Site icon Vistara News

Old Pension Scheme: ಹಳೆಯ ಪಿಂಚಣಿ ಬೇಕಿದ್ದರೆ ಯೋಚಿಸಿ ನಿರ್ಧಾರ ಮಾಡಿ! ಏನಿದು ರಾಜ್ಯ ಸರ್ಕಾರದ ಆದೇಶ?

OPS News

ಬೆಂಗಳೂರು: ರಾಷ್ಟ್ರೀಯ ಪಿಂಚಣಿ ಯೋಜನೆಗೆ (National Pension Scheme) ಸಂಬಂಧಪಟ್ಟಂತೆ ಹಳೇ ಪಿಂಚಣಿ (Old Pension Scheme) ಜಾರಿಗೆ ಒತ್ತಾಯಿಸಿ ಈಗಾಗಲೇ ಸಾಕಷ್ಟು ಹೋರಾಟಗಳು ನಡೆದಿವೆ. ಈಗ ರಾಜ್ಯ ಸರ್ಕಾರವೂ ಜಾರಿಗೆ ಒಪ್ಪಿಗೆ ನೀಡಿದ್ದಲ್ಲದೆ ಆದೇಶವನ್ನು ಸಹ ನೀಡಿದೆ. ಈ ಏಪ್ರಿಲ್‌ 1ರಂದು ರಾಜ್ಯ ಸರ್ಕಾರದಿಂದ ಮತ್ತೊಂದು ಆದೇಶ ಜಾರಿಯಾಗಿದ್ದು, ಕೆಲವು ಷರತ್ತುಗಳನ್ನು ವಿಧಿಸಲಾಗಿದೆ. 01.04.2006ರ ಪೂರ್ವದಲ್ಲಿ ನೇಮಕಾತಿಯಾಗಿ ನಂತರ ಅನುದಾನಕ್ಕೆ ಒಳಪಟ್ಟ ನೌಕರರಿಗೆ ಹಳೆಯ ನಿಶ್ಚಿತ ಪಿಂಚಣಿ ಯೋಜನಾ ವ್ಯಾಪ್ತಿಗೆ ಒಳಪಡಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ನೀಡಿದೆ. ಹಳೇ ಪಿಂಚಣಿ ವ್ಯವಸ್ಥೆಯನ್ನು ತೆಗೆದುಕೊಳ್ಳುವವರು ಸರಿಯಾಗಿ ನಿರ್ಧಾರ ಮಾಡಿ ಆಯ್ಕೆ ಮಾಡಿಕೊಳ್ಳಬೇಕು. ಒಮ್ಮೆ ಆಯ್ಕೆ ಮಾಡಿಕೊಂಡ ಬಳಿಕ ಪುನಃ ಬದಲಾವಣೆ ಮಾಡಲು ಅವಕಾಶ ಇಲ್ಲ ಎಂದು ಹೇಳಿದೆ.

ಹಳೇ ಪಿಂಚಣಿ ವ್ಯವಸ್ಥೆಗೆ ಒಳಪಡಿಸುವ ಸಂಬಂಧ 2006 ಏಪ್ರಿಲ್‌ 1ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಸಂಬಂಧಪಟ್ಟ ಸರ್ಕಾರಿ ನೌಕರರಿಂದ ಅಭಿಮತ ಪಡೆದು ಕ್ರಮ ಕೈಗೊಳ್ಳುವ ಸಂಬಂಧಪಟ್ಟಂತೆ ಕೆಲವು ಷರತ್ತುಗಳನ್ನು ವಿಧಿಸಲಾಗಿದೆ.

ರಾಜ್ಯ ಸರ್ಕಾರ ವಿಧಿಸಿದ ಷರತ್ತುಗಳು ಏನು?

Old Pension Scheme new order from Karnataka state government

ಇದನ್ನೂ ಓದಿ: Job Alert: ಬಿಎಂಟಿಸಿ 2,500 ಕಂಡಕ್ಟರ್ ಹುದ್ದೆಯ ಪರಿಷ್ಕೃತ ಅಧಿಸೂಚನೆ ಪ್ರಕಟ; ಇಲ್ಲಿ ಪರಿಶೀಲಿಸಿ

ಹೀಗಾಗಿ ಇಚ್ಛೆಯುಳ್ಳ ಎಲ್ಲ ಅರ್ಹ ನೌಕರರು ಅಂತಿಮ ದಿನಾಂಕದವರೆಗೂ ಕಾಯದೆ ಅನುಬಂಧದ ನಮೂನೆಯಲ್ಲಿ ಸೂಕ್ತ ದಾಖಲಾತಿಗಳೊಂದಿಗೆ ತಮ್ಮ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಪ್ರಧಾನ ನಿರ್ದೇಶಕರು ಆದೇಶದಲ್ಲಿ ಸೂಚಿಸಿದ್ದಾರೆ.

    Exit mobile version