Site icon Vistara News

Post Office GDS Recruitment 2024: ಪೋಸ್ಟ್‌ ಆಫೀಸ್‌ನ 44,228 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆ. 5 ಕೊನೆಯ ದಿನ

Post Office GDS Recruitment 2024

ನವದೆಹಲಿ: ಒಂದೊಳ್ಳೆ ಉದ್ಯೋಗ ಹುಡುಕುತ್ತಿರುವವರಿಗೆ ಭಾರತೀಯ ಅಂಚೆ ಇಲಾಖೆ (India Post Office) ಗುಡ್‌ನ್ಯೂಸ್‌ ನೀಡಿದೆ. ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 44,228 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ (Post GDS Recruitment 2024). ಗ್ರಾಮೀಣ ಡಾಕ್ ಸೇವಕ್‌, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಮತ್ತು ಅಸಿಸ್ಟಂಟ್‌ ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಹುದ್ದೆ ಇದಾಗಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ ಆಗಸ್ಟ್‌ 5. ಇನ್ನು ಎರಡೇ ದಿನ ಬಾಕಿ ಉಳಿದಿದ್ದು ಕೂಡಲೇ ಅಪ್ಲೈ ಮಾಡಿ (Job Alert).

ವಿದ್ಯಾರ್ಹತೆ ಮತ್ತು ವಯೋಮಿತಿ

ಭಾರತದ ಯಾವುದೇ ಶಿಕ್ಷಣ ಮಂಡಳಿ ನಡೆಸುವ 10ನೇ ತರಗತಿ ಪರೀಕ್ಷೆಯಲ್ಲಿ (ಇಂಗ್ಲಿಷ್‌ ಮತ್ತು ಗಣಿತ ವಿಷಯ ಒಳಗೊಂಡಿರುವುದು ಕಡ್ಡಾಯ) ಪಾಸಾದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಇದೆ.

ಕರ್ನಾಟಕದಲ್ಲಿಯೂ ಇದೆ ಹುದ್ದೆ

ಕರ್ನಾಟಕದಲ್ಲಿ 1,940 ಹುದ್ದೆಗಳಿವೆ. ಜತೆಗೆ ಆಂಧ್ರಪ್ರದೇಶ, ಅಸ್ಸಾಂ, ಬಿಹಾರ, ಛತ್ತೀಸ್‌ಗಢ, ದೆಹಲಿ, ಗುಜರಾತ್, ಹರಿಯಾಣ, ಹಿಮಾಚಲ ಪ್ರದೇಶ, ಜಮ್ಮು ಕಾಶ್ಮೀರ, ಜಾರ್ಖಂಡ್, ಕೇರಳ, ಮಧ್ಯಪ್ರದೇಶ, ಮಹಾರಾಷ್ಟ್ರ, ಈಶಾನ್ಯ, ಒಡಿಶಾ, ಪಂಜಾಬ್, ರಾಜಸ್ಥಾನ, ತಮಿಳುನಾಡು, ತೆಲಂಗಾಣ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳಗಳಲ್ಲಿ ಈ ನೇಮಕಾತಿ ನಡೆಯಲಿದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ / ಒಬಿಸಿ ವಿಭಾಗದ ಅಭ್ಯರ್ಥಿಗಳು 100 ರೂ. ಪಾವತಿಸಬೇಕು. ಎಸ್‌ಸಿ / ಎಸ್‌ಟಿ / ಅಂಗವಿಕಲ ವಿಭಾಗದ ಮತ್ತು ಎಲ್ಲ ವರ್ಗದ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ

10ನೇ ತರಗತಿಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 10,000 ರೂ. – 29,380 ರೂ. ಮಾಸಿಕ ವೇತನವಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

India Post GDS Recruitment 2024 ಅಧಿಕೃತ ಅಧಿಸೂಚನೆ ಓದಲು ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಹೆಚ್ಚಿನ ವಿವರಗಳಿಗೆ ವೆಬ್‌ಸೈಟ್‌ ವಿಳಾಸ: https://indiapostgdsonline.gov.in/ಕ್ಕೆ ಭೇಟಿ ನೀಡಿ.

ಇದನ್ನೂ ಓದಿ: RRB ALP Recruitment: ರೈಲ್ವೆ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷೆ ಕನ್ನಡದಲ್ಲೂ ಬರೆಯಲು ಅವಕಾಶ

Exit mobile version