಸಿ ಅರ್ಹರನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ. ಸಂದರ್ಶನಕ್ಕೆ 10 ಅಂಕ ನಿಗದಿಪಡಿಸಲಾಗಿದ್ದು, ಇದರಲ್ಲಿ ಅತ್ಯಧಿಕ ಅಂಕ ಪಡೆದವರನ್ನು ಆಯ್ಕೆ ಮಾಡಲಾಗುತ್ತದೆ.

ಟೈಪಿಸ್ಟ್‌: 30 ಹುದ್ದೆಗಳಿದ್ದು, ಪಿಯುಸಿ, ಡಿಪ್ಲೋಮಾ ಜತೆಗೆ ಡಿಪಾರ್ಟ್‌ಮೆಂಟ್‌ ಆಫ್‌ ಪಬ್ಲಿಕ್‌ ಇನ್‌ಸ್ಟ್ರಕ್ಷನ್‌ ಆಯೋಜಿಸುವ ಕನ್ನಡ ಮತ್ತು ಇಂಗ್ಲಿಷ್‌ ಸೀನಿಯರ್‌ ಗ್ರೇಡ್‌ ಟೈಪ್‌ ರೈಟಿಂಗ್‌ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಅಥವಾ ಡಿಪ್ಲೋಮಾ ಇನ್‌ ಕಮರ್ಷಿಯಲ್‌ ಪ್ರಾಕ್ಟೀಸ್‌ / ತತ್ಸಮಾನ ಪರೀಕ್ಷೆಯಲ್ಲಿ ಪಾಸ್‌ ಆಗಿರಬೇಕು. ಆಯ್ಕೆ ವಿಧಾನ: ಅಭ್ಯರ್ಥಿಯು ನೀಡಲಾದ ವಿಷಯವನ್ನು ಟೈಪ್ ಮಾಡಬೇಕು. ಇದರ ಅವಧಿ 15 ನಿಮಿಷ. ಈ ಅರ್ಹತಾ ಪರೀಕ್ಷೆಯು ಗರಿಷ್ಠ 100 ಅಂಕಗಳನ್ನು ಹೊಂದಿದ್ದು, ಕನಿಷ್ಠ ಅಂಕಗಳು 50 ಪಡೆಯಬೇಕು. ಇದರಲ್ಲಿ ತೇರ್ಗಡೆಯಾದವರನ್ನು ಸಂದರ್ಶನಕ್ಕ ಕರೆಯಲಾಗುತ್ತದೆ. ಸಂದರ್ಶನ 5 ಅಂಕಗಳನ್ನು ಹೊಂದಿದೆ. ಈ ಎರಡೂ ಪರೀಕ್ಷೆಗಳ ಅಂಕವನ್ನು ಗಮನಿಸಿ ಗರಿಷ್ಠ ಅಂಕ ಹೊಂದಿದವರನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗುವವರು ಕನಿಷ್ಠ 2 ವರ್ಷಗಳ ಕಾಲ ಅಪ್ರೊಬೇಷನರಿ ಅವಧಿಯಲ್ಲಿರುತ್ತಾರೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ವಿಭಾಗದ ಅಭ್ಯರ್ಥಿಗಳು 200 ರೂ. ಮತ್ತು ಕ್ಯಾಟಗರಿ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳು 100 ರೂ. ಸಲ್ಲಿಸಬೇಕು. ಎಸ್‌ಸಿ / ಎಸ್‌ಟಿ ಮತ್ತು ವಿಶೇಷ ಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು. ಇದಕ್ಕಾಗಿ ನೆಟ್‌ ಬ್ಯಾಂಕಿಂಗ್‌ / ಕ್ರೆಡಿಟ್‌ / ಡೆಬಿಟ್‌ ಕಾರ್ಡ್‌ / ಯುಪಿಐ ಬಳಸಬಹುದು.

ವಯೋಮಿತಿ

ಅರ್ಜಿ ಸಲ್ಲಿಸಲು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಕ್ಯಾಟಗರಿ 2ಎ, 2ಬಿ, 3ಎ ಮತ್ತು 3ಬಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ, ಕ್ಯಾಟಗರಿ 1 ವಿಭಾಗದ ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಲಭ್ಯ.

ಟೈಪಿಸ್ಟ್‌ ಹುದ್ದೆಗಳ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಪಿಯೋನ್‌ ಹುದ್ದೆಗಳ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಡಿಪ್ಲೋಮಾ ಪದವೀಧರರಿಗೆ ಗುಡ್‌ನ್ಯೂಸ್‌; ರೈಲ್ವೇ ನೇಮಕಾತಿ ಮಂಡಳಿಯಿಂದ 9,000 ಹುದ್ದೆ ಭರ್ತಿ

Continue Reading

ಉದ್ಯೋಗ

Government Jobs: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್‌ನ್ಯೂಸ್‌; ಶೀಘ್ರ 504 ಕೆಎಎಸ್‌ ಹುದ್ದೆ ಭರ್ತಿ

Government Jobs: ಶೀಘ್ರದಲ್ಲಿಯೇ ವಿವಿಧ ಇಲಾಖೆಗಳ 504 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

vidhana soudha
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು (Government Jobs) ಎಂದು ಕನಸು ಕಾಣುವವರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. ಶೀಘ್ರದಲ್ಲಿಯೇ ವಿವಿಧ ಇಲಾಖೆಗಳ 504 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Karnataka Cm Siddaramaia) ತಿಳಿಸಿದ್ದಾರೆ.

ʼʼ16 ಇಲಾಖೆಗಳಲ್ಲಿ ಖಾಲಿ ಇರುವ ಸುಮಾರು 656 ಹುದ್ದೆಗಳ ನೇರ ನೇಮಕಾತಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೆಎಎಸ್‌ ಸೇರಿ ಗೆಜೆಟೆಡ್‌ ಪ್ರೊಬೆಷನರಿ ಅಧಿಕಾರಿಯಂತಹ ವಿವಿಧ ಹುದ್ದೆಗಳ ಭರ್ತಿ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಪೈಕಿ 504 ಹುದ್ದೆಗಳನ್ನು ಭರ್ತಿ ಮಾಡಲು ಸಮ್ಮತಿ ಲಭಿಸಿದೆʼʼ ಎಂದು ಅವರು ಹೇಳಿದ್ದಾರೆ.

ವಿಧಾನ ಪರಿಷತ್‌ನಲ್ಲಿ ನಿರಾಣಿ ಹಣಮಂತ್‌ ರುದ್ರಪ್ಪ ಅವರು ಕೇಳಿದ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರಿಸಿ ಈ ಮಾಹಿತಿ ನೀಡಿದರು. ಯಾವೆಲ್ಲ ಇಲಾಖೆಯಲ್ಲಿ, ಎಷ್ಟು ಹುದ್ದೆಗಳನ್ನು ಭರ್ತಿ ಮಾಡಿ ಕೊಳ್ಳಲಾಗುತ್ತಿದೆ ಎನ್ನುವುದರ ಮಾಹಿತಿ ಇಲ್ಲಿದೆ:

ಗ್ರಾಮ ಆಡಳಿತ ಅದಿಕಾರಿ ಹುದ್ದೆಗಳ ನೇಮಕಾತಿಗೆ ಕ್ರಮ

ಇದರ ಜತೆಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿ, ರಾಜ್ಯದ ಕಂದಾಯ ಇಲಾಖೆ ವ್ಯಾಪ್ತಿಯಲ್ಲಿ ಖಾಲಿ ಇರುವ 1,000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ. ನೇಮಕಾತಿಯನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನಡೆಸಲು ಕರ್ನಾಟಕ ಪರೀಕ್ಷಾ ಪ್ರಧಾಕಾರಕ್ಕೆ ಜವಾಬ್ದಾರಿ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: Job Alert: ಸರ್ಕಾರಿ ಉದ್ಯೋಗ ಹುಡುಕುವವರಿಗೆ ಗುಡ್‌ನ್ಯೂಸ್‌; 64 ಹುದ್ದೆಗಳಿಗೆ ಫೆ. 10ರಿಂದ ಅರ್ಜಿ ಸಲ್ಲಿಸಿ

ವಯೋಮಿತಿ ನಿಗದಿ

ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಸರ್ಕಾರವು ವಯೋಮಿತಿಯನ್ನೂ ನಿಗದಿ ಪಡಿಸಿದೆ.
ಪರಿಶಿಷ್ಟ ಜಾತಿ / ಪಂಗಡ / ಪ್ರವರ್ಗ-1: ಕನಿಷ್ಠ-18 ವರ್ಷ, ಗರಿಷ್ಠ: 40 ವರ್ಷ
2ಎ, 2ಬಿ, 3ಎ, 3 ಬಿ: ಕನಿಷ್ಠ-18 ವರ್ಷ, ಗರಿಷ್ಠ: 38 ವರ್ಷ
ಸಾಮಾನ್ಯ ವರ್ಗ: ಕನಿಷ್ಠ-18 ವರ್ಷ, ಗರಿಷ್ಠ: 35 ವರ್ಷ.
ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ-ಸಾಮಾನ್ಯ) ನಿಯಮಗಳು-2021ರಲ್ಲಿ ನಿಗದಿಪಡಿಸಿರುವಂತೆ ಪಠ್ಯ ಕ್ರಮಗಳನ್ನು ಅಳವಡಿಸಲಾಗುವುದು ಎಂದು ಸಚಿವರು ವಿವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Shivraj Singh Chouhan
ಕರ್ನಾಟಕ44 mins ago

Shivraj Singh Chouhan: ಮೋದೀಜಿ ನಾಯಕತ್ವದಲ್ಲಿ ಭಾರತ ವಿಶ್ವಗುರುವಾಗಲಿದೆ ಎಂದ ಶಿವರಾಜ್ ಸಿಂಗ್ ಚೌಹಾಣ್

Vistara editorial, Do not disrespectful to the Anthem of Karnataka
ಪ್ರಮುಖ ಸುದ್ದಿ49 mins ago

ವಿಸ್ತಾರ ಸಂಪಾದಕೀಯ: ನಾಡಗೀತೆ, ಕವಿವಾಕ್ಯಕ್ಕೆ ಅಪಚಾರ ಆಗದಿರಲಿ

Karnataka Government clarified about Non Hindus in Hindu Temples Management
ಕರ್ನಾಟಕ1 hour ago

Hindu Temples: ದೇವಸ್ಥಾನ ಸಮಿತಿಗೆ ಅನ್ಯಧರ್ಮೀಯರ ನೇಮಕ; ಧಾರ್ಮಿಕ ದತ್ತಿ ಇಲಾಖೆ ಸ್ಪಷ್ಟನೆ

Gavyamrita Book
ಉತ್ತರ ಕನ್ನಡ1 hour ago

ಗವ್ಯಾಮೃತ ಪುಸ್ತಕ ಲೋಕಾರ್ಪಣೆ; ಗೋವಿನ ಕುರಿತ ಸುವಿಚಾರಗಳನ್ನು ಸಮಾಜಕ್ಕೆ ತಲುಪಿಸಲು ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಕರೆ

Indus App Store launched by Walmart-owned PhonePe
ದೇಶ2 hours ago

PhonePay: ಫೋನ್‌ಪೇ ಸ್ವದೇಶಿ ಆ್ಯಪ್‌ಸ್ಟೋರ್ ‘ಇಂಡಸ್’ ಲಾಂಚ್; ಗೂಗಲ್‌ ಪ್ಲೇ ಸ್ಟೋರ್‌ಗೆ ಪಂಚ್!

shishya sweekara Mahotsav in shri swarnavalli maha samsthana matha dharmasabhe
ಉತ್ತರ ಕನ್ನಡ2 hours ago

Sirsi News: ಅಪಕಾರ ಮಾಡಿದವರಿಗೂ ಉಪಕಾರ ಬಯಸುವ ಸದ್ಗುಣವನ್ನು ಎಲ್ಲರೂ ಬೆಳೆಸಿಕೊಳ್ಳಿ: ಶ್ರೀವಿದ್ಯಾವಿಶ್ವೇಶ್ವರ ಭಾರತೀ ಸ್ವಾಮೀಜಿ

Gurpatwant Singh Pannun
ಕ್ರೀಡೆ2 hours ago

IND vs ENG: ರಾಂಚಿ ಟೆಸ್ಟ್​ ಪಂದ್ಯಕ್ಕೆ ಖಲಿಸ್ತಾನಿ ಉಗ್ರನಿಂದ ಬೆದರಿಕೆ; ಸ್ಟೇಡಿಯಂಗೆ ಬಿಗಿ ಭದ್ರತೆ!

Hello-minister-N-chaluvarayaswamy-in-vistara-news-2
ಕರ್ನಾಟಕ2 hours ago

Krishi Bhagya Scheme: 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಕೃಷಿ ಭಾಗ್ಯ ಮರು ಜಾರಿ: ಎನ್. ಚಲುವರಾಯಸ್ವಾಮಿ

bike accident
ಪ್ರಮುಖ ಸುದ್ದಿ3 hours ago

Road Accident: ರಾಯಚೂರಿನಲ್ಲಿ ಭೀಕರ ರಸ್ತೆ ಅಪಘಾತ; ಬಸ್-ಬೈಕ್ ಡಿಕ್ಕಿಯಾಗಿ ನಾಲ್ವರ ದುರ್ಮರಣ

vistara top ten
ಟಾಪ್ 10 ನ್ಯೂಸ್3 hours ago

VISTARA TOP 10 NEWS: ನಾಡಗೀತೆಯಲ್ಲೂ ಸರಕಾರ ಎಡವಟ್ಟು ಪಬ್ಲಿಕ್‌ ಪ್ಲೇಸಲ್ಲಿ ಸೇದಬಾರದು ಸಿಗರೇಟು.. ಮತ್ತು ಇತರ ಸುದ್ದಿಗಳು

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ4 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ4 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ3 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

read your daily horoscope predictions for february 21 2024
ಭವಿಷ್ಯ20 hours ago

Dina Bhavishya : ಈ ರಾಶಿಯವರಿಗೆ ಸಂಗಾತಿಯ ವರ್ತನೆಯು ಕೋಪ, ಮುಜುಗರವನ್ನುಂಟು ಮಾಡುತ್ತೆ!

read your daily horoscope predictions for february 20 2024
ಭವಿಷ್ಯ2 days ago

Dina Bhavishya : ಈ ದಿನ ಆತುರದಲ್ಲಿ ಈ ರಾಶಿಯವರು ಯಾವ ತೀರ್ಮಾನವನ್ನು ಮಾಡ್ಬೇಡಿ!

read your daily horoscope predictions for february 19 2024
ಭವಿಷ್ಯ3 days ago

Dina Bhavishya : ನಿಮ್ಮನ್ನು ದ್ವೇಷಿಸುವವರೇ ಸ್ನೇಹಿತರಾಗಿ ಬದಲಾಗುತ್ತಾರೆ

read your daily horoscope predictions for february 18 2024
ಭವಿಷ್ಯ4 days ago

Dina Bhavishya : ಈ ರಾಶಿಯವರು ಇಂದು ನೀರಿನಂತೆ ಹಣವನ್ನು ಖರ್ಚು ಮಾಡ್ತಾರೆ

Challenging Darsha
ಪ್ರಮುಖ ಸುದ್ದಿ4 days ago

Actor Darshan : ಚಾಲೆಂಜಿಂಗ್ ಸ್ಟಾರ್​ ದರ್ಶನ್​ ‘ಬೆಳ್ಳಿ ಪರ್ವ’ ಕಾರ್ಯಕ್ರಮದ ಲೈವ್​ ಇಲ್ಲಿ ವೀಕ್ಷಿಸಿ

Children lock up their mother for property
ಕರ್ನಾಟಕ5 days ago

Inhuman Behaviour : ಆಸ್ತಿಗಾಗಿ ಹೆತ್ತ ತಾಯಿಯನ್ನೇ ಗೃಹ ಬಂಧನದಲ್ಲಿಟ್ಟರು ಮಕ್ಕಳು!

read your daily horoscope predictions for february 17 2024
ಭವಿಷ್ಯ5 days ago

Dina Bhavishya : ಈ ರಾಶಿಯವರು ಸೀಕ್ರೆಟ್‌ ವಿಷ್ಯವನ್ನು ರಿವೀಲ್‌ ಮಾಡಿದ್ರೆ ಅಪಾಯ ಗ್ಯಾರಂಟಿ!

Karnataka Budget Session 2024 siddaramaiah use cinema Lines
ಸಿನಿಮಾ5 days ago

Karnataka Budget Session 2024: ಡಾಲಿ ಧನಂಜಯ್‌ ಬರೆದ ಸಾಲುಗಳು ಬಜೆಟ್‌ನಲ್ಲಿ ಹೈಲೈಟ್‌!

read your daily horoscope predictions for february 16 2024
ಭವಿಷ್ಯ6 days ago

Dina Bhavishya : ಈ ಹಿಂದೆ ಹಣ ಹೂಡಿಕೆ ಮಾಡಿದ್ದರೆ ಇಂದು ಈ ರಾಶಿಯವರಿಗೆ ಡಬಲ್‌ ಲಾಭ

Siddaramaiah
ರಾಜಕೀಯ6 days ago

Karnataka Budget Session 2024: ಬಿಜೆಪಿಯವರು ಗೂಂಡಾಗಳು ಎಂದ ಸಿಎಂ; ತೊಡೆ ತಟ್ಟಿದ್ದು ನಾವಾ – ನೀವಾ ಎಂದ ವಿಪಕ್ಷ!

ಟ್ರೆಂಡಿಂಗ್‌