PDO Recruitment 2023 RDPR to recruit 150 pdo shortly says minister priyank khargePDO Recruitment 2023 : 150 ಪಿಡಿಒ ಹುದ್ದೆಗಳಿಗೆ ನೇಮಕ ಖಚಿತ; ಸದ್ಯವೇ ಅಧಿಸೂಚನೆ - Vistara News

ಉದ್ಯೋಗ

PDO Recruitment 2023 : 150 ಪಿಡಿಒ ಹುದ್ದೆಗಳಿಗೆ ನೇಮಕ ಖಚಿತ; ಸದ್ಯವೇ ಅಧಿಸೂಚನೆ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು 150 ಪಿಡಿಒ ಸೇರಿದಂತೆ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ (PDO Recruitment 2023) ನೇಮಕಾತಿಯನ್ನು ಸದ್ಯವೇ ಆರಂಭಿಸಲಿದೆ. ಈ ವಿಷಯವನ್ನು ವಿಧಾನಸಭೆಯಲ್ಲಿಯೇ ಸಚಿವರು ತಿಳಿಸಿದ್ದಾರೆ.

VISTARANEWS.COM


on

pdo recruitment 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ನೇರ ನೇಮಕಾತಿ ಕೋಟಾದಲ್ಲಿ ಪ್ರಸ್ತುತ 385 ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳು ಖಾಲಿ ಇದ್ದು, ಈ ಪೈಕಿ 150 ಹುದ್ದೆಗಳಿಗೆ ನೇರ ನೇಮಕಾತಿ (PDO Recruitment 2023) ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ (Rural Development and Panchayath Raj Department-RDPR) ಸಚಿವ ಪ್ರಿಯಾಂಕ್‌ ಖರ್ಗೆ (Priyank Kharge) ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್‌ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಲಿಖಿತವಾಗಿ ಉತ್ತರ ನೀಡಿರುವ ಅವರು, ಒಟ್ಟಾರೆ 6,021 ಪಿಡಿಒ ಹುದ್ದೆಗಳು ಮಂಜೂರಾಗಿದ್ದು, 5,361 ಹುದ್ದೆಗಳು ಭರ್ತಿಯಾಗಿವೆ. 660 ಹುದ್ದೆಗಳು ಖಾಲಿ ಒವೆ. ಇವುಗಳನ್ನು ಬಡ್ತಿ ಮತ್ತು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ. ನೇರ ನೇಮಕಾತಿ ಮೂಲಕ 385 ಹುದ್ದೆಗಳನ್ನು ಭರ್ತಿ ಮಾಡಬೇಕಾಗಿದ್ದು, ಇವುಗಳಲ್ಲಿ ಈಗ 150 ಹುದ್ದೆಗಳ ನೇಮಕ ಪ್ರಕ್ರಿಯೆ ಮಾತ್ರ ಪ್ರಗತಿಯಲ್ಲಿದೆ ಎಂದು ತಿಳಿಸಿದ್ದಾರೆ.

ಯಾವ್ಯಾವ ಜಿಲ್ಲೆಯಲ್ಲಿ ಎಷ್ಟು ನೇರ ನೇಮಕಾತಿಯ ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿಯನ್ನೂ ಸಚಿವರು ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರದಲ್ಲಿ -10, ಬೆಂಗಳೂರು ನಗರದಲ್ಲಿ -03, ಚಿಕ್ಕಬಳ್ಳಾಪುರ- 04, ಚಿತ್ರದುರ್ಗ-0, ದಾವಣಗೆರೆ-04, ಕೋಲಾರ-08, ರಾಮನಗರ-04, ಶಿವಮೊಗ್ಗ-28, ತುಮಕೂರು-28, ಬಾಗಲಕೋಟೆ-3, ಬೆಳಗಾವಿ-31, ಧಾರವಾಡ-0, ಗದಗ-09, ಹಾವೇರಿ-07, ಉತ್ತರ ಕನ್ನಡ-09, ವಿಜಯಪುರ-1, ಚಿಕ್ಕಮಗಳೂರು-28, ಉಡುಪಿ-12, ದಕ್ಷಿಣ ಕನ್ನಡ-21, ಕೊಡಗು-09, ಮಂಡ್ಯ-04, ಹಾಸನ-16, ಮೈಸೂರು-07, ಚಾಮರಾಜನಗರ-04, ರಾಯಚೂರು-24, ಬೀದರ್‌-21, ಬಳ್ಳಾರಿ-05, ಯಾದಗಿರಿ-10, ಕಲಬುರಗಿ-37, ಕೊಪ್ಪಳ-9, ವಿಜಯನಗರ-35 ನೇರ ನೇಮಕಾತಿ ಹುದ್ದೆಗಳು ಸದ್ಯ ಖಾಲಿ ಇವೆ.

PDO Recruitment 2023

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಪಿಡಿಒ ನೇಮಕಕ್ಕೆ ಸಿದ್ಧತೆ ನಡೆಸಿದೆ ಎಂದು ʻವಿಸ್ತಾರ ನ್ಯೂಸ್‌ʼ ಜೂನ್‌ 17 ರಂದೇ ವರದಿ ಮಾಡಿದ್ದು, ಇದು ಈಗ ನಿಜವಾಗುತ್ತಿದೆ. ಪಿಡಿಒ ಹುದ್ದೆಗಳು ಖಾಲಿ ಇರುವುದರಿಂದ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ ಎಂದು ಶಾಸಕರು ದೂರುತ್ತಿರುವುದರಿಂದ ಸರ್ಕಾರ ಆದಷ್ಟು ಬೇಗ ಈ ಹುದ್ದೆಗಳನ್ನು ಭರ್ತಿ ಮಾಡಲು ಉದ್ದೇಶಿಸಿದೆ. ಹೀಗಾಗಿ ಇನ್ನು ಕೆಲವೇ ದಿನಗಳಲ್ಲಿ ನೇಮಕಾತಿ ಅಧಿಸೂಚನೆ ಹೊರಬೀಳಲಿದೆ. ಈ ಬಾರಿ ಕೆಇಎಗೆ ಬದಲಾಗಿ ಕೆಪಿಎಸ್‌ಸಿ ಮೂಲಕ ಈ ನೇಮಕಾತಿ ನಡೆಯಬಹುದು ಎಂದು ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ವಿಧಾನಸಭೆಯಲ್ಲಿ ಶಾಸಕ ಬಸನಗೌಡ ದದ್ದಲ್‌ ಅವರ ಇನ್ನೊಂದು ಪ್ರಶ್ನೆಗೆ ಉತ್ತರಿಸಿರುವ ಸಚಿವ ಪ್ರಿಯಾಂಕ್‌ ಖರ್ಗೆ, ರಾಜ್ಯದಲ್ಲಿ 604 ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್‌-I ಹುದ್ದೆ ಖಾಲಿ ಇದ್ದು, ಇದರಲ್ಲಿ 530 ಹುದ್ದೆಗಳು ನೇರ ನೇಮಕಾತಿಯ ಹುದ್ದೆಗಳಾಗಿವೆ. 719 ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್‌-II ಹುದ್ದೆ ಖಾಲಿ ಇದ್ದು, ಇದರಲ್ಲಿ 412 ಹುದ್ದೆಗಳು ನೇರ ನೇಮಕಾತಿಯ ಹುದ್ದೆಗಳಾಗಿವೆ. 345 ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳು ಖಾಲಿ ಇದ್ದು, ಇವುಗಳಲ್ಲಿ 82 ಹುದ್ದೆಗಳು ನೇರ ನೇಮಕಾತಿಯ ಹುದ್ದೆಗಳಾಗಿವೆ ಎಂದು ತಿಳಿಸಿದ್ದಾರೆ. ಪಿಡಿಒ ಹುದ್ದೆಗಳ ಜತೆಗೆ ಈ ಹುದ್ದೆಗಳಿಗೂ ನೇಮಕ ನಡೆಯಲಿದೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್‌-I) ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್‌-II) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳ ಮುಂದಾಗಿದ್ದು, ಸದ್ಯವೇ ನೇಮಕಾತಿ ಅಧಿಸೂಚನೆ ಹೊರ ಬೀಳಲಿದೆ.

8,770 ಹುದ್ದೆ ಖಾಲಿ ಇವೆ!
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯಲ್ಲಿ ಒಟ್ಟು 8,770 ಹುದ್ದೆಗಳು ಖಾಲಿ ಇವೆ. ಇದರಲ್ಲಿ ಗ್ರೂಪ್‌-ಎಯ 212, ಗ್ರೂಪ್‌-ಬಿಯ1,058, ಗ್ರೂಪ್‌-ಸಿಯ 6,790 ಮತ್ತು ಗ್ರೂಪ್‌-ಡಿಯ 710 ಹುದ್ದೆಗಳಾಗಿವೆ. ವಿಧಾನಸಭೆಯಲ್ಲಿ ಹಿರೇಕೆರೂರು ಶಾಸಕ ಯು ಬಿ ಬಣಕಾರ್‌ ಕೇಳಿದ ಪ್ರಶ್ನೆಯೊಂದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ ಖರ್ಗೆ ಉತ್ತರಿಸುತ್ತಾ ಈ ವಿಷಯ ತಿಳಿಸಿದ್ದಾರೆ. ಇಲಾಖೆಯಲ್ಲಿ ಗ್ರೂಪ್‌-ಬಿ ಯ 651 ಸಹಾಯಕ ಎಂಜಿನಿಯರ್‌ ಹುದ್ದೆ ಇನ್ನೂ ಖಾಲಿ ಇವೆ. ಒಟ್ಟು ಗ್ರೂಪ್‌-ಬಿಯ 1,058 ಹುದ್ದೆಗಳಿದ್ದು, ಇದರಲ್ಲಿ 329 ಸಹಾಯಕ ನಿರ್ದೇಶಕರ ಹುದ್ದೆಗಳಾಗಿವೆ. ಗ್ರೂಪ್‌ -ಸಿ ಯ ಕಿರಿಯ ಎಂಜಿನಿಯರ್‌ 427, ಶೀಘ್ರಲಿಪಿಗಾರರ 513, ಎಫ್‌ಡಿಎ 647, ಎಸ್‌ಡಿಯ 1,158 ಹುದ್ದೆಗಳು ಖಾಲಿ ಇವೆ ಎಂದು ಸಚಿವರು ತಿಳಿಸಿದ್ದಾರೆ.

ಯಾರಿಗೆಲ್ಲಾ ಅವಕಾಶ?

ಅಂಗೀಕೃತಗೊಂಡ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ಶಿಕ್ಷಣ ಪಡೆದಿರುವ ಅಭ್ಯರ್ಥಿಗಳು ಪಿಡಿಒ ಮತ್ತು ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್‌-I) ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್‌-II) ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಓದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ 35 ವರ್ಷ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here ) ಮಾಡಿ.

ವೇತನ ಎಷ್ಟಿರುತ್ತದೆ?

ಗ್ರಾಮ ಪಂಚಾಯಾತ್‌ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಯ ವೇತನ ಶ್ರೇಣಿ: ರೂ. 37,900-70,850
ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್‌-I) ಹುದ್ದೆಯ ವೇತನ ಶ್ರೇಣಿ: ರೂ. 27,650-52,650
ಗ್ರಾಮ ಪಂಚಾಯತಿ ಕಾರ್ಯದರ್ಶಿ (ಗ್ರೇಡ್‌-II) ಹುದ್ದೆಯ ವೇತನ ಶ್ರೇಣಿ: ರೂ. 21,400-42,000
ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ಹುದ್ದೆಯ ವೇತನ ಶ್ರೇಣಿ: ರೂ. 21,400-42,000

ನೇಮಕ ಹೇಗೆ?

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿಗಳಿಸಿದ ಶೇಕಡಾವಾರು ಅಂಕಗಳ ಆಧಾರದಲ್ಲಿ ನೇಮಕಮಾಡಿಕೊಳ್ಳಲಾಗುತ್ತದೆ. ಈ ಯಾವ ಹುದ್ದೆಗಳಿಗೂ ಸಂದರ್ಶನ ನಡೆಸಲಾಗುವುದಿಲ್ಲ.

ಈ ಹಿಂದೆ ಪಿಡಿಒ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುವಾಗ ನಡೆಸಲಾಗುತ್ತಿದ್ದ ಸ್ಪರ್ಧಾತ್ಮಕ ಪರೀಕ್ಷೆಯು ಎರಡು ಪ್ರಶ್ನೆ ಪತ್ರಿಕೆಗಳನ್ನು ಒಳಗೊಂಡಿರುತ್ತಿತ್ತು. ಪ್ರಶ್ನೆ ಪತ್ರಿಕೆ-1 ಸಾಮಾನ್ಯ ಜ್ಞಾನಕ್ಕೆ ಸಂಬಂಧಿಸಿದ್ದಾಗಿರುತ್ತಿತ್ತು. ಇದರಲ್ಲಿ ಒಟ್ಟು ನೂರು ಪ್ರಶ್ನೆಗಳಿರಲಿದ್ದು, 200 ಅಂಕಗಳಿಗೆ ಈ ಪರೀಕ್ಷೆ ನಡೆಯುತ್ತಿತ್ತು. ಮತ್ತೊಂದು ಪತ್ರಿಕೆ-2 ಸಹ ನೂರು ಪ್ರಶ್ನೆಗಳಿರಲಿದ್ದು, 200 ಅಂಕಗಳಿಗೆ ನಡೆಯುತ್ತಿತ್ತು. ಆದರೆ ಇದರಲ್ಲಿ ಈ ಬಾರಿ ಬದಲಾವಣೆ ಮಾಡುವ ಸಾಧ್ಯತೆಗಳಿವೆ.

ಇದನ್ನೂ ಓದಿ : IBPS Clerk Recruitment 2023 : ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ4,045 ಕ್ಲರ್ಕ್‌ ಹುದ್ದೆ; ಪದವೀದರರಿಂದ ಅರ್ಜಿ ಆಹ್ವಾನ

2016 ರಲ್ಲಿ ನೇಮಕ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿತ್ತು. ಆದರೆ ಈ ಬಾರಿ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಈ ನೇಮಕ ಪ್ರಕ್ರಿಯೆಯನ್ನು ವಹಿಸುವ ಸಾಧ್ಯತೆಗಳಿವೆ. ಹೀಗೆ ಮಾಡಿದಲ್ಲಿ ಆಯೋಗವು ಗ್ರೂಪ್‌ “ಸಿʼʼ ಹುದ್ದೆಗಳ ನೇಮಕಕ್ಕೆ ನಡೆಸುವ ರೀತಿಯಲ್ಲಿಯೇ ಈ ಹುದ್ದೆಗಳಿಗೂ ಪರೀಕ್ಷೆ ನಡೆಸಲಿದೆ. ಗ್ರೂಪ್‌ ಸಿ ಹುದ್ದೆಗಳಿಗೆ 200 ಅಂಕಗಳಿಗೆ ಬದಲಾಗಿ ನೂರು ಅಂಕಗಳಿಗೆ ಪರೀಕ್ಷೆ ನಡೆಯುತ್ತದೆ.

ಈ ನೇಮಕ ಪ್ರಕ್ರಿಯೆಯ ಸಂಪೂರ್ಣ ಮಾಹಿತಿಯನ್ನು ʻವಿಸ್ತಾರ ನ್ಯೂಸ್‌ʼ ಒದಗಿಸಲಿದ್ದು, ಆಸಕ್ತರು ಆಗಾಗ ಈ ವೆಬ್‌ಸೈಟ್‌ಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಳ್ಳಬಹುದು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Kar TET 2024: ಜೂನ್‌ನಲ್ಲಿ ಟಿಇಟಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ ಶಿಕ್ಷಣ ಇಲಾಖೆ

Kar TET 2024: ಸಾರ್ವಜನಿಕ ಶಿಕ್ಷಣ ಇಲಾಖೆಯು ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’(ಟಿಇಟಿ)ಯನ್ನು ಈ ಬಾರಿ ಜೂನ್‌ನಲ್ಲಿಯೇ ನಡೆಸಲು ತೀರ್ಮಾನಿಸಿದೆ. ಈ ಬಗ್ಗೆ ಸದ್ಯವೇ ಪ್ರಕಟಣೆ ಹೊರಡಿಸಲಿದೆ.

VISTARANEWS.COM


on

exam writing
Koo

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು ‘ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ’(ಟಿಇಟಿ) (Kar TET 2024)ಯನ್ನು ಈ ಬಾರಿ ಜೂನ್‌ನಲ್ಲಿಯೇ ನಡೆಸಲು ತೀರ್ಮಾನಿಸಿದೆ. ಇದಕ್ಕಾಗಿ ಇಲಾಖೆಯು ಪರೀಕ್ಷಾ ಕೇಂದ್ರಗಳನ್ನು ಗುರುತಿಸುವ ಕೆಲಸ ಆರಂಭಿಸಿದ್ದು, ಸದ್ಯವೇ ಪ್ರಕಟಣೆ ಹೊರಡಿಸಲಿದೆ ಎಂದು ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.

ಕಳೆದ ವರ್ಷಕ್ಕಿಂತ ಹೆಚ್ಚು ಅಭ್ಯರ್ಥಿಗಳು ಈ ಪರೀಕ್ಷೆ ಬರೆಯುವ ನಿರೀಕ್ಷೆ ಇರುವುದರಿಂದ ಶೇ. 5ರಷ್ಟು ಪರೀಕ್ಷಾ ಕೇಂದ್ರಗಳನ್ನು ಹೆಚ್ಚಿಸಲು ಶಿಕ್ಷಣ ಇಲಾಖೆಯು ತೀರ್ಮಾನಿಸಿದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಯು ಕಡ್ಡಾಯವಾಗಿ ಇರುವಂತೆ ಇಲಾಖೆಯು ಮುನ್ನೆಚ್ಚರಿಕೆಯನ್ನು ವಹಿಸುತ್ತಿದೆ.

ಈ ವರ್ಷವೂ ಮತ್ತೆ ಶಿಕ್ಷಕರ ನೇಮಕಾತಿ ನಡೆಯಲಿರುವುದರಿಂದ ಆದಷ್ಟು ಬೇಗ ಈ ಅರ್ಹತಾ ಪರೀಕ್ಷೆಯನ್ನು ಪೂರ್ಣಗೊಳಿಸಲು ಶಿಕ್ಷಣ ಇಲಾಖೆಯು ತೀರ್ಮಾನಿಸಿದೆ. ಕಳೆದ ವರ್ಷ ಈ ಪರೀಕ್ಷೆಗೆ ಜುಲೈನಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು, ಸೆಪ್ಟೆಂಬರ್‌ನಲ್ಲಿ ಪರೀಕ್ಷೆ ನಡೆಸಲಾಗಿತ್ತು. ಈ ವರ್ಷ ಜೂನ್‌ನಲ್ಲಿಯೇ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಏಪ್ರಿಲ್‌ನಲ್ಲಿಯೇ ಅರ್ಜಿ ಆಹ್ವಾನಿಸುವ ನಿರೀಕ್ಷೆ ಇದೆ.

ರಾಜ್ಯ ಸರ್ಕಾರ ನಡೆಸುವ ಶಿಕ್ಷಕರ ನೇಮಕಾತಿಯಲ್ಲಿ ಭಾಗವಹಿಸಲು ಈ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ಎಷ್ಟು ಬಾರಿ ಬೇಕಾದರೂ ಈ ಅರ್ಹತಾ ಪರೀಕ್ಷೆ ಬರೆಯಬಹುದಾಗಿದೆ. ಹೆಚ್ಚಿನ ಅಂಕ ಪಡೆಯಲು ಬಯಸುವವರು ಮರು ಪರೀಕ್ಷೆಯನ್ನು ಸಹ ತೆಗೆದುಕೊಳ್ಳಬಹುದು. ಈ ಪರೀಕ್ಷೆಯ ಅಂಕಗಳನ್ನು ಶಿಕ್ಷಕರ ನೇಮಕಾತಿಗೆ ಮಾನದಂಡವನ್ನಾಗಿ ಪರಿಗಣಿಸಲಾಗುತ್ತದೆ.

ಅರ್ಹತೆಗಳೇನು?

1 ರಿಂದ 5ನೇ ತರಗತಿಗಳಿಗೆ ಶಿಕ್ಷಕರಾಗಲು ಸೀನಿಯರ್ ಸೆಕೆಂಡರಿ/ಪಿಯುಸಿ/ತತ್ಸಮಾನ ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ.50 (ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಶೇ.45) ಅಂಕಗಳನ್ನು ಪಡೆದಿರಬೇಕು ಮತ್ತು ಶಿಕ್ಷಣದಲ್ಲಿ (D.El.Ed) ಎರಡು ವರ್ಷಗಳ ಡಿಪ್ಲೊಮಾ ಪಡೆದಿರಬೇಕು ಅಥವಾ ವಿಶೇಷ ಶಿಕ್ಷಣದಲ್ಲಿ ಎರಡು ವರ್ಷದ ಡಿಪ್ಲೊಮಾ ಮಾಡಿರಬೇಕು. ಬಿಇಡಿ ಪದವಿ ಪಡೆದವರೂ ಅರ್ಜಿ ಸಲ್ಲಿಸಬಹುದು. ಇವರೆಲ್ಲರೂ ಟಿಇಟಿ ಪರೀಕ್ಷೆಯಲ್ಲಿ ಪತ್ರಿಕೆ-1 ಅನ್ನು ಬರೆಯಲು ಅರ್ಹರಾಗಿರುತ್ತಾರೆ.

6 ರಿಂದ 8ನೇ ತರಗತಿಗೆ ಶಿಕ್ಷಕರಾಗಲು ಪದವಿಯಲ್ಲಿ ಕನಿಷ್ಠ ಶೇ. 50 (ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಶೇ.45) ಅಂಕಗಳನ್ನು ಪಡೆದಿರಬೇಕು ಮತ್ತು ಎರಡು ವರ್ಷಗಳ D.El.Ed ಕೋರ್ಸಿನ ತೇರ್ಗಡೆಯಾಗಿರಬೇಕು ಅಥವಾ ಬಿ.ಇಡಿಯಲ್ಲಿ ಅಥವಾ ನಾಲ್ಕು ವರ್ಷಗಳ B.El.Ed ಯಲ್ಲಿ ಅಥವಾ ಅಥವಾ ನಾಲ್ಕು ವರ್ಷಗಳ ಎಲಿಮೆಂಟರಿ ಶಿಕ್ಷಣದ ಪದವಿಯನ್ನು ಪಡೆದಿರಬೇಕು. ಬಿಎ/ಬಿಎಸ್ಸಿ ಪದವಿ ಮತ್ತು ಶಿಕ್ಷಣದಲ್ಲಿ ಎರಡು ವರ್ಷಗಳ ಡಿಪ್ಲೊಮಾ ಪಡೆದವರು ಕೂಡ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

1 ರಿಂದ 8ನೇ ತರಗತಿಗಳಿಗೆ ಶಿಕ್ಷಕರಾಗಲು ಸೀನಿಯರ್ ಸೆಕೆಂಡರಿ/ಪಿಯುಸಿ/ತತ್ಸಮಾನ ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇ.50(ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು ಶೇ.45) ಅಂಕಗಳನ್ನು ಗಳಿಸಿರಬೇಕು ಮತ್ತು ನಾಲ್ಕು ವರ್ಷಗಳ ಎಲಿಮೆಂಟರಿ ಶಿಕ್ಷಣ ಪದವಿಯನ್ನು ಹೊಂದಿರಬೇಕು. ಈ ಅಭ್ಯರ್ಥಿಗಳು ಟಿಇಟಿ ಪರೀಕ್ಷೆಯಲ್ಲಿ ಎರಡೂ ಪತ್ರಿಕೆಗಳನ್ನು ಬರೆಯಲು ಅರ್ಹರಾಗಿರುತ್ತಾರೆ.

ಅಂತಿಮ ವರ್ಷದಲ್ಲಿ /ಸೆಮಿಸ್ಟರ್‌ನಲ್ಲಿ ಓದುತ್ತಿರುವ ಅಭ್ಯರ್ಥಿಗಳು ಸಹ ಅರ್ಜಿ ಸಲ್ಲಿಸಬಹುದಾಗಿದೆ. ಈ ಪರೀಕ್ಷೆ ಬರೆಯಲು ವಯೋಮಿತಿ ಇರುವುದಿಲ್ಲ. ಎನ್‌ಸಿಟಿಇಯಿಂದ ಮಾನ್ಯತೆ ಪಡೆದಂತಹ ಡಿಪ್ಲೊಮಾ/ ಪದವಿ ಕೋರ್ಸುಗಳನ್ನು ಮಾತ್ರ ವಿದ್ಯಾರ್ಹತೆಯಲ್ಲಿ ಪರಿಗಣಿಸಲಾಗುತ್ತದೆ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: 364 ಭೂಮಾಪಕರ ಹುದ್ದೆಗೆ ಮಾ. 11ರಿಂದ ಅರ್ಜಿ ಸಲ್ಲಿಕೆ ಆರಂಭ

ಜೀವಿತಾವಧಿಯ ಮಾನ್ಯತೆ

ಈ ಪರೀಕ್ಷೆಯಲ್ಲಿ ತೇರ್ಗಡೆಯಾದವರಿಗೆ ನೀಡಲಾಗುವ ಪ್ರಮಾಣ ಪತ್ರವು ಜೀವಿತಾವಧಿಯವರೆಗೆ ಮಾನ್ಯತೆಯನ್ನು ಹೊಂದಿರುತ್ತದೆ. ಈ ಹಿಂದೆ ಏಳು ವರ್ಷಗಳ ಕಾಲ ಮಾನ್ಯತೆ ಇರಲಿದೆ ಎಂದು ಹೇಳಲಾಗಿತ್ತು. ಆದರೆ ಈಗ ಬದಲಾವಣೆ ಮಾಡಲಾಗಿದೆ. ಅರ್ಹತೆ ಪಡೆದವರು ಯಾವುದೇ ಸಂದರ್ಭದಲ್ಲಿ ನಡೆಯುವ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉದ್ಯೋಗ

Job Alert: ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿದೆ ಬರೋಬ್ಬರಿ 517 ಟ್ರೈನಿ ಎಂಜಿನಿಯರ್ ಹುದ್ದೆ

Job Alert: ಎಂಜಿನಿಯರಿಂಗ್‌ ಶಿಕ್ಷಣ ಮುಗಿಸಿದವರಿಗೆ ಗುಡ್‌ನ್ಯೂಸ್‌. ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ ಬರೋಬ್ಬರಿ 517 ಟ್ರೈನಿ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಮಾರ್ಚ್‌ 13.

VISTARANEWS.COM


on

BEL
Koo

ಬೆಂಗಳೂರು: ಶಿಕ್ಷಣ ಮುಗಿಸಿ ಉದ್ಯೋಗ ಅರಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗುಡ್‌ನ್ಯೂಸ್‌. ಭಾರತ ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್ (Bharat Electronics Limited) ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಕಂಪೆನಿ ಬರೋಬ್ಬರಿ 517 ಟ್ರೈನಿ ಎಂಜಿನಿಯರ್ ಹುದ್ದೆಗಳನ್ನು ತಾತ್ಕಾಲಿಕ ಅವಧಿಗೆ ಭರ್ತಿ ಮಾಡಿಕೊಳ್ಳುತ್ತಿದೆ (BEL Trainee Engineer Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆ ದಿನ ಮಾರ್ಚ್‌ 13 (Job Alert).

ಹುದ್ದೆಗಳ ವಿವರ

ಬಿಇಎಲ್‌ ತನ್ನ ಕೇಂದ್ರ ವಲಯದಲ್ಲಿ – 68, ಪೂರ್ವ ವಲಯ – 86, ಪಶ್ಚಿಮ ವಲಯ – 139, ಉತ್ತರ ವಲಯ – 78, ಈಶಾನ್ಯ ವಲಯ – 15, ದಕ್ಷಿಣ ವಲಯ – 131 ಹುದ್ದೆಗಳು ಭರ್ತಿ ಮಾಡಲಿದೆ. ಈ ಪೈಕಿ ಕರ್ನಾಟಕ, ತಮಿಳುನಾಡು, ಪಾಂಡಿಚೇರಿ, ತೆಲಂಗಾಣ, ಆಂಧ್ರ ಪ್ರದೇಶಗಳನ್ನು ಒಳಗೊಂಡ ದಕ್ಷಿಣ ವಲಯದಲ್ಲಿ 131 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಬಿಇ / ಬಿ.ಟೆಕ್, ಎಂಇ / ಎಂ.ಟೆಕ್. ಓದಿದವರು ಅರ್ಜಿ ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಕೆಗೆ ಗರಿಷ್ಠ ವಯೋಮಿತಿ ಬಿ.ಇ / ಬಿ.ಟೆಕ್‌ ಅಭ್ಯರ್ಥಿಗಳಿಗೆ 28 ವರ್ಷ ಮತ್ತು ಎಂ.ಇ / ಎಂ.ಟೆಕ್‌ ಅಭ್ಯರ್ಥಿಗಳಿಗೆ 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಲಭ್ಯ.

ಆಯ್ಕೆ ವಿಧಾನ

ಅರ್ಜಿ ಸಲ್ಲಿಸಿದವರ ಶಾರ್ಟ್‌ ಲಿಸ್ಟ್‌ ಮಾಡಿ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಅದರಲ್ಲಿ ತೇರ್ಗಡೆಯಾವರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ. ಆರಂಭದಲ್ಲಿ 2 ವರ್ಷಕ್ಕೆ ನಿಯೋಜನೆಗೊಳಿಸಲಾಗುತ್ತದೆ. ಕಾರ್ಯಕ್ಷಮತೆ ಆಧರಿಸಿ ಮತ್ತೊಂದು ವರ್ಷ ಹುದ್ದೆ ಅವಧಿ ವಿಸ್ತರಣೆ ಮಾಡುವ ಸಾಧ್ಯತೆ ಇದೆ.

ಅರ್ಜಿ ಶುಲ್ಕ ಮತ್ತು ಮಾಸಿಕ ವೇತನ

ಪಿಡಬ್ಲ್ಯುಬಿಡಿ / ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಉಳಿದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 150 + 18% ಜಿಎಸ್‌ಟಿ ಪಾವತಿಸಬೇಕು. ಇದಕ್ಕಾಗಿ ಆನ್‌ಲೈನ್‌ ವಿಧಾನ ಬಳಸಬಹುದು. ಆಯ್ಕೆಯಾದವರಿಗೆ 40,000 ರೂ. ಮಾಸಿಕ ವೇತನ ಸಿಗಲಿದೆ.

ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.

ಈ ಅರ್ಜಿ ಗೂಗಲ್ ಫಾರ್ಮ್ ಆಗಿದ್ದು, ಬೇರೆ ಯಾವುದೇ ಮಾದರಿಯ, ಅಪೂರ್ಣ ಅರ್ಜಿಯನ್ನು ಸ್ವೀಕರಿಸುವುದಿಲ್ಲ. ಅಭ್ಯರ್ಥಿಗಳು ಗೂಗಲ್ ಫಾರ್ಮ್ ಅನ್ನು ಯಶಸ್ವಿಯಾಗಿ ಭರ್ತಿ ಮಾಡಲು ಗೂಗಲ್ ಕ್ರೋಮ್ ಅನ್ನು ಬಳಸಬೇಕು. ಸರಿಯಾಗಿ ಭರ್ತಿ ಮಾಡಿದ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ ಔಟ್‌ ತೆಗೆಯಬೇಕು. ನೇಮಕಾತಿಯ ಸಂದರ್ಭದಲ್ಲಿ ಇದನ್ನು ಹಾಜರು ಪಡಿಸಬೇಕಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಇಮೇಲ್‌ ಐಡಿ: E-mail: rechr4042@bel.co.in ಅಥವಾ ದೂರವಾಣಿ ಸಂಖ್ಯೆ: 080-22195629 ಸಂಪರ್ಕಿಸಿ.

ಇದನ್ನೂ ಓದಿ: Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಇಂದೇ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ನ್ಯಾಷನಲ್ ಅಲ್ಯೂಮಿನಿಯಂ ಕಂಪನಿಯಲ್ಲಿದೆ 277 ಹುದ್ದೆ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Job Alert: ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ ಸುಮಾರು 277 ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಏಪ್ರಿಲ್‌ 2.

VISTARANEWS.COM


on

NALCO
Koo

ಬೆಂಗಳೂರು: ನ್ಯಾಷನಲ್ ಅಲ್ಯೂಮಿನಿಯಂ ಕಂಪನಿ ಲಿಮಿಟೆಡ್ (National Aluminium Company Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 277 ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ ಹುದ್ದೆ ಇದಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು (NALCO Recruitment 2024). ಆಸಕ್ತರು ಮಾರ್ಚ್‌ 4ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಕೊನೆಯ ದಿನ ಏಪ್ರಿಲ್‌ 2 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮೆಕ್ಯಾನಿಕಲ್‌- 127, ಎಲೆಕ್ಟ್ರಿಕಲ್‌- 100, ಇನ್‌ಸ್ಟ್ರುಮೆಂಟೇಷನ್‌- 20, ಲೋಹಶಾಸ್ತ್ರ (Metallurgy)- 10, ಕೆಮಿಕಲ್‌- 13, ಕೆಮಿಸ್ಟ್ರಿ- 7 ಹುದ್ದೆಗಳಿವೆ. ಗ್ರಾಜುಯೇಟ್ ಎಂಜಿನಿಯರ್ ಟ್ರೈನಿ ಹುದ್ದೆಗೆ ಸ್ನಾತಕೋತ್ತರ ಪದವಿ, ಎಂ.ಎಸ್‌ಸಿ, ಕೆಮಿಕಲ್‌, ಲೋಹಶಾಸ್ತ್ರ, ಎಲೆಕ್ಟ್ರಿಕಲ್‌, ಇನ್‌ಸ್ಟ್ರುಮೆಂಟೇಷನ್‌ ಮತ್ತು ಮೆಕ್ಯಾನಿಕಲ್‌ ಎಂಜಿನಿಯರಿಂಗ್‌ನಲ್ಲಿ ಬಿ.ಇ / ಬಿ.ಟೆಕ್‌ ಮಾಡಿದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸು 30 ವರ್ಷ ವಯಸ್ಸು ಮೀರಿರಬಾರದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಸಾಮಾನ್ಯ, ಒಬಿಸಿ, ಇಡಬ್ಲ್ಯುಎಸ್‌ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 500 ರೂ. ಪಾವತಿಸಬೇಕು. ಉಳಿದ ಎಲ್ಲ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 100 ರೂ. ಪಾವತಿಸಿದರೆ ಸಾಕು. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಸಲ್ಲಿಸಬೇಕು. ಇದಕ್ಕಾಗಿ ಇಂಟರ್‌ನೆಟ್‌ ಬ್ಯಾಂಕಿಂಗ್‌ / ಡೆಬಿಟ್‌ / ಕ್ರೆಡಿಟ್‌ ಕಾರ್ಟ್‌ / ಯುಪಿಐ ಪಾವತಿ ವಿಧಾನವನ್ನು ಬಳಸಬಹುದು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

GATEರಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಅಭ್ಯರ್ಥಿಗಳ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ಬಳಿಕ ವೈಯಕ್ತಿಕ ಸಂದರ್ಶನ, ಡಾಕ್ಯುಮೆಂಟ್‌ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ. ನೇಮಕ ಹೊಂದುವವರಿಗೆ 40,000 ರೂ. – 1,80,000 ರೂ. ಮಾಸಿಕ ವೇತನವಿದೆ. ಆಯ್ಕೆಯಾಗುವವರಿಗೆ ಕಂಪೆನಿಯ ವಿವಿಧ ಬ್ರ್ಯಾಂಚ್‌ಗಳಲ್ಲಿ ಒಂದು ವರ್ಷ ತರಬೇತಿ ನೀಡಲಾಗುತ್ತದೆ. ಈ ಅವಧಿಯಲ್ಲಿನ ಅವರ ಸಾಮರ್ಥ್ಯವನ್ನು ಗಮನಿಸಿ ಬಳಿಕ ಅವರನ್ನು ಉದ್ಯೋಗಕ್ಕೆ ನೇಮಿಸಿಕೊಳ್ಳಲಾಗುತ್ತದೆ. ಉದ್ಯೋಗದ ಸ್ಥಳ: ಭಾರತದಾದ್ಯಂತ ಅಥವಾ ವಿದೇಶ. ಸ್ಥಳವನ್ನು ಬಳಿಕ ನಿರ್ಧರಿಸಲಾಗುತ್ತದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

 • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
 • Apply Now ಆಯ್ಕೆ ಮೇಲೆ ಕ್ಲಿಕ್‌ ಮಾಡಿ ನಿಮ್ಮ ಇಮೇಲ್‌ ಐಡಿ, ಫೋನ್‌ ನಂಬರ್‌ ನೀಡಿ ಹೆಸರು ನೋಂದಾಯಿಸಿ.
 • ಸರಿಯಾದ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
 • ಅಗತ್ಯವಾದ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
 • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
 • ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಮತ್ತೊಮ್ಮೆ ಪರಿಶೀಲಿಸಿ Submit ಬಟನ್‌ ಕ್ಲಿಕ್‌ ಮಾಡಿ.
 • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಎನ್‌ಬಿಸಿಸಿಯಲ್ಲಿದೆ ಉದ್ಯೋಗಾವಕಾಶ; ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಇಂದೇ ಅಪ್ಲೈ ಮಾಡಿ

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್ ಆಫ್‌ ಇಂಡಿಯಾ ಲಿಮಿಟೆಡ್ ಖಾಲಿ ಇರುವ 100 ಟ್ರೈನಿ ಎಂಜಿನಿಯರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನ ಮಾರ್ಚ್‌ 29.

VISTARANEWS.COM


on

thdc
Koo

ಬೆಂಗಳೂರು: ಎಂಜಿನಿಯರಿಂಗ್‌ ಪದವಿ ಮುಗಿಸಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್ ಆಫ್‌ ಇಂಡಿಯಾ ಲಿಮಿಟೆಡ್ (Tehri Hydro Development Corporation India Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (THDC Recruitment 2024). ಖಾಲಿ ಇರುವ 100 ಟ್ರೈನಿ ಎಂಜಿನಿಯರ್‌ ಹುದ್ದೆಗಳಿಗೆ ಎಂಜಿನಿಯರಿಂಗ್‌ ಪದವಿ ಪಡೆದ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಮಾರ್ಚ್‌ 29(Job Alert).

ಹುದ್ದೆಗಳ ವಿವರ

ಎಂಜಿನಿಯರಿಂಗ್‌ ಟ್ರೈನಿ-ಸಿವಿಲ್‌: 40, ಎಂಜಿನಿಯರಿಂಗ್‌ ಟ್ರೈನಿ-ಎಲೆಕ್ಟ್ರಿಕಲ್‌: 25, ಎಂಜಿನಿಯರಿಂಗ್‌ ಟ್ರೈನಿ-ಮೆಕ್ಯಾನಿಕಲ್‌: 30 ಮತ್ತು ಎಂಜಿನಿಯರಿಂಗ್‌ ಟ್ರೈನಿ-ಎಲೆಕ್ಟ್ರಾನಿಕ್ಸ್‌: 5 ಹುದ್ದೆಗಳಿವೆ.

ವಿದ್ಯಾರ್ಹತೆ ಮತ್ತು ವಯೋಮಿತಿ

ಆಸಕ್ತ ಅಭ್ಯರ್ಥಿಗಳು ಸಂಬಂಧಿತ ವಿಷಯಗಳಲ್ಲಿ ಬಿ.ಇ. / ಬಿ.ಟೆಕ್‌. ಪೂರೈಸಿರಬೇಕು. ಅರ್ಜಿ ಸಲ್ಲಿಸಲು ಗರಿಷ್ಠ ವಯೋಮಿತಿ 30 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. 2ಎ / 2ಬಿ / 3ಎ / 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಡಿ / ಮಾಜಿ ಸೈನಿಕ / ಡಿಪಾರ್ಟ್‌ಮೆಂಟಲ್‌ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ / ಇಡಬ್ಲ್ಯುಎಸ್‌ / ಒಬಿಸಿ ವರ್ಗದ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

GATE 2023ರಲ್ಲಿ ಪಡೆದ ಅಂಕಗಳ ಆಧಾರದಲ್ಲಿ ಅಭ್ಯರ್ಥಿಗಳ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ಬಳಿಕ ಗ್ರೂಪ್‌ ಡಿಸ್ಕಷನ್‌, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾಗುವವರಿಗೆ 50,000 ರೂ. – 1,60,000 ರೂ. ಮಾಸಿಕ ವೇತನ ಲಭ್ಯ. ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷ ತರಬೇತಿ ನೀಡಲಾಗುವುದು. ಅದಾದ ಬಳಿಕ ಉದ್ಯೋಗದ ಸ್ಥಳ ತಿಳಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

THDC Recruitment 2024ರ ಅಧಿಕೃತ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

 • ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್‌ ವಿಳಾಸ https://www.thdc.co.in/ಕ್ಕೆ ಭೇಟಿ ನೀಡಿ.
 • Careers ಆಯ್ಕೆ ಕ್ಲಿಕ್‌ ಮಾಡಿ New Openings ಸೆಲೆಕ್ಟ್‌ ಮಾಡಿ ಬಳಿಕ Apply Online ಅನ್ನು ಆಯ್ಕೆ ಮಾಡಿ.
 • ನಿಮ್ಮ ಅಧಿಕೃತ ಇಮೇಲ್‌ ಐಡಿ, ಫೋನ್‌ ನಂಬರ್‌ ನೀಡಿ ಹೆಸರು ನೋಂದಾಯಿಸಿ.
 • ಸರಿಯಾದ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
 • ಅಗತ್ಯವಾದ ಡಾಕ್ಯುಮೆಂಟ್‌ ಅಪ್‌ಲೋಡ್‌ ಮಾಡಿ.
 • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
 • ಎಲ್ಲ ಮಾಹಿತಿ ಸರಿಯಾಗಿದೆ ಎನ್ನುವುದನ್ನು ಮತ್ತೊಮ್ಮೆ ಪರಿಶೀಲಿಸಿ Submit ಬಟನ್‌ ಕ್ಲಿಕ್‌ ಮಾಡಿ.
 • ಭವಿಷ್ಯದ ಅಗತ್ಯಗಳಿಗಾಗಿ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: ಗುಡ್‌ನ್ಯೂಸ್‌: 364 ಭೂಮಾಪಕರ ಹುದ್ದೆಗೆ ಮಾ. 11ರಿಂದ ಅರ್ಜಿ ಸಲ್ಲಿಕೆ ಆರಂಭ

Continue Reading
Advertisement
Shubman Gill
ಕ್ರೀಡೆ24 mins ago

Shubman Gill: 5ನೇ ಟೆಸ್ಟ್​ಗೂ ಮುನ್ನ ಬೌದ್ಧ ಸನ್ಯಾಸಿಗಳ ಆಶೀರ್ವಾದ ಪಡೆದ ಗಿಲ್

Mohammed Shafi Nashipudi (1)
ಕರ್ನಾಟಕ28 mins ago

Sedition Case: ಬಂಧಿತ ಮೊಹಮ್ಮದ್‌ ಶಫಿ ನಾಶಿಪುಡಿ ಕೋಟ್ಯಂತರ ರೂ. ಆಸ್ತಿ ಒಡೆಯ; ಈತನ ಹಿನ್ನೆಲೆ ಏನು?

692 farmers commit suicide is Siddaramaiah achievement says HD DeveGowda
ಕರ್ನಾಟಕ34 mins ago

HD Devegowda: 692 ರೈತರು ಆತ್ಮಹತ್ಯೆಯೇ ಸಿದ್ದರಾಮಯ್ಯ ಸಾಧನೆಯ ಕಿರುನೋಟ: ಎಚ್‌.ಡಿ. ದೇವೇಗೌಡ ವ್ಯಂಗ್ಯ

HD DeveGowda reveals the reality of Karnataka drought
ರಾಜಕೀಯ43 mins ago

Water Crisis: ಬೆಂಗಳೂರಲ್ಲಿ ಹಾಲಿನ ಟ್ಯಾಂಕರ್ ಮೂಲಕ ನೀರು ಪೂರೈಕೆ; ಬರದ ವಾಸ್ತವ ಬಿಚ್ಚಿಟ್ಟ ಎಚ್.ಡಿ. ದೇವೇಗೌಡ!

ED Raid Bangalore
ಬೆಂಗಳೂರು43 mins ago

ED Raid : ಬೆಂಗಳೂರಿನ 8 ಕಡೆ ಇ.ಡಿ ದಾಳಿ, 11.5 ಕೋಟಿ ನಗದು, 120 ಕೋಟಿಯ ದಾಖಲೆ ವಶ

PM Narendra Modi
ದೇಶ49 mins ago

ದೇಶದ ಮೊದಲ ಅಂಡರ್‌ ವಾಟರ್‌ ಮೆಟ್ರೋ ಸೇವೆಗೆ ಮೋದಿ ನಾಳೆ ಚಾಲನೆ; ಏನೆಲ್ಲ ವೈಶಿಷ್ಟ್ಯ?

kiara adwani
ಬಾಲಿವುಡ್1 hour ago

Kiara Advani: ‘ಡಾನ್‌ 3’ ಚಿತ್ರಕ್ಕಾಗಿ ದುಬಾರಿ ಸಂಭಾವನೆ ಪಡೆದ ಕಿಯಾರಾ ಅಡ್ವಾಣಿ

Residential School
ಕರ್ನಾಟಕ1 hour ago

Chikkamagaluru News: ವಸತಿ ಶಾಲೆ ಶಿಕ್ಷಕಿಯಿಂದ ವಿದ್ಯಾರ್ಥಿನಿಯರಿಗೆ ಚಿತ್ರಹಿಂಸೆ; ಕ್ರಮಕ್ಕೆ ಪೋಷಕರ ಆಗ್ರಹ

HD Deve Gowda lashes out at CM Siddaramaiah and Nikhil Kumaraswamy with him
ರಾಜಕೀಯ1 hour ago

HD Devegowda: ಮೋದಿ ಬಗ್ಗೆ ಮಾತನಾಡಲು ನೀವು ಯಾರು? ಸಿಎಂ ಸಿದ್ದರಾಮಯ್ಯಗೆ ಎಚ್‌.ಡಿ. ದೇವೇಗೌಡ ಪ್ರಶ್ನೆ

Expensive Celebrity Saree Draper
ಫ್ಯಾಷನ್1 hour ago

Expensive Celebrity Saree Draper: ಸ್ಟಾರ್‌ಗಳಿಗೆ ಸೀರೆ ಉಡಿಸಿದರೆ ಇವರ ಚಾರ್ಜ್ 2 ಲಕ್ಷ ರೂ.! ಯಾರಿವರು ಡಾಲಿ ಜೈನ್‌?

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

BJP JDS alliance to finalise seats for Lok Sabha polls this week HD DeveGowda
ರಾಜಕೀಯ1 day ago

HD Devegowda: ಈ ವಾರದಲ್ಲಿ ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಅಂತಿಮ: ಎಚ್‌.ಡಿ. ದೇವೇಗೌಡ

Elephant attacks in Sakaleshpur workers escaped
ಹಾಸನ1 day ago

Elephant Attack : ಆನೆ ಅಟ್ಯಾಕ್‌ಗೆ ಬಾಯಿಗೆ ಬಂತು ಜೀವ; ಜಸ್ಟ್‌ ಎಸ್ಕೇಪ್‌ ಆಗಿದ್ದು ಹೀಗೆ..

dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರು ಇಂದು ಗಾಬರಿಯಲ್ಲೇ ದಿನ ಕಳೆಯುವಿರಿ

read your daily horoscope predictions for march 3rd 2024
ಭವಿಷ್ಯ3 days ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು3 days ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು3 days ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು4 days ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು4 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ4 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ5 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

ಟ್ರೆಂಡಿಂಗ್‌